ಜಿಲ್ಲಾ ಸುದ್ದಿ:
ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ – ಶಾಸಕ ಬೇಳೂರು ಗೋಪಾಲಕೃಷ್ಣ ಭಾಗಿ
ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ – ಶಾಸಕ ಬೇಳೂರು ಗೋಪಾಲಕೃಷ್ಣ ಭಾಗಿ ರಿಪ್ಪನ್ ಪೇಟೆ : ಮಲೆನಾಡಿನ ಆರಾಧ್ಯದೈವ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ಮೂರನೇ ಜಾತ್ರಾ ಮಹೋತ್ಸವದಲ್ಲಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಮಂಗಳವಾರ ನೂರಾರು ಭಕ್ತರೊಂದಿಗೆ ಪಾಲ್ಗೊಂಡು ದೇವಿಯ ದರ್ಶನ ಪಡೆದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮ್ಮನಘಟ್ಟ ಕ್ಷೇತ್ರವು ಮುಂದಿನ ದಿನಗಳಲ್ಲಿ ಸಿಗಂದೂರು ಶ್ರೀ ಕ್ಷೇತ್ರದಂತೆಯೇ ಪ್ರಸಿದ್ಧ ಪ್ರವಾಸಿ ತಾಣವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳ ಕೊರತೆ ನಿವಾರಣೆಯಾಗುವುದರೊಂದಿಗೆ ಕ್ಷೇತ್ರವು ರಾಜ್ಯ…
ಶಿವಮೊಗ್ಗದ ಈದ್ ಮೆರವಣಿಗೆಯಲ್ಲಿ ಡಿ.ಜೆ ಅಬ್ಬರ – ಮೆರವಣಿಗೆಯಲ್ಲಿದ್ದ ಕೆಲವು ಮುಸ್ಲಿಂ ಯುವಕರಿಂದ ಡಿಜೆ ಡ್ಯಾನ್ಸ್ ಗೆ ವಿರೋಧ
ಶಿವಮೊಗ್ಗದ ಈದ್ ಮೆರವಣಿಗೆಯಲ್ಲಿ ಡಿ.ಜೆ ಅಬ್ಬರ – ಮೆರವಣಿಗೆಯಲ್ಲಿದ್ದ ಕೆಲವು ಮುಸ್ಲಿಂ ಯುವಕರಿಂದ ಡಿಜೆ ಡ್ಯಾನ್ಸ್ ಗೆ ವಿರೋಧ ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆಯಲ್ಲಿ ಇವತ್ತು ನೂರಕ್ಕು ಹೆಚ್ಚು ಡಿಜೆ ಸಿಸ್ಟಮ್‌ಗಳು ಅಳವಡಿಸಲಾಗಿತ್ತು , ಇನ್ನೊಂದೆಡೆ ಮೆರವಣಿಗೆಯಲ್ಲಿ ಭಾಗವಹಿಸಿದ್ದವರೆ ಡಿಜೆಗೆ ವಿರೋಧ ವ್ಯಕ್ತಪಡಿಸಿ ಭಿತ್ತಿ ಪತ್ರ ಪ್ರದರ್ಶಿಸಿದರು. ಇನ್ನೊಂದೆಡೆ ಭಾರಿ ಶಬ್ದ ಮಾಡುತ್ತಿದ್ದ ಡಿಜೆ ವಾಹನವನ್ನು ಪೊಲೀಸರು ತಡೆದು ಸೌಂಡ್ ಆಫ್ ಮಾಡಿಸಿದ ಘಟನೆ ನಡೆಯಿತು. ಶಿವಮೊಗ್ಗ ನಗರದಲ್ಲಿ ಇವತ್ತು ಅದ್ಧೂರಿಯ ಈದ್ ಮಿಲಾದ್ ಮೆರವಣಿಗೆ ನಡೆಯಿತು….
