ಜಿಲ್ಲಾ ಸುದ್ದಿ:
ಸಮಾಜಕ್ಕೆ ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ವಾಹಿನಿಗಳ ಅಗತ್ಯತೆ ಇದೆ – ಶಾಸಕ ಹರತಾಳು ಹಾಲಪ್ಪ|sagara
ಸಾಗರ : ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸುದ್ದಿಮಾಧ್ಯಮಗಳು ಪೈಪೋಟಿಗೆ ಬಿದ್ದು ಸುದ್ದಿಗಳನ್ನು ನೀಡುವುದರ ಜೊತೆಗೆ ಸಮಾಜಕ್ಕೆ ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಅಗತ್ಯ ಇದೆ. ಜನರು ವಾಹಿನಿಗಳ ಮೇಲೆ ಇರಿಸಿಕೊಂಡಿರುವ ನಂಬಿಕೆ ಶಾಶ್ವತವಾಗಿ ಉಳಿಸಿ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ವಿಸ್ತಾರ ಚಾನಲ್ ಗಮನ ಹರಿಸಬೇಕು ಎಂದು ಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು. ಪಟ್ಟಣದ ನಗರಸಭೆ ರಂಗಮಂದಿರದಲ್ಲಿ ಗುರುವಾರ ವಿಸ್ತಾರ ವಾಹಿನಿ ಕನ್ನಡ ಸಂಭ್ರಮ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದ ಅವರು…
ನ.22 ಕ್ಕೆ ಅಡಕೆ ಬೆಳೆಯ ಎಲೆಚುಕ್ಕೆ ರೋಗದ ಅಧ್ಯಯನಕ್ಕೆ ಕೇಂದ್ರ ತಂಡ ತೀರ್ಥಹಳ್ಳಿಗೆ ಆಗಮನ : ಆರಗ ಜ್ಞಾನೇಂದ್ರ|Araga
ರಾಜ್ಯದಲ್ಲಿ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ, ಪರಿಹಾರ ಕಂಡುಕೊಳ್ಳಲು ಕೇಂದ್ರ ಸರಕಾರದ ಏಳು ಮಂದಿ ತಜ್ಞರನ್ನು ಒಳಗೊಂಡ ತಜ್ನರ ಸಮಿತಿ ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜತೆ ಇಂದು ಮಾತನಾಡಿರುವ ಸಚಿವರು ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಕೇಂದ್ರ ಸರಕಾರ ತಕ್ಷಣ ಸ್ಪಂದಿಸಿದ್ದು ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ ಸಮಿತಿ ಪರಿಹಾರ ಕಂಡುಕೊಳ್ಳಲು…
ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಕಾಫಿ ಸವಿದ ಗೃಹ ಸಚಿವ ಆರಗ ಜ್ಞಾನೇಂದ್ರ – ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು ಹಾಗೂ ಕಾರ್ಯಕರ್ತರು|Ripponpet
