ಕ್ರೈಂ ಸುದ್ದಿ:
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 23 ವರ್ಷದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 23 ವರ್ಷದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಶಿವಮೊಗ್ಗ : 15 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಶಿಕಾರಿಪುರ ತಾಲ್ಲೂಕಿನ ನಿವಾಸಿ 23 ವರ್ಷದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ 20 ವರ್ಷ ಕಠಿಣ ಕಾರಾಗೃಹ ವಾಸ ಶಿಕ್ಷೆ ಹಾಗೂ ₹50 ಸಾವಿರದ ದಂಡ ವಿಧಿಸಿದೆ. 2023ರಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ನಡೆದಿತ್ತು. ಈ ಬಗ್ಗೆ ನೊಂದ ಬಾಲಕಿ ಶಿರಾಳಕೊಪ್ಪ ಪೊಲೀಸ್…
Sagara | ಮನೆ ಮುಂದೆ ಕಸ ಗುಡಿಸುತಿದ್ದ ಮಹಿಳೆಯ ಕೊರಳಿಗೆ ಕೈ ಹಾಕಿ ಲಕ್ಷಾಂತರ ರೂ ಸರ ಎಗರಿಸಿ ಪರಾರಿಯಾದ ಕಳ್ಳ
Sagara | ಮನೆ ಮುಂದೆ ಕಸ ಗುಡಿಸುತಿದ್ದ ಮಹಿಳೆಯ ಕೊರಳಿಗೆ ಕೈ ಹಾಕಿ ಲಕ್ಷಾಂತರ ರೂ ಸರ ಎಗರಿಸಿ ಪರಾರಿಯಾದ ಕಳ್ಳ ಸಾಗರ : ಮನೆ ಮುಂದೆ ಕಸ ಗುಡಿಸುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಬಂದು ಮಹಿಳೆಯರೋರ್ವರ ಬಂಗಾರದ ತಾಳಿ ಸರವನ್ನು ಕಿತ್ತು ಪರಾರಿಯಾದ ಘಟನೆ ಗುರುವಾರ ನಗರ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಅಗ್ರಹಾರ ಮೊದಲನೇ ತಿರುವಿನಲ್ಲಿರುವ ಗಣೇಶ ವೈದ್ಯರವರ ಹೆಂಡತಿ ಲೀಲಾ ರವರು ಬೆಳಿಗ್ಗೆ ಮನೆ ಮುಂದೆ ಕಸ ಗುಡಿಸುವಾಗ ಹಿಂಬದಿಯಿಂದ ಬಂದ ಆಗಂತುಕ ಈ ಕೃತ್ಯ…
ತೆಪ್ಪ ಮುಳುಗಿ ನೀರುಪಾಲಾಗಿದ್ದ ಮೂವರು ಯುವಕರ ಮೃತದೇಹ ಪತ್ತೆ | Crime News
ತೆಪ್ಪ ಮುಳುಗಿ ನೀರುಪಾಲಾಗಿದ್ದ ಮೂವರು ಯುವಕರ ಮೃತದೇಹ ಪತ್ತೆ ಎನ್.ಆರ್.ಪುರ ತಾಲೂಕಿನ ಬೈರಾಪುರದ ಭದ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ನೀರುಪಾಲಾಗಿದ್ದ ಶಿವಮೊಗ್ಗ ಮೂಲದ ಮೂವರ ಮೃತದೇಹ ಗುರುವಾರ ಪತ್ತೆಯಾಗಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ನಿವಾಸಿಗಳಾದ ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಎಂದು ಗುರುತಿಸಲಾಗಿದೆ. ಬುಧವಾರ ಶಿವಮೊಗ್ಗದ ವಿದ್ಯಾನಗರದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು ಜಿಲ್ಲೆಯ ಬೈರಾಪುರದಲ್ಲಿರುವ ಭದ್ರಾ ಹಿನ್ನೀರಿನ ಬಳಿ ಬಂದಿದ್ದಾರೆ, ಈ ವೇಳೆ ನಾಲ್ವರಲ್ಲಿ ಮೂವರು ತೆಪ್ಪದಲ್ಲಿ ತೆರಳಿದ್ದಾರೆ ಓರ್ವ ಮಾತ್ರ ದಡದಲ್ಲಿ ನಿಂತಿದ್ದ ಎನ್ನಲಾಗಿದೆ…
ಫೇಸ್ಬುಕ್ ನಲ್ಲಿ ಪ್ರಾರಂಭವಾದ ಲವ್ ಸ್ಟೋರಿ ಕೊಲೆಯಲ್ಲಿ ಅಂತ್ಯ – ಆನ್ ಲೈನ್ ಪ್ರೇಮಿಗಳು ನೋಡಲೇಬೇಕಾದ ಸ್ಟೋರಿ
ಫೇಸ್ಬುಕ್ ನಲ್ಲಿ ಪ್ರಾರಂಭವಾದ ಲವ್ ಸ್ಟೋರಿ ಕೊಲೆಯಲ್ಲಿ ಅಂತ್ಯ – ಆನ್ ಲೈನ್ ಪ್ರೇಮಿಗಳು ನೋಡಲೇಬೇಕಾದ ಸ್ಟೋರಿ ಫೇಸ್ ಬುಕ್ ನಲ್ಲಿ ಆರಂಭವಾದ ಮಹಿಳೆ ಹಾಗೂ ಯುವಕನ ನಡುವಿನ ಲವ್ ಸ್ಟೋರಿ ಕೃಷ್ಣಾನದಿ ದಡದಲ್ಲಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಮೂಲದ ಮಮತಾ (48) ಕೊಲೆಯಾದ ಮಹಿಳೆ. ರೇವಣಸಿದ್ದಯ್ಯ (26) ಮಹಿಳೆಯನ್ನು ಕೊಂದ ಯುವಕ. ಪತಿಯನ್ನು ಕಳೆದುಕೊಂಡಿದ್ದ ಮಹಿಳೆ ಮಮತಾಳಿಗೆ ಫೇಸ್ ಬುಕ್ ನಲ್ಲಿ ವಿಜಯಪುರ ಮೂಲದ ಯುವಕ ರೇವಣಸಿದ್ದಯ್ಯನ ಪರಿಚಯವಾಗಿದೆ.ಪರಿಚಯ, ಸ್ನೇಹವಾಗಿ ಪ್ರೀತಿಗೆ ತಿರುಗಿದೆ….
