ಜಿಲ್ಲಾ ಸುದ್ದಿ:
ಜನಪದ ವೈದ್ಯರತ್ನ ಮಂಗಳದ ನಾಟಿ ವೈದ್ಯ ಎಂ ಬಿ ಶಿವಣ್ಣಗೌಡ ಇನ್ನಿಲ್ಲ…
ಜನಪದ ವೈದ್ಯರತ್ನ ಮಂಗಳದ ನಾಟಿ ವೈದ್ಯ ಎಂ ಬಿ ಶಿವಣ್ಣಗೌಡ ಇನ್ನಿಲ್ಲ… ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ಮಂಗಳ ಗ್ರಾಮದ ಜನಪದ ವೈದ್ಯ ರತ್ನ ನಾಟಿ ವೈದ್ಯ ಎಂ ಬಿ ಶಿವಣ್ಣಗೌಡ ಇಂದು ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ನಾಲ್ಕೈದು ದಶಕಗಳಿಂದ ಪಾರಂಪರಿಕ ನಾಟಿ ವೈದ್ಯ ವೃತ್ತಿ ಯಲ್ಲಿ ಪ್ರಚಾರ ವಿಲ್ಲದೇ ಯಶಸ್ಸು ಕಂಡ ಮಂಗಳದ ಶಿವಣ್ಣ ಗೌಡರು ವಯೋಸಹಜ ಖಾಯಿಲೆಯಿಂದ ಇಂದು ಮುಂಜಾನೆ 4.45 ಕ್ಕೆ ದೈವಾಧೀನರಾಗಿದ್ದಾರೆ. ಮಲೆನಾಡಿನ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ…
ಹೊಸನಗರದಿಂದ ಬೆಂಗಳೂರಿಗೆ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಪ್ರಾರಂಭ
ಹೊಸನಗರದಿಂದ ಬೆಂಗಳೂರಿಗೆ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಪ್ರಾರಂಭ ಹೊಸನಗರ : ತಾಲೂಕಿನ ನಿಟ್ಟೂರು ಗ್ರಾಮದಿಂದ ರಾಜದಾನಿ ಬೆಂಗಳೂರಿಗೆ ಸುಸಜ್ಜಿತ ಹೈಟೆಕ್ ಸ್ಲೀಪರ್ ಬಸ್ ಸೇವೆ ಆರಂಬಗೊಳ್ಳಲಿದೆ. ಹೊಸನಗರ ದಿಂದ ಬೆಂಗಳೂರಿಗೆ ಶ್ರೀ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಹೆಸರಿನ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಇದೆ ತಿಂಗಳ 06-02-2025 ರಿಂದ ಆರಂಭಗೊಳ್ಳಲಿದೆ. 2+1 ಸ್ಲೀಪರ್ ಬಸ್ ವಿಶೇಷವಾದ ವಿನ್ಯಾಸವನ್ನು ಹೊಂದಿದ್ದು ಇದು ಒಂದು ಬದಿಯಲ್ಲಿ ಎರಡು ಸಾಲುಗಳ ಸ್ಲೀಪರ್ ಬರ್ತ್‌ಗಳನ್ನು ಮತ್ತು ಇನ್ನೊಂದು ಸಾಲಿನಲ್ಲಿ ಒಂದೇ…
ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಪ್ರೋತ್ಸಾಹ ಅಗತ್ಯ – ಶ್ರೀಪತಿ ರಾವ್
ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಪ್ರೋತ್ಸಾಹ ಅಗತ್ಯ – ಶ್ರೀಪತಿ ರಾವ್ ಸರ್ಕಾರಿ ಶಾಲೆಗೆ ಪೀಠೋಪಕರಣಗಳ ಕೊಡುಗೆ ನೀಡಿದ ದಾನಿಗಳಿಗೆ ಸನ್ಮಾನ ರಿಪ್ಪನ್‌ಪೇಟೆ : ತಂದೆ ದಿ.ವೆಂಕಟರಾವ್ ಮತ್ತು ತಾಯಿ ಪುಟ್ಟಮ್ಮ ಇವರ ಸ್ಮರಣಾರ್ಥ ಹುಂಚ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ಸುಮಾರು 50 ಸಹಸ್ರ ರೂ ಮೌಲ್ಯದ ಡೆಸ್ಕ್ ಮತ್ತು ಲೈಬ್ರರಿ ಅಲ್ಮೇರಾ ಗಳನ್ನು ಮಕ್ಕಳಾದ ಹೆಚ್.ವಿ.ಶ್ರೀಪತಿರಾವ್ ಮತ್ತು ಇಂದುಮತಿ ಮತ್ತು ಕುಟುಂಬದವರು ಕೊಡುಗೆಯಾಗಿ ನೀಡಿದರು. ಕೊಡುಗೆಯಾಗಿ ನೀಡಿ ಮಾತನಾಡಿದ ಹೆಚ್.ವಿ.ಶ್ರೀಪತಿರಾವ್ ನಮ್ಮ ತಂದೆ…
ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ – ಮಳಲಿ ಶ್ರೀಗಳು
ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ – ಮಳಲಿ ಶ್ರೀಗಳು ರಿಪ್ಪನ್‌ಪೇಟೆ;-ಮೌಲ್ಯಗಳ ಪುನರುತ್ಥಾನಕ್ಕೆ ಮೌಲ್ಯಾಧಾರಿತ ಶಿಕ್ಷಣಕ್ಕೆ ಮಹತ್ವ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಸಮೀಪದ ಹೆದ್ದಾರಿಪುರ ಶ್ರೀರಾಮಕೃಷ್ಣ ಇನ್ಸ್ಟಿಟ್ಯೂಟ್ ಫಾರ್ ಸೋಷಿಯಲ್ ಅವೇರ್‌ನೆಸ್ ಶ್ರೀ ಶಿವರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್ ಪೂರ್ವ ಪ್ರಾಥಮಿಕ ಹಿರಿಯ ಪ್ರಾಥಮಿಕ ಅಂಗ್ಲ ಮಾಧ್ಯಮ ಶಾಲೆಯ ಪ್ರತಿಭಾ ಪ್ರದರ್ಶನ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಶಿಕ್ಷಣಕ್ಕೆ ಜಗತ್ತನ್ನು ಬದಲಾಯಿಸುವ ಶಕ್ತಿಯಿದ್ದು ಆರ್ಥಿಕ ಬೆಳವಣಿಗೆ ಸಾಮಾಜಿಕ. ಸಾಮರಸ್ಯ….
RIPPONPETE • ಸುಟ್ಟುಹೋದ ವಿದ್ಯುತ್ ಟಿಸಿ – ಐದು ದಿನಗಳಿಂದ ಕುಡಿಯುವ ನೀರಿಲ್ಲದೆ ಗವಟೂರು ಗ್ರಾಮಸ್ಥರ ಪರದಾಟ
RIPPONPETE • ಸುಟ್ಟುಹೋದ ವಿದ್ಯುತ್ ಟಿಸಿ – ಐದು ದಿನಗಳಿಂದ ಕುಡಿಯುವ ನೀರಿಲ್ಲದೆ ಗವಟೂರು ಗ್ರಾಮಸ್ಥರ ಪರದಾಟ ರಿಪ್ಪನ್‌ಪೇಟೆ;-ಇಲ್ಲಿನ ಗವಟೂರು ಗ್ರಾಮದಲ್ಲಿ ಕಳೆದ ಐದಾರು ದಿನಗಳ ಹಿಂದೆ ಟಿಸಿ ಸುಟ್ಟುಹೋಗಿದ್ದು ಸಾರ್ವಜನಿಕರು ಕುಡಿಯುವ ನೀರಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯ ಗ್ರಾಮ ಪಂಚಾಯಿತ್‌ನಿಂದ ಪೈಪ್ ಲೈನ್ ಮೂಲಕ ಸರಬರಾಜು ಮಾಡಲಾಗುವ ಕುಡಿಯುವ ನೀರಿನ ನಲ್ಲಿಯಲ್ಲಿ ನೀರು ಬರದೇ ಇದ್ದು ಈ ಕುರಿತು ಗ್ರಾಮಾಡಳಿತದ ಗಮನಕ್ಕೆ ತರಲಾದರೂ ಕೂಡಾ ಪ್ರಯೋಜನವಾಗಿಲ್ಲ ಮತ್ತು ಮೆಸ್ಕಾಂ ಇಲಾಖೆಯವರಿಗೆ ಸಾರ್ವಜನಿಕರು ಗವಟೂರು ಬಳಿಯಲ್ಲಿ…
