ಜಿಲ್ಲಾ ಸುದ್ದಿ:
ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆ – ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮನೆಗೆ ಬಿಗಿ ಪೊಲೀಸ್ ಭದ್ರತೆ
ಶಿವಮೊಗ್ಗ : ಕಾರ್ಯಕರ್ತರಿಗೆ ಮೆಚ್ಯುರಿಟಿ ಇಲ್ಲ ಎಂಬ ಶಾಸಕ ಈಶ್ವರಪ್ಪ ಹೇಳಿಕೆ ಹಿನ್ನೆಲೆಯಲ್ಲಿ ಮಾಜಿ ಸಚಿವರ ಮನೆಗೆ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ. 30 ಕ್ಕೂ ಹೆಚ್ಚು ಪೊಲೀಸರ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ. ಶಿವಮೊಗ್ಗದ ಗುಡ್ಡಪ್ಪ ಶೆಡ್ ನಲ್ಲಿ ಇರುವ ಕೆ.ಎಸ್.ಈಶ್ವರಪ್ಪ ಮನೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆಗಳಿವೆ ಎಂಬ ಕಾರಣಕ್ಕೆ ಮುಂಜಾಗ್ರತ ಕ್ರಮವಾಗಿ ಮನೆಗೆ ಹೆಚ್ಚಿನ ಭದ್ರತೆ ನೀಡಲಾಗುತ್ತಿದೆ. ಬಿಜೆಪಿಯಲ್ಲಿ ಯುವ ಮೋರ್ಚಾದ ಕಾರ್ಯಕರ್ತರಿಗೆ ಮೆಚ್ಯುರಿಟಿ ಇಲ್ಲ ಎಂದು ಮಾಜಿ ಸಚಿವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು….
“ಬಿಡುಗಡೆ” ಕನ್ನಡ ಕಿರುಚಿತ್ರ ಚಿತ್ರೀಕರಣಕ್ಕೆ ಚಾಲನೆ :
“ಬಿಡುಗಡೆ” ಎಂಬ ನೂತನ ಕಿರುಚಿತ್ರದ ಮಹೂರ್ತವನ್ನು ಖ್ಯಾತ ಉದ್ಯಮಿ ವಿನೋದ್‌ರವರು ಶಿವಮೊಗ್ಗ ಗ್ರಾಮಾಂತರ ಪ್ರದೇಶವಾದ ಸಿದ್ದರಹಳ್ಳಿಯಲ್ಲಿ ನೆರವೇರಿಸಿದರು. ನೂತನ ಕಿರುಚಿತ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಮಲೆನಾಡು ಕಲೆಗೆ ಗೌರವ ಪ್ರಾಧಾನ್ಯತೆ ಕೊಟ್ಟ ತವರೂರು, ಅನೇಕ ಕಲಾ ಕೊಡುಗೆಯನ್ನು ನಾಡಿಗೆ ಕೊಟ್ಟಿದೆ, ಈ ನಿಟ್ಟಿನಲ್ಲಿ ಇಂದು ಮೊದಲ ಭಾರಿಗೆ ಕಿರುಚಿತ್ರದ ಚಿತ್ರಮಹೂರ್ತಕ್ಕೆ ಚಾಲನೆ ನೀಡುವ ಸೌಭಾಗ್ಯ ಲಭಿಸಿದೆ, ಉತ್ತಮ ಸಂದೇಶವನ್ನು ಸಾಮಾಜಿಕವಾಗಿ ನೀಡುವ ಚಿತ್ರತಂಡದ ಪಯತ್ನಕ್ಕೆ ಯಶಸ್ಸು ಸಿಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮೊದಲ…
ಎಬಿವಿಪಿ ಕಾರ್ಯಕರ್ತರಿಂದ ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ ಯತ್ನ : ಮುತ್ತಿಗೆ ಹಾಕಿದವರು ನಮ್ಮವರೇ ಎಂದ ಆರಗ ಜ್ಞಾನೇಂದ್ರ
ಶಿವಮೊಗ್ಗ: ನನ್ನ ನಿವಾಸದ ಮೇಲೆ ಮುತ್ತಿಗೆ ಹಾಕಿದವರು ನಮ್ಮವರೇ.ಬೆಂಗಳೂರಿನ ಮನೆಯ ಯಾವುದೇ ಗೇಟ್ ಕ್ಲೋಸ್ ಮಾಡಿರಲಿಲ್ಲ. ಹೆಚ್ಚಿನ ಭದ್ರತೆಯಿರಲಿಲ್ಲ. ಭದ್ರತಾ ಲೋಪ ಆಗಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಗ ಅಸಮರ್ಥ ನಾಯಕರು ಎಂದು ಸಿದ್ದರಾಮಯ್ಯ ಅವರು ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಅವರು ನೀಡುವ ಸರ್ಟಿಫಿಕೇಟ್ ನನಗೆ ಅಗತ್ಯವಿಲ್ಲ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಎಷ್ಟು ಮಂದಿ ಕೊಲೆಯಾಗಿತ್ತು..? ಅಂದು ಇಡೀ ಪೊಲೀಸ್ ಇಲಾಖೆಯನ್ನು ಕೆಂಪಯ್ಯ ಹಿಡಿತಕ್ಕೆ ನೀಡಲಾಗಿತ್ತು. ಪೊಲೀಸರು ಬೀದಿಗಿಳಿದು…
ಮಾಜಿ ಶಾಸಕ ಬಿ ಸ್ವಾಮಿರಾವ್ ರವರಿಗೆ ಡಿ.ದೇವರಾಜ್ ಅರಸು ಪ್ರಶಸ್ತಿ ನೀಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಗೃಹ ಸಚಿವರಿಗೆ ಮನವಿ :
ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ರವರ ಜನ್ಮ ದಿನದ ಅಂಗವಾಗಿ ನೀಡುವ ಡಿ. ದೇವರಾಜ ಅರಸು 2021-22 ರ ಸಾಲಿನ ಪ್ರಶಸ್ತಿಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಹಿರಿಯ ಮುಖಂಡರಾದ ಬಿ. ಸ್ವಾಮಿರಾವ್ ರವರಿಗೆ ನೀಡಲು ಕರ್ನಾಟಕ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ವತಿಯಿಂದ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯದ ದಮನಿತರ ಮತ್ತು ಗೇಣಿ…
“ಮಹಾನ್ ಪುರುಷರ ಮಾರ್ಗದಲ್ಲಿ ನಡೆದರೆ ಸುಖ-ಶಾಂತಿ”: ಜಗದ್ಗುರು ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ
ಹುಂಚಾ : ಪೂರ್ವಪರಂಪರೆಯಂತೆ ಶೀಕ್ಷೇತ್ರ ಹೊಂಬುಜದಲ್ಲಿ ಜುಲೈ 29ರಂದು ಮೊದಲನೇ ಸಂಪತ್ ಶುಕ್ರವಾರದ ಪೂಜೆಯು ನೆರವೇರಿದವು. ಅಂದು ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಜಿನಾಲಯದಲ್ಲಿ ಧಾರ್ಮಿಕ ವಿಧಿಯಂತೆ ಅಭಿಷೇಕ, ಮಹಾಪೂಜೆ ಬಳಿಕ ಜಗನ್ಮಾತೆ ಶ್ರೀಪದ್ಮಾವತಿ ಅಮ್ಮನವರ ಸನ್ನಿದಿಯಲ್ಲಿ ಸರ್ವಾಲಂಕಾರದೊಂದಿಗೆ ವಿಶೇಷ ಪೂಜಾ ವಿಧಾನಗಳು ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರ ನೇತೃತ್ವ, ಮಾರ್ಗದರ್ಶನದಲ್ಲಿ ಜರುಗಿದವು. ತಮಿಳುನಾಡು, ಮಹಾರಾಷ್ಟ್ರ, ರಾಜಸ್ಥಾನ, ಆಂಧ್ರಪ್ರದೇಶ, ರಾಜ್ಯ ಹಾಗೂ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತವೃಂದದವರು ಶ್ರದ್ಧಾಭಕ್ತಿಯಿಂದ ಜಿನನಾಮ ಸ್ತುತಿಸಿ,…
ಬಿಜೆಪಿ ಪಕ್ಷದ ಕೆಲ ಕಾರ್ಯಕರ್ತರಿಗೆ ಪ್ರಭುದ್ಧತೆ ಇಲ್ಲ : ಕೆ ಎಸ್ ಈಶ್ವರಪ್ಪ
ಶಿವಮೊಗ್ಗ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭವಾಗಿದ್ದು, ಈಗಾಗಲೇ ನೂರಾರು ಕಾರ್ಯಕರ್ತರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದು ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಿದ್ದಾರ ಎಂಬ ಪ್ರೆಶ್ನೆ ಉದ್ಭವವಾಗಿದೆ ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಕೆ.ಎಸ್ ಬಿಜೆಪಿ ಕಾರ್ಯಕರ್ತರಿಗೆ ಪ್ರಭುದ್ಧತೆ ಇಲ್ಲ ಎನ್ನುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶ್ಯಾಮಪ್ರಸಾದ್ ಮುಖರ್ಜಿಗೆ ಸಾಯುತ್ತೇನೆ ಎಂದು ಗೊತ್ತಿದ್ದರೂ…
ರಿಪ್ಪನ್‌ಪೇಟೆ : ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ರವರಿಗೆ ಹಿಂದೂಪರ ಸಂಘಟನೆಗಳಿಂದ ಶ್ರದ್ದಾಂಜಲಿ
ರಿಪ್ಪನ್ ಪೇಟೆ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ಸಂಜೆ ಬಿಜೆಪಿ ಯುವ ಮೋರ್ಚಾ ಧುರೀಣ ಪ್ರವೀಣ್ ನೆಟ್ಟಾರು ಅವರನ್ನು ಅಮಾನುಷವಾಗಿ ಹತ್ಯೆಗೈದ ಘಟನೆಯನ್ನು ಖಂಡಿಸಿ ರಿಪ್ಪನ್‌ಪೇಟೆಯ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮೇಣದ ಬತ್ತಿ ಹಚ್ಚಿ ಶ್ರದ್ದಾಂಜಲಿ ಸಲ್ಲಿಸಿದರು. ಪಟ್ಟಣದಲ್ಲಿ ಇಂದು ಹಿಂದೂಪರ ಸಂಘಟನೆಗಳ ವತಿಯಿಂದ ವಿನಾಯಕ ವೃತ್ತದಲ್ಲಿ ಮೊಂಬತ್ತಿ ಹಚ್ಚಿ,2ನಿಮಿಷ ಮೌನಾಚರಣೆ ನಡೆಸಿ ಬಳಿಕ ಪ್ರವೀಣ್ ನೆಟ್ಟಾರು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಮುಖಂಡರಾದ ಆರ್…
