ಜಿಲ್ಲಾ ಸುದ್ದಿ:
ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಜಗದೀಶ್ ಆಯ್ಕೆ
ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಜಗದೀಶ್ ಆಯ್ಕೆ ಶಿವಮೊಗ್ಗ : ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಈ ಹಿಂದೆ ನಗರಾಧ್ಯಕ್ಷರಾಗಿದ್ದ ಜಗದೀಶ್ ಕೆಎನ್ ಆಯ್ಕೆಯಾಗಿದ್ದಾರೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಜಗದೀಶ್ ಸೇರಿದಂತೆ ಒಟ್ಟು ಮೂರು ಹೆಸರುಗಳನ್ನು ರಾಜ್ಯಮಟ್ಟಕ್ಕೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಳಹಿಸಿಕೊಟ್ಟಿತ್ತು. ಈ ಪೈಕಿ ಚುನಾವಣಾ ಪ್ರಕ್ರಿಯೆ ವೇಳೆ ಜಗದೀಶ್ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಜಿಲ್ಲಾಧ್ಯಕ್ಷರಾಗಿ ಅವರು ಆಯ್ಕೆಯಾಗಿದ್ದಾರೆ. ಉಳಿದಂಥೆ ಜಿಲ್ಲಾ ಬಿಜೆಪಿ ಪ್ರತಿನಿಧಿಯಾಗಿ ಮಾಜಿ ಎಂಎಲ್ಸಿ ಎಸ್ ರುದ್ರೇಗೌಡ ಆಯ್ಕೆಯಾಗಿದ್ದಾರೆ.
ಪರಿಸರ ಹೋರಾಟಗಾರ ಗಿರೀಶ್ ಆಚಾರ್ ರವರಿಗೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ ಪ್ರಶಸ್ತಿ
ಪರಿಸರ ಹೋರಾಟಗಾರ ಗಿರೀಶ್ ಆಚಾರ್ ರವರಿಗೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ ಪ್ರಶಸ್ತಿ ಬೆಂಗಳೂರಿನಲ್ಲಿ ನ್ಯಾಷನಲ್ ಪತ್ರಿಕೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ 2025 ಎಂಬ ಹೆಸರಿನ ಪ್ರಶಸ್ತಿಯನ್ನು ಪರಿಸರ ಹೋರಾಟಗಾರ , ಮಲೆನಾಡಿನ ಬುದ್ದ ಖ್ಯಾತಿಯ ಗಿರೀಶ್ ಆಚಾರ್ ರವರಿಗೆ ಲಭಿಸಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಸವಾಲು ಮತ್ತು ಹಲವಾರು ಅಡೆತಡೆಗಳ ಹೊರತಾಗಿಯೂ ತಮ್ಮ ಪರಿಸರ ಉಳಿಸುವ ಹೋರಾಟ ಕ್ಷೇತ್ರದಲ್ಲಿ ತಮ್ಮದೇ ಶೈಲಿಯಲ್ಲಿ ಸಾಧನೆಗೈದ ಹೊಸನಗರ ತಾಲೂಕಿನ ಪುಟ್ಟ ಗ್ರಾಮ ಬ್ರಹ್ಮೇಶ್ವರದ…
ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (30-01-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (30-01-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 30/01/25 ರಂದು ಬೆಳಿಗ್ಗೆ 9-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ಹಾಗೂ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ್ತ ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್…
ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ
ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ ಕೊಟ್ಟಿಗೆಯಲ್ಲಿ ಕಟ್ಟಿದ ಕರು ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲುಮೆಜಡ್ಡಿನ ರುಕ್ಮಿಣಮ್ಮನವರ ಮನೆಯಲ್ಲಿ ನಡೆದಿದೆ. ಭಾನುವಾರ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ಕರುವಿನ ಚೀರಾಟ ಕೇಳಿ, ಎದ್ದು ಬರುವಷ್ಟರಲ್ಲಿ ಚಿರತೆ ಕರುವನ್ನು ಬಿಟ್ಟು ಪರಾರಿಯಾಗಿದೆ. ಕರುವಿನ ಮುಖಕ್ಕೆ ತೀವ್ರ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಎರಡು ವಾರದ ಹಿಂದೆ ಪಕ್ಕದ ಊರು ಗುಬ್ಬಿಗದಲ್ಲಿ ಚಿರತೆಯೊಂದು ನಾಯಿಯನ್ನು…
