ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ :
ರಿಪ್ಪನ್ಪೇಟೆ: ಜ್ಯಾತ್ಯಾತೀತ ಜನತಾದಳ ಪಕ್ಷದ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಜೆಡಿಎಸ್ ರಾಜ್ಯ ಮುಖಂಡ ಆರ್.ಎ. ಚಾಬುಸಾಬ್ ಚಾಲನೆ ನೀಡಿದರು. ನಂತರ ಮಾತನಾಡಿ ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದಿಂದ ಹತ್ತು ಸಾವಿರ ಸದಸ್ಯತ್ವ ನೋಂದಣಿಮಾಡಿ ಪಕ್ಷ ಬಲಪಡಿಸಿ ಮುಂಬರುವ ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧವೊಡ್ಡುವ ಸವಾಲಿದ್ದು ಮುಂದಿನ ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಜನಪರ ಕಾರ್ಯಕ್ರಮಗಳ ಬಗ್ಗೆ ಜನತೆಗೆ ತಲುಪಿಸುವ ಕಾರ್ಯ ಮಾಡಬೇಕು ಎಂದರು. 2023 ರಲ್ಲಿ ಜೆಡಿಎಸ್…