ಜಿಲ್ಲಾ ಸುದ್ದಿ:
ರಿಪ್ಪನ್ ಪೇಟೆಯ ಮಹಿಳೆಯೊಬ್ಬರ ಮೊಬೈಲ್ ಗೆ ಅಶ್ಲೀಲ ಚಿತ್ರ ರವಾನೆ : ಅಪರಿಚಿತ ವ್ಯಕ್ತಿಗಳ ಪತ್ತೆಗೆ ಭರ್ಜರಿ ಬಲೆ ಬೀಸಿರುವ ಖಾಕಿ ಟೀಮ್
ರಿಪ್ಪನ್‌ಪೇಟೆಯ ಮಹಿಳೆಯೋರ್ವರ ಮೊಬೈಲ್ ಗೆ ಅಶ್ಲೀಲ ವಿಡಿಯೋ ರವಾನಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಅಪರಿಚಿತರ ವಿರುದ್ಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗವಟೂರು ಗ್ರಾಮದ ನಿವಾಸಿಯಾಗಿರುವ ಮಹಿಳೆಯೊಬ್ಬರ ಮೊಬೈಲ್ ಗೆ ಮೇ.10 ರಂದು ಅಶ್ಲೀಲ ವಿಡಿಯೋಗಳನ್ನ ಎರಡು ಅಪರಿಚಿತ ನಂಬರ್ ನಿಂದ ರವಾನಿಸಿ ಮೇಲಿಂದ ಮೇಲೆ ಕರೆ ಮಾಡಿ ಮಾನಸಿಕ ಕಿರುಕುಳ ನೀಡಿದ್ದಾರೆ. ಈ ಬಗ್ಗೆ ಅರ್ಜಿಯನ್ನೂ ಮೇ 10 ರಂದು ಮಹಿಳೆ ನೀಡಿದ್ದರು. ಇದನ್ನು ತನಿಖೆ ನಡೆಸಿದ ಪೊಲೀಸರು ಎರಡು ಅಪರಿಚಿತ ಮೊಬೈಲ್…
ಬಸವಣ್ಣನವರ ಬಗ್ಗೆ ಪಠ್ಯಪುಸ್ತಕದಲ್ಲಿನ ತಪ್ಪು ಮಾಹಿತಿ ಸರಿಪಡಿಸುವಂತೆ ಮುಖ್ಯಮಂತ್ರಿಗಳಿಗೆ ಮೂಲೆಗದ್ದೇ ಶ್ರೀಗಳ ಪತ್ರ
ಲಿಂಗಾಯಿತ ಧರ್ಮಗುರು ಬಸವಣ್ಣನವರ ಬಗ್ಗೆ ಪಠ್ಯ ಪುಸ್ತಕದಲ್ಲಿ ತಪ್ಪು ಮಾಹಿತಿ ನೀಡಲಾಗಿದೆ. ಇದನ್ನು ಸರಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ನಾವುಗಳು ಹೋರಾಟ ನಡೆಸಬೇಕಾಗುತ್ತದೆಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಅವರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಬಗ್ಗೆ ರಿಪ್ಪನ್‌ಪೇಟೆಯಲ್ಲಿ ಮಾಧ್ಯಮಗಳಿಗೆ ವಿವರಿಸಿ, 9ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಬಸವಣ್ಣನವರನ್ನು ಕುರಿತ ಪಾಠದಲ್ಲಿ ಕೆಲ ಬದಲಾವಣೆ ಮಾಡಿ ಪ್ರಕಟಿಸಿರುವುದನ್ನು ಕುಚೋದ್ಯದ ಸಂಗತಿ. ಈ ಅನೈತಿಕ ತಪ್ಪುಗಳನ್ನು ಸರಿಪಡಿಸಿ ಪ್ರಕಟಿಸಬೇಕು. ಇಲ್ಲದಿದ್ದರೆ…
ಜನಪ್ರತಿನಿಧಿ ಹಾಗೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ನಶಿಸುತ್ತಿದೆ ಇತಿಹಾಸ ಪ್ರಸಿದ್ದ ಆಂಜನೇಯ ದೇವಸ್ಥಾನ :
