ಜಿಲ್ಲಾ ಸುದ್ದಿ:
ಐಟಿ ಕಚೇರಿಗೆ ಮುತ್ತಿಗೆ ಯತ್ನ: ಕೈ ಕಾರ್ಯಕರ್ತರನ್ನು ವಶಕ್ಕೆ ಪಡೆದ ಶಿವಮೊಗ್ಗ ಪೊಲೀಸರು
ಶಿವಮೊಗ್ಗ: ರಾಹುಲ್ ಗಾಂಧಿ ಮೇಲೆ ಕೇಂದ್ರ ಸರ್ಕಾರ ವೈಯಕ್ತಿಕ ದ್ವೇಷದಿಂದ ಇಡಿ ವಿಚಾರಣೆ ನಡೆಸುತ್ತಿದೆ ಎಂದು ಆರೋಪಿಸಿ ಆದಾಯ ತೆರಿಗೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಎಲ್ಲ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಶಿವಮೊಗ್ಗದ ಗೋಪಾಲ ಗೌಡ ಬಡಾವಣೆಯ ಮುಖ್ಯ ರಸ್ತೆಯಲ್ಲಿ ಆದಾಯ ತೆರಿಗೆ ಕಚೇರಿ ಮುಂಭಾಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಬಿಜೆಪಿ ಸರ್ಕಾರವು ಸೋನಿಯಾ ಗಾಂಧಿ ಅವರ ಕುಟುಂಬವನ್ನು ಟಾರ್ಗೆಟ್ ಮಾಡಿ, ಅವರಿಗೆ ಕಿರುಕುಳ ನೀಡುವ ಉದ್ದೇಶದಿಂದ ಇಡಿ ನೋಟಿಸ್…
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಅಮೀರ್ ಹಂಜಾ ನೇಮಕ :
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ರಿಪ್ಪನ್‌ಪೇಟೆಯ ಅಮೀರ್ ಹಂಜಾ ರವರನ್ನು ನೇಮಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಆದೇಶಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಿಲ್ಲಾಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ರವರು ಅಮೀರ್ ಹಂಜಾ ರವರಿಗೆ ಆದೇಶ ಪ್ರತಿಯನ್ನು ವಿತರಿಸಿದರು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ರವರ ಒಡನಾಡಿಯಾಗಿದ್ದ ರಿಪ್ಪನ್‌ಪೇಟೆಯ ಅಮೀರ್ ಹಂಜಾ ಪ್ರಸ್ತುತ ಮಧು ಬಂಗಾರಪ್ಪ ರ ಬೆಂಬಲಿಗ ಮುಖಂಡರಲ್ಲಿ…
ಅರಸಾಳು ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆ ಒತ್ತಾಯಿಸಿ ಬೃಹತ್ ಪ್ರತಿಭಟನೆಗೆ ಸಿದ್ಧತೆ :
ರಿಪ್ಪನ್ ಪೇಟೆ : ಅರಸಾಳು ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆ ಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಹಾಗೂ ವಿವಿಧ ಸಂಘಟನೆಗಳಿಂದ ಸಂಘಟನೆಗಳ ಸಹಕಾರದಿಂದ ಅರಸಾಳು ರೈಲ್ವೆ ನಿಲ್ದಾಣದ ಎದುರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸುತ್ತಿರುವುದಾಗಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ. ಪಿ ರಾಮಚಂದ್ರ ಹೇಳಿದರು. ರಿಪ್ಪನ್ ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಅರಸಾಳು ರೈಲ್ವೆ ನಿಲ್ದಾಣವನ್ನು ಉನ್ನತೀಕರಿಸಿ ಶಿವಮೊಗ್ಗದಿಂದ ತಾಳಗುಪ್ಪ ಮಾರ್ಗದಲ್ಲಿ ಪ್ರತಿನಿತ್ಯ ಓಡಾಡುವ ಎಲ್ಲಾ ರೈಲುಗಳನ್ನು ಅರಸಾಳು ರೈಲು…
ಭದ್ರಾವತಿ VISL ವಸತಿ ನಿಲಯದ ಬಳಿ ಆತಂಕ ಮೂಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ
ಭದ್ರಾವತಿ : ಇಲ್ಲಿನ ವಿಐಎಸ್‌ಎಲ್ ಕ್ವಾರ್ಟರ್ಸ್ ಆವರಣದಲ್ಲಿ ಬುಧವಾರ ಕಾಣಿಸಿಕೊಂಡಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ಕೆಲವೇ ಗಂಟೆಯಲ್ಲಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ವನ್ಯಜೀವಿ ವಿಭಾಗದ ವೈದ್ಯ ಡಾ.ವಿನಯ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಅರವಳಿಕೆ ನೀಡಿದ ಬಳಿಕ, ಚಿರತೆಯನ್ನು ಬೋನ್ ನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಕಾರ್ಯಾಚರಣೆ ಸಂಧರ್ಭದಲ್ಲಿ ಡಾ.ವಿನಯ್ ಅವರು ಧೈರ್ಯ ತೋರಿ 10 ಮೀ. ಅಂತರದಲ್ಲೇ ಚಿರತೆಗೆ ಅರವಳಿಕೆ ನೀಡಿದ್ದಾರೆ. ಚಿರತೆ ಸೆರೆ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿದ್ದ ಸ್ಥಳೀಯರು ನಿಟ್ಟುಸಿರು…
ಸಾಗರ ಉಪವಿಭಾಗಧಿಕಾರಿ ಡಾ.ಎಲ್ ನಾಗರಾಜ್ ವರ್ಗಾವಣೆ :
ಸಾಗರ ತಾಲ್ಲೂಕು ಉಪವಿಭಾಗಧಿಕಾರಿ ಎಲ್ ನಾಗರಾಜ್ ರವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸಾಗರ ಉಪವಿಭಾಗಧಿಕಾರಿಯಾಗಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಎಲ್. ನಾಗರಾಜ್ ರವರನ್ನು ಸರ್ಕಾರ ದಿಡೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು ಇನ್ನೂ ಯವುದೇ ಸ್ಥಳವನ್ನು ಸೂಚಿಸಿಲ್ಲ. ನೂತನವಾಗಿ ಸಾಗರ ಉಪವಿಭಾಗಧಿಕಾರಿಯಾಗಿ ರಾಘವೇಂದ್ರ ಬಿ. ಜಗಲಾಸರ್ ರವರು ಅಧಿಕಾರ ಸ್ವೀಕರಿಸಲಿದ್ದಾರೆ.ಇವರು ಧಾರವಾಡ ತಾಲೂಕ್ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಈಗ ಸಾಗರ ಉಪವಿಭಾಗಧಿಕಾರಿಯಾಗಿ ನಿಯುಕ್ತಿಗೊಂಡಿದ್ದಾರೆ.