ರಿಪ್ಪನ್ ಪೇಟೆ :ಆನವಟ್ಟಿಯಲ್ಲಿ ಜನ ಸಂಕಲ್ಪ ಕಾರ್ಯಕ್ರಮ ಮುಗಿಸಿಕೊಂಡು ತೀರ್ಥಹಳ್ಳಿ ಗೆ ತೆರಳುವ ಮಾರ್ಗ ಮಧ್ಯದಲ್ಲಿ ರಿಪ್ಪನ್ ಪೇಟೆಯ ವಿನಾಯಕ ವೃತ್ತದ ಗಣೇಶ್ ಪ್ರಸಾದ್ ಹೊಟೇಲ್ ನಲ್ಲಿ ಇಂದು ಸಂಜೆ ರಾಜ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಸ್ಥಳೀಯ ಬಿಜೆಪಿ ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದರು. ಹೊಟೇಲ್ ನಲ್ಲಿ ಕಾಫ಼ಿ ಸವಿಯುವುದರೊಂದಿಗೆ ಜನಸಾಮಾನ್ಯರೊಂದಿಗೆ ಬೆರೆತು ಸರಳತೆ ಮೆರೆದಿದ್ದಾರೆ.ಈ ಸಂಧರ್ಭದಲ್ಲಿ ಜನಸಾಮಾನ್ಯರು ಗೃಹ ಸಚಿವರೊಂದಿಗೆ ಸೆಲ್ಪಿಗೆ ಮುಂದಾದಗ ನಗುಮೊಗದಲ್ಲೇ ಎಲ್ಲಾರೊಂದಿಗೆ ಸೆಲ್ಪಿ ಕ್ಲಿಕ್ಕಿಸಿಕೊಂಡರು. ಗೃಹ ಸಚಿವರ ಆಗಮನದ ಸುದ್ದಿ ತಿಳಿಯುತಿದ್ದಂತೆ…
ರಿಪ್ಪನ್ ಪೇಟೆ : ಗುಡ್ ಶಫರ್ಡ್ ಶಾಲೆಯಲ್ಲಿ ಸಂಭ್ರಮದ ವಿಭಿನ್ನ ರೀತಿಯಲ್ಲಿ ಮಕ್ಕಳ ದಿನಾಚರಣೆ|Ripponpet
ರಿಪ್ಪನ್ ಪೇಟೆ : ಪಟ್ಟಣದ ಗುಡ್ ಶೆಫರ್ಡ್ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಡಗರ ಹಾಗೂ ಸಂಭ್ರಮದಿಂದ ವಿನೂತನವಾಗಿ ಆಚರಿಸಲಾಯಿತು. ಮಕ್ಕಳಿಂದ ಮಕ್ಕಳಿಗಾಗಿ ಆಯೋಜನಗೊಂಡ ಈ ಕಾರ್ಯಕ್ರಮವು ಶಿಕ್ಷಕರ ಹಾಗೂ ಪೋಷಕರ ವರ್ಗದವರ ಮನಸೂರೆಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆ. ಕಾರ್ಯಕ್ರಮದ ಪ್ರಾಸ್ತವಿಕ ನುಡಿ, ಕಾರ್ಯಕ್ರಮದ ಮುಖ್ಯ ಅತಿಥಿಗಳು, ಕಾರ್ಯಕ್ರಮದಲ್ಲಿನ ಪ್ರಾರ್ಥನೆ ನಿರೂಪಣೆ, ಸ್ವಾಗತ,ಎಲ್ಲಾವನ್ನು ಮಕ್ಕಳೇ ನೆರವೇರಿಸಿದರು. ಮಕ್ಕಳಿಂದ ವಿವಿಧ ಛದ್ಮವೇಷ, ಏಕಪಾತ್ರಾಭಿನಯ, ಹಾಡು, ಡಾನ್ಸ್ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ವಿದ್ಯಾರ್ಥಿಗಳಿಂದ ದೀಪ ಬೆಳಗಿಸುವುದರ ಮೂಲಕ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಲಾಯಿತು ಅಧ್ಯಕ್ಷತೆಯನ್ನು ಆರಾಧ್ಯ ಎಸ್….
