ಜಿಲ್ಲಾ ಸುದ್ದಿ:
ರಾಜ್ಯದಲ್ಲಿ ಜೆಡಿಎಸ್ ಬಲಿಷ್ಠವಾಗಿದೆ : ಯಡೂರು ರಾಜಾರಾಂ
ರಾಜ್ಯದಲ್ಲಿ ಜೆಡಿಎಸ್ ಬಲಿಷ್ಟವಾಗಿದೆ, ಹೆಚ್.ಡಿ.ಕುಮಾರ ಸ್ವಾಮಿ ಯವರ ಆಡಳಿತವನ್ನು ರಾಜ್ಯದ ಜನತೆ ಸ್ಮರಿಸುತ್ತಿದ್ದಾರೆ, 2023ರಲ್ಲಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರುತ್ತದೆ, ಮಾಜಿ ಮುಖ್ಯ ಮಂತ್ರಿ ಹೆಚ್ ಡಿ ಕುಮಾರ್‌ಸ್ವಾಮಿಯವರು ಮತ್ತೆ ಸಿ ಎಂ ಆಗುತ್ತಾರೆ.ಗ್ರಾಮೀಣ ಬಾಗದಲ್ಲಿ ಜೆಡಿಎಸ್ ಬಲಿಷ್ಟ ಎಂದು ವಾಗಿ ಸಂಘಟನೆ ಯಾಗುತ್ತಿದೆ ಎಂದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಡೂರು ರಾಜಾರಾಂ ಹೇಳಿದರು. ಹೊಸನಗರ ತಾಲ್ಲೂಕಿನ ಜೆಡಿಎಸ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಿಪ್ಪನ್ ಪೇಟೆಯ ಎನ್ ವರ್ತೇಶ್ ಹಾಗೂ ಜೆಡಿಎಸ್ ಹಿರಿಯ…
ಎಸ್ ಎಸ್ ಎಲ್ ಸಿ ಪಲಿತಾಂಶ : 625 ಕ್ಕೆ 625 ಪಡೆದ 11 ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರದ್ದೇ ಮೇಲುಗೈ
ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಆನ್ ಲೈನ್ ಮೂಲಕ ಪ್ರಕಟವಾಗಿದ್ದು ಜಿಲ್ಲೆಯಲ್ಲಿ ಶೇ.84.60 ಫಲಿತಾಂಶ ದೊರೆತಿದ್ದು ಎ ಗ್ರೇಡ್ ಸ್ಥಾನ ದೊರೆತಿದೆ. ಅದರಂತೆ ಜಿಲ್ಲೆಯಲ್ಲಿ ಒಟ್ಟು 23136 ಜನ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, 19574 ಜನ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಜಿಲ್ಲೆಯ 7 ತಾಲೂಕಿನ ಫಲಿತಾಂಶ ಇಂತಿದೆ: ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ 1654 ವಿದ್ಯಾರ್ಥಿಗಳಲ್ಲಿ 1516 ಜನ ಮಕ್ಕಳು ತೇರ್ಗಡೆಯಾಗಿದ್ದು ಶೇ.91.66 ರಷ್ಟು ಫಲಿತಾಂಶ ಬಂದಿದೆ. ಜಿಲ್ಲೆಯಲ್ಲಿ ತೀರ್ಥಹಳ್ಳಿ ಅತಿ ಹೆಚ್ಚು ಅಂಕಪಡೆದ ತಾಲೂಕಾಗಿದೆ. ಹೊಸನಗರ…
ಚಲಿಸುತ್ತಿದ್ದ ರಾಯಲ್ ಎನ್ ಫೀಲ್ಡ್ ಬುಲ್ಲೆಟ್ ಬೈಕ್ ಗೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ :
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೊರವಲಯದ ಉಳವಿ ರಸ್ತೆಯ ಪಡವಗೊಡು ಬಳಿ“ರಾಯಲ್ ಎನ್ಫಿಲ್ಡ್ ಬುಲ್ಲೆಟ್” ಬೈಕೊಂದು ಚಲಿಸುತ್ತಿರುವಾಗ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಗೆ ಬೈಕ್ ಸಂಪೂರ್ಣ ಸುಟ್ಟು ಹೋಗಿದ್ದು ಅದೃಷ್ವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ ತಕ್ಷಣ ಸ್ಥಳೀಯರು ವಾಹನಕ್ಕೆ ಹೊತ್ತಿದ್ದ ಬೆಂಕಿಯನ್ನು ನಂದಿಸುವಲ್ಲಿ ಸಹಕರಿಸಿದ್ದಾರೆ. ಎಂದು ತಿಳಿದು ಬಂದಿದೆ. ಬೆಂಕಿ ಹೊತ್ತಿಕೊಂಡ ಬೈಕ್ ದಾವಣಗೆರೆ ನೊಂದಾಣಿಯ “KA 17 HQ 3482” ದಾವಣಗೆರೆ ಮೂಲದವರು ಎಂದು ಬಲ್ಲಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ಶಿವಮೊಗ್ಗ ಜಿಲ್ಲಾದ್ಯಂತ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ :
ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶಿಸಿದ್ದಾರೆ.
