ಕ್ರೈಂ ಸುದ್ದಿ:
Accident | ಜೋಗ ಸಮೀಪದಲ್ಲಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ – ಇಬ್ಬರು ಸಾವು ,30 ಜನರಿಗೆ ಗಂಭೀರ
Accident | ಜೋಗ ಸಮೀಪದಲ್ಲಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ – ಇಬ್ಬರು ಸಾವು ,30 ಜನರಿಗೆ ಗಂಭೀರ ಶಿವಮೊಗ್ಗ ಜಿಲ್ಲೆಯ ಗಡಿಭಾಗ ಗೇರುಸೊಪ್ಪದಲ್ಲಿ ಬ್ರೇಕ್ ಫೇಲ್ ಆಗಿ ಬಸ್ಸೊಂದು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಬಸ್ ನಲ್ಲಿದ್ದ 30 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.ಜೋಗ ಸಮೀಪದ ಗೇರುಸೊಪ್ಪದ ಸುಳಿಮಕ್ಕಿ ಕ್ರಾಸ್ನಲ್ಲಿ ಘಟನೆ ಸಂಭವಿಸಿದೆ. ಪ್ರವಾಸಕ್ಕೆಂದು 2 ಬಸ್ನಲ್ಲಿ ಬಂದಿದ್ದ ಗೌರಿಬಿದನೂರು ತಾಲೂಕಿನ ಗದರೆ- ಮಲಸಂದ್ರದ ಗ್ರಾಮಸ್ಥರು…
Accident | ಅಂದಾಸುರ ರೈಲ್ವೆ ಗೇಟ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು
Accident | ಅಂದಾಸುರ ರೈಲ್ವೆ ಗೇಟ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು ಆನಂದಪುರ : ಇಲ್ಲಿನ ಅಂದಾಸುರ ರೈಲ್ವೆ ಗೇಟ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಹೊಸನಗರ ಸಮೀಪದ ಮಾವಿನಕೊಪ್ಪದ ನಾಗರಾಜ್ (35) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ನಡೆದಿದ್ದೇನು..??? ಆನಂದಪುರದಲ್ಲಿ ವೈರಿಂಗ್ ಕೆಲಸ ನೋಡಿಕೊಂಡು ಬರಲು ಮಾವಿನಕೊಪ್ಪದಿಂದ ಸಂಜೆ 7.00 ಸುಮಾರಿಗೆ ಆನಂದಪುರಕ್ಕೆ ಕೆಎ-14-ವೈ-4562 ಬಜಾಜ್…
Ripponpete | ಬಸವಾಪುರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಸವಾಪುರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ನಡೆದಿದೆ. ಬಸವಾಪುರ ಗ್ರಾಮದ ತಿಮ್ಮಪ್ಪ (58) ಮೃತ ವ್ಯಕ್ತಿಯಾಗಿದ್ದಾರೆ. ಇಂದು ಬೆಳಗ್ಗೆ ತಮ್ಮ ಮನೆ ಸಮೀಪದ ಕಾಡಿಗೆ ದರಗು ತರಲು ಹೋದ ವೇಳೆ ಈ ಘಟನೆ ನಡೆದಿದೆ. ಪತ್ನಿ ಮತ್ತು ಮಕ್ಕಳು ಈ ಸಂಧರ್ಭದಲ್ಲಿ ಆನೆ ದಾಳಿಯಿಂದ ಪಾರಾಗಿದ್ದಾರೆ ಎನ್ನಲಾಗುತ್ತಿದೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ ರಿಪ್ಪನ್‌ಪೇಟೆ ಪೊಲೀಸ್ ಠಾಣಾ…
Accident | ತೀರ್ಥಹಳ್ಳಿಯ ಕುಡುಮಲ್ಲಿಗೆ ಬಳಿ ಕಾರುಗಳ ಮುಖಾಮುಖಿ ಡಿಕ್ಕಿ – ಮಹಿಳೆ ಸಾವು
