ಜಿಲ್ಲಾ ಸುದ್ದಿ:
ಸೇವಾಭಾವದಿಂದ ಮೂಡಿ ಬಂದ ‘ನಿಜವಾದ ಹಿಂದುತ್ವ’ಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾದರಿ – ನಾಗೇಂದ್ರ ಜೋಗಿ
ಸೇವಾಭಾವದಿಂದ ಮೂಡಿ ಬಂದ ‘ನಿಜವಾದ ಹಿಂದುತ್ವ’ಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾದರಿ – ನಾಗೇಂದ್ರ ಜೋಗಿ ನಿಟ್ಟೂರು ಭಾಗದಲ್ಲಿ ಅಭಿವೃದ್ಧಿ ಚುರುಕು – ಶಾಸಕರ ಪ್ರಯತ್ನಕ್ಕೆ ಗ್ರಾಮಸ್ಥರಿಂದ ಕೃತಜ್ಞತೆ ದೇವಸ್ಥಾನಗಳ ಅಭಿವೃದ್ದಿಗೆ ಕ್ಷೇತ್ರದಾದ್ಯಂತ ನಾಲ್ಕು ಕೋಟಿಗೂ ಹೆಚ್ಚು ಅನುದಾನ ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಹಿಂದುತ್ವವನ್ನು ಕೇವಲ ರಾಜಕೀಯ ಘೋಷಣೆ ಅಥವಾ ಪ್ರಚಾರದ ರೂಪದಲ್ಲಿ ಆಚರಿಸುವವರಲ್ಲ, ಬದಲಾಗಿ ಅದನ್ನು ಹೃದಯಪೂರ್ವಕವಾಗಿ ಜೀವನದಲ್ಲಿ ಅಳವಡಿಸಿಕೊಂಡಿರುವ ಉದಾಹರಣೆಯಾಗಿದ್ದಾರೆ ಎಂದು ಕೆಡಿಪಿ ಸದಸ್ಯ ಹಾಗೂ ನಿಟ್ಟೂರು ಬ್ಲಾಕ್…
ಆತ್ಮ ನಿರ್ಭರ ಯೋಜನೆಯಡಿ ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಿ – ಹರತಾಳು ಹಾಲಪ್ಪ
ಆತ್ಮ ನಿರ್ಭರ ಯೋಜನೆಯಡಿ ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಿ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ ; ಕೇಂದ್ರ ಸರ್ಕಾರ ಮೋದಿಜಿಯವರ ಪರಿಕಲ್ಪನೆಯಂತೆ ಆತ್ಮನಿರ್ಭರ ಯೋಜನೆಯಡಿ ಪ್ರತಿಯೊಬ್ಬ ಭಾರತೀಯರು ಸ್ವದೇಶಿ ವಸ್ತುಗಳನ್ನು ಬಳಕೆ ಮಾಡಿದಲ್ಲಿ ದೇಶ ಪ್ರಗತಿ ಪಥದತ್ತ ಸಾಗಲು ಸಾಧ್ಯವಾಗುವುದು.ಮಹಾತ್ಮ ಗಾಂಧಿಜೀಯವರು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಘೋಷಣೆಯಡಿ ಅವರು ಧರಿಸುತ್ತಿದ್ದ ಬಟ್ಟೆಯನ್ನು ಸಹ ತ್ಯಜಿಸಿ ಚರಕದಿಂದ ಉತ್ಪಾದಿಸಿದ ನೂಲಿನಿಂದ ತಯಾರಾದ ಖಾದಿ ಬಟ್ಟೆಗಳನ್ನು ಬಳಸುವುದರೊಂದಿಗೆ ದೇಶಿಯ ಸಂಸ್ಕೃತಿಯನ್ನು ಉತ್ತುಂಗಕ್ಕೆ ಕೊಂಡೊಯ್ಯಬೇಕು ಎಂದು ಮಾಜಿ ಸಚಿವ…
ರಿಪ್ಪನ್‌ಪೇಟೆ – 33 ವರ್ಷದ ಮಹಿಳೆ ಕ್ಯಾನ್ಸರ್‌ಗೆ ಬಲಿ | “ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸೋತ ಗೀತಾ”
ರಿಪ್ಪನ್‌ಪೇಟೆ – 33 ವರ್ಷದ ಮಹಿಳೆ ಕ್ಯಾನ್ಸರ್‌ಗೆ ಬಲಿ | “ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸೋತ ಗೀತಾ” ರಿಪ್ಪನ್‌ಪೇಟೆ – ಮಹಾಮಾರಿ ಕ್ಯಾನ್ಸರ್ ಗೆ ಇನ್ನೂ ಬಾಳಿ ಬದುಕಬೇಕಾಗಿದ್ದ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಪಟ್ಟಣದ ವ್ಯಾಪ್ತಿಯಲ್ಲಿ ನಡೆದಿದೆ. ಗವಟೂರು ಗ್ರಾಮದ 33 ವರ್ಷದ ಗೀತಾ ಎಂಬ ಯುವತಿ ಮಹಾಮಾರಿ ಕ್ಯಾನ್ಸರ್‌ನಿಂದ ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಪತಿ ಅನಿಲ್ ಕುಮಾರ್ ಅವರನ್ನು ಅಗಲಿದ ಗೀತಾ ಕಳೆದ ಕೆಲವು ತಿಂಗಳಿನಿಂದ ದುಸ್ತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮೂಲತಃ ಆರೋಗ್ಯವಂತಳಾಗಿದ್ದ…