ಹೋರಾಟದ ಮೂಲಕ ಬಂದ ನನ್ನನ್ನೇ ಜನ ಸೋಲಿಸಿದ್ದರು – ಈ ಬಾರಿ ನನ್ನನ್ನು ಗೆಲ್ಲಿಸುತ್ತಾರೋ ನೋಡಬೇಕು : ಕಾಗೋಡು ತಿಮ್ಮಪ್ಪ| Kagodu
ಶಿವಮೊಗ್ಗ: ನಾನು ಹೋರಾಟದ ಮೂಲಕ ಅಧಿಕಾರಕ್ಕೆ ಬಂದವನು, ಆದರೆ ಜನ ನನ್ನ ಮೇಲೆ ಕೋಪಗೊಂಡು ಹೋದ ಬಾರಿ ಸೋಲಿಸಿದ್ದರು. ಈ ಬಾರಿ ಜನ ಏನು ಮಾಡುತ್ತಾರೆ ನೋಡೋಣ. ಇದರಿಂದ ನಾನು ಈ ಭಾರಿ ಚುನಾವಣಾ ಆಕಾಂಕ್ಷಿ ಎಂದು ಟಿಕೆಟ್ಗೆ ಅರ್ಜಿ ಸಲ್ಲಿಸಿದ್ದೇನೆ ಎಂದು ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವಾಭಾವಿಕವಾಗಿ ನಾನು ಅರ್ಜಿ ಸಲ್ಲಿಸಿದ್ದೇನೆ. ಟಿಕೆಟ್ ಬೇಕಾದವರು ಕೆಲಸ ಮಾಡಬೇಕು, ಪಕ್ಷದ ಕೆಲಸದಲ್ಲಿ ತನ್ನನ್ನು ತೂಡಗಿಸಿಕೊಳ್ಳಬೇಕು. ಆಗ ಆತ ನಾಯಕವಾಗಿ…
ರಿಪ್ಪನ್‌ಪೇಟೆ : ಆಟೋ ಅಪಘಾತದಲ್ಲಿ ಮೃತಪಟ್ಟಿದ್ದ ಶ್ರೀನಿವಾಸ್ ಮನೆಗೆ ಭೇಟಿ ನೀಡಿದ ಶಾಸಕ ಹರತಾಳು ಹಾಲಪ್ಪ|Ripponpet
ರಿಪ್ಪನ್‌ಪೇಟೆ : ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಶಬರೀಶನಗರದ ಆಟೋ ಶ್ರೀನಿವಾಸ್ ರವರ ಮನೆಗೆ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಭೇಟಿ ನೀಡಿದರು. ಮೃತರ ಮನೆಗೆ ಭೇಟಿ ನೀಡಿದ ಶಾಸಕರು ಕುಟುಂಬಸ್ಥರಿಗೆ ಧೈರ್ಯ ತುಂಬಿ,ಸಾಂತ್ವಾನ ಹೇಳಿ ಆರ್ಥಿಕ ನೆರವು ನೀಡಿದರು. ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ : ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕರು ಪೂಜೆ ಸಲ್ಲಿಸಿದರು. ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಸರ್ಕಾರದಿಂದ 3 ಲಕ್ಷ ಅನುದಾನ…
ಆಲುವಳ್ಳಿ ಗ್ರಾಮದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ|Aluvalli
ರಿಪ್ಪನ್‌ಪೇಟೆ: ಇಲ್ಲಿನ ಸಮೀಪದ ಆಲುವಳ್ಳಿ ಗ್ರಾಮದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವದ ಅದ್ಧೂರಿಯಾಗಿ ನಡೆಯಿತು. ಆಲುವಳ್ಳಿ ಗ್ರಾಮದ ವೃತ್ತದಲ್ಲಿ ಕನ್ನಡ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಪ್ರಮುಖ ಬೀದಿಗಳಲ್ಲಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆ ಮತ್ತು ಮೆರವಣಿಗೆ ನಡೆಯಿತು. ಮಕ್ಕಳು ವಿವಿಧ ವೇಷಭೂಷಣ ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡು ಎಲ್ಲಾರ ಗಮನ ಸೆಳೆದರು. ಕಾರ್ಯಕ್ರಮದ ಧ್ವಜಾರೋಹಣ ಕಾರ್ಯಕ್ರಮವನ್ನು ಕನ್ನಡ ಸಂಘದ ಅಧ್ಯಕ್ಷರಾದ ಟೀಕೇಶಪ್ಪ ಗೌಡ ನೆರವೇರಿಸಿದರು ಈ ಸಂಧರ್ಭದಲ್ಲಿ ಗ್ರಾಮದ ಹೈಮಾಸ್ಕ್ ಬೀದಿ ದೀಪವನ್ನು ಹೊಸನಗರ ತಾಪಂ ಮಾಜಿ ಅಧ್ಯಕ್ಷ…