Accident | ತೀರ್ಥಹಳ್ಳಿಯ ಕುಡುಮಲ್ಲಿಗೆ ಬಳಿ ಕಾರುಗಳ ಮುಖಾಮುಖಿ ಡಿಕ್ಕಿ – ಮಹಿಳೆ ಸಾವು ತೀರ್ಥಹಳ್ಳಿ : ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಿದ ಘಟನೆ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಶಂಶಾದ್ ಬಾನು (50) ಮೃತ ಮಹಿಳೆ. ಸಲಾಂ ಸಾಬ್, ಆಸಿಫ್ ಅಲಿ ಮತ್ತು ಸತ್ತಾರ್ ಎಂಬುವವರಿಗೆ ಗಾಯಗಳಾಗಿವೆ. ಇವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸಲಾಂ ಸಾಬ್ ಎಂಬುವರನ್ನು…
Ripponpete | ಮಾರುತಿ ಓಮಿನಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ
Ripponpete | ಮಾರುತಿ ಓಮಿನಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ ರಿಪ್ಪನ್‌ಪೇಟೆ : ಇಲ್ಲಿನ 18ನೇ ಮೈಲಿಕಲ್ಲು ಸಮೀಪದಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಚಾಲಕನ ಕಾಲು ಮುರಿದಿರುವ ಘಟನೆ ಗುರುವಾರ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಕಲ್ಲುಕೊಪ್ಪ ಗ್ರಾಮದ ಸತೀಶ್ ಗೌಡ ಎಂಬುವವರಿಗೆ ಗಂಭೀರ ಗಾಯಗಳಾಗಿದೆ. 18ನೇ ಮೈಲಿಕಲ್ಲಿನ ಬಳಿಯಲ್ಲಿ ಮಾರುತಿ ಓಮಿನಿ ಕಾರು ಹಾಗೂ ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ…
ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail
ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬರ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿರುವ ವಿಚಿತ್ರ ಘಟನೆ ನಡೆದಿದೆ. ಶಿವಮೊಗ್ಗದ ರಾಜೀವಗಾಂಧಿ ಬಡಾವಣೆ ನಿವಾಸಿ ಪರಶುರಾಮ ಅಲಿಯಾಸ್ ಚಿಂಗಾರಿಗೆ ಹೊಟ್ಟೆನೋವಿನ ಕಾರಣಕ್ಕೆ ಮಾ.28 ರಂದು ಕಾರಾಗೃಹದ ಒಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.ಅದರೆ ಹೊಟ್ಟೆನೋವು ಜಾಸ್ತಿ ಆದ ಕಾರಣ ಶಿವಮೊಗ್ದದ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಕರೆತರಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಪರಶುರಾಮ ಕಲ್ಲು ನುಂಗಿರಬಹುದು…
Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ ಕೋಣಂದೂರು ಸಮೀಪದ ಹುಂಚದ ಕಟ್ಟೆ ಗ್ರಾಮದ ತಿರುವಿನಲ್ಲಿ ನಡೆದಿದೆ. ಮಾರುತಿ ಬ್ರೀಜಾ ಕಾರಿನಲ್ಲಿ ಮೂವರು ಪ್ರಯಾಣಿಸುತಿದ್ದರನ್ನು ಎನ್ನಲಾಗುತಿದೆ, ಹುಂಚದಕಟ್ಟೆ -ಕೋಣಂದೂರು ಮಾರ್ಗ ಮಧ್ಯದ ತಿರುವಿನಲ್ಲಿ ಶನಿವಾರ ರಾತ್ರಿ 12.30 ಸುಮಾರಿಗೆ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ತುಂಬಾ ಅಪಾಯಕಾರಿಯಾದ ಈ ತಿರುವಿನಲ್ಲಿ ಕಾರು ಚಾಲಕ ನಿಯಂತ್ರಣ ಕಳೆದುಕೊಂಡ ಹಿನ್ನಲೆಯಲ್ಲಿ ಕಾರು ಮೂರು…
Anandapura | ಬೈಕ್ ಗೆ ಜೆಸಿಬಿ ಡಿಕ್ಕಿ – ಓರ್ವ ಸಾವು ಇನ್ನೋರ್ವ ಗಂಭೀರ..!!