ಭದ್ರಾ ಹಿನ್ನೀರಿನಲ್ಲಿ ಮೂವರು ಯುವಕರು ನೀರುಪಾಲು | Youth drowned in water
ಭದ್ರಾ ಹಿನ್ನೀರಿನಲ್ಲಿ ಮೂವರು ಯುವಕರು ನೀರುಪಾಲು | Youth drowned in water ಭದ್ರಾ ಹಿನ್ನೀರಿನಲ್ಲಿ ಮುಳುಗಿ ಮೂವರು ನೀರು ಪಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ(N.R Pura) ತಾಲೂಕಿನ ಬೈರಾಪುರ ಗ್ರಾಮದ ಬಳಿ ನಡೆದಿದೆ. ತೆಪ್ಪದಲ್ಲಿ ಮೂವರು ಯುವಕರು ಭದ್ರಾ ಹಿನ್ನೀರಿನಲ್ಲಿ ತೆರಳಿದ್ದರು. ಈ ವೇಳೆ ದುರ್ಘಟನೆ ನಡೆದಿದ್ದು, ನಾಪತ್ತೆಯಾದವರು ಶಿವಮೊಗ್ಗ ಮೂಲದ ಅಫ್ದಾಖಾನ್, ಆದೀಲ್ ಹಾಗೂ ಸಾಜೀದ್ ಎಂದು ತಿಳಿದುಬಂದಿದೆ. ಇದೀಗ ಎನ್.ಆರ್ ಪುರ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ…
Crime News | ವಿಷ ಸೇವಿಸಿ ಯುವಕ ಆತ್ಮಹತ್ಯೆ!
ಬೆಟ್ಟಮಕ್ಕಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ! ತೀರ್ಥಹಳ್ಳಿ : ಮನೆಯಲ್ಲಿ ನೇಣು ಬಿಗಿದುಕೊಳ್ಳಲು ಪ್ರಯತ್ನ ಪಟ್ಟು ನಂತರ ವಿಷ ಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಟ್ಟಮಕ್ಕಿಯಲ್ಲಿ ನಡೆದಿದೆ. ಬೆಟ್ಟಮಕ್ಕಿಯ ನಿವಾಸದಲ್ಲಿ ವಿಖ್ಯಾತ್ ( 38 ) ವರ್ಷ ಆತ್ಮಹತ್ಯೆ ಮಾಡಿಕೊಂಡ ಯುವಕ. ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈತ ಇತ್ತೀಚಿಗೆ ಮನೆಗೆ ಬಂದಿದ್ದ. ಈತನ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಜಯಚಾಮರಾಜೇಂದ್ರ ಆಸ್ಪತ್ರೆಗೆ ರವಾನಿಸಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…
ರೈಲಿಗೆ ತಲೆ ಕೊಟ್ಟು ವ್ಯಕ್ತಿಯ ಆತ್ಮಹತ್ಯೆ | Crime News
ರೈಲಿಗೆ ತಲೆ ಕೊಟ್ಟು ವ್ಯಕ್ತಿಯ ಆತ್ಮಹತ್ಯೆ | Crime News ಶಿವಮೊಗ್ಗದ ವಿದ್ಯಾನಗರ ಸಮೀಪ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ವಿದ್ಯಾನಗರದ ರೈಲ್ವೆ ನಿಲ್ದಾಣದ ಬಳಿ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಳೇ ಗುರುಪುರದ ಬಾಲಾಜಿ(40) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದ್ದು,ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಾಜಿ ಸೋಮವಾರ ಮಧ್ಯಾಹ್ನ ಮನೆ ಸಮೀಪ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಮಶಾನದಲ್ಲಿ ಕುಡಿದ ಮತ್ತಿನಲ್ಲಿ ಸ್ನೇಹಿತರಿಬ್ಬರ ನಡುವೆ ಕಿರಿಕ್ – ಓರ್ವನ ಕೊಲೆಯಲ್ಲಿ ಅಂತ್ಯ | Crime News
