Headlines

ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿ ‌ಮಹಡಿಯಿಂದ ಕೆಳಗೆ ಬಿದ್ದು ಸ್ಥಿತಿ ಗಂಭೀರ – ಒಂದೇ ದಿನ ನಡೆಯಿತು ಎರಡು ದುರ್ಘಟನೆ| Smg

ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿ ‌ಮಹಡಿಯಿಂದ ಕೆಳಗೆ ಬಿದ್ದು ಸ್ಥಿತಿ ಗಂಭೀರ – ಒಂದೇ ದಿನ ನಡೆಯಿತು ಎರಡು ದುರ್ಘಟನೆ ಶಿವಮೊಗ್ಗ : ಇಲ್ಲಿನ ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿಯೊಬ್ಬಳು ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ಕುವೆಂಪು ರಸ್ತೆಯ ಆದಿಚುಂಚನಗಿರಿ ಪಿಯು ಕಾಲೇಜಿನ ಕಟ್ಟಡದಿಂದ ವಿದ್ಯಾರ್ಥಿನಿ ಮೇಘನಾ ಕೆಳಗೆ ಬಿದ್ದು ಮೃತ ಪಟ್ಟ ಘಟನೆಯ ಬೆನ್ನಲ್ಲೆ ಮತ್ತೊಬ್ಬ ವಿದ್ಯಾರ್ಥಿಯು ಮಹಡಿ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಮೂಲತಃ ಚಿಕ್ಕಮಗಳೂರು…

Read More

Crime News | ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ – ಓರ್ವ ವಶಕ್ಕೆ

ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ ಕಾರ್ಮಿಕರಿಬ್ಬರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ. ಕೇರಳ ರಾಜ್ಯದ ಕಣ್ಣೂರು ಮೂಲದ ಶಿಜು(42) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಕೇರಳ ಮೂಲದ ವ್ಯಕ್ತಿಗಳು ರಬ್ಬರ್​ ತೋಟದಲ್ಲಿ ಕೆಲಸ ಮಾಡುತ್ತಿದ್ದರು.ಇವರ ನಡುವಿನ ಜಗಳ ಕೊಲೆಗೆ ಕಾರಣ ಎನ್ನಲಾಗುತ್ತಿದೆ.  ಘಟನೆ ಸಂಬಂಧ ಓರ್ವ ಆರೋಪಿಯನ್ನ ವಶಕ್ಕೆ ಪಡೆಯಲಾಗಿದೆ. ಘಟನೆಗೆ ವೈಯಕ್ತಿಕ ವಿಚಾರ ಕಾರಣವಾಗಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಕಾಲೇಜಿನ ಕಟ್ಟಡದಿಂದ ಕೆಳಗೆ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವು – ಕಾಲೇಜಿನ ಮುಂದೆ ಪೋಷಕರ ಆಕ್ರೋಶ | SMG

ಶಿವಮೊಗ್ಗ ಇಲ್ಲಿನ ಖಾಸಗಿ ಶಾಲೆಯೊಂದರ ವಿದ್ಯಾರ್ಥಿನಿಯೋರ್ವಳು ಶಾಲೆ ಕಟ್ಟದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಕುವೆಂಪು ರಸ್ತೆಯಲ್ಲಿರುವ ಆದಿಚುಂಚನಗಿರಿ ಪಿಯು ಕಾಲೇಜಿನಲ್ಲಿ ಈ ಅವಘಡ ನಡೆದಿದ್ದು ಮೇಘನಾ (18) ಪಿಯುಸಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.  ಮೃತ ವಿದ್ಯಾರ್ಥಿನಿ ಚನ್ನಗಿರಿ ತಾಲ್ಲೂಕು ಸಂತೆಬೆನ್ನೂರು ಮೂಲದವರಾಗಿದ್ದಾರೆ ಕಾಲೇಜಿನಲ್ಲಿ ಪರೀಕ್ಷೆ ನಡೆಯುತ್ತಿತ್ತು. ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ವಾಶ್ ರೂಂಗೆ ಹೋಗುವುದಾಗಿ ಹೇಳಿ ಹೋಗಿದ್ದರು ಎನ್ನಲಾಗಿದೆ. ಈ ವೇಳೆ ಸಿಬ್ಬಂದಿಯು ಅವರ ಜೊತೆಗಿದ್ದರು ಎಂಬ ಮಾಹಿತಿಯಿದೆ.  ಸದ್ಯ ಸ್ಥಳದಲ್ಲಿ ವಿದ್ಯಾರ್ಥಿನಿಯ ಕುಟುಂಬಸ್ಥರು ,ಸಂಬಂಧಿಗಳು  ಕಾಲೇಜಿನ…