ಹೊಸನಗರ ತಾಲೂಕ್ ನೂತನ ತಹಶೀಲ್ದಾರ್ ಆಗಿ ಭರತ್ ರಾಜ್ ನೇಮಕ
ಹೊಸನಗರ ತಾಲೂಕ್ ನೂತನ ತಹಶೀಲ್ದಾರ್ ಆಗಿ ಭರತ್ ರಾಜ್ ನೇಮಕ ಹೊಸನಗರ: ಹೊಸನಗರ ತಾಲೂಕಿನ ನೂತನ ತಹಶೀಲ್ದಾರ್ ಆಗಿ ಭರತ್ ರಾಜ್ ಅವರನ್ನು ನೇಮಕ ಮಾಡಲಾಗಿದೆ. ಹಾಲಿ ಪ್ರಭಾರ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರನ್ನು ಸಾಗರ ತಾಲೂಕು ತಹಶೀಲ್ದಾರ್ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಭರತ್ ರಾಜ್ ಅವರು ಪೂರ್ವದಲ್ಲಿ ಗದಗ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಉತ್ತಮ ಆಡಳಿತ ಕೌಶಲ್ಯ ಮತ್ತು ಕಾರ್ಯನಿಷ್ಠೆಗಾಗಿ ಪರಿಚಿತರಾದ ಅವರು, ಇದೀಗ ಹೊಸನಗರ ತಾಲೂಕಿನಲ್ಲಿ ತಮ್ಮ…
RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ
RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ ಮಲೆನಾಡಿನ ಪ್ರದೇಶದಲ್ಲಿ ದೀಪಾವಳಿಯಲ್ಲಿ ಗ್ರಾಮ ದೇವರುಗಳಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಆಚರಿಸುವುದು ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿದೆ. ರಿಪ್ಪನ್‌ಪೇಟೆ ಪಟ್ಟಣದ ಮೇಲಿನ ಕೆರೆಹಳ್ಳಿ ಹಾಗೂ ಕೆಳಗಿನ ಕೆರೆಹಳ್ಳಿ ಗ್ರಾಮಸ್ತ್ಗರು ತಮ್ಮ ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಹಬ್ಬವನ್ನು ಆಚರಿಸಿದರು. ರೈತರು ತಮ್ಮ ಕುಟುಂಬದ ನೇಮ ನಿಷ್ಠೆಯಂತೆ ವರ್ಷವೂ…
ಕಸ್ತೂರಿ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಜಿ ಆರ್ ಗೋಪಾಲಕೃಷ್ಣ ಆಯ್ಕೆ
ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷರಾಗಿ ಜಿ ಆರ್ ಗೋಪಾಲಕೃಷ್ಣ ಆಯ್ಕೆ ರಿಪ್ಪನ್ ಪೇಟೆ : ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್‍ಕುಮಾರ್ ಆಭಿಮಾನಿ ಬಳಗದ ಐದನೇ ವರ್ಷದ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು ಅಧ್ಯಕ್ಷರಾಗಿ ಜಿ ಆರ್ ಗೋಪಾಲಕೃಷ್ಣ , ಪ್ರಧಾನ ಕಾರ್ಯದರ್ಶಿಗಳಾಗಿ ಹಸನಬ್ಬ ಬ್ಯಾರಿ ಹಾಗೂ ಶ್ರೀಧರ್ ಚಿಗುರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ದೇವರಾಜ್ ಕೆ ,ರಮೇಶ್ ಫ್ಯಾನ್ಸಿ , ಸಾಜೀದಾ ಹನೀಪ್, ವಾಣಿ ಗೋವಿಂದಪ್ಪ ಗೌಡ , ಸಹಕಾರ್ಯದರ್ಶಿಯಾಗಿ ದೀಪಾ ನಾಗರಾಜ್…
ಪ್ರಜಾಪ್ರಭುತ್ವ ರಕ್ಷಣೆಗಾಗಿ “ವೋಟ್ ಚೋರ್, ಗದ್ದಿ ಚೋಡ್” ಅಭಿಯಾನ — ಶ್ವೇತಾ ಬಂಡಿ
