ಜಿಲ್ಲಾ ಸುದ್ದಿ:
ರಿಪ್ಪನ್‌ಪೇಟೆ : ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ – ದಂಡ ಸಂಗ್ರಹ
ರಿಪ್ಪನ್‌ಪೇಟೆ : ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಪಟ್ಟಣದ ವಿನಾಯಕ ವೃತ್ತ,ಸಾಗರ ರಸ್ತೆ ಸೇರಿದಂತೆ ಅನೇಕ ಭಾಗಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿದೆ. ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ ತಂಬಾಕು…
ವ್ಯಸನ ಮುಕ್ತ ಸಮಾಜಕ್ಕಾಗಿ 450 ಕಿಲೋ ಮೀಟರ್ ಪಾದಯಾತ್ರೆ : ಅಥಣಿಯಿಂದ ಹೊಂಬುಜಾ ಕ್ಷೇತ್ರಕ್ಕೆ ಕಾಲ್ನಡಿಗೆಯಲ್ಲಿ ಬಂದ ಭಕ್ತರ ದಂಡು
ರಿಪ್ಪನ್ ಪೇಟೆ : ಸದೃಢ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರು ಪಣತೊಡಬೇಕು ಎಂಬ ಆಶಯದೊಂದಿಗೆ ಆ ನಿಟ್ಟಿನಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ನಿರಂತರವಾಗಿ ಪಾದಯಾತ್ರೆ ಮೂಲಕ ಜನಜಾಗೃತಿ ಗೊಳಿಸುತ್ತಿರುವುದು ವಿಶೇಷ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ- ಐನಾಪುರ ಗ್ರಾಮದ ಶ್ರೀ ಕ್ಷೇತ್ರ ಹೊಂಬುಜ ಪದ್ಮಾವತಿ ಪಾದಯಾತ್ರ ಸಂಘವು ಈ ಕಾರ್ಯದಲ್ಲಿ ತೊಡಗಿಕೊಂಡಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಶ್ರೀ ಕ್ಷೇತ್ರ ಹೊಂಬುಜಕ್ಕೆ ಸುಮಾರು 450 ಕಿಲೋ ಮೀಟರ್ ಪಾದಯಾತ್ರೆ ಯಲ್ಲಿ ಬಂದು ದರ್ಶನ ಪಡೆಯುತ್ತಿದ್ದಾರೆ. ಪದ್ಮಾವತಿ ಪಾದಯಾತ್ರಾ…
ಕೋಮುಗಲಭೆಯಲ್ಲ, ಜೂಜಿನ ವೇಳೆ ನಡೆದ ಗಲಾಟೆ : ವಿಡಿಯೋ ಸಹಿತ ಬಿಜೆಪಿಗೆ ಭದ್ರಾವತಿ ಶಾಸಕ ತಿರುಗೇಟು
ಸ್ವಾತಂತ್ರ್ಯ ದಿನಾಚರಣೆ ದಿನವಾದ ಸೋಮವಾರ ಸಂಜೆ ಸಾವರ್ಕರ್ ಫ್ಲೆಕ್ಸ್ ತೆರವು ವಿವಾದದಲ್ಲಿ ಪ್ರೇಮ್ಸಿಂಗ್ ಎಂಬಾತನಿಗೆ ಮುಸ್ಲಿಂ ಯುವಕರು ಚಾಕುವಿನಿಂದ ಇರಿದ ಪ್ರಕರಣ ಸಂಬಂಧ ಶಿವಮೊಗ್ಗದಲ್ಲಿ ಪ್ರಕ್ಷ್ಯಬ್ಧ ಸ್ಥಿತಿ ನಿರ್ಮಾಣಗೊಂಡಿದೆ. ಇದರ ಬೆನ್ನಲ್ಲೇ ಅಂದರೆ ಮಂಗಳವಾರ ಭದ್ರಾವತಿಯಲ್ಲಿ ಹಿಂದು ಯುವಕ ಸುನೀಲ್ ಎಂಬಾತನ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ನಡೆದಿತ್ತು. ಇದು ಶಿವಮೊಗ್ಗ ಜಿಲ್ಲೆ ಮಾತ್ರವಲ್ಲ, ರಾಜ್ಯವನ್ನೇ ತಲ್ಲಣಗೊಳಿಸಿತ್ತು. ಇದೀಗ ಸುನೀಲ್ ಮೇಲಿನ ಹಲ್ಲೆ ಪ್ರಕರಣ ಕುರಿತು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಭದ್ರಾವತಿ…
ರಿಪ್ಪನ್‌ಪೇಟೆಯಲ್ಲಿ ವಿಜ್ರಂಭಣೆಯಿಂದ ಜರುಗಿದ 75ನೇ ಸ್ವಾತಂತ್ರ ಅಮೃತ ಮಹೋತ್ಸವ :
ರಿಪ್ಪನ್‌ಪೇಟೆ: ಪಟ್ಟಣದ ವಿವಿಧೆಡೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ೭೫ನೆ ವರ್ಷದ ಸ್ವಾತಂತ್ರ ಅಮೃತ ಮಹೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಆಗಸ್ಟ್ ೧೩ ರಿಂದ ಹರ್‌ಗರ್ ತಿರಂಗ ಅಭಿಯಾನದಲ್ಲಿ ಪಾಲ್ಗೊಂಡ ಜನತೆ ೧೫ ರ ಸೋಮವಾರ ಅಧಿಕೃತ ಧ್ವಜಸ್ತಂಭಗಳಲ್ಲಿ ಧ್ವಜಾರೋಹಣ ನೇರವೇರಿಸುವುದರೊಂದಿಗೆ ರಾಷ್ಟ ಗೌರವ ಸಲ್ಲಿಸಿದರು. ಪಟ್ಟಣದ ಗ್ರಾಮ ಪಂಚಾಯತಿ, ನಾಡಕಛೇರಿ, ಪೊಲೀಸ್ ಠಾಣೆ,ವೊ ಪ್ರಾಥಮಿಕ ಆರೋಗ್ಯ ಕೇಂದ್ರ, ರೈತಸಂಪರ್ಕ ಕೇಂದ್ರ, ಸರ್ಕಾರಿ ಬಿಸಿಎಂ ವಸತಿ ನಿಲಯ, ಪ್ರಥಮದರ್ಜೆ, ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ…
ಗೃಹ ಸಚಿವ ಆರಗ ಜ್ಞಾನೇಂದ್ರ ರವರ ಬೆಂಗಾವಲು ಜೀಪ್ ಅಪಘಾತ :
ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಾವಲು ಜೀಪ್ ಜಂಕ್ಷನ್ ಬಳಿ ಅಪಘಾತಕ್ಕೀಡಾಗಿದೆ. ಭದ್ರಾವತಿ ಜಂಕ್ಷನ್ ಬಳಿ ಈ ಅಪಘಾತವಾಗಿದ್ದು, ಬೆಂಗಾವಲು ಜೀಪಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಸಚಿವರು ತುಮಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದರು. ಡಿಕ್ಕಿ ಹೊಡೆದ ಕಾರು ಬೆಂಗಳೂರು ಕಡೆಗೆ ಹೋಗುತ್ತಿತ್ತು. ಅದೃಷ್ಟವಶಾತ್ ಎಲ್ಲರೂ ಪಾರಾಗಿದ್ದಾರೆ.