ಕನ್ನಡದ ಪ್ರಖ್ಯಾತ ನಟ ದಿಗಂತ್ ಸ್ಥಿತಿ ಗಂಭೀರ : ಕೆಲವೇ ಗಂಟೆಗಳಲ್ಲಿ ಗೋವಾದಿಂದ ಬೆಂಗಳೂರಿಗೆ ಏರ್ ಲಿಫ್ಟ್
ಮುಂಗಾರು ಮಳೆ, ಗಾಳಿಪಟ, ಮನಸಾರೆ ಸೇರಿದಂತೆ ಹಲವು ಯಶಸ್ವಿ ಚಿತ್ರಗಳಲ್ಲಿ ನಟಿಸಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ನಟ ದಿಗಂತ್ ಅವರಿಗೆ ಚಿತ್ರೀಕರಣದ ವೇಳೆ ಅಪಘಾತವಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ ದಿಗಂತ್ ಗೋವಾದಲ್ಲಿ ಪ್ರವಾಸದಲ್ಲಿದ್ದಾಗ ಈ ಘಟನೆ ನಡೆದಿದ್ದು, ಗೋವಾದಲ್ಲಿ ನಟ ದಿಗಂತ್ ತನ್ನ ಆಪ್ತರು ಹಾಗೂ ಗೆಳೆಯರೊಡನೆ ಪ್ರವಾಸಕ್ಕೆ ತೆರಳಿದ್ದರು. ಟ್ರೆಕ್ಕಿಂಗ್ ಸೇರಿದಂತೆ ಇನ್ನಿತರೆ ಸಾಹಸ ಕ್ರೀಡೆಗಳಲ್ಲಿ ಅವರು ತೊಡಗಿಕೊಂಡಿದ್ದರು. ಸಾಹಸ ಕ್ರೀಡೆಗಳನ್ನು ಆಡುವ ವೇಳೆ ಅಚಾನಕ್ಕಾಗಿ ದಿಗಂತ್‌ರ ಕತ್ತಿಗೆ ತೀವ್ರ ಪೆಟ್ಟಾಗಿದೆ…
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಪಡೆದ ಅಮೃತ ಕಾಲೇಜಿನ ವಿದ್ಯಾರ್ಥಿಗಳಿಗೆ ಸನ್ಮಾನ.
ರಿಪ್ಪನ್ ಪೇಟೆ: ಈ ಬಾರಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಅತ್ಯುನ್ನತ ಶ್ರೇಣಿ ಪಡೆದ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ 31 ವಿದ್ಯಾರ್ಥಿಗಳಿಗೆ ಪ್ರಾಚಾರ್ಯರು ಉಪನ್ಯಾಸಕ ವೃಂದ ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯವರಿಂದ ಗೌರವಿಸಿ ಸನ್ಮಾನಿಸಿ ಅಭಿನಂದಿಸಲಾಯಿತು. ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಇಂದು ನಡೆದ ಸರಳ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಮಹ್ಮದ್ ನಜ್ ಹತ್ ಉಲ್ಲಾ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ …
ಕನ್ನಡದ ಪ್ರಖ್ಯಾತ ನಟ,ನಿರ್ದೇಶಕ ರಿಷಬ್ ಶೆಟ್ಟಿ ರವರ ನೂತನ ಚಲನಚಿತ್ರಕ್ಕೆ ನಾಳೆ ಶಿವಮೊಗ್ಗದಲ್ಲಿ ಆಡಿಷನ್ :