ವಿಶ್ವ ಶಾಂತಿ, ಭ್ರಾತೃತ್ವ ಧರ್ಮಸಂದೇಶ ಸಾರಿದಶ್ರೀ ಆದಿನಾಥ ತೀರ್ಥಂಕರರು ಪ್ರಾತಃಸ್ಮರಣೀಯರು ; ಹೊಂಬುಜ ಸ್ವಾಮೀಜಿ
ವಿಶ್ವ ಶಾಂತಿ, ಭ್ರಾತೃತ್ವ ಧರ್ಮಸಂದೇಶ ಸಾರಿದಶ್ರೀ ಆದಿನಾಥ ತೀರ್ಥಂಕರರು ಪ್ರಾತಃಸ್ಮರಣೀಯರು ; ಹೊಂಬುಜ ಸ್ವಾಮೀಜಿ ಜೈನ ಧರ್ಮದ ಪ್ರಥಮ ತೀರ್ಥಂಕರ ಶ್ರೀ 1008 ಆದಿನಾಥ ತೀರ್ಥಂಕರರವರು ಜೈನ ಧರ್ಮದ ಮೂಲ ಸಿದ್ಧಾಂತಗಳನ್ನು, ವಿಶ್ವದಲ್ಲೆಲ್ಲ ಶಾಂತಿ, ಭ್ರಾತೃತ್ವದ ಧರ್ಮ ಸಂದೇಶವನ್ನು ಸಾರಿದವರು ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು ಶ್ರೀ ಆದಿನಾಥ ಸ್ವಾಮಿಯವರು ಮೋಕ್ಷಕಲ್ಯಾಣ ಮಹೋತ್ಸವದ ಧಾರ್ಮಿಕ ವಿಧಿ-ವಿಧಾನಗಳ ಬಳಿಕ ಪ್ರವಚನದಲ್ಲಿ ತಿಳಿಯಬಯಸಿದರು. ಅಸಿ, ಮಸಿ, ಕೃಷಿ, ಆದಿ…
ಬಸ್ ನಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು | ಆಗುಂಬೆ ಘಾಟ್ ನಲ್ಲಿ ನಡೆದ ಘಟನೆ
ಬಸ್ ನಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು | ಆಗುಂಬೆ ಘಾಟ್ ನಲ್ಲಿ ನಡೆದ ಘಟನೆ ತೀರ್ಥಹಳ್ಳಿ: ಪರ್ಕಳದಿಂದ ತೀರ್ಥಹಳ್ಳಿ ಮಾರ್ಗವಾಗಿ ಕೊಪ್ಪಕ್ಕೆ ಬರುತ್ತಿದ್ದ ವ್ಯಕ್ತಿಯೊಬ್ಬರಿಗೆ ಬಸ್ ನಲ್ಲೆ ಹೃದಯಾಘಾತವಾಗಿ ಮೃತಪಟ್ಟ ಘಟನೆ ಇಂದು ನಡೆದಿದೆ. ಬಸ್ ನಲ್ಲಿ ಆಗಮಿಸುತ್ತಿದ್ದ ಕೊಪ್ಪದ ಹರೀಶ್ ಬಳ್ಳಾಲ್ ಎನ್ನುವವರಿಗೆ ತೀವ್ರ ಹೃದಯಘಾತ ಆಗಿದೆ. ವಿಷಯ ತಿಳಿಯುತ್ತಿದ್ದಂತೆ ಬಸ್ ಡ್ರೈವರ್ ಪ್ರಾಥಮಿಕ ಕೇಂದ್ರಕ್ಕೆ ಕರೆ ತಂದಿದ್ದಾರೆ. ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಹರೀಶ್ ಪ್ರಾಣ ಬಿಟ್ಟಿದ್ದಾರೆ. ಆಗುಂಬೆ ವೈದ್ಯಾಧಿಕಾರಿಯಾದ ಅನಿಕೇತನ್ ಪರೀಕ್ಷಿಸಿ ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ….
ಹೆದ್ದಾರಿಪುರದ ಸಿಂಧುಗೆ ಎಂ.ಎ ಪತ್ರಿಕೋದ್ಯಮ ವಿಭಾಗದಲ್ಲಿ ಮೂರು ಚಿನ್ನ
ಹೆದ್ದಾರಿಪುರದ ಸಿಂಧುಗೆ ಎಂ.ಎ ಪತ್ರಿಕೋದ್ಯಮ ವಿಭಾಗದಲ್ಲಿ ಮೂರು ಚಿನ್ನ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರದ ಸಿಂಧು ಕೆ.ಟಿ ಕುವೆಂಪು ವಿಶ್ವವಿದ್ಯಾನಿಲಯದ ಎಂ.ಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ್‍ಯಾಂಕ್ ನೊಂದಿಗೆ ಮೂರು ಚಿನ್ನದ ಪದಕ ಪಡೆಯುವ ಮೂಲಕ ಅದ್ವಿತೀಯ ಸಾಧನೆ ಮಾಡಿದ್ದಾರೆ. ಹೆದ್ದಾರಿಪುರ ಅಂಗನವಾಡಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ತಾಯಿ ದೇವಮ್ಮ ಮತ್ತು ತಿಮ್ಮಪ್ಪ ಗೌಡ ಅವರ ಪುತ್ರಿಯಾದ ಸಿಂಧು ಕೆ.ಟಿ ಅವರು, ಹೆದ್ದಾರಿಪುರದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದು,…