ಸಾವರ್ಕರ್ ಭಾವಚಿತ್ರ ತೆರವು ವಿವಾದ : ಶಿವಮೊಗ್ಗ ನಗರ ಉದ್ವಿಗ್ನ- ಎರಡು ದಿನ 144 ಸೆಕ್ಷನ್ ಜಾರಿ
ಶಿವಮೊಗ್ಗ:ಅಮೀರ್ ಅಹಮದ್ ಸರ್ಕಲ್’ನಲ್ಲಿ ಸಾವರ್ಕರ್ ಫೋಟೊ ವಿವಾದ ಸಂಬಂಧ ಪರಿಸ್ಥಿತಿ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಲಾಗಿದೆ. ಎರಡು ದಿನ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಜಿಲ್ಲೆಯಲ್ಲಿ ವೀರ ಸಾವರ್ಕರ್ ಭಾವಚಿತ್ರ ವಿವಾದ ಸದ್ಯಕ್ಕೆ ಅಂತ್ಯವಾಗುವಂತೆ ಕಾಣುತ್ತಿಲ್ಲ. ಇಂದು ಕೂಡ ವೀರ ಸಾವರ್ಕರ್ ಭಾವಚಿತ್ರ ಇಡುವ ವಿಚಾರಕ್ಕೆ ಎರಡು ಕೋಮಿನ ಯುವಕರ ನಡುವೆ ಜಟಾಪಟಿ ನಡೆದಿದೆ. ಶಿವಮೊಗ್ಗದ…
ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 351ನೇ ಆರಾಧನ ಮಹೋತ್ಸವ
ರಿಪ್ಪನ್‌ಪೇಟೆ: ಸಮೀಪದ ಬೈರಾಪುರ ಗ್ರಾಮದ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರದ್ಧಾ ಭಕ್ತಿಯಿಂದ 351ನೇ ಗುರುಸಾರ್ವಭೌಮರ ಆರಾಧನಾ ಮಹೋತ್ಸವವು ಸಂಭ್ರಮದೊಮದಿಗೆ ಸಂಪನ್ನಗೊಂಡಿತು. ಬೆಳಗ್ಗೆ ಗುರುರಾಯರಿಗೆ ಪಂಚಾಮೃತ ಅಭಿಷೇಕ, ಪವಮಾನ ಪೂಜೆ ಹೋಮ ಹವನಗಳು ನಂತರ ರಾಯರಿಗೆ ಅಲಂಕಾರ ಪೂಜೆ ಮಹಾಮಂಗಳಾರತಿ ಜರುಗಿತು. ನಂತರ ಸಾಮೂಹಿಕ ಅನ್ನಸಂತರ್ಪಣೆಯೊಂದಿಗೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರ ದಂಡು ಹರಿದು ಬಂದಿತು.
ತೀರ್ಥಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳೇ ನೀವೆ ಹಿಂಗೆ ಎಡವಟ್ಟು ಮಾಡಿದ್ರೆ ಹೆಂಗೆ???? ಇದು ನಿಮ್ಮ ಅವಿವೇಕಿತನವೋ???? ಅಸಡ್ಡೆಯೋ????
ತೀರ್ಥಹಳ್ಳಿ: ದೇಶಾದ್ಯಂತ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ದೇಶದ ಹಬ್ಬವಾಗಿ ಆಚರಿಸುತ್ತಿದ್ದು ಇಂದಿನಿಂದ ಆಗಸ್ಟ್ ಹದಿನೈದರವರೆಗೆ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿದ್ದಾರೆ.ದೇಶಪ್ರೇಮಿಗಳು ತ್ರಿವರ್ಣ ಧ್ವಜಕ್ಕೆ ಪೂಜೆ ನೆರವೇರಿಸಿ ಮನೆಯ ಮುಂಭಾಗ ಹಾಗೂ ಮನೆಯ ಮೇಲೆ ಬಾವುಟವನ್ನು ಹಾರಿಸಿ ನಮಸ್ಕರಿಸುತ್ತಿದ್ದಾರೆ. ಆದರೆ ಕೆಲವು ಸರ್ಕಾರಿ ಅಧಿಕಾರಿಗಳು ತ್ರಿವರ್ಣಧ್ವಜಕ್ಕೆ ಅಪಮಾನ ಮಾಡುತ್ತಿದ್ದಾರಾ ಎಂಬ ಪ್ರೆಶ್ನೆ ಮೂಡುತ್ತಿದೆ. ಕಾರಣ ತೀರ್ಥಹಳ್ಳಿ ಕ್ಷೇತ್ರದ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ನೆರವೇರಿಸಿದ ಧ್ವಜಾರೋಹಣದಲ್ಲಿ ಎಡವಟ್ಟು ಎದ್ದು ಕಾಣಿಸುತ್ತಿದ್ದು ಎಲ್ಲಾ ಕಡೆ ಟ್ರೊಲ್ ಆಗುತ್ತಿದೆ….
