ಕ್ರೈಂ ಸುದ್ದಿ:
ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ್ದ ಪತಿ ಮತ್ತು ಆತನ ಸ್ನೇಹಿತರಿಗೆ ಜೀವಾವಧಿ ಶಿಕ್ಷೆ|Life imprisonment
ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ್ದ ಪತಿ ಮತ್ತು ಆತನ ಸ್ನೇಹಿತರಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ : ಪತ್ನಿ ಹಾಗೂ ಆಕೆಯ ಪ್ರೇಮಿಯನ್ನು ಕೊಲೆ ಮಾಡಿದ ಗಂಡ ಮತ್ತು ಆತನ ಗೆಳೆಯರಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಕಾರಾಗೃಹ ವಾಸ ಶಿಕ್ಷೆ ಮತ್ತು ತಲಾ 1 ಲಕ್ಷ ರೂ.ದಂಡ ವಿಧಿಸಿ ತೀರ್ಪು ನೀಡಿದೆ. ಶಿವಮೊಗ್ಗ ನಗರದ ವೆಂಕಟೇಶ್ವರ ನಗರದ 5ನೇ ಕ್ರಾಸ್ ನಿವಾಸಿ ಕಾರ್ತಿಕ್ ಕೆ.(28) ಇವರು ಶ್ರೀರಾಮನಗರದ ವಾಸಿ ರೇವತಿ(21)…
ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ|arrested
ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ ತೀರ್ಥಹಳ್ಳಿ : ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ತಾಲೂಕಿನ ಕೋಣಂದೂರು ಸಮೀಪದ ಕೋಲಿಗೆ ಗ್ರಾಮದಲ್ಲಿ ಅಡಿಕೆ ತೋಟದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ದಾಳಿ ನಡೆಸಿದ ಪೊಲೀಸರು ಸುಮಾರು 80 ಸಾವಿರ ರೂ. ಮೌಲ್ಯದ 2 ಕೆಜಿ 164 ಗ್ರಾಂ ತೂಕದ ಹಸಿ…
ಹೊಸನಗರ : ಒಂದೇ ಸ್ಥಳದಲ್ಲಿ ಎರಡು ಲಾರಿಗಳ ಅಪಘಾತ|ಕಂದಕಕ್ಕೆ ಉರುಳಿದ ಲಾರಿ ಚಾಲಕನ ಸ್ಥಿತಿ ಗಂಭೀರ|accident
ಒಂದೇ ಸ್ಥಳದಲ್ಲಿ ಎರಡು ಅಪಘಾತಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಲಾರಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿದೆ. ಪಕ್ಕದಲ್ಲೇ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದಿದೆ. ಈ ರೀತಿ ಒಂದೇ ಸ್ಥಳದಲ್ಲಿ ಎರಡು ಪ್ರತ್ಯೇಕ ಅಪಘಾತಗಳಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಅರೋಡಿ ಗ್ರಾಮದ ಸೇತುವೆಯ ಮೇಲೆ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾಗಿದೆ ಅದೇ ಸೇತುವೆಯ…
20 ಲಕ್ಷ ರೂ. ಹಣವನ್ನು ಕಳ್ಳತನ ಮಾಡಿದ್ದ ಕಾರು ಚಾಲಕಕ ಗೋವಾದ ಕ್ಯಾಸಿನೋದಲ್ಲಿ ಜೂಜಾಡುವಾಗ ಸೆರೆ!
