ರಿಪ್ಪನ್ ಪೇಟೆ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗೆ ಕರೊನಾ ಪಾಸಿಟಿವ್ : ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಲ್ಲಿ ಆತಂಕ
ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿರುವ ಯುವಕನೊರ್ವನಿಗೆ ಕೋವಿಡ್ ಪಾಸಿಟಿವ್ ಬಂದಿದ್ದು,ಯುವಕನನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಡಿ.1 ರಂದು ವಿದ್ಯಾರ್ಥಿ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ಪಿಹೆಚ್ ಸಿಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾನೆ ಕೋವಿಡ್ ಪರೀಕ್ಷೆಯ ವರದಿಯು ನಿನ್ನೆ ಪಾಸಿಟಿವ್ ಎಂದು ಬಂದಿದೆ. ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಆರೋಗ್ಯ ಕೇಂದ್ರ ಸಿಬ್ಬಂದಿಗಳು ಇಂದು ವಿದ್ಯಾರ್ಥಿಯ ಮನೆಗೆ ಬಂದಿದ್ದಾರೆ.ಆದರೆ ಆತ ಮನೆಯಲ್ಲಿ ಇರದೇ ರಿಪ್ಪನ್…


