ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ಹೊಸನಗರ ಉಪ ವಿಭಾಗದ ರಿಪ್ಪನ್ ಪೇಟೆ ಶಾಖೆಯಲ್ಲಿ ತುರ್ತು ನಿರ್ವಹಣೆ ಇರುವುದರಿಂದ ನಾಳೆ (31-05-2022) ರಿಪ್ಪನ್‌ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಿರುತ್ತದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ರಿಪ್ಪನ್‌ಪೇಟೆ ಸೇರಿದಂತೆ ಪಟ್ಟಣದ ಸುತ್ತಮುತ್ತಲಿನ ಹಳ್ಳಿಗಳಾದ ಕೆಂಚನಾಲ,ಹೆದ್ದಾರಿಪುರ, ಬೆಳ್ಳೂರು,ಗರ್ತಿಕೆರೆ,ಅರಸಾಳು,ಕೋಡೂರು ಮತ್ತು ಚಿಕ್ಕ ಜೇನಿ ಗ್ರಾಮಗಳಲ್ಲಿ ನಾಳೆ ಬೆಳಿಗ್ಗೆ  9-30 ರಿಂದ ಸಂಜೆ 6 ರವರೆಗೆ  ವಿದ್ಯುತ್ ವ್ಯತ್ಯಯ ಇರುತ್ತದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ

Read More

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಯುವತಿಗೆ ಸನ್ಮಾನಿಸಿದ ವೀರಶೈವ-ಲಿಂಗಾಯತ ಪರಿಷತ್

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 616 ಅಂಕ ಪಡೆದು ಅದ್ವಿತೀಯ ಸಾಧನೆಗೈದ ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹುಗುಡಿ ಗ್ರಾಮದ ರೈತ ಕುಟುಂಬದ ಕುಮಾರಿ ಸ್ಪಂದನ ಷಣ್ಮುಖಪ್ಪನವರಿಗೆ ಹೊಸನಗರ ತಾಲ್ಲೂಕ್ ವೀರಶೈವ-ಲಿಂಗಾಯಿತ ಪರಿಷತ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಭಾನುವಾರ ವೀರಶೈವ – ಲಿಂಗಾಯತ ಪರಿಷತ್ ತಾಲೂಕ್ ಅಧ್ಯಕ್ಷರಾದ ಆನಂದ್ ಮೆಣಸೆ ರವರು ಹಾಗೂ ಪದಾಧಿಕಾರಿಗಳು ಸ್ಪಂದನ ಷಣ್ಮುಖಪ್ಪ ರವರ ಮನೆಗೆ ತೆರಳಿ ಪ್ರೋತ್ಸಾಹ ಧನ ನೀಡಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಹೊಸನಗರ ತಾ.ಪಂ.ಮಾಜಿ ಅಧ್ಯಕ್ಷರಾದ…

Read More

ರಿಪ್ಪನ್‌ಪೇಟೆಯಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕಾರಿಣಿ ಸಮಾವೇಶ :

ರಿಪ್ಪನ್‌ಪೇಟೆ:ಸಂಘಟನಾತ್ಮಕ ಸಭೆಯನ್ನು ಬೂತ್ ಮಟ್ಟದಲ್ಲಿ ಸರ್ವಸ್ಪರ್ಶಿ ಸರ್ವವ್ಯಾಪಿ ಕಾರ್ಯಕ್ರಮದ ಸದುಪಯೋಗವನ್ನು ಕಾರ್ಯಕರ್ತರು ಮತದಾರರಿಗೆ ಮನನ ಮಾಡಬೇಕು.ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಸ್ನೇಹಿ ಕಾರ್ಯಕ್ರಮಗಳನ್ನು ಮತದಾರರಿಗೆ ರೂಪಿಸುವ ಮಹಾತ್ಕಾರ್ಯವನ್ನು ಸಂಘಟನೆಗಳು ಮಾಡಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ ಡಿ ಮೇಘರಾಜ್ ಹೇಳಿದರು.  ರಿಪ್ಪನ್‌ಪೇಟೆ ಬಿಜೆಪಿ ಕಛೇರಿಯಲ್ಲಿ ಹುಂಚ-ಕೆರೆಹಳ್ಳಿ ಮಹಾಶಕ್ತಿಕೇಂದ್ರದವರು ಆಯೋಜಿಸಲಾಗಿದ ವಿಸ್ತಾರಕ ಯೋಜನೆಯ ಅವಲೋಕನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಹಿಂದಿನ ಅಟಲ್ ಬಿಹಾರಿ ವಾಜಪೇಯ ಸರ್ಕಾರದ ಅಭಿವೃದ್ಧಿ ಸಾಧನೆಗಳನ್ನು ತಿಳಿಸುವಲ್ಲಿ ವಿಫಲವಾದ ಕಾರಣ ಅಧಿಕಾರ…