ಸ್ಮಶಾನದಲ್ಲಿ ಕುಡುಕ ಸ್ನೇಹಿತರಿಬ್ಬರ ನಡುವೆ ಕಿರಿಕ್ – ಓರ್ವನ ಕೊಲೆಯಲ್ಲಿ ಅಂತ್ಯ | Crime News ಸ್ಮಶಾನದಲ್ಲಿ ಮದ್ಯ ಸೇವಿಸುತ್ತಿದ್ದಾಗ ಇಬ್ಬರು ಸ್ನೇಹಿತರ ನಡುವೆ ಗಲಾಟೆಯಾಗಿ ಕೊಲೆಯಿಂದ ಅಂತ್ಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಗೇಟ್ ಸಮೀಪದ ಸ್ಮಶಾನದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಜೆ.ಪಿ.ನಗರದ ನಿವಾಸಿ ರಾಜುನಾಯ್ಕ ಎನ್ನಲಾಗಿದೆ. ರಾಜುನಾಯ್ಕ ತನ್ನ ಸ್ನೇಹಿತ ವಿಕ್ರಮ್ ಜೊತೆಗೆ ಕಳೆದ ರಾತ್ರಿ ಸ್ಮಶಾನದಲ್ಲಿ ಮದ್ಯ ಸೇವಿಸುತ್ತಿದ್ದ. ಈ ಸಂದರ್ಭ ಯಾವುದೋ ವಿಚಾರವಾಗಿ ಇಬ್ಬರ ನಡುವೆ ಚಿಕ್ಕ ಗಲಾಟೆಯಾಗಿದೆ. ನಂತರ ಮಾತಿಗೆ…
Sagara | ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ
Sagara | ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ ಸಾಗರ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪದಡಿಯಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 790 ಗ್ರಾಂ ಒಣ ಗಾಂಜಾವನ್ನ ವಶಪಡಿಸಿಕೊಳ್ಳಲಾಗಿದೆ. ಸಾಗರ ಟೌನ್ ಎಳ್ಳಾರೆ ಕ್ರಾಸ್ ನ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಎಸ್ಪಿ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮಾರೆಡ್ಡಿ, ಮತ್ತು …
Ripponpete | ನಾಗರಹಳ್ಳಿಯಲ್ಲಿ ಕಾಡುಕೋಣಗಳ ಮಾರಣಹೋಮ – ಮಲೆನಾಡಿನಲ್ಲಿ ಶಬ್ದ ಮಾಡುತ್ತಿರುವ ಕಳ್ಳ ಬಂದೂಕುಗಳು
Ripponpete | ನಾಗರಹಳ್ಳಿಯಲ್ಲಿ ಕಾಡುಕೋಣಗಳ ಮಾರಣಹೋಮ – ಮಲೆನಾಡಿನಲ್ಲಿ ಶಬ್ದ ಮಾಡುತ್ತಿರುವ ಕಳ್ಳ ಬಂದೂಕುಗಳು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವ್ಯಾಪ್ತಿಯ ನಾಗರಹಳ್ಳಿ ಗ್ರಾಮದಲ್ಲಿ ಕಾಡು ಕೋಣಗಳ ಮಾರಣಹೋಮ ನಡೆದಿರುವ ಬಗ್ಗೆ ವರದಿಯಾಗಿದೆ. ಹುಂಅ ವ್ಯಾಪ್ತಿಯ ನಾಗರಹಳ್ಳಿ ವ್ಯಾಪ್ತಿಯಲ್ಲಿ ಕೆಲವು ಕಿಡಿಗೇಡಿಗಳು ನಾಲ್ಕಕ್ಕೂ ಹೆಚ್ಚು ಕಾಡುಕೋಣಗಳನ್ನು ಅಕ್ರಮ ಬಂದೂಕು ಬಳಸಿ ಹತ್ಯೆಗೈದಿದ್ದಾರೆ,ಈ ಭಾಗದಲ್ಲಿ ಹತ್ತಕ್ಕೂ ಹೆಚ್ಚು ಕಾಡುಕೋಣಗಳು ಕೆಲವೊಮ್ಮೆ ಪ್ರತ್ಯಕ್ಷಗೊಳ್ಳುತಿದ್ದವು ಆದರೆ ಈಗ ಗುಂಪಿನಲ್ಲಿ ನಾಲ್ಕೈದು ಮಾತ್ರ ಇದೆ ಕಾಡುಕೋಣಗಳ ಮಾರಣಹೋಮವೇ ನಡೆದಿದೆ ಎಂಬ ಆರೋಪ…