ಪ್ರಜಾಪ್ರಭುತ್ವ ರಕ್ಷಣೆಗಾಗಿ “ವೋಟ್ ಚೋರ್, ಗದ್ದಿ ಚೋಡ್” ಅಭಿಯಾನ — ಶ್ವೇತಾ ಬಂಡಿ ರಿಪ್ಪನ್‌ಪೇಟೆ: ಜನರ ಮತ ಕದ್ದುಕೊಂಡು ಅಧಿಕಾರದ ಕುರ್ಚಿ ಹಿಡಿದವರು ಪ್ರಜಾಪ್ರಭುತ್ವದ ಆತ್ಮವನ್ನೇ ಹತ್ತಿಕ್ಕಿದ್ದಾರೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ ತೀವ್ರವಾಗಿ ಆರೋಪಿಸಿದ್ದಾರೆ. ಸೋಮವಾರ ಸಂಜೆ ರಿಪ್ಪನ್‌ಪೇಟೆ ವಿನಾಯಕ ಸರ್ಕಲ್‌ನಲ್ಲಿ ನಡೆದ “ವೋಟ್ ಚೋರ್, ಗದ್ದಿ ಚೋಡ್” ಸಹಿ ಸಂಗ್ರಹ ಅಭಿಯಾನದಲ್ಲಿ ಮಾತನಾಡಿದ ಅವರು, “ಮತ ಕಳವು ಪ್ರಜಾಪ್ರಭುತ್ವದ ವಿರುದ್ಧದ ಗಂಭೀರ ಅಪರಾಧ. ಜನರ ಆಶಯಗಳ ವಿರುದ್ಧ ನಡೆದ ಈ…
ಯಕ್ಷಗಾನ ಕಲಾವಿದರಿಗೆ ರಾಜಾಶ್ರಯ ಸದಾ ಅವಶ್ಯ: ಹಿರಿಯ ಕಲಾವಿದ ಪುರಂದರ ಹೆಗಡೆ ಅಭಿಮತ.
ಯಕ್ಷಗಾನ ಕಲಾವಿದರಿಗೆ ರಾಜಾಶ್ರಯ ಸದಾ ಅವಶ್ಯ: ಹಿರಿಯ ಕಲಾವಿದ ಪುರಂದರ ಹೆಗಡೆ ಅಭಿಮತ. ಹೊಸನಗರ: ದೇಶದ ಸಾಂಸ್ಕೃತಿಕ ಪರಂಪರೆಯ ಹಿರಿಯ ಕಲಾ ಪ್ರಕಾರಗಳಲ್ಲಿ ಒಂದಾದ ಯಕ್ಷಗಾನ ಕಲೆ ಆರಾಧಕರಾದ ಯಕ್ಷ ಕಲಾವಿದರಿಗೆ ರಾಜಾಶ್ರಯ ಬೇಕು. ಈ ನಿಟ್ಟಿನಲ್ಲಿ ಸರ್ಕಾರವು ಸಾಧಕ ಪ್ರತಿಭಾವಂತ ಹಿರಿಯ ಕಲಾವಿದರನ್ನು ಗೌರವಿಸುವ ಕೆಲಸ ಮಾಡಬೇಕಾಗಿದೆ ಎಂದು ಹಿರಿಯ ಕಲಾವಿದ ಪುರಂದರ ಹೆಗಡೆ ಹೇಳಿದರು. ತಾಲ್ಲೂಕಿನ ಕಾರ್ಗಿಲ್ ಸಿದ್ಧಿವಿನಾಯಕ ದೇವಸ್ಥಾನ ಸಭಾಂಗಣದಲ್ಲಿ ನಡೆದ ಹೆರಂಜಾಲು ಷಷ್ಠಬ್ಬಿ ಯಕ್ಷ ಕಾರ್ಯಕ್ರಮದಲ್ಲಿ ಕೂಡ ಮಾಡುವ ಹೆರಂಜಾಲು ಗೌರವ…
ಅರಣ್ಯ ಭೂಮಿ ಸಾಗುವಳಿದಾರರಿಗೆ ಗುಡ್ ನ್ಯೂಸ್: ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸದಂತೆ ಸಚಿವ ಮಧು ಬಂಗಾರಪ್ಪ ಸೂಚನೆ
ಅರಣ್ಯ ಭೂಮಿ ಸಾಗುವಳಿದಾರರಿಗೆ ಗುಡ್ ನ್ಯೂಸ್: ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸದಂತೆ ಸಚಿವ ಮಧು ಬಂಗಾರಪ್ಪ ಸೂಚನೆ ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಕೆಆರ್‌ಐಡಿಎಲ್, ನೀರಾವರಿ ಇಲಾಖೆಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ…
ಅನುದಾನಿತ ಶಾಲೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ: ಮಧು ಬಂಗಾರಪ್ಪ
ಅನುದಾನಿತ ಶಾಲೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ: ಮಧು ಬಂಗಾರಪ್ಪ ಕನ್ನಡ ಮಾಧ್ಯಮದ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಒಂದು ಉತ್ತಮ ನಿರ್ಧಾರ ತೆಗೆದುಕೊಂಡಿದೆ. ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ ಮಾಡಲಾಗುತ್ತದೆ. ಹೌದು.. ಈ ಕುರಿತು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರೇ ಮಾಹಿತಿ ನೀಡಿದ್ದಾರೆ. ಕನ್ನಡ ಮಾಧ್ಯಮದ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು…