
ಜಿಲ್ಲಾ ಸುದ್ದಿ:
ರಿಪ್ಪನ್ ಪೇಟೆ : ಐಟಿಐ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸುವಂತೆ ಬಿ ಪಿ ರಾಮಚಂದ್ರ ಆಗ್ರಹ
ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಕೆದಲುಗುಡ್ಡ ಗ್ರಾಮದಲ್ಲಿ ನೂತನ ಸರಕಾರಿ ಐಟಿಐ ಕಾಲೇಜು ಕಟ್ಟಡ ಸಂಪೂರ್ಣವಾಗಿ ನಿರ್ಮಾಣವಾಗಿದ್ದು, ಉದ್ಘಾಟನೆ ಭಾಗ್ಯ ಕಾಣದೆ ಐಟಿಐ ವಿದ್ಯಾರ್ಥಿಗಳು ಪರಿತಪಿಸುತಿದ್ದಾರೆ, ಆದಷ್ಟು ಬೇಗ ನೂತನ ಕಟ್ಟಡ ಉದ್ಘಾಟನೆ ಮಾಡಿ ಐಟಿಐ ವಿದ್ಯಾರ್ಥಿಗಳಿಗೆ ಅನುಕೂಲಕರ ಮಾಡಿಕೊಡುವಂತೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಿ ಪಿ ರಾಮಚಂದ್ರ ಆಗ್ರಹಿಸಿದ್ದಾರೆ. ಇಂದು ಕೆದಲುಗುಡ್ಡೆ ಗ್ರಾಮದಲ್ಲಿ ನಿರ್ಮಾಣವಾಗಿರುವ ನೂತನ ಐಟಿಐ ಕಾಲೇಜಿನ ಕಟ್ಟಡವನ್ನು ವೀಕ್ಷಿಸಿ ನಂತರ ಮಾತನಾಡಿದ ಅವರು ಕಾಗೋಡು ತಿಮ್ಮಪ್ಪ ರವರ ಅವಧಿಯಲ್ಲಿ ಸುಮಾರು…
ಆರಗ ಜ್ಞಾನೇಂದ್ರ ಅವರಿಗೆ ತಾಕತ್ತಿದ್ದರೆ, ನಂದಿತಾ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ : ಕಿಮ್ಮನೆ ಸವಾಲು
ಶಿವಮೊಗ್ಗ : ದೇಶದ ಗೃಹಮಂತ್ರಿ ಅಮಿತ್ ಶಾ ಹಾಗೂ ರಾಜ್ಯದ ಗೃಹಮಂತ್ರಿ ಆರಗ ಜ್ಞಾನೇಂದ್ರ ಅವರಿಗೆ ತಾಕತ್ತಿದ್ದರೆ, ಸಾಮರ್ಥ್ಯ ಇದ್ದರೆ ನಂದಿತಾ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ. ಆರು ತಿಂಗಳಲ್ಲಿ ಫಲಿತಾಂಶ ಕೊಡಿ. ಇದರಲ್ಲಿ ನನ್ನ ಹಸ್ತಕ್ಷೇಪವೆಗಿರುವುದು ಗುಲಗಂಜಿಯಷ್ಟು ಸಾಬೀತಾದರೆ ನಾನು ಸಾರ್ವಜನಿಕ ಕ್ಷೇತ್ರದಿಂದ ನಿವೃತ್ತಿಯಾಗುತ್ತೇನೆ. ಇಲ್ಲದಿರೆ ರಾಜ್ಯದ ಗೃಹಮಂತ್ರಿಗಳು ತೀರ್ಥಹಳ್ಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಗ್ರಹಿಸಿದರು. ಅವರಿಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ 01-11-2014 ರಿಂದ 2018 ರವರೆಗೆ ಸತತವಾಗಿ ಆರಗ ಜ್ಞಾನೇಂದ್ರ…
ಕೋವಿಡ್ ಬೂಸ್ಟರ್ ಡೋಸ್ ಲಸಿಕಾಕರಣ :: ಸಚಿವ ಈಶ್ವರಪ್ಪ ಚಾಲನೆ
ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಶಿವಮೊಗ್ಗ(ಸಿಮ್ಸ್) ನಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ಇವರು ಕೋವಿಡ್-19 ಮುನ್ನೆಚ್ಚರಿಕೆ(ಬೂಸ್ಟರ್)ಡೋಸ್ ಲಸಿಕಾಕರಣಕ್ಕೆ ಚಾಲನೆ ನೀಡಿದರು. ಈ ವೇಳೆ ಅವರು ಮಾತನಾಡಿ, ಭಾರತ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಜ.10 ರಿಂದ ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ(ಕೋಮಾರ್ಬಿಡಿಟಿ) ಹೊಂದಿರುವ ಫಲಾನುಭವಿಗಳಿಗೆ ಕೋವಿಡ್ 19 ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತಿದ್ದು ಎಲ್ಲ ಅರ್ಹರು ಈ ಬೂಸ್ಟರ್ ಡೋಸ್ ಪಡೆಯಬೇಕೆಂದು ಕರೆ ನೀಡಿದರು….
