ಜಿಲ್ಲಾ ಸುದ್ದಿ:
ರಿಪ್ಪನ್‌ಪೇಟೆ : ಕಳಪೆ ಕಾಮಗಾರಿಗೆ ಮೂರೇ ತಿಂಗಳಲ್ಲಿ ಕಿತ್ತು ಹೋದ ಚಿನ್ನದ ರಸ್ತೆ – 4.5 ಕೋಟಿ ರೂ ನೀರಲ್ಲಿ ಹೋಮ | Ripponpet
ಅಭಿವೃದ್ಧಿಯ ಮಂತ್ರ ಪಠಿಸುತ್ತಿರುವ ಜನಪ್ರತಿನಿಧಿಗಳು ಪ್ರತಿ ವರ್ಷ ಸರ್ಕಾರದಿಂದ ಕೋಟಿಗಟ್ಟಲೆ ಹಣ ತಂದು ತಾಲೂಕಿನ ವಿವಿಧ ಭಾಗದ ರಸ್ತೆಗಳ ಡಾಂಬರೀಕರಣ ಮಾಡುತ್ತಿದ್ದರೂ ಸರಿಯಾದ ಮೇಲ್ವಿಚಾರಣೆ ಇಲ್ಲದೆಯೋ ಅಥವಾ 40% ಕಮೀಷನ್ ದಂಧೆಯೋ ಏನೋ ಗೊತ್ತಿಲ್ಲ ತಾಲೂಕಿನ ಅಭಿವೃದ್ಧಿ ದಶಕಗಳ ಹಿಂದೆ ಹೋಗಿದೆಯೇನೋ ಎನ್ನಿಸುವ ಸ್ಥಿತಿ ನಿರ್ಮಾಣವಾಗುತ್ತಿದೆ. ಹೌದು ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಗವಟೂರು – ಮಾವಿನಸರ ರಸ್ತೆ ನಾಲ್ಕೈದು ಊರಿಗೆ ಸಂಪರ್ಕ ಕಲ್ಪಿಸುವ ರಸ್ತೆ. ಡಾಂಬಾರು ಕಾಣದೇ ಬಹಳ ವರ್ಷಗಳೇ ಕಳೆದಿತ್ತು. ಗ್ರಾಮಸ್ಥರ ಹಲವು ವರ್ಷದ…
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಆಯುಧ ಪೂಜೆಯಲ್ಲಿ ಭಾಗಿಯಾದ ಗೃಹಸಚಿವ ಆರಗ ಜ್ಞಾನೇಂದ್ರ : ಸಾಂಸ್ಕೃತಿಕ ಉಡುಗೆ ಧರಿಸಿ ಮಿಂಚಿದ ಪೊಲೀಸರು |Thirthahalli
ತೀರ್ಥಹಳ್ಳಿ : ನಮಗೆಲ್ಲರಿಗೂ ಇದೊಂದು ವಿಶೇಷ ಹಬ್ಬ. ರಾಕ್ಷಸರ ಗುಣವುಳ್ಳವರನ್ನು ಸಂಹಾರ ಮಾಡಲು ದುರ್ಗೆಯು ನಾನಾ ರೀತಿಯ ಅವತಾರವನ್ನು ಎತ್ತಿದಂತಹ ಹಬ್ಬ. ಕೆಟ್ಟ ಶಕ್ತಿಗಳನ್ನು ದಮನ ಮಾಡಲು ಎಲ್ಲಾ ರೀತಿಯ ಶಕ್ತಿ ಪಡೆಯಲು ಆಚರಿಸುವ ಹಬ್ಬ. ಪೊಲೀಸರಿಗೆ ಇದೊಂದು ರೀತಿಯಲ್ಲಿ ವಿಶೇಷ ಹಬ್ಬ ಎಂದು ಭಾವಿಸಿದ್ದೇನೆ. ಯಾಕೆಂದರೆ ಶಿಷ್ಟರ ರಕ್ಷಣೆ ದುಷ್ಟರಿಗೆ ಶಿಕ್ಷೆ ಇದು ಪೊಲೀಸ್ ಇಲಾಖೆಯಿಂದ ನೆಡೆಯುವಂತಹದ್ದು ಈ ಕಾರಣಕ್ಕೆ ಎಲ್ಲಾ ಸಿಬ್ಬಂದಿಗಳಿಗೂ ಆಯುಧ ಪೂಜೆಯ ಶುಭಾಶಯಗಳು ಎಂದು ತಿಳಿಸಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ…
ತರಗತಿಗೆ ಹಾಜರಾಗದೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು : ದೂರು ದಾಖಲು |Exams
ಸಾಗರ : ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಡಾ. ಜಿ.ಎ. ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ತರಗತಿಗೆ ಹಾಜರಾಗದೆ ಬಿಎಡ್ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ತನಿಖೆ ನಡೆಸುವಂತೆ ಸಾಗರ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ. ಪ್ರಥಮ ಸೆಮಿಸ್ಟರ್ ನಲ್ಲಿ 37, 2ನೇ ವರ್ಷದಲ್ಲಿ 27 ವಿದ್ಯಾರ್ಥಿಗಳು ಬಿಎಡ್ ತರಗತಿಗೆ ಹಾಜರಾಗದೆ ಪರೀಕ್ಷೆ ಬರೆದಿದ್ದು, ತನಿಖೆ ನಡೆಸುವಂತೆ ಪ್ರತಿಷ್ಠಾನದ ಕೋಶಾಧ್ಯಕ್ಷ ಕವಲಕೊಡು ವೆಂಕಟೇಶ್ ದೂರು ನೀಡಿದ್ದಾರೆ. ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ಕೆಲವರು…
ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ವರ್ಗಾವಣೆ – ನೂತನ ಎಸ್ ಪಿ ಯಾರು ಗೊತ್ತಾ ??? ಈ ಸುದ್ದಿ ನೋಡಿ |SP
ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಬಿ ಎಂ ಲಕ್ಷ್ಮಿಪ್ರಸಾದ್ ರವರನ್ನು ವರ್ಗಾವಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಸಿಐಡಿ ಯಲ್ಲಿ ಕಾರ್ಯ ನಿರ್ವಹಿಸುತಿದ್ದ ಜಿ ಕೆ ಮಿಥುನ್ ಕುಮಾರ್ ರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಶಿವಮೊಗ್ಗದ ನೂತನ ಎಸ್ ಪಿ ಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. [ ಜಿ ಕೆ ಮಿಥುನ್ ಕುಮಾರ್ ] ಜಿ ಕೆ ಮಿಥುನ್ ಕುಮಾರ್ ರವರು ಪ್ರಸ್ತುತ ಬೆಂಗಳೂರು ಸಿ ಐ…
ರಿಪ್ಪನ್‌ಪೇಟೆ : ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್ ಅಭಿಮಾನಿ ಬಳಗದ ನೂತನ ಅಧ್ಯಕ್ಷರಾಗಿ ಮೆಣಸೆ ಆನಂದ್ ಆಯ್ಕೆ |Ripponpet
ರಿಪ್ಪನ್ ಪೇಟೆ : ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್‍ಕುಮಾರ್ ಆಭಿಮಾನಿ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ಇಂದು ನಡೆಯಿತು. ಪಟ್ಟಣದಲ್ಲಿ ಇಂದು ಗ್ರಾಮ ಪಂಚಾಯತ್ ನ ಕುವೆಂಪು ಸಭಾಂಗಣದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗದ ಸರ್ವ ಸದಸ್ಯರ ಸಭೆಯನ್ನು ಕರೆದು ನೂತನ ಪದಾದಿಕಾರಿಗಳ ಆಯ್ಕೆ ನಡೆಸಲಾಯಿತು. ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗದ ನೂತನ ಅಧ್ಯಕ್ಷರಾಗಿ ಆನಂದ್ ಮೆಣಸೆ ,…
10 ಕೋಟಿ ರೂ ಬೆಲೆಯ ನಾಯಿಯ ನೋಡಲು ಮುಗಿಬಿದ್ದ ಜನ – ಭೀಮಾ ನ ಲುಕ್ ಗೆ ಎಲ್ಲಾ ಫಿದಾ….|DOG SHOW
ಶಿವಮೊಗ್ಗ ದಸರಾದ ಅಂಗವಾಗಿ ಗಾಂಧಿ ಪಾರ್ಕ್ ನಲ್ಲಿ ನಡೆದ ಡಾಗ್ ಶೋ ನಲ್ಲಿ ಬೆಂಗಳೂರಿನ ಸತೀಶ್ ಮಾಲೀಕತ್ವದ ಟಿಬೇಟಿಯನ್ ಮಸ್ತೀಪ್ ಬ್ರೀಡ್ ನಾಯಿ ಭೀಮ ಎಲ್ಲಾರ ಆಕರ್ಷಣೀಯವಾಗಿತ್ತು ಈ ನಾಯಿಯ ಹೆಸರು ಭೀಮಾ,ಇದರ ಬೆಲೆ ಬರೋಬ್ಬರಿ 10 ಕೋಟಿ. ಎ ಸಿ ರೂಂ ನಲ್ಲಿ ವಾಸ ,ಡೈಲಿ ಚಿಕನ್ ಬೇಕೆ ಬೇಕು.. 10 ಕೋಟಿ ಬೆಲೆಯ ನಾಯಿಗೆ ಡಾಗ್ ಶೋನಲ್ಲಿ ಡಿಮ್ಯಾಂಡೋ ಡಿಮ್ಯಾಂಡ್ ಇದೆ. ಡಾಗ್ ಶೋ ನಲ್ಲಿ ಮಾಲೀಕ ಸತೀಶ್ ಎರಡು ಸುತ್ತು ಪ್ರೇಕ್ಷಕರಿಗೆ ಪ್ರದರ್ಶಿಸಿದರು….
ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ :
ಸಮಾಜ ಕಲ್ಯಾಣ ಇಲಾಖೆಯು 2022-23ನೇ ಸಾಲಿನ ಶೈಕ್ಷಣಿಕ ಸಾಲಿಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್‍ನಲ್ಲಿ ನವೀನ ಹಾಗೂ ನವೀಕರಣ ವಿದ್ಯಾರ್ಥಿಗಳಿಂದ SATS ID ಮುಖಾಂತರ ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಪೋಷಕರ ಮೊಬೈಲ್ ಸಂಖ್ಯೆ, ವಿದ್ಯಾರ್ಥಿಯ ಮತ್ತು ಪೋಷಕರ ಆಧಾರ್ ಸಂಖ್ಯೆ/ಇ.ಐ.ಡಿ. ಸಂಖ್ಯೆ, ಆದಾಯ ಪ್ರಮಾಣ ಪತ್ರ, ಆಧಾರ್ ಸಂಖ್ಯೆ ಲಿಂಕ್ ಆಗಿರುವ ರಾಷ್ಟ್ರೀಯಕೃತ ಬ್ಯಾಂಕ್ ಖಾತೆ ಪಾಸ್ ಪುಸ್ತಕ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸುವಂತೆ…
ರಿಪ್ಪನ್‌ಪೇಟೆಯ ಶಶಿಕಲಾ ಕೆ ಎನ್ ರವರಿಗೆ 2022-23 ರ ಸಾಲಿನ AIWAA ಅವಾರ್ಡ್ |
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಕಳೆದ ಹಲವಾರು ವರ್ಷಗಳಿಂದ ಪ್ರೊಫೇಷನಲ್ ಬ್ರೈಡಲ್ ಮೇಕಪ್ ಕೋಚಿಂಗ್ ನಡೆಸುವ ಮೂಲಕ ಹಲವಾರು ನಿರುದ್ಯೋಗಿ ಯುವತಿಯರಿಗೆ ಮೇಕಪ್ ತರಬೇತಿ ನೀಡಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವು ನೀಡುತ್ತಿರುವ ಶಶಿಕಲಾ ಕೆ ಎನ್ ಅವರಿಗೆ ಆಲ್ ಇಂಡಿಯಾ ವಿಮೆನ್ ಅಚಿವರ್ (AIWAA) ಅವಾರ್ಡ್ ದೊರೆತಿದೆ. AIWAA -2022-23 ನೇ ಸಾಲಿನ ಪ್ರಶಸ್ತಿಯನ್ನು ಬೆಂಗಳೂರಿನ KASSIA ಸಭಾಂಗಣದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಇಂಟರ್ನ್ಯಾಷನಲ್ ಮೋಟಿವೇಷನಲ್ ಸ್ಪೀಕರ್ ಸೀಮಾ ವಿಕಾಸ್ ಗಾಡಿಯಾ ರವರು…
ವಾಲಿಬಾಲ್ ಪಂದ್ಯಾವಳಿಯಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ| volleyball
ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ . ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಾಸಕ…
ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ :[KABBADDI]
ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಬಾಲಕರವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಹಾಗೂ 400 ಮೀಟರ್ ಓಟದ ವಿಭಾಗದಲ್ಲಿ ದೀಕ್ಷಾ ಎಂಬ ವಿದ್ಯಾರ್ಥಿನಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಹೊಸನಗರ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸರ್ಕಾರಿ…