Read More

ರಾಷ್ಟ್ರ ಮಟ್ಟದ ಹಾಕಿ ಕ್ರೀಡಾಪಟು ಪೂಜಿತ ಗೌಡ ರವರಿಗೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ಮತ್ತು ಒಕ್ಕಲಿಗರ ಯುವ ವೇದಿಕೆ ವತಿಯಿಂದ ಸನ್ಮಾನ :

ರಿಪ್ಪನ್‌ಪೇಟೆ : ರಾಷ್ಟ್ರ ಮಟ್ಟದ ಹಾಕಿ ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ತೋರಿ ಮಿಂಚುತ್ತಿರುವ ಪಟ್ಟಣದ ಬರುವೆ ಗ್ರಾಮದ ಅಪ್ರತಿಮ ಹಾಕಿ ಕ್ರೀಡಾಪಟು ಪೂಜಿತ ಗೌಡಳಿಗೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇಂದು ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಹಲವಾರು ಸಮಸ್ಯೆಗಳ ಮಧ್ಯೆ ಸಾವಿರಾರು ಸ್ಪರ್ಧಾಳುಗಳ ಮಧ್ಯೆ ಸ್ಪರ್ಧಿಸಿ ಗೆದ್ದು ಜಿಲ್ಲಾ, ರಾಜ್ಯ,ಹಾಗೂ ರಾಷ್ಟ್ರಮಟ್ಟದಲ್ಲಿ ಸ್ಥಾನ ಪಡೆದುಕೊಂಡು ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ಅವಕಾಶ ಪಡೆದುಕೊಂಡ ನಮ್ಮೂರಿನ ಹೆಮ್ಮೆಯ…

Read More

ಹುಂಚ ಪತ್ತಿನ ಸಹಕಾರಿ ಬ್ಯಾಂಕ್ ಸಿಇಓ ರನ್ನು ನಿವೃತ್ತಿಗೊಳಿಸಲು ವಾರ್ಷಿಕ ಮಹಾಸಭೆಯಲ್ಲಿ ಒಕ್ಕೊರಲಿನ ನಿರ್ಧಾರ

ರಿಪ್ಪನ್‌ಪೇಟೆ: ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ವಹಣೆ ಸರಿಯಾಗಿ ಮಾಡದ ಕಾರ್ಯನಿರ್ವಾಹಣಾಧಿಕಾರಿಯನ್ನು ಕೂಡಲೇ ಹುದ್ದೆಯಿಂದ ನಿವೃತ್ತಿಗೊಳಿಸಿ ಸಂಸ್ಥೆ ಉಳಿಸಿ ಎಂಬ ಆಗ್ರಹವು ವಿಶೇಷ ಮಹಾಸಭೆಯಲ್ಲಿ ಸರ್ವಸದಸ್ಯರು ಒಕ್ಕೊರಲಾಗಿ ನಿರ್ಧರಿಸಿ ತನಿಖೆ ನಡೆಸುವಂತೆ ಆಗ್ರಹಿಸಿದರು. ಹುಂಚ ರಂಗರಾವ್ ಸ್ಮಾರಕ ಸಭಾಭವನದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿಯಮಿತದ 2020-21 ನೇ ಸಾಲಿನ ವಿಶೆಷ ಮಹಾಸಭೆಯಲ್ಲಿ ಸಂಘದ ಸಿಇಓ ಇವರ ಬೇಜವಾಬ್ದಾರಿಯ ಬಗ್ಗೆ ಆಕ್ಷೇಪವೆತ್ತಿದ ಸಂಘದ ಸದಸ್ಯರು 2020-21 ಸಾಲಿನ ಲೆಕ್ಕ ಪರಿಶೋಧನಾ ವರದಿ ಸಭೆಯಲ್ಲಿ…