ಗಣರಾಜ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ವೇಷ ಭೂಷಣ ಧರಿಸಿ ಜನಾಕರ್ಷಕ ಪಥಸಂಚಲನ
ಗಣರಾಜ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ವೇಷ ಭೂಷಣ ಧರಿಸಿ ಜನಾಕರ್ಷಕ ಪಥಸಂಚಲನ ರಿಪ್ಪನ್‌ಪೇಟೆ | 76 ನೇ ಗಣರಾಜ್ಯೋತ್ಸವ ಮತ್ತು ಸ್ವಾಮಿವಿವೇಕಾನಂದರ ಜಯಂತೋತ್ಸವ ಕಾರ್ಯಕ್ರಮದ ಅಂಗವಾಗಿ ಕೋಡೂರು ಬ್ಲಾಸಂ ಅಕಾಡಮಿ ಶಾಲಾ ವಿದ್ಯಾರ್ಥಿಗಳ ವೇಷ ಭೂಷಣ ಪಥಸಂಚಲನ ಸಾರ್ವಜನಿಕರನ್ನು ಅಕರ್ಷಿಸಿತು. ಕೋಡೂರು ಇತಿಹಾಸ ಪ್ರಸಿದ್ದ ಶ್ರೀಶಂಕರೇಶ್ವರ ದೇವಸ್ಥಾನದಿಂದ ಸ್ವಾಮಿ ವಿವೇಕಾನಂದರ ವೇಷ ಭೂಷಣದೊಂದಿಗೆ ಮಕ್ಕಳ ಪಥ ಸಂಚಲನಕ್ಕೆ ತಾಲ್ಲೂಕ್ ಪಂಚಾಯ್ತಿ ಮಾಜಿ ಸದಸ್ಯ ಹಾಗೂ ಬ್ಲಾಸಂ ಅಕಾಡಮಿ ಆಧ್ಯಕ್ಷ ಚಂದ್ರುಮೌಳಿಗೌಡರು ಚಾಲನೆ ನೀಡಿ ಮಾತನಾಡಿ ದೇಶದ…
RIPPONPETE | ವಿವಿಧಡೆಯಲ್ಲಿ 76 ನೇ ಗಣರಾಜ್ಯೋತ್ಸವ
ರಿಪ್ಪನ್‌ಪೇಟೆಯ ವಿವಿಧಡೆಯಲ್ಲಿ 76 ನೇ ಗಣರಾಜ್ಯೋತ್ಸವ ರಿಪ್ಪನ್‌ಪೇಟೆ | ೭೬ ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ಸಂಭ್ರಮ ಸಡಗರದೊಂದಿಗೆ ನೆರವೇರಿತು. ಪಟ್ಟಣದ ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷೆ ಧನಲಕ್ಷ್ಮಿ ಧ್ವಜಾರೋಹಣ ನೆರವೇರಿಸಿದರು, ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಎಸ್.ಪಿ.ಪ್ರವೀಣ್ ದ್ವಜಾರೋಹಣ ನೆರವೇರಿಸಿ ದ್ವಜಾವಂದನೆ ಸ್ವೀಕರಿಸಿದರು.ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು,ಸರ್ಕಾರಿ ಹಿರಿಯ ಪ್ರಾಥಮಿಕ ಮಾದರಿ ಪಾಠಶಾಲೆಯಲ್ಲಿ ಎಸ್.ಡಿ.ಎಂ.ಸಿ.ಆಧ್ಯಕ್ಷ ಮಂಜಪ್ಪ, ಸಮಾಜಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಮೇಲ್ವಿಚಾರಕ ರಾಘವೇಂದ್ರ, ಬಿಸಿಎಂ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಸುಮಿತ್ರ, ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಆಧಿಕಾರಿ,ಬರುವೆ…
ಕಾಡಾನೆಗಳ ಸ್ಥಳಾಂತರ | ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಚಾರಕ್ಕೆ ಕೆಲಕಾಲ ಅಡಚಣೆ
ಕಾಡಾನೆಗಳ ಸ್ಥಳಾಂತರ | ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಚಾರಕ್ಕೆ ಕೆಲಕಾಲ ಅಡಚಣೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಹಲವಾರು ತೋಟಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿದ್ದ ಆನೆಗಳ ಹಿಂಡನ್ನು ಅರಣ್ಯ ಇಲಾಖೆಯ ಕಾರ್ಯಾಚರಣೆ ನಡೆಸಿ ಓಡಿಸುವ ಸಂಧರ್ಭದಲ್ಲಿ ಸೂಡೂರಿನಲ್ಲಿ ರಸ್ತೆ ಮಧ್ಯೆ ಆನೆಗಳು ಪುಂಡಾಟ ನಡೆಸಿದ ಹಿನ್ನೆಲೆಯಲ್ಲಿ ಕೆಲ ಕಾಲ ಶಿವಮೊಗ್ಗ-ರಿಪ್ಪನ್ ಪೇಟೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದ ಘಟನೆ ನಡೆದಿದೆ. ಮಲೆನಾಡಿನ ವ್ಯಾಪ್ತಿಯಲ್ಲಿ ಕಳೆದ ಹಲವಾರು ದಿನಗಳಿಂದ ಬೀಡು ಬಿಟ್ಟಿರುವ…