ಜಿಲ್ಲಾ ಸುದ್ದಿ:
ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಕುಡಿದ ಅಮಲಿನಲ್ಲಿ ತೂರಾಟ : ವೀಡಿಯೋ ವೈರಲ್
ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಅಮಲಿನಲ್ಲಿ ತೂರಾಡುತ್ತ ರಸ್ತೆ ಮೇಲೆ ಬಿದ್ದು ಹೊರಳಾಡುವ ವಿಡಿಯೋ ವೈರಲ್ ಆಗಿದೆ. ಕಾಲೇಜು ಗೇಟ್ ಮುಂದೆಯೇ ಘಟನೆ ಸಂಭವಿಸಿದ್ದು, ವಿದ್ಯಾರ್ಥಿಗಳ ಮೊಬೈಲ್ ನಲ್ಲೇ ವಿಡಿಯೋ ರೆಕಾರ್ಡ್ ಆಗಿದೆ ಎಂದು ತಿಳಿದು ಬಂದಿದೆ. ಶಿವಮೊಗ್ಗ ನಗರದ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಅಮಲಿನಲ್ಲಿ ತೇಲಾಡುತ್ತ ಕಾಲೇಜು ಮುಂಭಾಗದ ಫುಟ್ ಪಾತ್ ಮೇಲೆ ಬಿದ್ದು ಹೊರಳಾಡಿದ್ದಾರೆ. ಅಮಲಿನಲ್ಲಿರುವ ಇಬ್ಬರು ವಿದ್ಯಾರ್ಥಿಗಳನ್ನು ವಿಡಿಯೋದಲ್ಲಿ ಸೆರೆ ಹಿಡಿಯಲಾಗಿದೆ. 57 ಸೆಕೆಂಡ್ ನ ವಿಡಿಯೋವನ್ನು ಬಸ್ ಒಂದರಲ್ಲಿ ಕುಳಿತವರು ಚಿತ್ರೀಕರಣ…
ಕಸ್ತೂರಿ ರಂಗನ್ ವರದಿಯನ್ನು ಜಾರಿಯಾಗಲು ಬಿಡುವುದಿಲ್ಲ – ದೆಹಲಿಗೆ ಮಲೆನಾಡ ಶಾಸಕರ ನಿಯೋಗ : ಹರತಾಳು ಹಾಲಪ್ಪ
ಮಲೆನಾಡಿನ ಜನಜೀವನಕ್ಕೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಸೋಮವಾರ ನವದೆಹಲಿಯಲ್ಲಿ ಮಲೆನಾಡು ಭಾಗದ ಸಂಸದರು ಮತ್ತು ಶಾಸಕರು ಅರಣ್ಯ ಮತ್ತು ಪರಿಸರ ಖಾತೆ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತಿದ್ದೇವೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ಸಾಗರ ನಗರಸಭೆ ಆವರಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಕೈಬಿಡಲು ರಾಜ್ಯ ಸರ್ಕಾರ ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದಿದೆ. ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ, ಈ ವರದಿಯನ್ನು ಕೈಬಿಡಬೇಕು. ಇಲ್ಲವಾದಲ್ಲಿ ಮಲೆನಾಡು…
ಒಂದೇ ಮಳೆಗೆ ಬಯಲಾಯಿತು 50ಲಕ್ಷ ರೂ ಮೌಲ್ಯದ ಕಾಂಕ್ರೀಟ್ ರಸ್ತೆಯ ಕಳಪೆ ಕಾಮಗಾರಿ : ಸಿಡಿದೆದ್ದ ಗ್ರಾಮಸ್ಥರು