ಕಾರ್ಮಿಕರಿಗೆ ವೇತನ ಕೊಡಲು ತಂದಿದ್ದ 20 ಲಕ್ಷ ರೂ. ಇದ್ದ ಬ್ಯಾಗ್ ಕದ್ದು ಪರಾರಿಯಾಗಿದ್ದ ಆರೋಪಿಯೊಬ್ಬ ಗೋವಾದ ಕ್ಯಾಸಿನೋದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಶಿರಾಳಕೊಪ್ಪ ನೆಹರು ಕಾಲೋನಿಯ ಎ.ಎಸ್.ನಿತೀಶ್ ಬಂಧಿತ ಆರೋಪಿ. ಬಂಧಿತನಿಂದ 7.61 ಲಕ್ಷ ರೂ. ನಗದು ಜಪ್ತಿ. ಗೋವಾದ ಕ್ಯಾಸಿನೊದಲ್ಲಿರುವ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು ಕ್ಯಾಸಿನೋಗೆ ತೆರಳಿ ಆರೋಪಿ ಬಂಧಿಸಿ ಕರೆತಂದ ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು. ಶಿವಮೊಗ್ಗ ನಗರದಲ್ಲಿ ನಡೆಯುತ್ತಿರುವ 24*7 ಕುಡಿಯುವ ನೀರು ಸರಬರಾಜಿನ ಯೋಜನಾ ವ್ಯವಸ್ಥಾಪಕ ಹೇಮಂತ್ ಕುಮಾರ್ ಕಾರಿನ…
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1.50 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸ)ರ ನ್ಯಾಯಾಧೀಶರ ತೀರ್ಪು ನೀಡಿದೆ. ಶಿವಮೊಗ್ಗ ನಗರದ 27 ವರ್ಷದ ವ್ಯಕ್ತಿ ಶಿಕ್ಷೆಗೆ ಒಳಗಾದ ಆರೋಪಿ ಎಂದು ತಿಳಿದುಬಂದಿದೆ. ಕಳೆದ ವರ್ಷ 2022ರಲ್ಲಿ…
ತೀರ್ಥಹಳ್ಳಿಯಲ್ಲಿ ಮಿಸ್ ಫೈರಿಂಗ್ ಪ್ರಕರಣ – ಓರ್ವನ ಬಂಧನ|arrested
ತೀರ್ಥಹಳ್ಳಿಯಲ್ಲಿ ಮಿಸ್ ಫೈರಿಂಗ್ ಪ್ರಕರಣ – ಓರ್ವನ ಬಂಧನ ತೀರ್ಥಹಳ್ಳಿ : ಆರಗ ಗ್ರಾಮಪಂಚಾಯಿತಿ ವ್ಯಾಪ್ತಿಯ ದಾಸನಗದ್ದೆ ಸಮೀಪದ ಹಿರೇಗದ್ದೆಯಲ್ಲಿ ಶುಕ್ರವಾರ ತಡ ರಾತ್ರಿ ಮಿಸ್ ಫೈರಿಂಗ್ ಆಗಿ ವ್ಯಕ್ತಿಯೋರ್ವನಿಗೆ ಗಾಯವಾದ ಪ್ರಕರಣದಲ್ಲಿಗ ತೀರ್ಥಹಳ್ಳಿ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿ ಓರ್ವನನ್ನು ಬಂಧಿಸಲಾಗಿದೆ. ಅಕ್ರಮ ನಾಡ ಬಂದೂಕು ಹೊಂದಿದ್ದು ಮತ್ತು ಕಾಡು ಪ್ರಾಣಿಯನ್ನ ಹಿಡಿಯಲು ಹೋಗಿದ್ದಕ್ಕೆ ಸಹೋದರರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಸಹೋದರರಿಬ್ಬರು ನಾಡ ಬಂದೂಕುಗಳನ್ನ ಹಿಡಿದು ಶಿಕಾರಿಗೆ ಹೋದಾಗ ತಮ್ಮನ ಬಂದೂಕಿನಿಂದ ಹಾರಿದ ಗುಂಡು ಅಣ್ಣನ…
ಆನಂದಪುರ : ರೈಲಿಗೆ ಸಿಲುಕಿ ಅನಾಮಿಕ ಸಾವು – ಗುರುತು ಪತ್ತೆಗೆ ಮನವಿ|Train
ಆನಂದಪುರ : ರೈಲಿಗೆ ಸಿಲುಕಿ ಅನಾಮಿಕ ಸಾವು – ಗುರುತು ಪತ್ತೆಗೆ ಮನವಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ರೈಲಿಗೆ ಸಿಲುಕಿ ಅನಾಮಿಕ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಅನಾಮಿಕ ವ್ಯಕ್ತಿಯ ವಯಸ್ಸು ಸುಮಾರು 45 ರಿಂದ 50 ವಯಸ್ಸಾಗಿದೆ ಎನ್ನಲಾಗುತ್ತಿತ್ತು. ಮೃತ ವ್ಯಕ್ತಿಯ ಗುರುತು ಪತ್ತೆಗಾಗಿ ಪೊಲೀಸರು ಮನವಿ ಮಾಡಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸರಿಗೆ ಸಂಪರ್ಕಿಸಲು ಕೋರಿದೆ.