Read More

Thirthahalli | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ

ತೀರ್ಥಹಳ್ಳಿಯ ಕುಶಾವತಿ ಬಳಿ ಎರಡು ಕಾರುಗಳ ನಡುವೆ ಅಪಘಾತ  ತೀರ್ಥಹಳ್ಳಿ : ಪಟ್ಟಣದ ಕುಶಾವತಿ ಸೇತುವೆ ಬಳಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಬ್ರೀಜಾ ಕಾರು ಹಾಗೂ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಸಿಯಾಜ್ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ.  ಒಂದು ಕಾರಿನ ಮುಂಭಾಗ ಹಾಗೂ ಮತ್ತೊಂದು ಕಾರಿನ ಬಲ ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಸಣ್ಣ ಪುಟ್ಟ ಗಾಯವಾಗಿದ್ದರಿಂದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ತೀರ್ಥಹಳ್ಳಿ…

Read More

ಆಸ್ತಿ ವಿಚಾರಕ್ಕೆ ಕಲಹ – ಪೆಟ್ರೋಲ್ ಸುರಿದು,ಬೆಂಕಿ ಹಚ್ಚಿ ಚಿಕ್ಕಪ್ಪನ ಕೊಲೆಗೈದ ದುರುಳರು |Crime News

ಆಸ್ತಿ ವಿಚಾರಕ್ಕೆ ಕಲಹ – ಪೆಟ್ರೋಲ್ ಸುರಿದು,ಬೆಂಕಿ ಹಚ್ಚಿ ಚಿಕ್ಕಪ್ಪನ ಕೊಲೆಗೈದ ದುರುಳರು ಶಿವಮೊಗ್ಗ : ಬೆಳಲಕಟ್ಟೆ ಗ್ರಾಮದಿಂದ ಮಗಳ ಮನೆಗೆ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಪೆಟ್ರೋಲ್ ಎರಚಿ ಜೀವಂತವಾಗಿ ಸುಟ್ಟಿರುವ ಘಟನೆ ನಡೆದಿದೆ. ಬೆಳಲಕಟ್ಟೆ ಗ್ರಾಮದ  ಮಹೇಶಪ್ಪ (60) ಕೊಲೆಯಾದ ವ್ಯಕ್ತಿ. ಬಿಕ್ಕೋನಹಳ್ಳಿಯ ಮಗಳ ಮನೆಯಿಂದ ಬರುತ್ತಿದ್ದ ವೇಳೆ ಅಡ್ಡಗಟ್ಟಿ ಪೆಟ್ರೋಲ್ ಎರಚಿ ಕೊಲೆ ಮಾಡಲಾಗಿದೆ. ಬೆಳಲಕಟ್ಟೆಯ ಕಾರ್ತಿಕ್ ಮತ್ತು ಕುಮಾರ್ ಎಂಬುವರಿಂದ ಈ ಕೃತ್ಯ ನೆಡೆದಿದೆ. ಮಹೇಶಪ್ಪನವರಿಗೆ ಬೆಳಲಕಟ್ಟೆಯಲ್ಲಿ ಮೂರು ಎಕರೆ ಜಮೀನು ಇದ್ದು ನ್ಯಾಯಾಲಯದಲ್ಲಿ…