ಶಿವಮೊಗ್ಗದ ಶಾಪಿಂಗ್ ಮಾಲ್ನಲ್ಲಿ ಸಾರ್ವಕರ್ ಭಾವಚಿತ್ರ ವಿವಾದ!!! ಪೊಲೀಸರಿಂದ ಎಂಡಿ ಶರೀಫ್ ವಶಕ್ಕೆ! ಠಾಣೆಯ ಎದುರು ರಾತ್ರೋರಾತ್ರಿ ನಡೀತು ಪ್ರತಿಭಟನೆ
ಶಿವಮೊಗ್ಗ: ಸಿಟಿ ಸೆಂಟ್ರಲ್ ಮಾಲ್ : ನಿನ್ನೆ ಮಾಲ್ನಲ್ಲಿ ವೀರ ಸಾರ್ವಕರ್ ಫೋಟೋ ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ, ತುಂಗಾ ನಗರ ಪೊಲೀಸ್ ಠಾಣೆಯ ಎದುರು ಕೆಲಕಾಲ ಗೊಂದಲದ ವಾತಾವರಣ ಉಂಟಾಗಿತ್ತು. ಘಟನೆ ಸಂಬಂಧ ಕೇಸ್ ದಾಖಲಿಸಿದ್ದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನೆಡಸ್ತಿದ್ದಾರೆ ಎಂಬ ವಿಚಾರ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಕೆಲವು ಕಾರ್ಯಕರ್ತರು ಠಾಣೆ ಎದುರು ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ಒಂದು ಗಂಟೆಗೂ ಅಧಿಕ ಕಾಲ ಸ್ಥಳದಲ್ಲಿ…
ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಹರ್-ಘರ್ ತಿರಂಗಾ : ವಿದ್ಯಾರ್ಥಿಗಳ ಕೈಯಲ್ಲಿ ರಾರಾಜಿಸಿದ ರಾಷ್ಟ್ರ ಧ್ವಜ
ರಿಪ್ಪನ್‌ಪೇಟೆ: ರಾಷ್ಟದ ಸ್ವಾತಂತ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಆಯೋಜಿಸಿರುವ ಹರ್‌ಘರ್ ತಿರಂಗ್ ಅಭಿಯಾನವನ್ನು ಭಾರತೀಯರಾದ ನಾವುಗಳು ಯಶಸ್ವಿಗೊಳಿಸಬೇಕಿರುವುದು ನಮ್ಮ ಆದ್ಯಕರ್ತವ್ಯವಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ರಾಮಕೃಷ್ಣ ಶಿಕ್ಷಣ ಸಂಸ್ಥೆ,ಪದವಿ ಕಾಲೇಜು,ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಡ ಶಾಲೆಯ ಮಕ್ಕಳಿಗೆ ಹರ್‌ಗರ್ ತಿರಂಗ ವಿತರಿಸಿ ಮಾತನಾಡಿ ಅಮೃತ ಮಹೋತ್ಸವ ಸುಸಂದರ್ಭದಲ್ಲಿ ಭಾರತ ದೇಶದ ಘನತೆಯನ್ನು ವಿಶ್ವಮಟ್ಟದಲ್ಲಿ ಪಸರಿಸುವಂತಾಗಲು ಅಭಿಯಾನ ಸರ್ವವ್ಯಾಪಿಯಾಗಬೇಕಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭಿಲಾಷೆಯಂತೆ ದೇಶದ ಪ್ರತಿಯೊಂದು ಮನೆಯ…