ಬಗರ್ ಹುಕುಂ ಸಾಗುವಳಿ ಅರ್ಜಿದಾರರಿಗೆ ತಕ್ಷಣದಲ್ಲೇ ಸಾಗುವಳಿ ಚೀಟಿಯನ್ನು ನೀಡಿ : ಕಾಗೋಡು ತಿಮ್ಮಪ್ಪ
ಸಾಗರ :ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಪ್ರಕರಣಗಳ ಸಾಗುವಳಿ ಚೀಟಿಯನ್ನು ತಕ್ಷಣದಲ್ಲಿ ನೀಡುವಂತೆ ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ಸಾಗರ ವತಿಯಿಂದ ಸಾಗರ ತಹಶೀಲ್ದಾರ್ ರಿಗೆ ಮನವಿಯನ್ನು ಸಲ್ಲಿಸಿದರು. ಪ್ರತಿಭಟನೆಯ ನೇತೃತ್ವವನ್ನು ವಹಿಸಿದ ಮಾಜಿ ಸಚಿವರು ಮಾಜಿ ವಿಧಾನಸಭಾ ಅಧ್ಯಕ್ಷರು ಆದ ಶ್ರೀ ಕಾಗೋಡು ತಿಮ್ಮಪ್ಪನವರು ಮಾತನಾಡುತ್ತಾ ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ ರೈತರ ಬಗರ್ ಹುಕುಂ ಜಮೀನು ಗಳಿಗೆ ಅರ್ಜಿ ಸಲ್ಲಿಸಿ ಸಾಕಷ್ಟು ಸಮಯ ಆದರೂ ಕೂಡ ಇದುವರೆಗೂ ಸಾಗುವಳಿ ಚೀಟಿಯನ್ನು ನೀಡಿಲ್ಲ ರೈತರು ಅತಂತ್ರ…