ತೀರ್ಥಹಳ್ಳಿಯಲ್ಲಿ ವ್ಯಕ್ತಿಗೆ ತಗುಲಿದ ಬಂದೂಕಿನ ಗುಂಡು – ಸ್ಥಿತಿ ಗಂಭೀರ|firing
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಮತ್ತೆ ಕೋವಿಯ ಸದ್ದು ಕೇಳಿ ಬಂದಿದೆ. ಈ ಹಿಂದೆ ಶಿಕಾರಿಗೆ ಹೋಗಿದ್ದ ಸಂದರ್ಭದಲ್ಲಿ ಕಾಂತರಾಜ್ ಎಂಬಾತ ಸಾವನ್ನಪ್ಪಿದ್ದರು. ಆನಂತರ ಪ್ರಕರಣ ಬೇರೆ ಬೇರೆ ತಿರುವು ಪಡೆದುಕೊಂಡಿತ್ತು. ಇದೀಗ ಅಂದಿನ ಘಟನೆಯಲ್ಲಿ ಕೇಳಿಬಂದಿದ್ದ ಪರಿಚಿತ ಹೆಸರುಗಳೇ ನಿನ್ನೆ ರಾತ್ರಿ ತೀರ್ಥಹಳ್ಳಿಯಲ್ಲಿ ಕೇಳಿ ಬಂದ ಗುಂಡಿನ ಸದ್ದಿನ ಜೊತೆಗೂ ಕೇಳಿಬರುತ್ತಿದೆ. ತೀರ್ಥಹಳ್ಳಿ ತಾಲ್ಲೂಕಿನ ಆರಗದ ಸಮೀಪ ಗಿರಿಧರ್ ಎಂಬವರ ತೋಟವಿದೆ. ಆ ತೋಟದ ಸಮೀಪ ನಿನ್ನೆ ಕೆಲವರು ಶಿಕಾರಿಗೆ ಹೋಗಿದ್ದಾರೆ. ತೋಟದಲ್ಲಿ ಏನೋ ಸದ್ದಾಗುತ್ತಿರುವದನ್ನ ಗಮನಿಸಿದ…
ಉಳ್ಳೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ – ಗಾಯಾಳುಗಳು ಆಸ್ಪತ್ರೆಗೆ ದಾಖಲು
ಸಾಗರ ತಾಲೂಕಿನ ಉಳ್ಳೂರಿನ ಹೆದ್ದಾರಿಯ ರಸ್ತೆಯಲ್ಲಿ KSRTC ಬಸ್ ಪಲ್ಟಿಯಾದ ಘಟನೆ ನಡೆದಿದೆ.ಬಸ್ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತಿದ್ದ ವೇಳೆ ಈ ಘಟನೆ ನಡೆದಿದೆ. ಉಳ್ಳೂರು ರಸ್ತೆಯ ತಿರುವಿನ ಬಳಿ ಬೈಕ್ ಒಂದು ಅಡ್ಡ ಬಂದಿದ್ದು ಬೈಕ್ ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದ ಬಸ್ ಚಾಲಕ ತಿರುವು ತೆಗೆದುಕೊಂಡಿದ್ದಾರೆ. ಆದರೆ ರಸ್ತೆಯ ಮೇಲೆ ಮಣ್ಣು ಇದ್ದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಮಧ್ಯಾಹ್ನ 2 ಗಂಟೆಯ ಹೊತ್ತಿಗೆ ಈ ಘಟನೆ ನಡೆದಿದ್ದು, ಬಸ್ ನಲ್ಲಿದ್ದ 20 ಜನರಿಗೆ…
ತನ್ನ ಭಾವನನ್ನೇ ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾಮೈದುನ ಅರೆಸ್ಟ್|arrested
ತನ್ನ ಭಾವನನ್ನೇ ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾಮೈದುನ ಅರೆಸ್ಟ್ ಹೊಳೆಹೊನ್ನೂರು : ಇಲ್ಲಿನ ಸಮೀಪದ ಅರದೋಟ್ಲು ಬಳಿ ತನ್ನ ಭಾವನನ್ನು ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾವಮೈದುನನ್ನು ಪೊಲೀಸರು ಬಂಧಿಸಿದ್ದಾರೆ. ಭಾವಮೈದುನನ ವಿರುದ್ಧ 307 ಕೇಸ್ ದಾಖಲಾಗಿದೆ. ಆನವೇರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ರಂಗಪ್ಪ(53) ಎಂಬವರಿಗೆ 17 ವರ್ಷಗಳ ಹಿಂದೆ ತನ್ನ ಅಕ್ಕನ ಮಗಳಾದ ಭಾಗ್ಯರನ್ನು ಮದುವೆಯಾಗಿದ್ದು ಅವರು ಸಹ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು. ಘಟನೆಯ ಹಿನ್ನಲೆ : ಎರಡುವರೆ ವರ್ಷಗಳ ಹಿಂದೆ ಉಪನ್ಯಾಸಕರಿಗೆ ಮತ್ತು ಹೆಂಡತಿ…