ಅನಾಮಧೇಯ ಶವ: ವಾರಸುದಾರರ ಪತ್ತೆಗೆ ಮನವಿ
ಶಿವಮೊಗ್ಗ : ಜ.08 ರಂದು ಮೆಗ್ಗಾನ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅನಾಮಧೇಯ ವೃದ್ದರೋರ್ವರು ಮರಣ ಹೊಂದಿದ್ದಾರೆ. ಸಾರ್ವಜನಿಕರು ಆಸ್ಪತ್ರೆಗೆ ಸೇರಿಸಲಾಗಿದ್ದ ಸುಮಾರು 60 ರಿಂದ 65 ವರ್ಷದ ಅನಾಮಧೇಯ ವೃದ್ದರು ಮೃತಪಟ್ಟಿದ್ದು ಶವವನ್ನು ಶವಾಗಾರದಲ್ಲಿ ಇರಿಸಲಾಗಿದೆ. ಮೃತರು ಸುಮಾರು 5.6 ಅಡಿ ಎತ್ತರ ಇದ್ದು ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿರುತ್ತಾರೆ. ತಲೆಯಲ್ಲಿ ಸುಮಾರು 02 ಇಂಚು ಉದ್ದದ ಕಪ್ಪು ಕೂದಲು, 01 ಇಂಚು ಉದ್ದದ ಬಿಳಿ ಗಡ್ಡ ಮೀಸೆ ಇರುತ್ತದೆ. ಮುಂಭಾಗದ…
ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಕೂಡಾ ಶತಕ ದಾಟಿದ ಕೋವಿಡ್ ಪಾಸಿಟಿವ್ : 12 ಜನ ಗುಣಮುಖ
ಶಿವಮೊಗ್ಗ : ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ಇವತ್ತು ಕೂಡ ನೂರಕ್ಕಿಂತಲೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಇವತ್ತು 148 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 50 ಮಂದಿಗೆ ಪಾಸಿಟಿವ್ ಬಂದಿದೆ. ಭದ್ರಾವತಿಯಲ್ಲಿ 47, ತೀರ್ಥಹಳ್ಳಿಯಲ್ಲಿ 7, ಶಿಕಾರಿಪುರದಲ್ಲಿ 19, ಸಾಗರದಲ್ಲಿ 19, ಹೊಸನಗರದಲ್ಲಿ 2, ಸೊರಬ 2, ಇತರೆ ಜಿಲ್ಲೆಯಿಂದ ಬಂದಿರುವ ಇಬ್ಬರಿಗೆ ಸೋಂಕು ತಗುಲಿದೆ ಎಂದು ವರದಿಯಲ್ಲಿ…
ಶಿವಮೊಗ್ಗ ಜಿಲ್ಲೆಯಲ್ಲಿಂದು ಕೊರೊನಾ ಸ್ಫೋಟ: ಇಂದು ಒಂದೇ ದಿನ ಶತಕ ದಾಟಿದ ಸೋಂಕಿತರ ಸಂಖ್ಯೆ !