ಮಡಿವಾಳ ಸಮಾಜದಿಂದ ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳ ಭೇಟಿ: ಡಾ.ರಾಜು ಎಂ ತಲ್ಲೂರು|Soraba
ಸೊರಬ: ಪರಿಶಿಷ್ಟ ಜಾತಿಗೆ ಸೇರಲು ಮಡಿವಾಳ ಸಮಾಜ ಎಲ್ಲ ರೀತಿಯ ಲಕ್ಷಣ ಹೊಂದಿದ್ದು, ಸಮಾಜದ ನಿಯೋಗ ಶೀಘ್ರದಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಲಿದೆ ಎಂದು ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ರಾಜು ಎಂ. ತಲ್ಲೂರು ಹೇಳಿದರು. ಸೋಮವಾರ ಪಟ್ಟಣದ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮಡಿವಾಳ ಸಮಾಜ ಅತ್ಯಂತ ಹಿಂದುಳಿದಿದ್ದು, ಪ್ರೊ. ಅನ್ನಪೂರ್ಣ ಅವರು ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಅವರು ಮಡಿವಾಳ…
ಅಖಾಡಕ್ಕೆ ಆರ್ ಎಂ ಮಂಜುನಾಥ ಗೌಡ ಎಂಟ್ರಿ – ತೀರ್ಥಹಳ್ಳಿ ವಿಧಾನಸಭೆ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ|RMM
ತೀರ್ಥಹಳ್ಳಿ : 2023 ರ ವಿಧಾನಸಭಾ ಚುನಾವಣೆಯ ರಂಗು ದಿನದಿಂದ ದಿನಕ್ಕೆ ಕಾವೇರುತ್ತಿದ್ದೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಆಕಾಂಕ್ಷಿಯಾಗಿ ಆರ್ ಎಂ ಮಂಜುನಾಥ ಗೌಡರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಅಚ್ಚರಿ ಮೂಡಿಸಿದ್ದಾರೆ. ಈ ಹಿಂದೆ ಆರ್ ಎಂ ಎಂ ಮತ್ತು ಕಿಮ್ಮನೆ ರತ್ನಾಕರ್ ನಡುವೆ ಮುಸುಕಿನ ಗುದ್ದಾಟ ಯಾವಾಗಲು ನೆಡೆಯುತ್ತಿತ್ತು. ಇತ್ತೀಚಿಗಷ್ಟೇ ಆರ್ ಎಂ ಮಂಜುನಾಥ ಗೌಡರು ಮತ್ತು ಕಿಮ್ಮನೆ ರತ್ನಾಕರ್ ರವರ ಮುಸುಕಿನ ಗುದ್ದಾಟಕ್ಕೆ ಅನೇಕ ಕಾಂಗ್ರೆಸ್ ನಾಯಕರು ಬೈಟೆಕ್ ಕೂರಿಸಿ…
ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗೆ ಕಾಗೋಡು ತಿಮ್ಮಪ್ಪ ಅರ್ಜಿ ಸಲ್ಲಿಕೆ – ಕುತೂಹಲ ಮೂಡಿಸಿದ ಕಾಗೋಡು ನಡೆ!!..???|Kagodu
ಕಾಂಗ್ರೆಸ್ ಪಕ್ಷವನ್ನು ಈ ಬಾರಿ ಅಧಿಕಾರಕ್ಕೆ ತರಲು ಎಲ್ಲರೂ ಸೇರಿ ವ್ಯವಸ್ಥಿತ ಸಂಘಟನೆ ಮಾಡಲಾಗುತ್ತಿದೆ. ಚುನಾವಣಾ ಉಮೇದುವಾರಿಕೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಪಕ್ಷದ ನಿಯಮದಂತೆ ನಾನು ಹಾಗೂ ರಾಜನಂದಿನಿ ಅರ್ಜಿ ಸಲ್ಲಿಸಿದ್ದೇವೆ.ಪಕ್ಷ ಬಯಸಿದರೆ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ತಾಲೂಕಿನ ತ್ಯಾಗರ್ತಿಯಲ್ಲಿ ಅವರು ಮಾದ್ಯಮದೊಂದಿಗೆ ಮಾತನಾಡಿ, ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲಲು ಉತ್ತಮ ವಾತಾವರಣ ಇದೆ. ಅದರ ಪ್ರಯೋಜನ ಪಡೆದುಕೊಳ್ಳಬೇಕು. ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳಿವೆ. ಅದನ್ನು ಬಗೆಹರಿಸುವ…