Read More

Ripponpete | ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Ripponpete | ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು ರಿಪ್ಪನ್‌ಪೇಟೆ : ಬಣ್ಣ ಬಣ್ಣದ ಮಾತುಗಳನ್ನಾಡಿ ಯುವತಿಯನ್ನು ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯನ್ನು ರಿಪ್ಪನ್‌ಪೇಟೆ ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. ಕೋಡೂರು ಗ್ರಾಪಂ ವ್ಯಾಪ್ತಿಯ 24ನೇ ಮೈಲಿಕಲ್ಲಿನ ಪ್ರತಾಪ್ (26) ಬಂಧಿತ ಆರೋಪಿಯಾಗಿದ್ದಾನೆ. ಕೋಡೂರು ಗ್ರಾಪಂ ವ್ಯಾಪ್ತಿಯ ಯುವತಿಯೊಬ್ಬಳ್ಳನ್ನು ಮದುವೆಯಾಗುವುದಗಿ ನಂಬಿಸಿ ನಿರಂತರ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿ ಗಂಡು ಮಗುವಿಗೆ ಜನ್ಮ ನೀಡಿದ ಮೇಲೆ ನಾನು ಯಾವುದೇ ಕಾರಣಕ್ಕೂ ಮದುವೆಯಾಗುವುದಿಲ್ಲ…

Read More

Accident | ಚಾಲಕನ ನಿಯಂತ್ರಣ ತಪ್ಪಿ ದೇವಸ್ಥಾನದ ಕಟ್ಟೆಗೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

Accident | ಚಾಲಕನ ನಿಯಂತ್ರಣ ತಪ್ಪಿ ದೇವಸ್ಥಾನದ ಕಟ್ಟೆಗೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪ ಕಾರೊಂದು ಅಫಘಾತಕ್ಕೀಡಾಗಿದೆ. ಘಟನೆಯಲ್ಲಿ ಕಾರು ನುಜ್ಜುಗುಜ್ಜಾಗಿ ಮೂವರಿಗೆ ಗಾಯವಾದ ಘಟನೆ ನಡೆದಿದೆ. ಪಿಳ್ಳಂಗೇರಿ ಗ್ರಾಮದ ಹೆದ್ದಾರಿ ಸಮೀಪದಲ್ಲಿಯೇ ಇರುವ ಗಣಪತಿ ದೇವಸ್ಥಾನದ ಕಟ್ಟೆಗೆ ಕಾರು ಡಿಕ್ಕಿಯಾಗಿದೆ.  ಕಾರಿನಲ್ಲಿದ್ದವರು ಚನ್ನಗಿರಿಯ ಅರಿಶಿನಘಟ್ಟಕ್ಕೆ ಹೋಗುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಈ ಘಟನೆ ಸಂಭವಿಸಿದೆ. ಪಿಳ್ಳಂಗೇರಿ ಗ್ರಾಮದ ಸಮೀಪ ಚಾಲಕ ನಿಯಂತ್ರಣ ತಪ್ಪಿ, ಕಾರು ದೇವಸ್ಥಾನದ ಕಟ್ಟೆಗೆ…

Read More

Anandapura | ಕನ್ನಡ ರಾಜ್ಯೋತ್ಸವದಲ್ಲಿ ಅಶ್ಲೀಲ ನೃತ್ಯ ಪ್ರಕರಣ – ಆಯೋಜಕರ ವಿರುದ್ದ ದಾಖಲಾಯ್ತು ಫೋಕ್ಸೋ ಕೇಸ್

Anandapura | ಕನ್ನಡ ರಾಜ್ಯೋತ್ಸವದಲ್ಲಿ ಅಶ್ಲೀಲ ನೃತ್ಯ ಪ್ರಕರಣ – ಆಯೋಜಕರ ವಿರುದ್ದ ದಾಖಲಾಯ್ತು ಫೋಕ್ಸೋ ಕೇಸ್ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ನಡೆದಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ಅಪ್ರಾಪ್ತನ ಜೊತೆಗೆ ಯುವತಿಯೊಬ್ಬಳು ಅಸಭ್ಯವಾಗಿ ಕುಣಿದ ಪ್ರಕರಣಕ್ಕೆ ಸಂಬಂದಪಟ್ಟಂತೆ ಪೋಕ್ಸೋ ಕೇಸ್ ದಾಖಲಾಗಿದೆ ಅಶ್ಲೀಲ ನೃತ್ಯದ ವೀಡಿಯೋ ಎಲ್ಲೆಡೆ ವೈರಲ್ ಆದ ಹಿನ್ನಲೆಯಲ್ಲಿ ಸದ್ಯ ಘಟನೆ ಸಂಬಂಧ ಪೊಲೀಸ್ ಇಲಾಖೆಯು ಸಹ ಎಚ್ಚೆತ್ತುಕೊಂಡಿದ್ದು, ವೈರಲ್ ವಿಡಿಯೋವನ್ನು ಆಧರಿಸಿ ಪೋಕ್ಸೋ ಕಾಯಿದೆಯಡಿ ಆನಂದಪುರ ಪೊಲೀಸ್ ಠಾಣೆಯಲ್ಲಿ…