ಸಂಸ್ಕಾರಯುತ ಶಿಕ್ಷಣ ನೀಡುವಲ್ಲಿ ಗಮನ ಕೊಡಿ – ಪಿಎಸ್‌ಐ ಪ್ರವೀಣ್ ಎಸ್ ಪಿ
ಸಂಸ್ಕಾರಯುತ ಶಿಕ್ಷಣ ನೀಡುವಲ್ಲಿ ಗಮನ ಕೊಡಿ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ಸಂಸ್ಕಾರವಿಲ್ಲದ ಬದುಕಿಗೆ ಭವಿಷ್ಯವಿಲ್ಲ. ಭವಿಷ್ಯವಿದ್ದರೂ ಅರ್ಥವಿಲ್ಲ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬರುವೆ ಹಮ್ಮಿಕೊಂಡ ಶಾರದಾ ಪೂಜೆ ಮತ್ತು ಮಕ್ಕಳ ಸಾಂಸ್ಕೃತಿಕ ಕಲರವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ವಿಜ್ಞಾನ ತಂತ್ರಜ್ಞಾನದ ಬೆಳವಣಿಗೆಯಿಂದ ಜೀವನ ಶೈಲಿಯೂ ಬದಲಾಗಿದೆ. ಆದರೆ, ನೈತಿಕ ಮೌಲ್ಯಗಳು ಅಧಃಪತನವಾಗಿರುವುದು ದುರದೃಷ್ಟಕರ. ಶಿಕ್ಷಕರು, ಪಾಲಕರು ಮಕ್ಕಳಿಗೆ…
ಸಂಘಟಿತ ಹೋರಾಟಕ್ಕೆ ಸಂದ ಜಯ – ವೀರೇಶ್ ಆಲುವಳ್ಳಿ
ಸಂಘಟಿತ ಹೋರಾಟಕ್ಕೆ ಸಂದ ಜಯ – ವೀರೇಶ್ ಆಲುವಳ್ಳಿ ರಿಪ್ಪನ್‌ಪೇಟೆ : ಕಳೆದ ಹಲವು ತಿಂಗಳಿಂದ ಮಲೆನಾಡಿನ ರೈತರನ್ನು ಕೆಂಗಡಿಸಿದ್ದ ಕಾಡಾನೆಗಳನ್ನು ಸ್ಥಳಾಂತರಗೊಳಿಸುವಂತೆ ಆಗ್ರಹಿಸಿ ನಡೆಸಿದ ಸಂಘಟಿತ ಹೋರಾಟದಿಂದ ಕಾಡಾನೆಗಳ ದಾಳಿಯಿಂದ ಅಲ್ಪ ಮುಕ್ತಿ ದೊರಕಿದಂತಾಗಿದೆ ಎಂದು ತಾಪಂ ಮಾಜಿ ಅಧ್ಯಕ್ಷ ಹಾಗೂ ಹೋರಾಟ ಸಮಿತಿಯ ಕಾರ್ಯಾಧ್ಯಕ್ಷ ವೀರೇಶ್ ಆಲುವಳ್ಳಿ ಹೇಳಿದರು. ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಕಛೇರಿಯಲ್ಲಿ ಸುದ್ದಿಗೋಷ್ಠಿ ಮೂಲಕ ಮಾತನಾಡಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ನೇತೃತ್ವದಲ್ಲಿ ಈ ಭಾಗದ ರೈತ ಸಂಘಟನೆಗಳೊಂದಿಗೆ ಕಾಡಾನೆ…
RIPPONPETE | ಬುದ್ದಿಮಾಂದ್ಯ ವ್ಯಕ್ತಿ ನಾಪತ್ತೆ – ಪತ್ತೆಗೆ ಮನವಿ