Anandapura | ಬೈಕ್ ಗೆ ಜೆಸಿಬಿ ಡಿಕ್ಕಿ – ಓರ್ವ ಸಾವು ಇನ್ನೋರ್ವ ಗಂಭೀರ ಸಾಗರ ತಾಲೂಕಿನ ಆನಂದಪುರದಲ್ಲಿ ಬೈಕ್ ಗೆ ಜೆಸಿಬಿ ಡಿಕ್ಕಿಯಾದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು ಇನ್ನೋರ್ವನ ಪರಿಸ್ಥಿತಿ ಗಂಭೀರವಾಗಿದೆ. ಆನಂದಪುರದ ಕೆರೆ ಏರಿ ಸಮೀಪ ಯುವಕರು ಬೈಕ್ ನಲ್ಲಿ ಚಲಿಸುತ್ತಿದ್ದಾಗ ಹೆದ್ದಾರಿ ರಸ್ತೆಗೆ ಜೆಸಿಬಿ ಚಾಲಕ ಏಕಾಏಕಿ ಬಂದ ಹಿನ್ನಲೆಯಲ್ಲಿ ಜೆಸಿಬಿಯ ಮುಂಭಾಗ ಚಲಿಸುತ್ತಿದ್ದ ವಾಹನ ಸವಾರರಿಗೆ ತಿವಿದಿದ್ದು ಇಬ್ಬರು ಸವಾರರ ಪರಿಸ್ಥಿತಿ ಗಂಭೀರವಾಗಿದ್ದ ಕಾರಣ ತಕ್ಷಣ ಸ್ಥಳೀಯರು ಆನಂದಪುರದ ಆಸ್ಪತ್ರೆಗೆ…
ಕಾಡು ಪ್ರಾಣಿ ಅಡ್ಡ ಬಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಜೀಪ್ – ರಿಪ್ಪನ್‌ಪೇಟೆಯ ಪ್ರಭೀನ್ ಸಾವು | accident
ಏಕಾಏಕಿ ಕಾಡು ಪ್ರಾಣಿ ಅಡ್ಡ ಬಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಜೀಪ್ – ರಿಪ್ಪನ್‌ಪೇಟೆಯ ಪ್ರಭೀನ್ ಸಾವು | accident ರಿಪ್ಪನ್‌ಪೇಟೆ : ಕಾಡು ಪ್ರಾಣಿ ಅಡ್ಡ ಬಂದ ಹಿನ್ನಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಜಿಪ್ಸಿ ಜೀಪ್ ಮರಕ್ಕೆ ಡಿಕ್ಕಿಯಾಗಿ ಪಟ್ಟಣದ ಪ್ರಭೀನ್ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ರಿಪ್ಪನ್‌ಪೇಟೆ ಸಮೀಪದ ತಳಲೆ ಗ್ರಾಮದ ನಿವಾಸಿ ಪ್ರಬೀನ್ (45) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ಪ್ರಭೀನ್ ಪಟ್ಟಣದ ಗುಡ್ ಶೆಪರ್ಡ್ ಚರ್ಚ್ ನ…
ಬೈಕ್ ಹಾಗೂ ಆಪೆ ನಡುವೆ ಅಪಘಾತ – ಬೈಕ್ ಸವಾರನ ಕೈ ಕಟ್ , ಸ್ಥಳದಲ್ಲಿಯೇ ಸಾವು | accident
ಬೈಕ್ ಹಾಗೂ ಆಪೆ ನಡುವೆ ಅಪಘಾತ – ಬೈಕ್ ಸವಾರನ ಕೈ ಕಟ್ , ಸ್ಥಳದಲ್ಲಿಯೇ ಸಾವು | accident ಆಪೆ ಗಾಡಿಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಗಾಜನೂರು ಬಳಿಯಲ್ಲಿ ನಡೆದಿದೆ. ಗಾಜನೂರು ಸಮೀಪದ ವೀರಾಪುರದ ಬಳಿಯ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಟೈಲ್ಸ್ ತುಂಬಿಕೊಂಡು ಬರುತ್ತಿದ್ದ ಆಪೆ ಗಾಡಿಗೆ ಬೈಕ್‌ವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಸೊರಬ ಮೂಲದವನೆಂದು…