Read More

ಇನೋವಾ ಕಾರಿನಲ್ಲಿ ತಂಬಾಕು ಚೀಲದಲ್ಲಿ ದಾಖಲೆಯಿಲ್ಲದ 08 ಕೋಟಿ ಪತ್ತೆ

ಇನೋವಾ ಕಾರಿನಲ್ಲಿ ತಂಬಾಕು ಚೀಲದಲ್ಲಿ ದಾಖಲೆಯಿಲ್ಲದ 08 ಕೋಟಿ ಪತ್ತೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ದಾಖಲೆಯಿಲ್ಲದ 8 ಕೋಟಿ ರೂಪಾಯಿ ಹಣ ಪತ್ತೆಯಾಗಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪೊಲೀಸರು ತಪಾಸಣೆ ವೇಳೆ ಮಲ್ಲಾಡಿ ಹಳ್ಳಿ ಬಳಿಯಲ್ಲಿ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಇನೋವಾ ಕಾರನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಅದರಲ್ಲಿ ತಂಬಾಕು ಚೀಲಗಳಲ್ಲಿ ದಾಖಲೆ ಇಲ್ಲದ 8 ಕೋಟಿ ರೂಪಾಯಿ ಪತ್ತೆಯಾಗಿದೆ.   ಈ ಹಣದ ಮೂಲದ ಬಗ್ಗೆ ಚಿತ್ರದುರ್ಗದ ಪೊಲೀಸ್ ವರಿಷ್ಟಾಧಿಕಾರಿ ಸ್ಥಳೀಯ…

Read More

Shivamogga | ಗದ್ದೆಯಲ್ಲಿ ಕೆಲಸ ಮಾಡುತಿದ್ದಾಗ ಸಿಡಿಲು ಬಡಿದು ಸಹೋದರರಿಬ್ಬರು ಸಾವು

ಶಿವಮೊಗ್ಗ – ಸಿಡಿಲು ಬಡಿದು ಇಬ್ಬರು ಸಹೋದರರು ಮೃತಪಟ್ಟಿರುವ ದಾರುಣ ಘಟನೆ ಭದ್ರಾವತಿ ನಗರದ ಹುಣಸಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ. ಮೃತರನ್ನು ಎಸ್ ಬೀರೇಶ್(33) ಮತ್ತು ಎಸ್ ಸುರೇಶ್ (30) ಎಂದು ಗುರುತಿಸಲಾಗಿದೆ. ಇಬ್ಬರೂ ತಮ್ಮ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ. ಕಟಾವಿಗೆ ಸಿದ್ಧವಾಗಿದ್ದ ಭತ್ತದ ಬೆಳೆಗೆ ಕಾವಲು ಕಾಯಲು ಸಹೋದರರಿಬ್ಬರು ಹೋಗಿದ್ದರು. ರಾತ್ರಿ ಗದ್ದೆಗೆ ಕಾವಲಿಗೆಂದು ಹೋಗಿದ್ದವರು ಬೆಳಗ್ಗೆ ಮನೆಗೆ ಬಾರದ ಕಾರಣ ಆತಂಕಗೊಂಡಿದ್ದ ಕುಟುಬಸ್ಥರು ಗದ್ದೆಗೆ ತೆರಳಿ ನೋಡಿದಾಗ, ಸಹೋದರರಿಬ್ಬರೂ ಅಲ್ಲೇ…

Read More