ಜಿಲ್ಲಾ ಸುದ್ದಿ:
ಈಶ್ವರಪ್ಪ ರಾಜೀನಾಮೆ ವಿರೋಧಿಸಿ ಅಭಿಮಾನಿಯೊಬ್ಬನಿಂದ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಯತ್ನ :
ಸಚಿವ ಈಶ್ವರಪ್ಪನವರ ರಾಜೀನಾಮೆ ವಿರೋಧಿಸಿ ಅಭಿಮಾನಿಯೊಬ್ಬ ಸಚಿವರ ಮನೆ ಮುಂದೆಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಶಿವಮೊಗ್ಗ ನಗರದ ಗುಂಡಪ್ಪ ಶೆಡ್ ನಲ್ಲಿ ಇರುವ ಸಚಿವ ಈಶ್ವರಪ್ಪನವರ ಮನೆ ಮುಂದೆ ಮುರುಗ ಎಂಬ ಅಭಿಮಾನಿ ಪೆಟ್ರೋಲ್ ಸುರಿದುಕೊಂಡಿದ್ದಾನೆ. ಇದನ್ನು ಕಂಡ ಸುತ್ತಮುತ್ತಲಿನ ಜನ ತಕ್ಷಣ ತಪ್ಪಿಸಿದ್ದಾರೆ.ನೀರು ಸುರಿದು ರಕ್ಷಿಸಿದ್ದಾರೆ. ಸಚಿವ ಈಶ್ವರಪ್ಪ ಮನೆಯಲ್ಲಿಯೇ ಇದ್ದಾಗಲೇ ಈ ಘಟನೆ ನಡೆದಿದೆ ಎನ್ನಲಾಗಿದೆ.
ಮೂರು ದಿನ ಮಾಧ್ಯಮಗಳ ಜೊತೆ ಮಾತನಾಡಲ್ಲ ಎಂದ ಸಚಿವ ಈಶ್ವರಪ್ಪ : ಕಾರಣವೇನು ಗೊತ್ತೆ???? ಈ ಸುದ್ದಿ ನೋಡಿ
ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಬಲವಾಗಿ ಒತ್ತಾಯಿಸುತ್ತಿದೆ. ಈ ಮಧ್ಯೆ ಮಾಧ್ಯಮಗಳ ಜೊತೆ ಮೂರು ದಿನ ಮಾತನಾಡದಿರಲು ಅವರು ತೀರ್ಮಾನಿಸಿದ್ದಾರೆ. ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಆಗುವ ವೇಳೆ ಮಾಧ್ಯಮದವರು ಸಚಿವರ ಪ್ರತಿಕ್ರಿಯೆಗೆ ಮುಂದಾದರು. ಆಗ ಸಚಿವರು ಮಾಧ್ಯಮದವರನ್ನು ಕಂಡು ನಾನು 3 ದಿನ ನಿಮ್ಮ ಜೊತೆ ಮಾತನಾಡಬಾರದು ಎಂದು ತೀರ್ಮಾನಿಸಿದ್ದೇನೆ ಎಂದರು. ಈ ವೇಳೆ…
ರಿಪ್ಪನ್ ಪೇಟೆ : ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ
ರಿಪ್ಪನ್ ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಹಿನ್ನೆಲೆಯಲ್ಲಿ ಸಾವಿಗೆ ಕಾರಣಕರ್ತರಾದ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಶೇಕಡ 40 ಪರ್ಸೆಂಟ್ ಕಮಿಷನ್ ದಂದೆಗೆ ಒಬ್ಬ ಅಮಾಯಕ ಗುತ್ತಿಗೆದಾರನನ್ನು ಬಲಿತೆಗೆದುಕೊಂಡ ಸಚಿವ ಈಶ್ವರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು ಇಂತಹ ಭ್ರಷ್ಟ ಮಂತ್ರಿಯನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಪ್ರತಿಭಟನೆ ನಡೆಯುವ…
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಪಾತ್ರ ಇಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ
ಕಾಂಗ್ರೆಸ್ ಬೇಡಿಕೆಯಂತೆ ನಡೆದುಕೊಳ್ಳಲು ಸಾಧ್ಯವಿಲ್ಲವೆಂದು ಗೃಹಸಚಿವ ಆರಗ ಜ್ಞಾನೇಂದ್ರ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪನವರ ಪಾತ್ರದ ಆರೋಪವನ್ನ ತಳ್ಳಿ ಹಾಕಿದ್ದಾರೆ. ಅವರು ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಸಚಿವ ಈಶ್ವರಪ್ಪನವರ ಪಾತ್ರದ ಬಗ್ಗೆ ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ. ಸಿಎಂ ಬೊಮ್ಮಾಯಿ ಅವರು ಸಹ ಈ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಮೊದಲು ತನಿಖೆಯಾಗಲಿ ಎಂದು ಗೃಹಸಚಿವ ಈಶ್ವರಪ್ಪನವರ ಪರ ಬ್ಯಾಟ್ ಬೀಸಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ಆರಂಭವಾಗಿದೆ. ಉಡುಪಿ ಎಸ್ಪಿ ಜೊತೆ ಮಾತನಾಡಿದ್ದೇನೆ.ಎಫ್‌ಎಸ್ ಎಲ್…