Read More

ರಿಪ್ಪನ್‌ಪೇಟೆ ಪದವಿ ಕಾಲೇಜಿನ ಅಮೋಘ ಸಾಧನೆ : ಬಿ ಎ ವಿಭಾಗದಲ್ಲಿ ಎರಡು ರ‍್ಯಾಂಕ್ ಪಡೆದ ಕಾಲೇಜು

ರಿಪ್ಪನ್‌ಪೇಟೆ : ಕುವೆಂಪು ವಿಶ್ವವಿದ್ಯಾನಿಲಯ ೨೦೨೦-೨೧ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಗಳಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಎರಡು ರ‍್ಯಾಂಕ್ ಗಳನ್ನು ಪಡೆದಿದ್ದಾರೆ. ಬಿ.ಎ ವಿಭಾಗದಲ್ಲಿ ಕಾವ್ಯ ಸಿ 88.33% ಅಂಕ ಗಳಿಸುವುದರೊಂದಿಗೆ ಕುವೆಂಪು ವಿಶ್ವವಿದ್ಯಾಲಯದಲ್ಲಿ ಮೂರನೇ ರ‍್ಯಾಂಕ್ ಪಡೆದಿದ್ದರೆ, ಬಿ ಎ ವಿಭಾಗದಲ್ಲಿ ಸಿಂಧು ಜಿ 86.42% ಅಂಕ ಗಳಿಸಿ‌ ಒಂಬತ್ತನೆ ರ‍್ಯಾಂಕ್ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಚಂದ್ರಶೇಖರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ುವೆಂಪು ವಿಶ್ವವಿದ್ಯಾಲಯದ ಎರಡು ರ‍್ಯಾಂಕ್…

Read More

SSLC ಪಲಿತಾಂಶ : ರಿಪ್ಪನ್‌ಪೇಟೆಗೆ ಕೀರ್ತಿ ತಂದ ಪ್ರತಿಭಾನ್ವಿತರು

ರಿಪ್ಪನ್‍ಪೇಟೆ: ಎಸ್ ಎಸ್ ಎಲ್ ಸಿ ಪಲಿತಾಂಶದಲ್ಲಿ ರಿಪ್ಪನ್‌ಪೇಟೆಯ 55 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ಪಡೆದಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆ ಹಾಗೂ ಮೇರಿಮಾತ  ಮತ್ತು ರಾಮಕೃಷ್ಣ ಪ್ರೌಢಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ. ಸರ್ಕಾರಿ ಪ್ರೌಢಶಾಲೆ ರಿಪ್ಪನ್‌ಪೇಟೆ: ಶೇ. 64.42 ಫಲಿತಾಂಶ ಬಂದಿದ್ದು, ಉನ್ನತ ಶ್ರೇಣಿ 22, ಪ್ರಥಮ 56, ದ್ವಿತೀಯ 21,  ಉತ್ತೀರ್ಣ 6 ವಿದ್ಯಾರ್ಥಿಗಳು,   ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆ:  ಶೇ 88…

Read More

ಗ್ರಾಮ ಲೆಕ್ಕಾಧಿಕಾರಿ ವರ್ಷಿಣಿ ರವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ :

