ಜಿಲ್ಲಾ ಸುದ್ದಿ:
ಸಾಹಿತಿಗಳಿಗೆ ಬೆದರಿಕೆಯೊಡ್ಡುವುದನ್ನು ಸಹಿಸಲು ಸಾಧ್ಯವಿಲ್ಲ : ಹರತಾಳು ಹಾಲಪ್ಪ | ಸಾಹಿತಿ ನಾ ಡಿಸೋಜಾ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಶಾಸಕರು|sagara
ಸಾಗರ : ಲೇಖಕರು, ಸಾಹಿತಿಗಳು ನಿರ್ಭಯವಾಗಿ ಬರವಣಿಗೆ ಮಾಡಲು ಅವಕಾಶವಾಗಬೇಕು. ಹಿಂಸೆ, ಭಯದ ಮೂಲಕ ಲೇಖನಿಯನ್ನು ತಡೆಯುವ ಯಾವುದೇ ಪ್ರಯತ್ನ ಸರಿಯಲ್ಲ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದರು. ಬೆದರಿಕೆ ಪತ್ರ ಬಂದಿರುವ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ಡಾ| ನಾ.ಡಿಸೋಜಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ ಅವರು ಮಾತನಾಡಿದರು. ಹಿಂದೆ ಗೌರಿ ಲಂಕೇಶ್, ಕಲಬುರ್ಗಿ ಅಂತವರ ಹತ್ಯೆ ನಡೆದಿದೆ. ಬೇರೆ ಬೇರೆ ವಿಚಾರಧಾರೆಯುಳ್ಳವರಿಂದ ಇಂತಹ ಕೆಲಸ ನಡೆದಿದೆ. ಚರ್ಚೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕೇ ವಿನಃ ಹಿಂಸೆಗೆ ಇಳಿಯಬಾರದು…
ಭಾವೈಕ್ಯತೆಯಿಂದ ಸಮಾಜದ ಅಭಿವೃದ್ಧಿ ಸಾಧ್ಯ: ಜೋಸೆಫ್ ಅರಮಚ್ಚಾಡತ್ | ರಿಪ್ಪನ್‌ಪೇಟೆ ನವೀಕೃತ ಗುಡ್‌ಶಫರ್ಡ್ ಚರ್ಚ್ ಲೋಕಾರ್ಪಣೆ|Ripponpet
ರಿಪ್ಪನ್ ಪೇಟೆ: ಪ್ರತಿಯೊಂದು ಧರ್ಮದ ಮೂಲ ಸಾರ ಮನುಕುಲದ ಒಳಿತು. ಜಗತ್ತಿಗೆ ಶಾಂತಿ ಸಂದೇಶವನ್ನು ನೀಡಿದ ಪ್ರಭು ಯೇಸುಕ್ರಿಸ್ತರು ಕರುಣೆ ಪ್ರೀತಿ ಮತ್ತು ದೇವರ ಮೇಲಿನ ನಂಬಿಕೆಯಿಂದ ಮಾತ್ರ ನೆಮ್ಮದಿಯ ಜೀವನವನ್ನು ಸಾಗಿಸಬಹುದು ಎಂದು ಶುಭ ಸಂದೇಶವನ್ನು ನೀಡಿದ್ದಾರೆ.ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಬೆರೆತು ಎಲ್ಲರೂ ಸಹೋದರ ಸಹೋದರಿಯಂತೆ ಇದ್ದಾಗ ಮಾತ್ರ ನೆಮ್ಮದಿಯ ಸಮಾಜಕ್ಕೆ ದಾರಿದೀಪವಾಗಲಿದೆ ಎಂದು ಭದ್ರಾವತಿ ಧರ್ಮ ಕ್ಷೇತ್ರದ ಧರ್ಮಧ್ಯಕ್ಷ ಜೋಸೆಫ್ ಅರಮಚ್ಚಾಡತ್ ಹೇಳಿದರು. ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿನ ನವೀಕರಣಗೊಂಡ ಗುಡ್‌ಶಫರ್ಡ್…
ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ|Ripponpet
ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಮತ್ತು ಮಜರಾಯಿ ಇಲಾಖೆಯವರ ಅದೇಶದನ್ವಯ ಹಲವು ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು. ಇಲ್ಲಿನ ಗಣಪತಿ ದೇವಸ್ಥಾನದಲ್ಲಿ ಬೆಳಗ್ಗೆ ಗೋವುಯನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ,ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಮಂಜಪ್ಪ, ಮೋಹನ್,ಜಯಲಕ್ಷಿ, ರಾಘವೇಂದ್ರ,ಕೆ.ಆರ್.ಭೀಮರಾಜ್‌ಗೌಡರು, ವೈ.ಜೆ.ಕೃಷ್ಣ,ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು. [ ರಿಪ್ಪನ್‌ಪೇಟೆಯ ಸಮೀಪದ…
ಶಾಂತಿ ಸಹಬಾಳ್ವೆಯೇ ಕ್ರಿಶ್ಚಿಯನ್ ಧರ್ಮದ ಮೂಲ ಮಂತ್ರವಾಗಿದೆ : ಆರಗ ಜ್ಞಾನೇಂದ್ರ|church-ripponpet
ರಿಪ್ಪನ್‌ಪೇಟೆ : ಕ್ರಿಶ್ಚಿಯನ್ ಸಮುದಾಯದವರು ಸದಾ ಶಾಂತಿ ಸಹಬಾಳ್ವೆಯೊಂದಿಗೆ ಅರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಸರ್ವಧರ್ಮೀಯರಲ್ಲಿ ಸಮಾನತೆ ಸಹೋದರತ್ವವನ್ನು ಕಾಣುವುದರೊಂದಿಗೆ ತಮ್ಮ ಧರ್ಮದ ಸಂಘಟನೆಯನ್ನು ಬೆಳೆಸಿಕೊಂಡವರು ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೆಂದ್ರ ಹೇಳಿದರು. ರಿಪ್ಪನ್‌ಪೇಟೆಯ ತೀರ್ಥಹಳ್ಳಿ ರಸ್ತೆಯಲ್ಲಿ ನವೀಕರಣಗೊಂಡು ನಾಳೆ ಲೋಕಾರ್ಪಣೆಗೊಳ್ಳಲಿರುವ ಗುಡ್‌ಶಫರ್ಡ್ ಚರ್ಚ್ ಗೆ ಭೇಟಿ ನೀಡಿ ಧರ್ಮಗುರುಗಳು ಹಾಗೂ ಕ್ರೈಸ್ತ ಬಾಂಧವರ ಜೊತೆ ಸಮಾಲೋಚನೆ ನಡೆಸಿ ಮಾತನಾಡಿ ಕ್ರಿಶ್ಚಿಯನ್ ಸಮುದಾಯ ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ…
ಶಿವಮೊಗ್ಗ ಮತ್ತೆ ಉದ್ವಿಗ್ನ | ಮಾರಕಾಸ್ತ್ರಗಳಿಂದ ವ್ಯಕ್ತಿಯ ಮೇಲೆ ಹಲ್ಲೆ : ಕಲ್ಲು ತೂರಾಟ|Shivamogga
ಶಿವಮೊಗ್ಗ: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಸೀಗೆಹಟ್ಟಿ ಬಳಿಯ ಧರ್ಮಪ್ಪ ನಗರದಲ್ಲಿ ನಡೆದಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ 11.30ರ ಸುಮಾರಿಗೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಧರ್ಮಪ್ಪ ನಗರದ ಎರಡನೇ ಕ್ರಾಸ್ ನಿವಾಸಿ ಪ್ರಕಾಶ್ (25)ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ. ಪ್ರಕಾಶ್‌ನ ತಲೆಗೆ ಗಾಯವಾಗಿದ್ದು, ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಎಸ್ಪಿ ಜಿ.ಕೆ.ಮಿಥುನ್…
ಅಕ್ಟೋಬರ್ 26 ರಂದು ರಿಪ್ಪನ್ ಪೇಟೆಯಲ್ಲಿ ನವೀಕೃತ ಗುಡ್‌ಶಫರ್ಡ್ ಚರ್ಚ್ ಲೋಕಾರ್ಪಣೆ’|Ripponpet
