ಆರ್ಎಸ್ಎಸ್ ಬಾಂಬ್ ಹಾಕುವವರನ್ನ ತಯಾರು ಮಾಡುವ ಸಂಸ್ಥೆಯಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ
ಶಿವಮೊಗ್ಗ : ಆರ್ಎಸ್ಎಸ್ ಸಂಘಟನೆ ದೇಶದ ಮೇಲೆ ಬಾಂಬ್ ಹಾಕುವವರನ್ನ ತಯಾರು ಮಾಡುವುದಿಲ್ಲ. ದೇಶವನ್ನು ಪ್ರೀತಿ ಮಾಡೋರನ್ನು ತಯಾರು ಮಾಡುತ್ತೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ವೋಟ್ ಬ್ಯಾಂಕಿಗಾಗಿ ಏನೇನೋ ಹೇಳುತ್ತಿದ್ದಾರೆ. ಅವರು ಅಧಿಕಾರದಿಂದ ಕೆಳಗಿಳಿದ ಮೇಲೆ ರಾಜ್ಯದಲ್ಲಿ ಉತ್ತಮ ಆಡಳಿತ ನಡೆಯುತ್ತಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ನವರು ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದಾರೆ, ಇದು ಸರಿಯಲ್ಲ. ಅಲ್ಪಸಂಖ್ಯಾತರ ಓಲೈಕೆಗೆ ಕಾಂಪಿಟೇಷನ್ ನಡೆಯುತ್ತಿದೆ ಎಂದರು. ಸಿಂದಗಿ, ಹಾನಗಲ್ ಉಪ…