
ಶಿಗ್ಗಾಂವಿಯಲ್ಲಿ ಬಂಡಾಯ ಶಮನ | ಅ.30ರಂದು ಅಜ್ಜಂಪೀರ್ ಖಾದ್ರಿ ನಾಮಪತ್ರ ವಾಪಸ್ : ಡಿ ಕೆ ಶಿ
ಬೆಂಗಳೂರು: ಶಿಗ್ಗಾಂವಿ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಶಾಸಕ ಸಯ್ಯದ್ ಅಜ್ಜಂಪೀರ್ ಖಾದ್ರಿ ಅ.30ರಂದು ಬುಧವಾರ ನಾಮಪತ್ರವನ್ನು ಹಿಂಪಡೆಯಲಿದ್ದಾರೆ. ಅವರ ಅರ್ಹತೆಗೆ ತಕ್ಕಂತೆ ಪಕ್ಷವು ಅಧಿಕಾರ ನೀಡುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಶನಿವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸಕ್ಕೆ ಸಚಿವ ಝಮೀರ್ ಅಹ್ಮದ್ ಖಾನ್ ಹಾಗೂ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಜೊತೆ ಆಗಮಿಸಿದ ಅಜ್ಜಂಪೀರ್ ಖಾದ್ರಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಖಾದ್ರಿ ನಮ್ಮ ಜೊತೆಯಲ್ಲಿದ್ದಾರೆ….