ರಿಪ್ಪನ್‌ಪೇಟೆ : ಈದ್ ಮಿಲಾದ್ ಅಂಗವಾಗಿ ನಾಳೆ(17-09-2025) ಸೌಹಾರ್ದ ಸಂಗಮ
ರಿಪ್ಪನ್‌ಪೇಟೆ : ಈದ್ ಮಿಲಾದ್ ಅಂಗವಾಗಿ ನಾಳೆ(17-09-2025) ಸೌಹಾರ್ದ ಸಮಾವೇಶ ರಿಪ್ಪನ್‌ಪೇಟೆ : ಈದ್ ಮಿಲಾದ್ ಹಬ್ಬದ ಅಂಗವಾಗಿ ಬುಧವಾರ ಸೌಹಾರ್ದ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾದ ಅಫ಼್ಜಲ್ ಬ್ಯಾರಿ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬುಧವಾರ ಮೊಹಿಯುದ್ದೀನ್ ಜುಮ್ಮಾ ಮಸೀದಿ,ಮೆಕ್ಕಾ ಮಸೀದಿ ,ಈದ್ ಮಿಲಾದ್ ಸಮಿತಿ ,ತಾಅಜಿಜುಲ್ ಅರಬ್ಬಿಕ್ ಮದರಸ ,ಬದ್ರಿಯಾ ಮದರಸ ಗವಟೂರು ,SYS ಹಾಗೂ SSF ರಿಪ್ಪನ್‌ಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಪ್ರವಾದಿಯವರ 1500ನೇ ಜನ್ಮ ದಿನದ ಪ್ರಯುಕ್ತ…
ಹುಂಚ ಅಡಿಕೆ ತೋಟದಲ್ಲಿ ಎರಡು ಕಾಡುಕೋಣಗಳ ಶವ ಪತ್ತೆ – ಅಧಿಕಾರಿಗಳ ತುರ್ತು ಭೇಟಿ ,ತನಿಖೆ ಚುರುಕು
ಹುಂಚ ಅಡಿಕೆ ತೋಟದಲ್ಲಿ ಎರಡು ಕಾಡುಕೋಣಗಳ ಶವ ಪತ್ತೆ – ಅಧಿಕಾರಿಗಳ ತುರ್ತು ಭೇಟಿ ,ತನಿಖೆ ಚುರುಕು ಹುಂಚ ಭಾಗದಲ್ಲಿ ಕಾಡುಕೋಣಗಳ ಮಾರಣಹೋಮಕ್ಕೆ ಅಂತ್ಯ ಯಾವಾಗ? ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸರ್ವೆ ನಂ. 52/2 ರಲ್ಲಿ ರಾಮಪ್ಪ ಬಿನ್ ಮರಿಯಪ್ಪ ಅವರ ಅಡಿಕೆ ತೋಟದ ಹೊಂಡದಲ್ಲಿ ಎರಡು ಕಾಡುಕೋಣಗಳ ಶವ ಪತ್ತೆಯಾಗಿದ್ದು, ಈ ಘಟನೆ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಸೋಮವಾರ ಬೆಳಿಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಹೊರಬಿದ್ದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಸ್ಥಳಕ್ಕೆ…
ಒಕ್ಕಲಿಗರ ಸಂಘ ಜನಹಿತ ಕಾರ್ಯದಲ್ಲಿ ಮುಂಚೂಣಿಯಲ್ಲಿದೆ – ಆರ್ ಎಂ ಮಂಜುನಾಥ್ ಗೌಡ
ಒಕ್ಕಲಿಗರ ಸಂಘ ಜನಹಿತ ಕಾರ್ಯದಲ್ಲಿ ಮುಂಚೂಣಿಯಲ್ಲಿದೆ – ಆರ್ ಎಂ ಮಂಜುನಾಥ್ ಗೌಡ ರಿಪ್ಪನ್‌ಪೇಟೆ: ಹೊಸನಗರ ತಾಲ್ಲೂಕಿನ ಒಕ್ಕಲಿಗರ ಸಮಾಜವು ಜನಸಂಖ್ಯೆಯಲ್ಲಿ ಕಡಿಮೆಯಾದರೂ ಜನಹಿತ ಕಾರ್ಯದಲ್ಲಿ ಮುಂಚೂಣಿಯಲ್ಲಿದ್ದು, ಬಡವರ ಸಹಾಯಕ್ಕೆ ಸದಾ ಕೈಚಾಚಿ ಸಮಾಜದಲ್ಲಿ ಮಾದರಿಯಾಗುತ್ತಿದೆ ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅಭಿಪ್ರಾಯಪಟ್ಟರು. ರಿಪ್ಪನ್‌ಪೇಟೆಯ ವಿಶ್ವಮಾನವ ಒಕ್ಕಲಿಗರ ಸಭಾಭವನದ ಹಿಂಭಾಗದಲ್ಲಿ ನೂತನ ಅಡುಗೆ ಕೊಠಡಿಯನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು, “ಒಕ್ಕಲಿಗ ಸಮಾಜವು ತನ್ನ ಸಂಘಟನೆಯೊಂದಿಗೆ ಇತರ ಸಮಾಜಗಳನ್ನೂ ಪ್ರೀತಿ–ವಿಶ್ವಾಸದಿಂದ ಸ್ವೀಕರಿಸುತ್ತದೆ. ಕುವೆಂಪುರವರ…
ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಗುಂಡಿಕ್ಕಿ ಕೊಲ್ಲಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ
ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಗುಂಡಿಕ್ಕಿ ಕೊಲ್ಲಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ಸಾಗರ: “ನಮ್ಮ ದೇಶದಲ್ಲಿ ಇದ್ದುಕೊಂಡು ಪಾಕಿಸ್ತಾನ ಜಿಂದಾಬಾದ್ ಎನ್ನುವವರು ದೇಶದ್ರೋಹಿಗಳು. ಅವರಿಗೆ ಈ ನೆಲದಲ್ಲಿ ಬದುಕುವ ಹಕ್ಕಿಲ್ಲ. ಅಂತಹವರನ್ನು ಗುಂಡಿಕ್ಕಿ ಕೊಲ್ಲಬೇಕು” ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಾಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, “ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಅತ್ಯಂತ ಖಂಡನೀಯ ಕೃತ್ಯ. ಇಂತಹ ಕಿಡಿಗೇಡಿಗಳ ವಿರುದ್ಧ ಸರ್ಕಾರ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು. ಈ…
ಹೊಸನಗರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನಾಗೋಡಿ ವಿಶ್ವನಾಥ್ ಹಾಗೂ ಉಬೇದುಲ್ಲಾ ಷರೀಫ್ ನೇಮಕ
ಶಿವಮೊಗ್ಗ: ಜಿಲ್ಲೆಯ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರನ್ನಾಗಿ ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯ, ಯುವ ಮುಖಂಡ ನಾಗೋಡಿ ವಿಶ್ವನಾಥ್ ಹಾಗೂ ಕೆಂಚನಾಲ ಗ್ರಾಪಂ ಮಾಜಿ ಅಧ್ಯಕ್ಷ ಉಬೇದುಲ್ಲಾ ಷರೀಫ್ ಅವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ( KPCC) ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಶಿಫಾರಸ್ಸಿನ ಮೇರೆಗೆ ಹೊಸನಗರ ಬ್ಲಾಕ್…
ಹೊಸನಗರ ಬ್ಲಾಕ್ ಕಾಂಗ್ರೆಸ್ ನೂತನ ಪಟ್ಟಿ ಬಿಡುಗಡೆ