ರಿಪ್ಪನ್‌ಪೇಟೆ;-ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿನ ಗುಡ್‌ಶಫರ್ಡ್ ಫೂರಾನ ಚರ್ಚ್ ನವೀಕರಣಗೊಂಡು ಇದೇ ಅಕ್ಟೋಬರ್ ೨೬ ರಂದು ಬುಧವಾರ ಮಧ್ಯಾಹ್ನ ೩-೪೫ ಕ್ಕೆ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಲೋಕಾರ್ಪಣೆ ಕಾರ್ಯಕ್ರಮವು ಭದ್ರಾವತಿಯ ಎಂ.ಸಿ.ಬಿ.ಎಸ್.ಬೀಷಪ್ ಧರ್ಮಕ್ಷೇತ್ರದ ಜೋಸೆಫ್ ಅರುಮಜ್ಜಾ ಡತ್ ದಿವ್ಯ ಸಾನಿಧ್ಯದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಆತಿಥಿಗಳಾಗಿ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ,ಸಂಸದ ಬಿ.ವೈ.ರಾಘವೇಂದ್ರ,ಶಾಸಕ ಹರತಾಳು ಹಾಲಪ್ಪ, ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್, ಉಪಾಧ್ಯಕ್ಷೆ ಮಹಾಲಕ್ಷಿ, ಗ್ರಾ.ಪಂ ಸದಸ್ಯರಾದ.ಈ.ಮಧುಸೂದನ್,ಪಿ.ರಮೇಶ್, ವನಮಾಲ,ಮದರ್ ಸುಪೀರಿಯರ್ ಮ.ಲಿಸ್ಸಾಮರಿಯಾ,ಭದ್ರಾವತಿ ಧರ್ಮಕ್ಷೇತ್ರದ…
ರಿಪ್ಪನ್‌ಪೇಟೆ : ಅದ್ದೂರಿಯಾಗಿ ಜರುಗಿದ ಈದ್ ಮಿಲಾದ್ ಮೆರವಣಿಗೆ|Ripponpet
ರಿಪ್ಪನ್‌ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಮತ್ತು ಮೆಕ್ಕಾ ಜುಮ್ಮಾ ಮಸೀದಿ, ತಝೀಝುಲ್ ಇಸ್ಲಾಂ ಮದ್ರಸ.ಮೀಲಾದ್ ಸ್ವಾಗತ ಸಮಿತಿ, ಬದ್ರಿಯಾ ಮದ್ರಸ ಸಮಿತಿ ಎಸ್.ಎಸ್.ಎಫ್,ಮತ್ತು ಎಸ್.ವೈ.ಎಸ್. ಇವರ ಸಹಯೋಗದಲ್ಲಿ ಅಯೋಜಿಸಲಾದ “ಇಲಲ್ ಹಬೀಬ್ ಮೀಲಾದ್’ ಸಮಾರಂಭದ ಅಂಗವಾಗಿ ಇಂದು ಈದ್ ಮಿಲಾದ್ ಮೆರವಣಿಗೆ ನಡೆಯಿತು. ಹೊಸನಗರ ರಸ್ತೆಯಿಂದ ವಿನಾಯಕ ವೃತ್ತದ ಮೂಲಕ ಸಾಗರ ರಸ್ತೆಯಲ್ಲಿನ ಖಬರ್ ಸ್ಥಾನ್ ವರೆಗೆ ಮುಸಲ್ಮಾನ ಭಾಂಧವರು ಯುವಕರ “ದಫ಼್’’ ಅಕರ್ಷಣೆಯೊಂದಿಗೆ ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ ಮೆರವಣಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು….
ಡಿನೋಟಿಫಿಕೇಷನ್ ರದ್ದುಗೊಳಿಸಿದ ರಾಜ್ಯ ಸರ್ಕಾರ : ಅತಂತ್ರಗೊಂಡ ಶರಾವತಿ ಮುಳುಗಡೆ ಸಂತ್ರಸ್ತರ ಬದುಕು|Sharavathi
ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕಿನ ಕನಸು ಮತ್ತೆ ಕಮರಿ ಹೋಗಿದೆ.ನ್ಯಾಯಾಂಗ ನಿಂದನೆ ಭಯದಿಂದ ರಾಜ್ಯ ಸರ್ಕಾರ ಡಿನೋಟಿಫಿಕೇಷನ್ ರದ್ದುಗೊಳಿಸಿದೆ. ಈ ಮೂಲಕ ರಾಜ್ಯಕ್ಕೆ ಬೆಳಕು ನೀಡಲು ತಮ್ಮ ಸರ್ವಸ್ವವನ್ನೇ ತ್ಯಾಗ ಮಾಡಿರುವ ಮುಳುಗಡೆ ಸಂತ್ರಸ್ತರನ್ನು ಸರ್ಕಾರ ಮತ್ತೊಮ್ಮೆ ಅನಾಥರನ್ನಾಗಿಸಿದೆ. ಹೌದು, ವಿದ್ಯುತ್ ಉತ್ಪಾದನೆ ಸಲುವಾಗಿ ಲಿಂಗನಮಕ್ಕಿ ಜಲಾಶಯ ನಿರ್ಮಾಣದ ವೇಳೆ ಶಿವಮೊಗ್ಗದ ಸಾಗರ, ಹೊಸನಗರ ತಾಲೂಕಿನ 166 ಗ್ರಾಮಗಳ 6,177 ಕುಟುಂಬಗಳನ್ನು ಎತ್ತಂಗಡಿ ಮಾಡಲಾಗಿತ್ತು. ಅಂದಿನ ರಾಜ್ಯ ಸರ್ಕಾರ 1962 ರಲ್ಲಿಯೇ ಪುನರ್ವಸತಿಗಾಗಿ ಅರಣ್ಯ ಭೂಮಿಯನ್ನ…
ಎಲ್ಲ ಧರ್ಮಗಳಿಗಿಂತ ಮಾನವ ಧರ್ಮ ಶ್ರೇಷ್ಠ : ಫಾದರ್ ವೀರೇಶ್ ವಿ ಮೋರಸ್ |ರಿಪ್ಪನ್‌ಪೇಟೆಯಲ್ಲಿ ನಡೆದ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ
ರಿಪ್ಪನ್‌ಪೇಟೆ : ಎಲ್ಲಾ ಧರ್ಮಗಳಿಗಿಂತ ಮಾನವ ಧರ್ಮ ಶ್ರೇಷ್ಠ ಎಂಬುವುದನ್ನು ಕೋವಿಡ್ ಎಂಬ ಖಾಯಿಲೆ ಇಡೀ ಮನುಕುಲಕ್ಕೆ ಉತ್ತಮ ಪಾಠವನ್ನು ಕಲಿಸಿಕೊಟ್ಟಿದೆ.ಇಂದಿನ ಕಾಲದಲ್ಲಿ ಮನುಷ್ಯತ್ವ ಮಾತ್ರ ಜೀವಂತವಾಗಿದೆ ಎಂದು ಶಿವಮೊಗ್ಗ ಕ್ರೈಸ್ತ ಧರ್ಮ ಕ್ಷೇತ್ರದ ಧರ್ಮ ಗುರು ಫಾದರ್ ವೀರೇಶ್ ವಿ. ಮೋರಸ್ ಹೇಳಿದರು. ಗುರುವಾರ ಸಂಜೆ ರಿಪ್ಪನ್ ಪೇಟೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ ವತಿಯಿಂದ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ಇಲಾಲ್ ಹಬೀಬ್ ಮಿಲಾದ್ ಧಾರ್ಮಿಕ ಸಮ್ಮೇಳದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿ ಎಲ್ಲಾ…
ಹರತಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲ್ಲಿ ಯೋಗೇಂದ್ರ ವಿರುದ್ದ ಅವಿಶ್ವಾಸ ನಿರ್ಣಯ, ಅಧ್ಯಕ್ಷ ಸ್ಥಾನಕ್ಕೆ ಹಕ್ಕು ಚ್ಯುತಿ|Haratalu
ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಮ ಪಂಚಾಯಿತಿ ಹಾಲಿ ಅಧ್ಯಕ್ಷರಾಗಿದ್ದ ಕಲ್ಲಿ ಯೋಗೇಂದ್ರ ಇವರನ್ನು ಗ್ರಾಮ ಪಂಚಾಯತಿ ಸದಸ್ಯರ ಅವಿಶ್ವಾಸ ನಿರ್ಣಯದಿಂದ ಅಧ್ಯಕ್ಷ ಸ್ಥಾನಕ್ಕೆ ಹಕ್ಕುಚ್ಯುತಿ ನಿರ್ಣಯ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕಲ್ಲಿ ಯೋಗೇಂದ್ರ ಇತ್ತಿಚೆಗೆ ಬಿಜೆಪಿ ಸೇರ್ಪಡೆಯಾಗಿದ್ದರೆಂಬ ಕಾರಣವೇ ಅಧ್ಯಕ್ಷ ಸ್ಥಾನದ ಅವಿಶ್ವಾಸ ನಿರ್ಣಯಕ್ಕೆ ಕಾರಣ ಎಂದು ಹೇಳಲಾಗಿದೆ. ಅವಿಶ್ವಾಸ ನಿರ್ಣಯ ಪರವಾಗಿ ಸದಸ್ಯರಾದ ಸಾಕಮ್ಮ ಮನೋಹರ,ಕಣಕಿ ನಾರಾಯಣಪ್ಪ, ನಾರಿ ರವಿ,ನಾಗರತ್ನ ವಾಸುದೇವ,ಸತ್ಯವತಿ ಚಂದ್ರಪ್ಪ,, ಶಿವಮೂರ್ತಿ ಮತ ಚಲಾಯಿಸಿದರು. 8 ಜನ ಸದಸ್ಯರಲ್ಲಿ…