ಜಿಲ್ಲಾ ಸುದ್ದಿ:
ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲೊಬ್ಬ ರೌಡಿ ಡಾಕ್ಟರ್
ಶಿವಮೊಗ್ಗ ಜಿಲ್ಲೆಯ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಡಾ ಪ್ರತಿಮಾ ರಂತಹ ವೈದ್ಯರು ಬಡವರಿಗೆ ಅತ್ಯುತ್ತಮ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿದ್ದು ಜಿಲ್ಲೆಯಲ್ಲಿಯೇ ಹೆಸರು ಮಾಡಿದೆ ಎಂದರೆ ತಪ್ಪಾಗಲಾರದು ಆದರೆ ಇಲ್ಲಿರುವ ನಾಗೇಂದ್ರಪ್ಪ ಎಂಬ ರೌಡಿ , ಹಣಬಾಕ ವೈದ್ಯನಿಂದ ಈ ಆಸ್ಪತ್ರೆಯು ಕಳಂಕದತ್ತ ಹೊರಟಿರುವುದು ವಿಪರ್ಯಾಸ..!! ಈ ನಾಗೇಂದ್ರಪ್ಪನ ಆಟ ಎಷ್ಟಿದೆಯೆಂದರೆ ಇಲ್ಲಿ ನಾನಾಡಿದ್ದೇ ಆಟ, ನಾನೇ ಡಾಕ್ಟರ್ ನಾ ಹೇಗಿರಬೇಕು ಹಾಗೆ ಇರ್ತೀನಿ ಅದನ್ನು ಹೇಳಕ್ಕೆ ನೀನ್ಯಾರು? ಎಫ್ರಾನ್, ಸ್ಕೆತಸ್ಕೋಪ್ ಹಾಕಿಕೊಂಡ್ರೆ ವೈದ್ಯ, ಕೈಯಲ್ಲಿ…
ನಾನು ಯಾವುದೇ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿರಲಿಲ್ಲ – ಗ್ರಾಪಂ ಅಧ್ಯಕ್ಷ ಸಚಿನ್ ಗೌಡ
ರಿಪ್ಪನ್‌ಪೇಟೆ : ನಾನು ಯಾವುದೇ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರಲಿಲ್ಲ ಎಂದು ಅಮೃತ ಗ್ರಾಪಂ ನೂತನ ಅಧ್ಯಕ್ಷ ಸಚಿನ್ ಗೌಡ ಸ್ಪಷ್ಟನೆ ನೀಡಿದ್ದಾರೆ. ಪಟ್ಟಣದಲ್ಲಿ ಇಂದು ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಅಮೃತ ಗ್ರಾಪಂ ಅಧ್ಯಕ್ಷ ಚುನಾವಣೆಯಲ್ಲಿ ನಾನು ಪ್ರಬಲ ಆಕಾಂಕ್ಷಿಯಾಗಿದ್ದು ಈ ಬಗ್ಗೆ ಬಿಜೆಪಿ ಪಕ್ಷದ ಮುಖಂಡರ ಬಳಿ ಪ್ರಸ್ತಾಪಿಸಿದಾಗ ಅವರು ಮನ್ನಣೆ ನೀಡದ ಕಾರಣ ಬಿಜೆಪಿ ಪಕ್ಷದ ಬಂಡಾಯವಾಗಿ ಸ್ಪರ್ಧಿಸಿದ್ದೆ ಆದರೆ ಕೆಲವು ಮಾದ್ಯಮಗಳಲ್ಲಿ ಕಾಂಗ್ರೆಸ್…
ಕಸ್ತೂರಿ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಧನಲಕ್ಷ್ಮಿ ಗಂಗಾಧರ್ ಆಯ್ಕೆ
ಕಸ್ತೂರಿ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಧನಲಕ್ಷ್ಮಿ ಗಂಗಾಧರ್ ಆಯ್ಕೆ ರಿಪ್ಪನ್ ಪೇಟೆ : ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್‍ಕುಮಾರ್ ಆಭಿಮಾನಿ ಬಳಗದ ನಾಲ್ಕನೇ ವರ್ಷದ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು ಅಧ್ಯಕ್ಷರಾಗಿ ಧನಲಕ್ಷ್ಮಿ ಗಂಗಾಧರ್ ಆಯ್ಕೆಯಾಗಿದ್ದಾರೆ. ಪಟ್ಟಣದಲ್ಲಿ ಬುಧವಾರ ಗ್ರಾಮ ಪಂಚಾಯತ್ ನ ಕುವೆಂಪು ಸಭಾಂಗಣದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗದ ಸರ್ವ ಸದಸ್ಯರ ಸಭೆಯನ್ನು ಕರೆದು ನೂತನ ಪದಾದಿಕಾರಿಗಳ ಆಯ್ಕೆ ನಡೆಸಲಾಯಿತು….