ಸಚಿವ ಈಶ್ವರಪ್ಪ ಮನೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಯತ್ನ :
ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಹೆಸರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಸಚಿವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್ ನೇತೃತ್ವದಲ್ಲಿ ಗುಂಡಪ್ಪ ಶೆಡ್ ಬಳಿ ಇರುವ ಸಚಿವ ಈಶ್ವರಪ್ಪ ನಿವಾಸದ ಎದುರು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕೊಲೆಗಡುಕ ಸಚಿವರನ್ನು ಬಂಧಿಸುವಂತೆ ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ…
50 ಲಕ್ಷ ಮೌಲ್ಯದ ತಿಮಿಂಗಿಲ ವಾಂತಿ ಸಾಗಿಸುತ್ತಿದ್ದ ಮೂವರ ಬಂಧನ :
ಲಕ್ಷಾಂತರ ರೂ. ಬೆಲೆಬಾಳುವ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಸಾಗರ ಪೊಲೀಸರು ಬಂಧಿಸಿದ್ದಾರೆ. ಕಳೆದ ಭಾನುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾಲು ಸಹಿತ ಆರೋಪಿಗಳನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸಾಗರ ತಾಲ್ಲೂಕಿನ ಕೆಳದಿ ರಸ್ತೆಯ ರಾಮಪ್ಪ (40), ಕಾರ್ಗಲ್‌ನ ಸಂದೀಪ್ ಜಾನ್ (49), ಸಾಗರ ನೆಹರೂ ನಗರದ ರೋಹಿತ್ (42) ಬಂಧಿತರು. ಸಾಗರ ರೈಲ್ವೆ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿ ತಿಮಿಂಗಿಲ ವಾಂತಿ (ಅಂಬರ್ಗ್ರೀಸ್) ವಶಕ್ಕೆ ಪಡೆಯಲಾಗಿದೆ. ಅರ್ಧ ಕೆ.ಜಿ…
ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಟಿ ಆರ್ ಕೃಷ್ಣಪ್ಪರವರಿಂದ ಅರೆ ಬೆತ್ತಲೆ ಪ್ರತಿಭಟನೆ :
ರಿಪ್ಪನ್ ಪೇಟೆ : ಲಾಭದಲ್ಲಿರುವ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಕ್ಕೆ ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ರವರು ಇಂದು ರಿಪ್ಪನ್ ಪೇಟೆ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬ್ಯಾಂಕುಗಳನ್ನು ರಾಷ್ಟ್ರೀಕರಣ ಮಾಡಿರುವುದೇ ರೈತರು ಮತ್ತು ಬಡ ವರ್ಗಕ್ಕೆ ನೆರವಾಗುವುದಕ್ಕಾಗಿ, ಇದೀಗ ಖಾಸಗೀಕರಣ ಮಾಡಿದರೆ ಬಡ ವರ್ಗ ಸಂಕಷ್ಟಕ್ಕೆ ಸಿಗಲಿದೆ. ಆದ್ದರಿಂದ ಯಾವುದೇ ರಾಷ್ಟ್ರೀಕೃತ ಬ್ಯಾಂಕನ್ನು ಖಾಸಗೀಕರಣ ಮಾಡುವುದಕ್ಕೆ ಮುಂದಾಗಬಾರದು ಎಂದು ಆಗ್ರಹಿಸಿದರು….