ರಿಪ್ಪನ್ ಪೇಟೆ ನಾಡಕಚೇರಿಯಲ್ಲಿ ಗ್ರಾಮಲೆಕ್ಕಾಧಿಕಾರಿಯಾಗಿ ಕೆಂಚನಾಲ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವರ್ಷಿಣಿ ರವರು ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ಕೆಂಚನಾಲ ಗ್ರಾಮ ಪಂಚಾಯಿತ್ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ವರ್ಷಿಣಿ ರವರು ಕಳೆದ 6 ವರ್ಷಗಳಿಂದ ಕೆಂಚನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮಲೆಕ್ಕಿಗರಾಗಿ ಕಾರ್ಯನಿರ್ವಹಿಸುತ್ತಿದ್ದು ಇದೀಗ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಗ್ರಾಮಕ್ಕೆ ವರ್ಗಾವಣೆಗೊಂಡಿದ್ದಾರೆ. ಇವರ ಅನುಪಮ ಸೇವೆ ಹಾಗೂ ಕರ್ತವ್ಯಕ್ಕೆ ಗೌರವಸೂಚಕವಾಗಿ ಇಲ್ಲಿನ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಅಧಿಕಾರಿ ವರ್ಗದವರು ಇಂದು ವರ್ಷಿಣಿ ರವರಿಗೆ ಸನ್ಮಾನಿಸಿ ಗೌರವಯುತವಾಗಿ ಬೀಳ್ಕೊಟ್ಟಿದ್ದಾರೆ. ಈ…

Read More

ರಿಪ್ಪನ್‌ಪೇಟೆಯ ಗಾನ ಪ್ರತಿಭೆಗೆ ಗೃಹ ಸಚಿವರಿಂದ ಸನ್ಮಾನ :

ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ಸಭಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಿಪ್ಪನ್ ಪೇಟೆಯ ಯುವ ಗಾನ ಪ್ರತಿಭೆ ಪ್ರಣತಿ ಅಣ್ಣಪ್ಪನವರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಸನ್ಮಾನಿಸಿ ಗೌರವಿಸಿದರು. ತೀರ್ಥಹಳ್ಳಿಯಲ್ಲಿ ನಡೆದ ಶಬ್ದ ಟ್ರಸ್ಟ್ ನ ಹಾಗೂ ವಿದ್ಯಾ ಸಿರಿ ಸಂಸ್ಥೆ ಅವರ  ಸಹ ಯೋಗದೊಂದಿಗೆ ನಡೆದ 50 ಶಾಲೆಗಳಿಗೆ ನೋಟ್ ಬುಕ್ ವಿತರಣೆ ,ನುಡಿನಮನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಚಿಕ್ಕವಯಸ್ಸಿನಲ್ಲೇ ಅದ್ಭುತ ಸಾಧನೆ ತೋರಿದ ತನ್ನ ಕಂಠಸಿರಿಯಿಂದ ಗಾಯನ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿ ಸಂಗೀತ…

Read More

ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ :

ರಿಪ್ಪನ್‌ಪೇಟೆ: ಜ್ಯಾತ್ಯಾತೀತ ಜನತಾದಳ ಪಕ್ಷದ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಜೆಡಿಎಸ್ ರಾಜ್ಯ ಮುಖಂಡ ಆರ್.ಎ. ಚಾಬುಸಾಬ್ ಚಾಲನೆ ನೀಡಿದರು. ನಂತರ ಮಾತನಾಡಿ ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದಿಂದ ಹತ್ತು ಸಾವಿರ ಸದಸ್ಯತ್ವ ನೋಂದಣಿಮಾಡಿ ಪಕ್ಷ ಬಲಪಡಿಸಿ ಮುಂಬರುವ ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧವೊಡ್ಡುವ ಸವಾಲಿದ್ದು ಮುಂದಿನ ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಜನಪರ ಕಾರ್ಯಕ್ರಮಗಳ ಬಗ್ಗೆ ಜನತೆಗೆ ತಲುಪಿಸುವ ಕಾರ್ಯ ಮಾಡಬೇಕು ಎಂದರು. 2023 ರಲ್ಲಿ ಜೆಡಿಎಸ್…

Read More