ಗಾಂಧೀ ಮತ್ತು ಸೇವೆ ಸಾರ್ವಕಾಲಿಕ ಸತ್ಯಗಳು – ಮಂಜುನಾಥ. ಕೆ. ಆರ್
ಗಾಂಧೀ ಮತ್ತು ಸೇವೆ ಸಾರ್ವಕಾಲಿಕ ಸತ್ಯಗಳು – ಮಂಜುನಾಥ. ಕೆ. ಆರ್ ಬಟ್ಟೆಮಲ್ಲಪ್ಪ : ಸೇವೆ ಮತ್ತು ಅಹಿಂಸೆ ತತ್ವಗಳು ಜಗತ್ತಿಗೆ ಗಾಂಧೀಜಿ ನೀಡಿದ ಸಾರ್ವಕಾಲಿಕ ಸತ್ಯಗಳು ಎಂದು ಹರಿದ್ರಾವತಿ ಗ್ರಾಮ ಪಂಚಾಯತಿ ಅಧ್ಯಕ್ಷ ಮಂಜುನಾಥ್ ಕೆ. ಆರ್ ಅಭಿಪ್ರಾಯಪಟ್ಟರು. ಇಂದು ಮಹಾತ್ಮ ಗಾಂಧೀ ಮತ್ತು ಶಾಸ್ತ್ರೀ ಜಿಯವರ ಜಯಂತಿ ಅಂಗವಾಗಿ ಬಟ್ಟೆಮಲ್ಲಪ್ಪ ಸರ್ಕಲನಲ್ಲಿ ಶ್ರೀ ವ್ಯಾಸ ಮಹರ್ಷಿ ಗುರುಕುಲ ಹಾಗೂ ಚೆನ್ನಮ್ಮಾಜಿ ಪ್ರೌಢ ಶಾಲೆ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಶ್ರಮದಿನವನ್ನು ಉದ್ಘಾಟಿಸಿ ಅವರು ಮಾತನಾಡಿ ಗಾಂಧೀಜಿ ಅವರ…
ಶಾಂತಿ ಸೌಹಾರ್ಧತೆಯಿಂದ ಐಕ್ಯತೆ ಸಾಧ್ಯ – ಸೊನಲೆ ಶ್ರೀನಿವಾಸ್
ರಿಪ್ಪನ್‌ಪೇಟೆ : ಶಾಂತಿ, ಸೌಹಾರ್ಧತೆಯನ್ನು ಬೆಳೆಸಿದರೆ ಮಾತ್ರ ದೇಶದಲ್ಲಿ ಐಕ್ಯತೆ ಸಾಧ್ಯ. ಜತೆಗೆ ಸರ್ವರೂ ಸಮನ್ವಯತೆಯಿಂದ ಬದುಕಬಹುದು ಎಂದು ಇತಿಹಾಸಕಾರ ಸೊನಲೆ ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಹೊಸನಗರ ರಸ್ತೆಯ ಜುಮ್ಮಾ ಮಸೀದಿ ಆವರಣದ ಕೂರ ತಂಝಲ್ ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ ಆಯೋಜಿಸಿದ್ದ ಸ್ನೇಹ – ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸರ್ವ ಜನಾಂಗದ ಮನಸ್ಸುಗಳನ್ನು ಗಟ್ಟಿಗೊಳಿಸಿದರೆ ದೇಶ ಏನಾದರೂ ಸಾಧಿಸಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಮತ್ತೊಮ್ಮೆ ಪ್ರಚೋಧನಾಕಾರಿಗಳೇ ಪ್ರಜ್ವಲಿಸುತ್ತವೆ. ಇದರಿಂದ ದೇಶದಲ್ಲಿ ಅಶಾಂತಿ…
ಎಡಿಜಿಪಿ ಚಂದ್ರಶೇಖರವರನ್ನು ಸೇವೆಯಿಂದ ವಜಾಗೊಳಿಸುವಂತೆ ಹೊಸನಗರ ತಾಲ್ಲೂಕು ಜೆಡಿಎಸ್ ಆಗ್ರಹ
ಎಡಿಜಿಪಿ ಚಂದ್ರಶೇಖರವರನ್ನು ಸೇವೆಯಿಂದ ವಜಾಗೊಳಿಸುವಂತೆ ಹೊಸನಗರ ತಾಲ್ಲೂಕು ಜೆಡಿಎಸ್ ಆಗ್ರಹ ರಿಪ್ಪನ್‌ಪೇಟೆ : ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಬೃಹತ್ ಕೈಗಾರಿಕಾ ಹಾಗೂ ಉಕ್ಕು ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ಕೀಳು ಮಟ್ಟದ ಪದ ಬಳಸಿ ಅವಮಾನ ಮಾಡಿರುವ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ರವರನ್ನು ಸೇವೆಯಿಂದ ವಜಾಗೊಳಿಸುವಂತೆ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಹಾಗೂ ತಾಲೂಕ್ ಜೆಡಿಎಸ್ ಅಧ್ಯಕ್ಷ ಎನ್ ವರ್ತೇಶ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು. ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ…
ಕೆ ಎಸ್ ಈಶ್ವರಪ್ಪ ಬಿಜೆಪಿ ಪಕ್ಷದ ಆಂತರಿಕ ವಿಷಯದ ಬಗ್ಗೆ ಮಾತನಾಡುವುದು ಸಲ್ಲ – ಹರತಾಳು ಹಾಲಪ್ಪ