ಶಿವಮೊಗ್ಗ ನಗರದಲ್ಲಿ ರೆಡ್ ಅಲರ್ಟ್ ಘೋಷಣೆ : ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಶಿವಮೊಗ್ಗದಲ್ಲಿ ಅಧಿಕ ಮಳೆ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ನಿರೀಕ್ಷೆಯಂತೆ ಇಂದು ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚಿಸಿದೆ. ಶಿವಮೊಗ್ಗ ತಾಲ್ಲೂಕಿನಾದ್ಯಂತ ಅತಿಯಾದ ಮಳೆ ಸುರಿಯುತ್ತಿರುವ ಕಾರಣ ತಾಲ್ಲೂಕಿನ ಎಲ್ಲ ಶಾಲೆಗಳಿಗೆ ಅಪರ ಜಿಲ್ಲಾಧಿಕಾರಿಗಳ ಸೂಚನೆಯನ್ವಯ ಈ ದಿನ ಅಂದರೆ ಮೇ.19ರಂದು ರಜೆ ಘೋಷಿಸಿದೆ. ಹವಮಾನದ ವೈಪರಿತ್ಯ ಹಾಗೂ ಅಧಿಕ ಮಳೆಯ ಹಿನ್ನಲೆಯಲ್ಲಿ ಇಂದು ರಜೆ ಘೋಷಿಸಲಾಗಿದೆ.ನಗರದ ಮತ್ತು ತಾಲೂಕಿನಲ್ಲಿರುವ ಖಾಸಗಿ, ಅನುದಾನಿತ, ಅನುದಾನ ರಹಿತ ಹಾಗೂ ಸರ್ಕಾರದ ಶಾಲೆಗಳಿಗೆ ಸಧ್ಯಕ್ಕೆ ಒಂದು…
ಜಿಲ್ಲಾಧಿಕಾರಿಗಳ ಭೇಟಿಯಿಂದ ಬೆಳ್ಳೂರು ಗ್ರಾಮದ ಜನರ ಸಂಕಷ್ಟ ದೂರವಾದಿತೆ…….!? ಇದೇ ತಿಂಗಳ 21 ರಂದು ಬೆಳ್ಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ.
ಗ್ರಾಮಗಳ ಜೀರ್ಣೋದ್ಧಾರಕ್ಕಾಗಿ ಪ್ರತಿ ವರ್ಷ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋಟ್ಯಾಂತರ ರೂಪಾಯಿಗಳು ಬಿಡುಗಡೆ ಮಾಡಿ ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದೆ. ಆದರೆ ಇಲ್ಲೊಂದು ಗ್ರಾಮ ಸುಮಾರು 70 ವರ್ಷಗಳಿಂದ ಮೂಲ ಸೌಕರ್ಯಗಳಿಲ್ಲದೆ ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಿದೆ. ಇಷ್ಟೆಲ್ಲಾ ಸಂಕಷ್ಟ ಅನುಭವಿಸುತ್ತಿರುವ ಈ ಕುಗ್ರಾಮದ ಜನರ ಅಳಲನ್ನು ಯಾರು ಕೇಳವರೇ ಇಲ್ಲ. ಅಷ್ಟಕ್ಕೂ ಈ ಗ್ರಾಮ ಇರುವದಾದ್ರು ಎಲ್ಲಿ? ಇಲ್ಲಿಯ ಜನರ ಪರಿಸ್ಥಿತಿ ಆದ್ರೂ ಹೇಗಿದೆ ಅಂತೀರಾ ಹಾಗಾದ್ರೆ ಈ ಸ್ಟೋರಿ ನೋಡಿ… ಹೌದು, ನಾವಿಲ್ಲಿ ಹೇಳಲು ಹೊರಟಿರುವುದು…
SSLC ಪಲಿತಾಂಶಕ್ಕೆ ಕ್ಷಣಗಣನೆ : ಪಲಿತಾಂಶ ಮೊಬೈಲ್ ನಲ್ಲಿ ನೋಡುವುದು ಹೇಗೆ???? ಈ ಸುದ್ದಿ ನೋಡಿ!!!!
2021- 22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಮೇ 19 ರಂದು ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮೇ 19 ರ ಗುರುವಾರ ಮಧ್ಯಾಹ್ನ 12.30ಕ್ಕೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪಕಟಿಸಲಿದ್ದಾರೆ. ಬಳಿಕ ವಿವಿಧ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕದಲ್ಲಿ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿತ್ತು. ಈ ಮೊದಲು ಮೇ 15ರಂದು ಫಲಿತಾಂಶ ಪ್ರಕಟಿಸುವುದಾಗಿ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಚಿಂತನೆ ನಡೆಸಿತ್ತು. ಆದರೆ ರಜೆಗಳು…
ಹೊಸನಗರ ತಾಲೂಕಿನ ಮರಳು ಮಾಫ಼ಿಯಾದ ಗರ್ಭಗುಡಿ – “ರಿಪಬ್ಲಿಕ್ ಆಫ್ ಹರಿದ್ರಾವತಿ”
ಹೊಸನಗರ ತಾಲೂಕಿನ ಹರಿದ್ರಾವತಿ ಗ್ರಾಮದಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದ್ದು,ಸ್ಥಳೀಯ ಪ್ರಭಾವಿ ವ್ಯಕ್ತಿಯೊಬ್ಬ “ರಿಪಬ್ಲಿಕ್ ಆಫ್ ಹರಿದ್ರಾವತಿ” ಅಧಿಪತ್ಯ ಘೋಷಣೆ ಮಾಡಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ. ಹೌದು ಮಲೆನಾಡಿನಾದ್ಯಂತ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದರು ಅಲ್ಪ ಮಟ್ಟಿಗೆ ಅದಕ್ಕೆ ಕಡಿವಾಣ ಹಾಕುವಲ್ಲಿ ಜಿಲ್ಲೆಯ ಪೊಲೀಸ್ ಇಲಾಖೆ ಹಾಗೂ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಯಶಸ್ವಿಯು ಆಗಿದೆ.ಆದರೆ ಹೊಸನಗರ ತಾಲೂಕಿನ ಹರಿದ್ರಾವತಿ ಎಂಬ ಸುಸಂಸ್ಕೃತ ಗ್ರಾಮದ ಶರಾವತಿ ಹಿನ್ನೀರಿನ ಕೆರೆಹಳ್ಳಿ ಪಾಯಿಂಟ್ ನಲ್ಲಿ ಸ್ಥಳೀಯ ಪ್ರಭಾವಿ…
ಹಾಕಿ ಕ್ರೀಡೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿರುವ ರಿಪ್ಪನ್ ಪೇಟೆಯ ಯುವ ಪ್ರತಿಭೆ ಪೂಜಿತಾ
ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ, ಸತತ ಪರಿಶ್ರಮ, ನಿಖರ ಗುರಿ ಇದ್ದಲ್ಲಿ ಎಲ್ಲವೂ ಸಾಧ್ಯವೆಂದು ರಿಪ್ಪನ್ ಪೇಟೆಯ ಬರುವೆ ಗ್ರಾಮದ ಯುವತಿ ಹಾಕಿ ಕ್ಷೇತ್ರದಲ್ಲಿ ಸಾಧಿಸಿ ತೋರಿಸಿದ್ದಾಳೆ. ರಿಪ್ಪನ್‌ಪೇಟೆ ಬರುವೆ ಗ್ರಾಮದ ನಿವಾಸಿಗಳಾದ ನಾಗೇಶ್ ಗೌಡ ಹಾಗೂ ಪೂರ್ಣಿಮಾ ದಂಪತಿಗಳ ಮಗಳಾದ ಪೂಜಿತ ರಾಷ್ಟ್ರ ಮಟ್ಟದಲ್ಲಿ ಹಾಕಿ ಕ್ರೀಡೆಯಲ್ಲಿ ಮಿಂಚುತ್ತಿದ್ದಾಳೆ. ಕುಮಾರಿ ಪೂಜಿತ ಪ್ರಸ್ತುತ ಕರ್ನಾಟಕ ಮಹಿಳಾ ಹಾಕಿ ತಂಡದ ಸಹ ಆಟಗಾರ್ತಿಯಾಗಿದ್ದಾಳೆ. ಮಧ್ಯ ಪ್ರದೇಶದ ಭೂಫಾಲ್ ನಲ್ಲಿ ನಡೆಯುತ್ತಿರುವ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕ…
ತೀರ್ಥಹಳ್ಳಿಯ ನೂತನ ಸಿಪಿಐ ಆಗಿ ಅಶ್ವಥ್ ಗೌಡ ನೇಮಕ :
ತೀರ್ಥಹಳ್ಳಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ರಾಜ್ಯ ಗುಪ್ತಚರ ಇಲಾಖೆಯಲ್ಲಿದ್ದ ಅಶ್ವಥ್ ಗೌಡ.ಜೆ ರವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ಈಗಿನ ಸರ್ಕಲ್ ಇನ್ಸ್ ಪೆಕ್ಟರ್ ಆಗಿದ್ದ ಸಂತೋಷ್ ಕುಮಾರ್ ರವರ ಸ್ಥಾನಕ್ಕೆ ನೂತನ ಸಿಪಿಐ ಆಗಿ ಅಶ್ವಥ್ ಗೌಡ ರವರು ವರ್ಗಾವಣೆಗೊಂಡಿದ್ದಾರೆ. ಸಂತೋಷ್ ಕುಮಾರ್ ನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ. ರಾಜ್ಯ ಗುಪ್ತಚರ ಇಲಾಖೆಯಲ್ಲಿದ್ದ ಅಶ್ವಥ್ ಗೌಡ ತೀರ್ಥಹಳ್ಳಿ ಸಿಪಿಐ ಆಗಿ ವರ್ಗಾವಣೆಗೊಂಡಿದ್ದಾರೆ. ಸಂತೋಷ್ ಕುಮಾರ್ ಕಳೆದೆರಡು ವರ್ಷಗಳಿಂದ ತೀರ್ಥಹಳ್ಳಿ ಸಿಪಿಐ…