ಜಿಪಂ ಟಿಕೇಟ್ ಸಿಗದೇ ವೀರೇಶ್ ಆಲುವಳ್ಳಿ ರಾಜಕೀಯ ಅಲೆಮಾರಿಯಾಗುವ ದಿನ ದೂರವಿಲ್ಲ : ಉಮಾಕರ್ ಕಾನುಗೋಡು
ರಿಪ್ಪನ್‌ಪೇಟೆ : ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ವಿರುದ್ದ ನಾಲಗೆ ಹರಿಯಬಿಟ್ಟಿರುವ ವೀರೇಶ್ ಆಲುವಳ್ಳಿಯವರಿಗೆ ಗೋಪಾಲಕೃಷ್ಣ ರವರ ಬಗ್ಗೆ ಆಗಲಿ ಅಥವಾ ಕಾಂಗ್ರೆಸ್ ಪಕ್ಷದ ಮುಖಂಡರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಅರಸಾಳು ಗ್ರಾಪಂ ಅಧ್ಯಕ್ಷರಾದ ಉಮಾಕರ್ ಕಾನುಗೋಡು ಹೇಳಿದ್ದಾರೆ. ಇಂದು ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಆಲುವಳ್ಳಿ ವೀರೇಶ್ ರವರು ಅಧಿಕಾರಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಹಾರಿದವರೇ.ಕಳೆದ ವಿಧಾನಸಬೆ ಚುನಾವಣ ಸಂಧರ್ಭದಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪರ ಸಾಗರ ಕ್ಷೇತ್ರದಲ್ಲಿ…
ರಾಜ್ಯದಲ್ಲಿರುವುದು ಕೊಲೆಗಡುಕ ಸರ್ಕಾರ : ಬೇಳೂರು ಗೋಪಾಲಕೃಷ್ಣ
ತೀರ್ಥಹಳ್ಳಿ : ದೇಶದ ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ಪಕ್ಷದ ಮಹಾತ್ಮರು ಮತ್ತು ಹುತಾತ್ಮರ ನೆನಪಿಗಾಗಿ ಜನ ಜಾಗೃತಿಯ ಪಾದಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ಬೇಳೂರು ಗೋಪಾಲ ಕೃಷ್ಣ ದೇಶದ ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಮಹಾತ್ಮರು ಮತ್ತು ಹುತಾತ್ಮರ ನೆನಪಿಗಾಗಿ ಕಾಂಗ್ರೆಸ್ ಪಕ್ಷದಿಂದ ಪಾದಯಾತ್ರೆ ನೆಡೆಸಲು ಆದೇಶ ಬಂದಿರುವುದರಿಂದ ಇವತ್ತು ಪ್ರಥಮ ಬಾರಿಗೆ ಕಡಿದಾಳ್ ಮಂಜಪ್ಪ ಅವರ ಸಮಾಧಿಯ ಸ್ಥಳದಲ್ಲಿ ಪೂಜೆ ಮಾಡಿ ಆರ್ ಎಂ ಮಂಜುನಾಥ್…
ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ರಿಪ್ಪನ್‌ಪೇಟೆಯ ಠಾಣಾಧಿಕಾರಿ ಶಿವಾನಂದ್ ಕೋಳಿ : ಸಾರ್ವಜನಿಕರಿಂದ ವ್ಯಕ್ತವಾದ ಭಾರಿ ಪ್ರಶಂಸೆ
ಪೊಲೀಸ್ ಇಲಾಖೆ ಜನರ ರಕ್ಷಣೆ ಹಾಗೂ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದೆ.ಜನ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರಿಗೆ ಅನೇಕ ರೀತಿಯ ಅಭಿಯಾನ ಹಾಗೂ ಅರಿವು ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಮೂಡಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅದೆಷ್ಟೋ ಕುಟುಂಬಗಳು ಅನಾಥವಾಗಿವೆ.ಈ ದಿಸೆಯಲ್ಲಿ ಅಪಘಾತ ತಡೆಯಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಪೊಲೀಸ್ ಇಲಾಖೆ ವಿಶಿಷ್ಟ ರೀತಿಯಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ರಿಪ್ಪನ್ ಪೇಟೆಯ ಪೊಲೀಸ್…