ಕೆ ಎಸ್ ಈಶ್ವರಪ್ಪ ಬಿಜೆಪಿ ಪಕ್ಷದ ಆಂತರಿಕ ವಿಷಯದ ಬಗ್ಗೆ ಮಾತನಾಡುವುದು ಸಲ್ಲ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ರವರು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರ ಮೇಲೆ ಸುಖಾಸುಮ್ಮನೆ ಆರೋಪ ಮಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕೆ ಎಸ್ ಈಶ್ವರಪ್ಪ ಈಗಾಗಲೇ ಬಿಜೆಪಿ ಪಕ್ಷವನ್ನು ತೊರೆದಿದ್ದಾರೆ ಅವರು ನಮ್ಮ…
ಗರ್ತಿಕೆರೆ ಗ್ರಾಪಂ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆ
ಗರ್ತಿಕೆರೆ ಗ್ರಾಪಂ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆಯಾಗಿದ್ದಾರೆ. ಗ್ರಾಪಂ ಅಧ್ಯಕ್ಷ ವಿಶ್ವನಾಥ್ ಗಂಧ್ರಳ್ಳಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಸಚಿನ್ ಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಒಟ್ಟು 11 ಜನ ಸದಸ್ಯ ಬಲದ ಗ್ರಾಪಂ ಚುನಾವಣೆಯಲ್ಲಿ ಸಚಿನ್ ಗೌಡ 7 ಮತ ಪಡೆದರೆ ಪ್ರತಿಸ್ಪರ್ಧಿ ದೇವರಾಜ್ 4 ಮತ ಪಡೆದಿದ್ದಾರೆ. ಬಿಜೆಪಿ ಬೆಂಬಲಿತ 8 ಸದಸ್ಯರು ಹಾಗೂ ಕಾಂಗ್ರೆಸ್ ಬೆಂಬಲಿತ…
ಕಬ್ಬಡಿ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಹೆದ್ದಾರಿಪುರ ಶಿವ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು
ಕಬ್ಬಡಿ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಹೆದ್ದಾರಿಪುರ ಶಿವ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು ಹೊಸನಗರದ ನೆಹರೂ ಮೈದಾನದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ 14 ವರ್ಷದ ವಯೋಮಿತಿಯ ಬಾಲಕರ ವಿಭಾಗದ ಕ್ರೀಡಾಕೂಟದಲ್ಲಿ ಹೆದ್ದಾರಿಪುರ ಶ್ರೀ ಶಿವ ರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಫೈನಲ್ ಪಂದ್ಯದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಹೆದ್ದಾರಿಪುರ ಶ್ರೀ ಶಿವರಾಮಕೃಷ್ಣ ಇಂಟರ್‌ನ್ಯಾಷನಲ್ ಶಾಲೆಯ ಕಬ್ಬಡಿ ತಂಡ ಗೆಲವು ಪಡೆಯಿತು. ಶಾಲಾ ಮಕ್ಕಳ…
ಚೀನಾ ಬೆಳ್ಳುಳ್ಳಿ ಮಾರಾಟ ಮಳಿಗೆಗಳ ಮೇಲೆ ಅಧಿಕಾರಿಗಳ ದಾಳಿ – ಆರೋಗ್ಯಕ್ಕೆ ಹಾನಿಕಾರವಾದ ಬೆಳ್ಳುಳ್ಳಿ ಬಗ್ಗೆ ಇರಲಿ ಎಚ್ಚರ.!!!
ಚೀನಾ ಬೆಳ್ಳುಳ್ಳಿ ಮಾರಾಟ ಮಳಿಗೆಗಳ ಮೇಲೆ ಅಧಿಕಾರಿಗಳ ದಾಳಿ – ಆರೋಗ್ಯಕ್ಕೆ ಹಾನಿಕಾರವಾದ ಬೆಳ್ಳುಳ್ಳಿ ಬಗ್ಗೆ ಇರಲಿ ಎಚ್ಚರ.!!! ಭಾರತದ ಮಾರು ಕಟ್ಟೆಯಲ್ಲಿ ನಿಷೇಧಿಸಿರುವ ಚೀನದ ಬೆಳ್ಳುಳ್ಳಿ ಈಗ ಕಳ್ಳಮಾರ್ಗದ ಮೂಲಕ ಶಿವಮೊಗ್ಗ ಮಾರುಕಟ್ಟೆ ಪ್ರವೇಶಿಸಿದ್ದು, ಅಧಿಕಾರಿಗಳು50 ಕೆ.ಜಿ.ಗೂ ಹೆಚ್ಚು ಬೆಳ್ಳುಳ್ಳಿ ವಶಪಡಿಸಿಕೊಂಡು ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಅಲಹಾಬಾದ್ ಹೈಕೋರ್ಟ್‌ನಲ್ಲಿ ಚೀನ ಬೆಳ್ಳುಳ್ಳಿ ಕುರಿತು ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ 2 ದಿನಗಳಿಂದ ಭಾರತೀಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ಶಿವಮೊಗ್ಗ ದಲ್ಲಿ 8 ಕಡೆ…