ಹೊಸನಗರ ತಾಲೂಕ್ ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ನಿಧನ
ಹೊಸನಗರ ತಾಲೂಕ್ ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ನಿಧನ ಹೊಸನಗರ, ನ.21: ತಾಲೂಕು ಬಿಜೆಪಿ ಅಧ್ಯಕ್ಷ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾಗಿದ್ದ ಹಿರಿಯ ನಾಯಕ ಮತ್ತಿಮನೆ ಸುಬ್ರಹ್ಮಣ್ಯ ಅವರು ತೀವ್ರ ಹೃದಯಾಘಾತದಿಂದ ಅಕಾಲಿಕವಾಗಿ ವಿಧಿವಶರಾಗಿದ್ದಾರೆ. ಇಂದು ಮಧ್ಯಾಹ್ನ ಏಕಾಏಕಿ ಅಸ್ವಸ್ಥತೆಯನ್ನು ಅನುಭವಿಸಿದ ಸುಬ್ಬಣ್ಣ ಅವರನ್ನು ಕುಟುಂಬ ಸದಸ್ಯರು ತಕ್ಷಣವೇ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ, ವೈದ್ಯಕೀಯ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಸುಬ್ಬಣ್ಣ ಅವರು ದಶಕಗಳ ಕಾಲ ರಾಜಕೀಯ ಹಾಗೂ…