ಹೊಸನಗರ ಬ್ಲಾಕ್ ಕಾಂಗ್ರೆಸ್ ನೂತನ ಪಟ್ಟಿ ಬಿಡುಗಡೆ ಹೊಸನಗರ ; ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯು, ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಿವಿಧ ಸ್ಥಾನಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ನೂತನ ಅಧ್ಯಕ್ಷರಾಗಿ ಕೋಡೂರು ಬಿ.ಜಿ. ಚಂದ್ರಮೌಳಿ, ಉಪಾಧ್ಯಕ್ಷರಾಗಿ ನಾಗೋಡಿ ವಿಶ್ವನಾಥ್, ಕೆಂಚನಾಲ ಉಬೇದ್ದುಲ್ಲಾ ಷರೀಫ್, ಜಯನಗರ ಚನ್ನಬಸವ, ಬಾಳೂರು ಲೀಲಾವತಿ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹೊಸನಗರ ಪಟ್ಟಣದ ಎಂ.ಪಿ.ಸುರೇಶ್, ಸದಾಶಿವ ಶ್ರೇಷ್ಟಿ, ರಿಪ್ಪನ್‌ಪೇಟೆಯ ಮಧುಸೂಧನ್…
HOSANAGARA | ಉಕ್ಕಡ ಮಗುಚಿ ಯುವಕ ನೀರುಪಾಲು
HOSANAGARA | ಉಕ್ಕಡ ಮಗುಚಿ ಯುವಕ ನೀರುಪಾಲು ಹೊಳೆ ದಾಟುವಾಗ ತೆಪ್ಪ ಮಗುಚಿ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಸೂರು (ಸಂಪೆಕಟ್ಟೆ) ಗ್ರಾಪಂ ವ್ಯಾಪ್ತಿಯ ಬಂಟೋಡಿ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಪೂರ್ಣೇಶ್ (22) ಮೃತ ದುರ್ಧೈವಿ. ಅದೃಷ್ಟವಶಾತ್ ಜೊತೆಯಲ್ಲಿದ್ದ ಶರತ್ ಮತ್ತು ರಂಜನ್ ಎಂಬ ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಲು ಸಂಕ ನಿರ್ಮಾಣ ಮಾಡುವಂತೆ 20 ವರ್ಷಗಳಿಂದ ಮನವಿ ಮಾಡುತ್ತಿದ್ದರೂ ಜನಪ್ರತಿನಿಧಿಗಳು ಸ್ಪಂದಿಸಿಲ್ಲ ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ಮೃತದೇಹಕ್ಕಾಗಿ ಅಗ್ನಿಶಾಮಕ ದಳದ…
ಆನೆಗದ್ದೆ ಶಾಲೆಯ ಶಿಕ್ಷಕಿಯ ವರ್ಗಾವಣೆ – ವಿದ್ಯಾರ್ಥಿಗಳಿಂದ ಶಿಕ್ಷಣಾಧಿಕಾರಿ ಕಛೇರಿ ಎದುರು ಪ್ರತಿಭಟನೆ
ಆನೆಗದ್ದೆ ಶಾಲೆಯ ಶಿಕ್ಷಕಿಯ ವರ್ಗಾವಣೆ – ವಿದ್ಯಾರ್ಥಿಗಳಿಂದ ಶಿಕ್ಷಣಾಧಿಕಾರಿ ಕಛೇರಿ ಎದುರು ಪ್ರತಿಭಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಆನೆಗದ್ದೆ ಶಾಲೆ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿರುವ ಶಾಲೆ ಆದರೆ ಖಾಸಗಿ ವಿದ್ಯಾಸಂಸ್ಥೆಗಳ ವಾಹನವು ಈ ಭಾಗದ ಹಳ್ಳಿಹಳ್ಳಿಗೆ ನುಗ್ಗಿದ ಪರಿಣಾಮ ಇಂತಹ ಹೆಸರುವಾಸಿ ಶಾಲೆಯು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಹಂತಕ್ಕೆ ಹೋಗಿತ್ತು ಇದನ್ನು ಮನಗಂಡ ಊರಿನ ಗ್ರಾಮಸ್ಥರು ವಿಶೇಷ ಆಸಕ್ತಿ ವಹಿಸಿ ಹಲವು ಹೊಸ ದಾಖಲಾತಿಗಳನ್ನು ಸೇರಿಸುವ ಮೂಲಕ ಇಂತಹ ಶಾಲೆಯನ್ನು ಉಳಿಸಿಕೊಂಡಿದ್ದರು ಹಾಗೇಯೆ ಅಲ್ಲಿನ ಶಿಕ್ಷಕರು ಅದಕ್ಕೆ…