ಶಿವಮೊಗ್ಗ: ಚಿತ್ರನಟ, ನಿರ್ದೇಶಕ ರಿಷಬ್ ಶೆಟ್ಟಿ ಪ್ರೊಡಕ್ಷನ್ಸ್ ನ ನೂತನ ಚಲನಚಿತ್ರಕ್ಕೆ ಕಲಾವಿದರ ಆಯ್ಕೆ ಮಾಡಿಕೊಳ್ಳಲು ಶಿವಮೊಗ್ಗ ನಗರದಲ್ಲಿ ಆಡಿಷನ್ ನಡೆಯಲಿದೆ. ಜೂ.21ರ ಮಂಗಳವಾರ ನಾಳೆ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಪಕ್ಕದ ಕೋಟೆ ಬಯಲು ರಂಗಮಂದಿರದಲ್ಲಿ ನಡೆಯುವುದು. 5 ರಿಂದ 10 ವರ್ಷದೊಳಗಿನ ಬಾಲ ಕಲಾವಿದರು, 20ರಿಂದ 30, 50 ರಿಂದ 65 ವರ್ಷದ ಪುರುಷರು ಪೋಷಕ ಪಾತ್ರಕ್ಕೆ ಹಾಗೂ 20 ರಿಂದ 35 ವರ್ಷದ ವಯಸ್ಸಿನ…
ಯೋಗ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿರುವ ಹಳ್ಳಿಗಾಡಿನ ಪ್ರತಿಭೆ : ಗರ್ತಿಕೆರೆ ಗ್ರಾಮದ ಕಾವ್ಯಾ ಳಿಗೆ ಒಲಿದ ರಾಷ್ಟ್ರ ಮಟ್ಟದ ಬೆಳ್ಳಿ ಪದಕ
ನವದೆಹಲಿಯಲ್ಲಿ ಸೋಮವಾರ ಮುಕ್ತಾಯಗೊಂಡ ರಾಷ್ಟ್ರ ಮಟ್ಟದ ಯೋಗ ಸ್ಪರ್ಧೆಯಲ್ಲಿ ಕಾವ್ಯ ಕೆ ಎನ್ ದ್ವಿತೀಯ ಸ್ಥಾನವನ್ನು ಗಳಿಸುವ ಮೂಲಕ ಬೆಳ್ಳಿ ಪದಕವನ್ನು ಗಳಿಸಿದ್ದು ಕರ್ನಾಟಕ ರಾಜ್ಯದ ಹೆಸರನ್ನು ಮೆರೆದಿದ್ದಾಳೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಕಾವ್ಯ ಕೆ ಎನ್ ಮೂರು ಬಾರಿ ಅಂತರರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ಈ ಪ್ರತಿಭಾವಂತೆ ರಾಷ್ಟ್ರ ಮಟ್ಟದಲ್ಲಿ 5 ಬಾರಿ ಪ್ರಥಮ ಸ್ಥಾನವನ್ನು, 4…
ರಿಪ್ಪನ್ ಪೇಟೆ ಸುತ್ತಮುತ್ತ ಮೊಬೈಲ್ ನೆಟ್ ವರ್ಕ್ ಸಮಸ್ಯೆಯಿಂದ ಆಕಾಶವನ್ನು ನೋಡುತ್ತಿರುವ ಮೊಬೈಲ್ ಗ್ರಾಹಕರುಗಳು….!ಸಿಡಿದೆದ್ದು ಮೊಬೈಲ್ ಸೇವಾ ಕೇಂದ್ರಗಳಿಗೆ ಬೀಗ ಜಡಿಯಲು ಸನ್ನದ್ಧರಾಗುತ್ತಿರುವ ಗ್ರಾಹಕರುಗಳು..!!???
ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರಮುಖ ಪಟ್ಟಣಗಳಲ್ಲಿ ಒಂದಾದ ರಿಪ್ಪನ್ ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮದ ಮೊಬೈಲ್ ಗ್ರಾಹಕರುಗಳು ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಆಕಾಶವನ್ನು ನೋಡುತ್ತಿದ್ದಾರೆ. ಗ್ರಾಹಕರ ಸಮಸ್ಯೆಗೆ ಸ್ಪಂದಿಸದ ಸೇವಾ ಕೇಂದ್ರಗಳು : ರಿಪ್ಪನ್ ಪೇಟೆ ಯಲ್ಲಿ ಖಾಸಗಿ ಮೊಬೈಲ್ ಕಂಪನಿಗಳಾದ ಏರ್ ಟೆಲ್, ಜಿಯೋ ಸೇರಿದಂತೆ ಬಿಎಸ್ಎನ್ಎಲ್ ಸೇವಾ ಕೇಂದ್ರಗಳು ಇದ್ದರೂ ಸಹ ದಿನನಿತ್ಯ ನೂರಾರು ಬಾರಿ ಮೊಬೈಲ್ ನೆಟ್ವರ್ಕ್ ಗಳ ಸಮಸ್ಯೆಗಳು ಉಂಟಾಗುತ್ತಿದೆ. ಈ ಬಗ್ಗೆ ಹಲವಾರು ಬಾರಿ ಸೇವಾಕೇಂದ್ರದ…