ತೀರ್ಥಹಳ್ಳಿ : ತಾಲೂಕಿನ ಮಾಳೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿರುವ ಶಿವಮೊಗ್ಗ – ತೀರ್ಥಹಳ್ಳಿಯ ಮುಖ್ಯ ರಸ್ತೆಯ ಪಕ್ಕದಲ್ಲಿರುವ ಮುಜರಾಯಿ ಇಲಾಖೆಗೆ ಸಂಬಂಧಪಟ್ಟ ಇತಿಹಾಸ ಪ್ರಸಿದ್ದ ಆಂಜನೇಯ ದೇವಸ್ಥಾನ ಸರ್ಕಾರದ ಯಾವುದೇ ಸೌಲಭ್ಯವಿಲ್ಲದೆ ನಶಿಸುತ್ತಿದೆ. ಆಂಜನೇಯ ದೇವಸ್ಥಾನದಲ್ಲಿ ಪ್ರತಿದಿನ ಪೂಜೆ ಏನೋ ನೆಡೆಯುತ್ತಿದೆ. ಆದರೆ ಸರ್ಕಾರದಿಂದ ಯಾವುದೇ ಸೌಲಭ್ಯ ಕೂಡ ದೇವಸ್ಥಾನಕ್ಕೆ ದೊರಕುತ್ತಿಲ್ಲ. ಚುನಾವಣೆ ಸಮಯದಲ್ಲಿ ದೇವಸ್ಥಾನಕ್ಕೆ ಹಲವು ಬಾರಿ ಈಗಿನ ಗೃಹ ಸಚಿವರು ಅದ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕರು ಆಗಿರುವ ಕಿಮ್ಮನೆ ರತ್ನಾಕರ್ ಭೇಟಿ ನೀಡಿದ ದೇವಸ್ಥಾನವನ್ನು…
ರಾಷ್ಟ್ರಕವಿ ಕುವೆಂಪುರವರನ್ನು ಅಪಮಾನಿಸಿರುವ ರೋಹಿತ್ ಚಕ್ರತೀರ್ಥ ನನ್ನು ವಜಾಗೊಳಿಸಿ ಪ್ರಕರಣ ದಾಖಲಿಸುವಂತೆ ಹೊಸನಗರ ತಾಲೂಕಿನ ವಿವಿಧ ಪಕ್ಷ ಹಾಗೂ ಸಂಘಟನೆಗಳಿಂದ ಪ್ರತಿಭಟನೆ
ಪಠ್ಯಪುಸ್ತಕದಲ್ಲಿ ರಾಷ್ಟ್ರಕವಿ ಕುವೆಂಪುರವರನ್ನು ಅವಮಾನಿಸುವ ರೀತಿಯಲ್ಲಿ ಪಠ್ಯಪುಸ್ತಕವನ್ನು ರಚಿಸಿ ನಾಡ ಕವಿಯನ್ನು ಅವಮಾನಿಸುತ್ತಿರುವ ಕರ್ನಾಟಕ ರಾಜ್ಯ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯಿಂದ ರೋಹಿತ್ ಚಕ್ರತೀರ್ಥರವರನ್ನು ವಜಾ ಮಾಡುವುದರ ಜೊತೆಗೆ ದೇಶ ದ್ರೋಹಿ ಕೇಸು ಹಾಕಿ ಜೈಲಿಗೆ ಕಳುಹಿಸಬೇಕೆಂದು ಹೊಸನಗರ ತಾಲೂಕಿನ ವಿವಿಧ ಪಕ್ಷ ಹಾಗೂ ಸಂಘಟನೆಗಳು ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಗರ ಕಾಲೇಜಿನ ಪ್ರಾಂಶುಪಾಲರಾದ ಸೊನಲೆ ಶ್ರೀನಿವಾಸ್, ರೋಹಿತ್ ಚಕ್ರತೀರ್ಥನು ಅಪ್ರಭುದ್ಧ ಹಾಗೂ ನಾಡಪ್ರಜ್ಞೆ ಇಲ್ಲದ ವ್ಯಕ್ತಿಯಾಗಿದ್ದು ಈತನ ಮಾತು…
ಅನಾರೋಗ್ಯ ಪೀಡಿತ ತಾಯಿಯನ್ನು ಜೋಲಿ ಕಟ್ಟಿ ಆಸ್ಪತ್ರೆಗೆ ಹೊತ್ತೊಯ್ದ ಮಗ : ಮಲೆನಾಡಲ್ಲೊಂದು ಮನಕಲಕುವ ಘಟನೆ
ರಸ್ತೆ ವ್ಯವಸ್ತೆ ಇಲ್ಲದೇ ಇರುವ ಕಾರಣ ಅನಾರೋಗ್ಯ ಪೀಡಿತ ಮಹಿಳೆಯನ್ನು ಜೋಲಿ ಕಟ್ಟಿ ಹೊತ್ತುಕೊಂಡು ಆಸ್ಪತ್ರೆಗೆ ಕರೆತಂದ ಮನಕಲಕುವ ಘಟನೆಯೊಂದು ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ ಶಿವಮೊಗ್ಗ ಜಿಲ್ಲೆಯ ಜೋಗ ಕಾರ್ಗಲ್ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಈ ಅಮಾನವೀಯ ದೃಶ್ಯ ಕಂಡು ಬಂದಿದ್ದು, ಪಾರ್ಶ್ವವಾಯು ಪೀಡಿತ ತಾಯಿಗೆ ಚಿಕಿತ್ಸೆ ಕೊಡಿಸಲು ಮಗ ಪರದಾಡಿದ್ದಾನೆ. ಜೋಗದ ಚರ್ಚ್ ಮೌಂಟ್ ಏರಿಯಾದ ಅಚ್ಚಮ್ಮ ಎಂಬವರು ಪಾರ್ಶ್ವವಾಯುಗೆ ತುತ್ತಾಗಿದ್ದರು. ಆದರೆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆತರಲು ಅವರ ಮನೆಗೆ ರಸ್ತೆಯೇ ಇಲ್ಲದ ಕಾರಣ…