ಶಿವಮೊಗ್ಗ: ಜಿಲ್ಲೆಯಲ್ಲಿಂದು ಕೊರೊನಾ ಸ್ಫೋಟವಾಗಿದ್ದು ಇಂದು ಒಂದೇ ದಿನ 116 ಮಂದಿ ಸೋಂಕು ತಗುಲಿದೆ. ಇದರಿಂದ ಜಿಲ್ಲೆಯ ಜನರಲ್ಲಿಮತ್ತಷ್ಟು ಆತಂಕ ಹೆಚ್ಚಾಗಿದೆ. ಕೊರೋನದ ನಾಗಲೋಟ ನಾಲ್ಕನೇ ದಿನವೂ ಮುಂದುವರೆದಿದೆ. ವೀಕೆಂಡ್ ಕರ್ಫ್ಯೂಗೆ ಕೊರೋನ ಶತಕ ಭಾರಿಸಿದೆ. ಜ.6 ರಂದು 19 ಜನರಲ್ಲಿದ್ದ ಕೊರೋನ, ಜ.6 ರಂದು 23 ಜನರಲ್ಲಿ ಕಾಣಿಸಿಕೊಂಡಿತು. ಜ.7 ರಂದು 59 ಜನರಲ್ಲಿದ್ದ ಕೊರೋನ ಇಂದು116 ಜನರಲ್ಲಿ ಪತ್ತೆಯಾಗಿದೆ. ಆದರೆ ಸೋಂಕಿಗೆ ಯಾರು ಬಲಿಯಾಗಿಲ್ಲವಾದ್ದರಿಂದ, ಸಾವಿನ ಸಂಖ್ಯೆ 1072 ರಲ್ಲೇ ಇದೆ. ತಾಲೂಕುವಾರು ಸೋಂಕಿತರ ವಿವರ: ಶಿವಮೊಗ್ಗ…
ಗೃಹ ಸಚಿವರ ಸ್ವಕ್ಷೇತ್ರದ ಅರಳಸುರಳಿ ಗ್ರಾಮದಲ್ಲಿ ವೀಕೆಂಡ್ ಲಾಕ್ ಡೌನ್ ನಲ್ಲಿ ಅದ್ದೂರಿ ಜಾತ್ರ ಮಹೋತ್ಸವ :
ತೀರ್ಥಹಳ್ಳಿ : ತಾಲೂಕಿನ ಅರಳಸುರುಳಿ ಗ್ರಾಮದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷ್ರಷ್ಟಿ ಪ್ರಯುಕ್ತ ಜಾತ್ರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗೃಹಸಚಿವರ ಸ್ವಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೋವಿಡ್ ನಿಯಮವನ್ನು ಉಲ್ಲಂಘಿಸಿ ಜಾತ್ರಾ ಮಹೋತ್ಸವಕ್ಕೆ ಸಹಕರಿಸಿದ್ದಾರೆ. ರಾಜ್ಯ ಸರ್ಕಾರದ ಕೊರೋನಾ ನಿಯಮಗಳನ್ನು ಗೃಹ ಸಚಿವರ ಕ್ಷೇತ್ರದ ಅಧಿಕಾರಿಗಳು ಗಾಳಿಗೆ ತೂರಿ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ. ಈ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಭಕ್ತಾದಿಗಳು ಕೋವಿಡ್ ಮುಂಜಾಗೃತ ಕ್ರಮವಾಗಿ ಸಾಮಾಜಿಕ ಅಂತರ ಕಾಪಾಡದೇ ಮಾಸ್ಕ್ ಧರಿಸದೆ ಜಾತ್ರೆಯ ಖರೀದಿಯ ಭರಾಟೆಯಲ್ಲಿ…
ಪಂಜಾಬ್ ಸರ್ಕಾರದ ವಿರುದ್ಧ ಹೆದ್ದಾರಿಪುರದಲ್ಲಿ ಪಂಜಿನ ಮೆರವಣಿಗೆ
ಹೆದ್ದಾರಿಪುರ : ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿರುವ ಮತ್ತು ಅವರ ಪ್ರಯಾಣಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಹೆದ್ದಾರಿಪುರದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ಘಟಕದ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಮಂಜುನಾಥ್ ಎಂ,ಬಿ, ಪಕ್ಷದ ಹಿರಿಯ ಮುಖಂಡರಾದ ಸುರೇಶ್ ಸಿಂಗ್,ಕೀರ್ತಿ ಗೌಡ್ರು, ಪಂಚಾಯತ್ ಪ್ರಮೂಕ್ ಆದರ್ಶ ಡಿ ಗೌಡ, ಕಲ್ಲೂರ್ ಗಂಗಾಧರ್,ಪ್ರವೀಣ್ ಬಟ್, ಸಂತೋಷ್ ಕಲ್ಕೂಪ್ಪ, ಮಂಜುನಾಥ್ ಶೇಟ್ ಹೆದ್ದಾರೀಪುರ, ರಾಮಣ್ಣ , ಕಿರಣ್ ಕಣಬಂದೂರು,ಅರುಣ್…