ಕೆಲ ತಿಂಗಳ ಹಿಂದೆ 50 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿದ್ದ ಕಾಂಕ್ರೀಟ್ ರಸ್ತೆ ತೀರಾ ಕಳಪೆಯಾಗಿದ್ದು ಒಂದೇ ಮಳೆಗೆ ಜಲ್ಲಿ ಕಿತ್ತು ಬರುತ್ತಿದೆ ಎಂದು ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ-ಕೊಳವಂಕ ಗ್ರಾಮಸ್ಥರು ಆರೋಪಿಸಿದ್ದಾರೆ. ಶರಾವತಿ ಮುಳುಗಡೆ ಸಂತ್ರಸ್ಥರೆ ಹೆಚ್ಚಿರುವ ಕೊಳವಂಕ- ಬಸವಾಪುರ ಸಂಪರ್ಕ ರಸ್ತೆ ನಿರ್ಮಿಸುವಂತೆ ಸುಮಾರು 30 ವರ್ಷಗಳಿಂದ ಹೋರಾಟ ನಡೆಸಿ ಕೊನೆಗೂ ಕೊಳವಂಕ – ಬಸವಾಪುರ ಸಂಪರ್ಕ ರಸ್ತೆ ನಿರ್ಮಾಣಕ್ಕೆ ವರ್ಷಗಳ ಹಿಂದೆ 50 ಲಕ್ಷಕ್ಕೂ ಹೆಚ್ಚು ಹಣ ಮಂಜೂರಾಗಿತ್ತು. ಮಲೆನಾಡಿಗರ…
ಒಂದೇ ವೇದಿಕೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದ ಘಟಾನುಘಟಿಗಳಾದ ಆರಗ-ಕಿಮ್ಮನೆ-ಆರ್ ಎಂಎಂ & ರಾಜಾರಾಂ : ಎಲ್ಲಿಗೊತ್ತಾ?? ಈ ಸುದ್ದಿ ನೋಡಿ
ತೀರ್ಥಹಳ್ಳಿ : ಮಲೆನಾಡಿನ ಸುಂದರ ಊರು, ರಾಷ್ಟ್ರಕವಿ ಕುವೆಂಪು ಅವರ ತವರೂರು, ಪ್ರಜ್ಞಾವಂತರ ಕ್ಷೇತ್ರವೆಂದೇ ಬಿಂಬಿತವಾದ ಕ್ಷೇತ್ರವೇ ತೀರ್ಥಹಳ್ಳಿ. ಅದರಲ್ಲೂ ರಾಜಕಾರಣದಲ್ಲಿ ತನ್ನದೇ ಚಾಪು ಮೂಡಿಸಿರುವ ಕ್ಷೇತ್ರವೆಂದರೆ ಅದು ತೀರ್ಥಹಳ್ಳಿ. ಒಂದೇ ಪಕ್ಷದ ರಾಜಕಾರಣಿಗಳನ್ನೇ ಒಂದು ವೇದಿಕೆ ಮೇಲೆ ಒಟ್ಟುಗೂಡಿಸುವುದು ಕಷ್ಟ. ಅಂತಹದರಲ್ಲಿ ಮೂರು ಪಕ್ಷದ ನಾಯಕರನ್ನು ಒಂದು ಗೂಡಿಸುವದು ಕೇಳಬೇಕಾ ? ಅದೊಂದು ರೀತಿ ದೊಡ್ಡ ಸಾಧನೆಯೇ ಸರಿ. ಆದರೆ ಮೂರು ಪಕ್ಷದ ನಾಲ್ವರು ನಾಯಕರನ್ನು ಒಂದೇ ವೇದಿಕೆ ಮೇಲೆ ಕೂರಿಸಿದ ಸಾಧನೆ ಮಾಡಿದ್ದೂ ತೀರ್ಥಹಳ್ಳಿಯ…
ಶಿವಮೊಗ್ಗ ಜಿಲ್ಲೆಯ ಬಿಜೆಪಿಯಲ್ಲಿ ಈ ಬಾರಿ ಮೂವರು ಅಪ್ಪಂದಿರರಿಗೆ ಟಿಕೇಟ್ ಸಿಗುವುದಿಲ್ಲ : ಬೇಳೂರು ಗೋಪಾಲಕೃಷ್ಣ
ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯ ಮೂವರು ಅಪ್ಪಂದಿರರಿಗೆ ಟಿಕೇಟ್ ಸಿಗೊಲ್ಲವೆಂಬ ಮಾಹಿತಿ ಇದೆ. ಇದರಲ್ಲಿ ಎರಡು ಅಪ್ಪಂದಿರರಾದ ಈಶ್ವರಪ್ಪ ಮತ್ತು ಯಡಿಯೂರಪ್ಪನವರಿಗೆ ಟಿಕೇಟ್ ನೀಡೊಲ್ಲವೆಂಬ ಮಾಹಿತಿ ಮೊದಲೇ ಇತ್ತು. ಆದರೆ ಮೂರನೇ ಅಪ್ಪ ಬಹುಶಃ ಹಾಲಪ್ಪ ಇರಬೇಕು ಎಂದು ವ್ಯಂಗ್ಯವಾಡಿದ್ದಾರೆ. ಅವರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಡಿಯೂರಪ್ಪನವರ ನಿರ್ಗಮನಕ್ಕೆ ಈಶ್ವರಪ್ಪ, ಸಂತೋಷ್ ಮತ್ತು ಸಿಟಿ ರವಿ ಕಾರಣವೆಂದು ತಿರುಗೇಟು ನೀಡಿದರು.ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪನವರನ್ನ ದೋಷ ಮುಕ್ತಗೊಳಿಸಿರುವುದು ನಗೆಪಾಟಿಗೆ ಒಳಗಾಗಿದೆ ಎಂದು ಬೇಳೂರು ಗೋಪಾಲಕೃಷ್ಣ ಗುಡುಗಿದ್ದಾರೆ. ಸಂತೋಷ್…
ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಜಾರಿಗೆ ಬಿಡಲ್ಲ, ಹೋರಾಟಕ್ಕೂ ಸಿದ್ಧ: ಯಡಿಯೂರಪ್ಪ
ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಒಪ್ಪಲು ಸಾಧ್ಯವಿಲ್ಲ. ಡಾ. ಕಸ್ತೂರಿ ರಂಗನ್ ವರದಿ ಸಂಬಂಧ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆದಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮಾತನಾಡಿದ ಅವರು, ಡಾ। ಕಸ್ತೂರಿ ರಂಗನ್ ವರದಿ ಒಪ್ಪಿಕೊಂಡರೆ ದುಷ್ಪರಿಣಾಮ ಉಂಟಾಗುತ್ತದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿಯೂ ಸಾಕಷ್ಟು ಹಾನಿಯಾಗುತ್ತದೆ. ದೆಹಲಿಗೆ ತೆರಳಿದ ಮುಖ್ಯಮಂತ್ರಿಗಳು ಅಧಿಕಾರಿಗಳ ಜೊತೆ ಚರ್ಚಿಸಿ ಮನವರಿಕೆ ಮಾಡಿಕೊಡಲಿದ್ದಾರೆ. ವರದಿ ಜಾರಿಯಿಂದ ಆಗುವ ಪರಿಣಾಮಗಳ ಬಗ್ಗೆ ಸಿಎಂ ಮನವರಿಕೆ…
26 ಸಾವಿರ ಮೌಲ್ಯದ ಮರ ಮುಟ್ಟುಗಳನ್ನು 1ಕೋಟಿ ರೂಪಾಯಿಗೆ ಹರಾಜು ಕೂಗಿದ ಜನಪರ ಹೋರಾಟಗಾರ…..!!!!? ತಬ್ಬಿಬ್ಬಾದ ಅಧಿಕಾರಿಗಳು….
ರಿಪ್ಪನ್ ಪೇಟೆ : ಪಟ್ಟಣದಲ್ಲಿನ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ 26 ಸಾವಿರ ಮೌಲ್ಯದ ಹಳೆ ಕಟ್ಟಡದ ಸಾಮಗ್ರಿಗಳಾದ ಮರ ಮುಟ್ಟು ಗಳನ್ನು ಹರಾಜಿನಲ್ಲಿ 1 ಕೋಟಿ ರೂಪಾಯಿಗೆ ಹರಾಜು ಕರೆದ ಪ್ರಸಂಗ ಇಂದು ರಿಪ್ಪನ್ ಪೇಟೆ ಪಟ್ಟಣದಲ್ಲಿ ನಡೆದಿದೆ. ಹಳೆ ನಾಟಕ್ಕೆ ಸರ್ಕಾರಿ ಮೌಲ್ಯ 26,388 ನಿಗದಿ ಮಾಡಿತ್ತು.ಇಂದು ಹರಾಜು ಪ್ರಕ್ರಿಯೆಯಲ್ಲಿ ಮೊದಲು 2 ಸಾವಿರದಿಂದ ಹರಾಜು ಪ್ರಾರಂಭವಾಗಿ ಹರಾಜುದಾರರು 4 ಸಾವಿರ ಎಂದು ಕೂಗುತಿದ್ದಾಗ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ…
ಪುತ್ರ ವಿಜಯೇಂದ್ರರಿಗೆ ಶಿಕಾರಿಪುರ ವಿಧಾನಸಭಾ ಕ್ಷೇತ್ರ ಬಿಟ್ಟುಕೊಟ್ಟ ಬಿ ಎಸ್ ಯಡಿಯೂರಪ್ಪ :
ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧೆ ಮಾಡುವುದಿಲ್ಲ. ತಮ್ಮ ಬದಲು ಪುತ್ರ ವಿಜಯೇಂದ್ರ ಅವರು ಚುನಾವಣಗೆ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಶಿಕಾರಿಪುರದ ಅಂಜನಾಪುರ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ತಮ್ಮ ಬದಲು ವಿಜಯೇಂದ್ರ ಅವರು ಶಿಕಾರಿಪುರದಿಂದ ಸ್ಪರ್ಧೆ ಮಾಡಲಿದ್ದಾರೆ. ವಿಜಯೇಂದ್ರ ಅವರನ್ನು ದೊಡ್ಡ ಅಂತರದಿಂದ ಗೆಲ್ಲಿಸಿ ಕಳುಹಿಸಬೇಕು ಎಂದು ಇಲ್ಲಿನ ಮತದಾರರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ತಿಳಿಸಿದರು. ಹಳೆ ಮೈಸೂರು ಭಾಗದಲ್ಲಿಯೂ ವಿಜಯೇಂದ್ರ…
ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್ ಸವಾರ : ಮಾನವೀಯತೆ ಮೆರೆದ ಶಾಸಕ ಹರತಾಳು ಹಾಲಪ್ಪ
ಬೈಕ್ ಸವಾರನೊಬ್ಬ ಅಪಘಾತವಾಗಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುವಾಗ, ಅದೇ ದಾರಿಯಲ್ಲಿ ಸಾಗುತ್ತಿದ್ದ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ. ಇಂದು ಹೊಸನಗರ ತಾಲ್ಲೂಕಿನ ಪ್ರವಾಸದಲ್ಲಿದ್ದ ಶಾಸಕ ಹರತಾಳು ಹಾಲಪ್ಪರವರು ಕೊಡಚಾದ್ರಿ ಕಾಲೇಜಿನ ಮುಂಭಾಗ ತೆರಳುತ್ತಿದ್ದಾಗ ಬೈಕ್ ಅಪಘಾತವಾಗಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಬಿದ್ದಿದ್ದರು.ಕೂಡಲೇ ವಾಹನ ನಿಲ್ಲಿಸಿ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯ ಸಹಾಯಕ್ಕೆ ತೆರಳಿದ ಶಾಸಕರು ಅಪಘಾತಕ್ಕೀಡಾದ ವ್ಯಕ್ತಿಗೆ…
ನಾಳೆ (21-07-2022) ರಿಪ್ಪನ್‌ಪೇಟೆಯಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಸಪ್ತಾಹದ ಸಮಾರೋಪ ಕಾರ್ಯಕ್ರಮ
ರಿಪ್ಪನ್‌ಪೇಟೆ : ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಮಾಜವಾದಿ ನಾಯಕ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಸಪ್ತಾಹದ ಸಮಾರೋಪ ಕಾರ್ಯಕ್ರಮವನ್ನು ನಾಳೆ (21-07-2022)ರಂದು ಮಧ್ಯಾಹ್ನ 3.30ಕ್ಕೆ ಪಟ್ಟಣದ ಜಿ ಎಸ್ ಬಿ ಕಲ್ಯಾಣ ಮಂದಿರದಲ್ಲಿ ಆಯೋಜಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು,ಕರ್ನಾಟಕ ಜನಪದ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ರಿಪ್ಪನ್‌ಪೇಟೆ ಹೋಬಳಿ ಸಮಿತಿ ವತಿಯಿಂದ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಶಾಂತವೇರಿ ಗೋಪಾಲಗೌಡರ ಒಡನಾಡಿಗಳು ಹಾಗೂ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ,ಗೋಪಾಲಗೌಡರ ಒಡನಾಡಿಗಳಾದ ಬಿ ಆರ್ ಜಯಂತ್…