ಹಿಂಡ್ಲೆಮನೆ ಕೆ.ಎಂ.ಗೋಪಾಲಾಚಾರ್ಯ ನಿಧನ
ರಿಪ್ಪನ್‌ಪೇಟೆ: ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ವಾಸಿ ಕೆ.ಎಂ. ಗೋಪಾಲಾಚಾರ್ಯ (76) ಶನಿವಾರ ನಿಧನರಾದರು. ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಶನಿವಾರ ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆದರು. ಮೃತರು ಪತ್ನಿ, ಇಬ್ಬರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯು ಇಂದು ಸಂಜೆ ಹಿಂಡ್ಲೆಮನೆಯ ಮೃತರ ಜಮೀನಿನಲ್ಲಿ ನೆರವೇರಿತು.