RIPPONPETE | ಬುದ್ದಿಮಾಂದ್ಯ ವ್ಯಕ್ತಿ ನಾಪತ್ತೆ – ಪತ್ತೆಗೆ ಮನವಿ ರಿಪ್ಪನ್‌ಪೇಟೆ ; ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಬುದ್ದಿಮಾಂದ್ಯ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಗುಬ್ಬಿಗ ಸಮೀಪದ ಸಾರನಜಡ್ಡು ಗ್ರಾಮದ ಬಸಪ್ಪ ಬಿನ್ ಪುಟ್ಟನಾಯ್ಕ (68) ನಾಪತ್ತೆಯಾಗಿರುವ ವ್ಯಕ್ತಿಯಾಗಿದ್ದಾರೆ. ದಿನಾಂಕ 12-01-2025 ರಂದು ಮನೆಯಿಂದ ಹೊರಹೋದ ಬಸಪ್ಪ ರವರು ಮನೆಗೆ ಹಿಂದಿರುಗಿರುವುದಿಲ್ಲ, ಈ ಹಿಂದೆ ಹಲವು ಬಾರಿ ಹೋದವರು ವಾರದಲ್ಲಿ ಹಿಂದಿರುಗಿದ್ದಾರೆ.ಸಂಬಂಧಿಕರ ಬಳಿ ಎಲ್ಲಾ ವಿಚಾರಿಸಿದಾಗ ಎಲ್ಲೂ ಪತ್ತೆಯಾಗಿರುವುದಿಲ್ಲ , ಈ…
ಸಾಗರದಿಂದ ನಾಪತ್ತೆಯಾಗಿದ್ದ ಯುವಕ ರಿಪ್ಪನ್‌ಪೇಟೆಯಲ್ಲಿ ಪತ್ತೆ
ಸಾಗರದಿಂದ ನಾಪತ್ತೆಯಾಗಿದ್ದ ಯುವಕ ರಿಪ್ಪನ್‌ಪೇಟೆಯಲ್ಲಿ ಪತ್ತೆ ರಿಪ್ಪನ್‌ಪೇಟೆ : ಸಾಗರ ಪಟ್ಟಣದಿಂದ ನಾಪತ್ತೆಯಾಗಿದ್ದ ಯುವಕನನ್ನು ರಿಪ್ಪನ್‌ಪೇಟೆ ಪಟ್ಟಣದಲ್ಲಿ ಪೊಲೀಸರು ಪತ್ತೆ ಹಚ್ಚಿ ಪೋಷಕರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ಸಾಗರ ಪಟ್ಟಣದಲ್ಲಿರುವ ಮನೆಯಿಂದ ಮಾತು ಬಾರದ ಯುವಕನೊಬ್ಬ ಮನೆಯಿಂದ ನಾಪತ್ತೆಯಾಗಿದ್ದನು.ಪೋಷಕರು ಕುಟುಂಬಸ್ಥರ ಮನೆಯಲೆಲ್ಲಾ ವಿಚಾರಿಸಿ ಸ್ಥಳೀಯ ಠಾಣೆ ವಿಷಯ ಮುಟ್ಟಿಸಿದ್ದಾರೆ. ಮಾತು ಬಾರದ ಯುವಕ ಸಾಗರದಿಂದ ಬಸ್ ನಲ್ಲಿ ಹೊಸನಗರಕ್ಕೆ ಬಂದು ಅಲ್ಲಿಂದ ಶಿವಮೊಗ್ಗ ಬಸ್ ಗೆ ಹತ್ತಿರುವ ಮಾಹಿತಿ ಪಡೆದ ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ…
ಅಕ್ರಮ ಮರಳು ದಂಧೆಗೆ ಸಂಪೂರ್ಣ ಕಡಿವಾಣ: ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ
ಅಕ್ರಮ ಮರಳು ದಂಧೆಗೆ ಸಂಪೂರ್ಣ ಕಡಿವಾಣ: ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್‌ಗಳನ್ನು ಸರ್ಕಾರದ ವಿವಿಧ ಕಾಮಗಾರಿಗಳಿಗೆ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ನಿಯಮಾನುಸಾರ ಸರ್ಕಾರದ ಮರಳು ನೀತಿಯ ನಿಬಂಧನೆಗಳಿಗೊಳಪಟ್ಟು ಇಲಾಖೆಗಳಿಗೆ ಕಾಯ್ದಿರಿಸಲು ಜಿಲ್ಲಾ ಸಮಿತಿಗೆ ಇರುವ ಪ್ರದತ್ತ ಅಧಿಕಾರವನ್ನು ಬಳಸಿ, ಗಣಿಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮರಳು ಉಸ್ತುವಾರಿ…