ಆಸ್ತಿ ವಿಚಾರದಲ್ಲಿ ನ್ಯಾಯಾಲಯದ ಮೊರೆ ಹೋದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ :
ಸಾಗರ ತಾಲೂಕಿನ ಹುಲಿದೇವರಬನ ಸಮೀಪ ಸಣ್ಣಕೊಪ್ಪ ಗ್ರಾಮದ ಗುರುಬಸಪ್ಪ ಎಂಬ ವ್ಯಕ್ತಿಯು ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೊರೆ ಹೋಗಿ ಎದುರು ಪಾರ್ಟಿಗಳಿಗೆ ಸಮನ್ಸ್ ಕಳುಹಿಸಿರುವ ಹಿನ್ನೆಲೆಯಲ್ಲಿ ಗುರುಬಸಪ್ಪ ರವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. >ಗುರುಬಸಪ್ಪ ಎಂಬ ವ್ಯಕ್ತಿಗೆ ಬೇಸೂರು ಗ್ರಾಮದ ಸರ್ವೆ ನಂಬರ್ 33 ರಲ್ಲಿ ಕುಟುಂಬದ ಹಿಸ್ಸೆ ಮೂಲಕ ಬರಬೇಕಾದ ಜಮೀನನ್ನು ಪಡೆಯುವ ಸಲುವಾಗಿ ನ್ಯಾಯಾಲಯದ ಮೊರೆ ಹೋಗಿರುತ್ತಾರೆ. ಇದರಿಂದ ರೊಚ್ಚಿಗೆದ್ದ ಇದೇ ಗ್ರಾಮದವರಾದ ರಾಮನಾಯ್ಕ,…
ಸ್ನಾನದ ಕೋಣೆಗೆ ನುಗ್ಗಿದ್ದ 11 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ :
ತೀರ್ಥಹಳ್ಳಿ : ಬೇಸಿಗೆಯ ಈ ಅವಧಿಯಲ್ಲಿ ಹಾವುಗಳು ಹೆಚ್ಚಾಗಿ ಸಾರ್ವಜನಿಕ ಸ್ಥಳದಲ್ಲಿ ಕಾಣಿಸಿಕೊಳ್ಳುತ್ತಿವೆ. ಆಹಾರ ಅರಸುತ್ತಾ ಉರಗಗಳು ಕಾಡಿನಿಂದ ನಾಡಿನತ್ತ ಬರುವುದು ಸಾಮಾನ್ಯವಾಗಿದೆ. ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಹೋಬಳಿಯ ಮನೆಯೊಂದರ ಸ್ನಾನದ ಕೋಣೆಗೆ ನುಗ್ಗಿದ್ದ 11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಶಿವಮೊಗ್ಗದ ಉರಗ ರಕ್ಷಕ ಸ್ನೇಕ್ ಕಿರಣ್ ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಮಂಡಗದ್ದೆ ಹೋಬಳಿಯ ಕೆರೆಕೊಪ್ಪದ ನಿವಾಸಿ ಆನಂದ ನಾಯ್ಕರ್ ಅವರ ಸ್ನಾನದ ಕೋಣೆಯಲ್ಲಿ ಸುಮಾರು 11 ಅಡಿ ಉದ್ದದ ಕಾಳಿಂಗ ಸರ್ಪ ಸೇರಿಕೊಂಡಿತ್ತು….
ಅನೈತಿಕ ಚಟುವಟಿಕೆಯ ತಾಣವಾಗಿರುವ ಹೊಸನಗರ ಪರಿವೀಕ್ಷಣಾ ಮಂದಿರ (ಐಬಿ) : ಸಂಜೆಯಾಗುತಿದ್ದಂತೆ ಕುಡುಕರದ್ದೇ ದರ್ಬಾರ್ ಇಲ್ಲಿ!!!!!!!!
ಹೊಸನಗರ : ಪಟ್ಟಣದ ಪರಿವೀಕ್ಷಣಾ ಮಂದಿರ (ಐಬಿ) ಸಂಜೆಯಾಗುತ್ತಿದ್ದಂತೆ ಅನೈತಿಕ ಚಟುವಟಿಕೆಗಳ ನೆಚ್ಚಿನ ತಾಣವಾಗಿದೆ ಹಾಗೆ ಇಲ್ಲಿರುವ ಪ್ರವಾಸಿ ಮಂದಿರವು ರಾತ್ರಿ ಸಮಯದಲ್ಲಿ ಭೂತ ಬಂಗಲೆಯಂತೆ ಕಾಣುವ ಎಲ್ಲಾ ರೀತಿಯ ವಾತಾವರಣವು ನಿರ್ಮಾಣವಾಗಿದೆ. ಹೌದು ಹೊಸನಗರ ತಾಲ್ಲೂಕಿನ ಆಸುಪಾಸಿನ ಹುಂಚದ ಪದ್ಮಾವತಿ ದೇವಸ್ಥಾನ, ರಾಮಚಂದ್ರಾಪುರ ಮಠ, ಕಾರಣಗಿರಿ(ಕಾರ್ಗಡಿ)ಯ ಗಣಪತಿ ದೇವಸ್ಥಾನ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಹೀಗೆ ವಿವಿಧ ದೇವಾಲಯಗಳನ್ನು ವೀಕ್ಷಿಸಲು ರಾಜ್ಯದ ಹಾಗೂ ದೇಶದ ವಿವಿಧ ಭಾಗಗಳಿಂದ ಆಗಮಿಸಿದ ನೂರಾರು ಭಕ್ತರು ಹೊಸನಗರ ತಾಲ್ಲೂಕಿನ ಕೊಡಚಾದ್ರಿ…