ದೀಪ ಶ್ರೀಮಂತನ ಮನೆಯಲ್ಲಿ ಎಷ್ಟು ಬೆಳಕನ್ನು ಕೊಡುತ್ತದೆಯೋ ಅಷ್ಟೇ ಬೆಳಕನ್ನು ಬಡವನ ಮನೆಯಲ್ಲೂ ಕೊಡುತ್ತದೆ : ಶ್ರೀ ರಂಭಾಪುರಿ ಜಗದ್ಗುರುಗಳು : ಅದ್ದೂರಿಯಾಗಿ ಜರುಗಿದ ಮಳಲಿ ಮಠದ ಕಾರ್ತಿಕ ದೀಪೋತ್ಸವ
ರಿಪ್ಪನ್‌ಪೇಟೆ: ಕತ್ತಲೆ ಅಜ್ಞಾನದ ಸಂಕೇತವಾದರೆ ಬೆಳಕು ಜ್ಞಾನದ ಸಂಕೇತ. ಬಾಹ್ಯ ಕತ್ತಲೆ ಕಳೆಯಲು ದೀಪ ಬೇಕು. ಮನದ ಅಜ್ಞಾನ ದೂರ ಮಾಡಲು ಜ್ಞಾನ ಬೋಧಾಮೃತ ಬೆಳಕಿನ ಕಿರಣ ಮುಖ್ಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಶ್ರೀಮದ್ರಂಭಾಪುರಿ ಖಾಸಾ ಶಾಖಾ ಮಳಲಿ ಸಂಸ್ಥಾನ ಮಠದಲ್ಲಿ ಜರುಗಿದ ಕಾರ್ತೀಕ ದೀಪೋತ್ಸವ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ ದೀಪ ಶ್ರೀಮಂತನ ಮನೆಯಲ್ಲಿ ಎಷ್ಟು ಬೆಳಕನ್ನು ಕೊಡುತ್ತದೆಯೋ ಅಷ್ಟೇ ಬೆಳಕನ್ನು ಬಡವನ ಮನೆಯಲ್ಲೂ ಕೊಡುತ್ತದೆ. ಮನುಷ್ಯನ…