ಪುನೀತ್ ರಾಜ್‍ಕುಮಾರ್ ಗೆ ಶ್ರದ್ದಾಂಜಲಿ : ರಿಪ್ಪನ್ ಪೇಟೆ ಸಂಪೂರ್ಣ ಬಂದ್
ರಿಪ್ಪನ್ಪೇಟೆ : ಪುನೀತ್ ರಾಜ್‍ಕುಮಾರ್ ಅಗಲಿಕೆಯಿಂದ ಇಡೀ ರಾಜ್ಯ ಶೋಕ ಸಾಗರದಲ್ಲಿ ಮುಳುಗಿದೆ. ಈ ನಡುವೆ ರಿಪ್ಪನ್ಪೇಟೆ ನಗರ ಸಂಪೂರ್ಣ ಬಂದ್ ಆಗಿದೆ. ಎಲ್ಲಾ ವ್ಯಾಪಾರಸ್ಥರು ತಮ್ಮ ಅಂಗಡಿ ಬಂದ್ ಮಾಡಿದ್ದು, ಪಟ್ಟಣ ಖಾಲಿ ಖಾಲಿಯಾಗಿದೆ. ಪಟ್ಟಣದ ಸರ್ಕಲ್ನಲ್ಲಿ ಪುನೀತ್ ರಾಜ್‍ಕುಮಾರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅಂತಿಮ ನಮನ ಸಲ್ಲಿಸಲಾಗಿದೆ. ಪಟ್ಟಣದ ಮೆಡಿಕಲ್ ಶಾಪ್ಗಳನ್ನು ಹೊರತುಪಡಿಸಿ ಉಳಿದೆಲ್ಲಾ ಅಂಗಡಿ ಬಂದ್ ಮಾಡಲಾಗಿದ್ದು, ಕೇವಲ ಬೆರಳೆಣಿಕೆಯ ಬಸ್ ಸಂಚಾರ ಮಾಡುತ್ತಿವೆ. ಕನ್ನಡ ಚಲನಚಿತ್ರರಂಗದ ಮೇರುನಟ ಪವರ್ ಸ್ಟಾರ್ ಪುನೀತ್…