ಉದ್ಯಮಿ ಮಹೇಶ್ ಮೇಲೆ ದಾಖಲಾದ ಸುಳ್ಳು ಪ್ರಕರಣವನ್ನು ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ :
ಸಾಗರದ ಯುವ ಉದ್ಯಮಿ ರಾಯಲ್ ಬಿಲ್ಡರ್ಸ್ ಮಾಲೀಕ ಮಹೇಶ್ ಮೇಲೆ ರಾಜಕೀಯ ದುರುದ್ದೇಶದಿಂದ ಮತ್ತು ಶಾಸಕರ ಕುಮ್ಮಕ್ಕಿನಿಂದ ಹಾಗೂ ರೌಡಿಶೀಟರ್ ಅರುಣ್ ಕುಗ್ವೆ ರವರ ದ್ವೇಷದ ಹೇಳಿಕೆಯಿಂದ ವಿನಾಕಾರಣ ಪ್ರಥಮ ವರ್ತಮಾನ ವರದಿಯಲ್ಲಿ ಹೆಸರು ಸೇರ್ಪಡೆ ಮಾಡಿರುತ್ತಾರೆ.ಆದ್ದರಿಂದ ಅವರ ಮೇಲಿನ ಪ್ರಕರಣವನ್ನು ಕೈ ಬಿಡುವಂತೆ ಒತ್ತಾಯಿಸಿ ಸಾಗರ ಗೆಳೆಯರ ಬಳಗದ ವತಿಯಿಂದ ಡಿವೈಎಸ್ಪಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಎಎಸ್ಪಿ ರೋಹನ್ ಜಗದೀಶ್ ರವರಿಗೆ ಮನವಿ ಸಲ್ಲಿಸಿದರು. ಶನಿವಾರ ರಾತ್ರಿ ನಡೆದ ಘಟನೆಗೂ ರಾಯಲ್ ಬಿಲ್ಡರ್ಸ್ ಮಾಲೀಕ…
ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ವರ್ಗಾವಣೆ : ನೂತನ ಪಿಎಸ್ ಐ ನೀಲರಾಜ್ ಬಿ ಅಧಿಕಾರ ಸ್ವೀಕಾರ
ಹೊಸನಗರ: ಪಟ್ಟಣದ ಖಡಕ್ ಪಿಎಸ್ ಐ ಎಂದೇ ಹೆಸರುವಾಸಿಯಾಗಿದ್ದ ರಾಜೇಂದ್ರನಾಯ್ಕ್ ರವರು ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ರಾಜೇಂದ್ರನಾಯ್ಕ್ ರವರ ಸ್ಥಾನಕ್ಕೆ ದಾವಣಗೆರೆ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನೀಲರಾಜ್ ಬಿ. ನರಲಾರ ರವರು ಹೊಸನಗರ ಪಿಎಸ್ ಐ ಆಗಿ ನೇಮಕವಾಗಿದ್ದಾರೆ. ಹೊಸನಗರದ ಖಡಕ್ ಪಿಎಸ್ ಐ ವಿರುದ್ದ ಮರಳು ಮಾಫ಼ಿಯಾ ಹಾಗೂ ಗಣಿ ಮಾಫ಼ಿಯಾ ದವರು ಇತ್ತೀಚೆಗೆ ಅನೇಕ ಷಡ್ಯಂತ್ರಗಳನ್ನು ರೂಪಿಸಿ ಅವರ ತೇಜೋವಧೆಗೆ ಪ್ರಯತ್ನಿಸಿದಾಗ ಹೊಸನಗರ ಪಟ್ಟಣದ ನಾಗರೀಕರು ಒಕ್ಕೊರಲಿನಿಂದ ಪ್ರಾಮಾಣಿಕ…
ಶಾಸಕರ ರೌಡಿ ಬೆಂಬಲಿಗರ ವಿರುದ್ದ ಕ್ರಮ ಕೈಗೊಳ್ಳಿ,ಸಾಗರ ಕ್ಷೇತ್ರದ ಮರ್ಯಾದೆ ಉಳಿಸಿ : ಗೋಪಾಲಕೃಷ್ಣ ಬೇಳೂರು
ಸಾಗರದಲ್ಲಿ ಬಿಜೆಪಿ ಪಕ್ಷದ ಯುವಮೋರ್ಚಾ ಅಧ್ಯಕ್ಷ ಅರುಣ್ ಕುಗ್ವೆ ರವರನ್ನು ಬಂಧಿಸುವಂತೆ ಒತ್ತಾಯಿಸಿ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಡಿವೈಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು ಈ ಸಂದರ್ಭದಲ್ಲಿ ಮಾತನಾಡಿದ ಗೋಪಾಲಕೃಷ್ಣ ಬೇಳೂರು ಸಾಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಇತ್ತೀಚೆಗೆ ಭೂಮಾಫಿಯ ಹೆಚ್ಚಾಗಿದ್ದು ಆಡಳಿತರೂಢ ಬಿಜೆಪಿ ಪಕ್ಷದ ಮುಖಂಡರುಗಳು ತಮ್ಮ ಶಾಸಕರ ಕುಮ್ಮಕ್ಕಿನಿಂದ ಭೂ ಮಾಫಿಯಾ ದಂಧೆ ಮಾಡುತ್ತಿದ್ದು ಇದರ ಬಗ್ಗೆ ಸಾಮಾನ್ಯ ಜನರು ಪ್ರಶ್ನೆ ಮಾಡಿದಲ್ಲಿ ಅಂಥವರ ಮೇಲೆ ಮಾರಣಾಂತಿಕ ಹಲ್ಲೆ…
ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವರದಿಯ ಫಲಶ್ರುತಿ : ರಾಷ್ಟ್ರೀಯ ಹಾಕಿ ಕ್ರೀಡಾಪಟು ಪೂಜಿತ ಗೌಡಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಂದ ಸನ್ಮಾನ
ಮಲೆನಾಡಿನ ಹೆಮ್ಮೆಯ ಪುತ್ರಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಪಟ್ಟಣದ ಬರುವೆ ಗ್ರಾಮದ ರಾಷ್ಟ್ರ ಮಟ್ಟದ ಹಾಕಿ ಕ್ರೀಡಾಪಟು ಪೂಜಿತ ಗೌಡಳಿಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಸ್ವಗೃಹದಲ್ಲಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ರಾಷ್ಟ್ರೀಯ ಮಟ್ಟದ ಹಾಕಿ ಕ್ರೀಡಾಕೂಟದಲ್ಲಿ 19 ಬಾರಿ ಭಾಗವಹಿಸಿದ ಪೂಜಿತ ಗೌಡ ಇದೇ ತಿಂಗಳು ಮಧ್ಯಪ್ರದೇಶದ ಭೂಪಾಲ್ ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಖೇಲ್ ಇಂಡಿಯಾ ಹಾಕಿ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಹಾಕಿ ತಂಡದಿಂದ ಭಾಗವಹಿಸಿ ಅದ್ವಿತೀಯ…
ಬೆಳ್ಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ
ರಿಪ್ಪನ್‌ಪೇಟೆ : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿಯಲ್ಲಿ ಶುಕ್ರವಾರ ಬೆಳ್ಳೂರು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ರವರು ಕಾರ್ಯಕ್ರಮ ಉದ್ಘಾಟಿಸಿ ನಾಗರಿಕರಿಂದ ಮನವಿ ಸ್ವೀಕರಿಸಿ ಅಹವಾಲುಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರಿಂದ ಅಬಕಾರಿ ,ಕೃಷಿ ,ಅರಣ್ಯ ,ಕಂದಾಯ ಇಲಾಖೆಗೆ ಸಂಬಂಧಪಟ್ಟ ದೂರುಗಳು ಅಧಿಕವಾಗಿದ್ದವು. ಸಂಧ್ಯಾ ಸುರಕ್ಷಾ, ಅಂಗವಿಕಲ, ವಿಧವಾ ವೇತನ ಇವುಗಳಿಗೆ ಸಂಬಂಧಪಟ್ಟಂತೆ ಸ್ಥಳದಲ್ಲಿ ಮಂಜೂರಾತಿ ಆದೇಶ ನೀಡಿದರು. ಗ್ರಾಮೀಣ ಪ್ರದೇಶದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಅವ್ಯಾಹತವಾಗಿ ನಡೆಯುತ್ತಿರುವ ಮದ್ಯ ಮಾರಾಟದ ಬಗ್ಗೆ…