ಮುಂದಿನ ದಿನಗಳಲ್ಲಿ ರಿಪ್ಪನ್ ಪೇಟೆಯ ಸಮಗ್ರ ಚಿತ್ರಣವನ್ನು ಬದಲಾಯಿಸುತ್ತೇನೆ : ಶಾಸಕ ಹರತಾಳು ಹಾಲಪ್ಪ
ರಿಪ್ಪನ್ ಪೇಟೆ : ಪಟ್ಟಣದಲ್ಲಿ 4.85 ಕೋಟಿ ರೂಪಾಯಿ ವೆಚ್ಚದ ಬಾಲಕರ ವಸತಿ ನಿಲಯದ ಶಂಕುಸ್ಥಾಪನೆ ಹಾಗೂ 1.65 ಕೋಟಿ ವೆಚ್ಚದ ಸರ್ಕಾರಿ ಪದವಿ ಕಾಲೇಜಿನ ವಿಜ್ಞಾನ ವಿಭಾಗದ ನೂತನ ಕಟ್ಟಡದ ಉದ್ಘಾಟನೆಯನ್ನು ಸಾಗರ-ಹೊಸನಗರ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು ಮುಂದಿನ ದಿನಗಳಲ್ಲಿ ರಿಪ್ಪನ್ ಪೇಟೆ ಯನ್ನು ಉನ್ನತಮಟ್ಟದ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗುವುದು, ವಿದ್ಯಾರ್ಥಿಗಳು ವಿದ್ಯಾರ್ಜನೆಯ ಸದುಪಯೋಗ ಪಡೆದು ಉನ್ನತ ಮಟ್ಟದಲ್ಲಿ ಬೆಳೆದು ಸಮಾಜಕ್ಕೆ ಮಾದರಿಯಾಗಬೇಕು. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ…
ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಸಾರ್ವಜನಿಕರ ಆಗ್ರಹ :
ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಅರಸಾಳುವಿನಲ್ಲಿ ಇರುವ ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಎಲ್ಲಾ ರೈಲು ನಿಲುಗಡೆ ಮಾಡಬೇಕೆಂದು ಇಲ್ಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಅರಸಾಳುವಿನಲ್ಲಿ ರೈಲು ನಿಲುಗಡೆಯಿಂದ ರಿಪ್ಪನ್‌ಪೇಟೆ, ಅರಸಾಳು, ಬೆಳ್ಳೂರು, ಬಸವಾಪುರ, ಕಳಸೆ, ಬುಕ್ಕಿವರೆ, ಹುಂಚ, ಅಮೃತ, ಹೆದ್ದಾರಿಪುರ, ಹಾರೋಹಿತ್ತಲು, ಹೆದ್ದಾರಿಪುರ, ಕಲ್ಲೂರು, ಹೊಸನಗರ, ರಾಮಚಂದ್ರಪುರಮಠ, ಕೊಲ್ಲೂರು ಮೂಕಾಂಬಿಕ ದೇವಸ್ಥಾನ, ಕುಂದಾಪುರ, ಬೈಂದೂರು, ಭಟ್ಕಳ, ಉಡುಪಿ, ಕೋಣಂದೂರು, ಆರಗ, ತೀರ್ಥಹಳ್ಳಿ, ಹೊಸಗಂಡಿ, ಸಿದ್ದಾಪುರ, ಆಗುಂಬೆ, ಹರತಾಳು, ಹೀಗೆ ಕೊಡಚಾದ್ರಿ, ಸಿಗಂದೂರು ಕವಲೆದುರ್ಗ ಕೋಟೆ, ಜೋಗ ಜಲಪಾತ ಇನ್ನಿತರ…