ಕ್ರೈಂ ಸುದ್ದಿ:
ಸೆಲ್ಪಿ ತೆಗೆಯಲು ಹೋಗಿ ನೀರುಪಾಲಾದ ಯುವಕ – ಅಗ್ನಿಶಾಮಕ ದಳದಿಂದ ತೀವ್ರ ಶೋಧ ಕಾರ್ಯಾಚರಣೆ|tunga
ಸೆಲ್ಪಿ ತೆಗೆಯಲು ಹೋಗಿ ನೀರುಪಾಲಾದ ಯುವಕ – ಅಗ್ನಿಶಾಮಕ ದಳದಿಂದ ತೀವ್ರ ಶೋಧ ಕಾರ್ಯಾಚರಣೆ ಕೊಲ್ಲೂರು ಅರಶಿನ ಗುಂಡಿ ಫಾಲ್ಸ್ನ ಘಟನೆ ಕಣ್ಮುಂದೆ ಇರುವಾಗಲೇ ಶಿವಮೊಗ್ಗ ಇನ್ನೊಬ್ಬ ಯುವಕ ನೀರಿಗೆ ಬಿದ್ದು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ತುಂಗಾ ಡ್ಯಾಂನ ಎದುರು , ಪ್ರವಾಸಕ್ಕೆ ಬಂದಿದ್ದ ಯುವಕನೊಬ್ಬ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾನೆ. ಈ ಬಗ್ಗೆ ತಡವಾಗಿ ವರದಿಯಾಗಿದ್ದು, ನಿನ್ನೆಯಿಡಿ ಅಗ್ನಿಶಾಮಕ ಸಿಬ್ಬಂದಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಇವತ್ತು ಕೂಡ ಹುಡುಕಾಟ ಮುಂದುವರಿಸುವ ಸಾಧ್ಯತೆ ಇದೆ. ಗಾಜನೂರು ಜಲಾಶಯದ ಮೇಲೆ…
ರಿಪ್ಪನ್‌ಪೇಟೆಯ ಗವಟೂರಿನಲ್ಲಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಮೆಗ್ಗಾನ್ ಗೆ ದಾಖಲು|ಸಮಯ ಪ್ರಜ್ಞೆ ಮೆರೆದ ರಿಪ್ಪನ್‌ಪೇಟೆ ಪಿಎಸ್‌ಐ|accident
ರಿಪ್ಪನ್‌ಪೇಟೆಯ ಗವಟೂರಿನಲ್ಲಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಮೆಗ್ಗಾನ್ ಗೆ ದಾಖಲು|ಸಮಯ ಪ್ರಜ್ಞೆ ಮೆರೆದ ರಿಪ್ಪನ್‌ಪೇಟೆ ಪಿಎಸ್‌ಐ ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ನಡೆದಿದೆ. ಪಟ್ಟಣದ ಹೊಸನಗರ ರಸ್ತೆಯ ಶರ್ಮಣ್ಯಾವತಿ ನದಿಯ ಸೇತುವೆ ಬಳಿಯಲ್ಲಿ ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರದ ಕಡೆಗೆ ತೆರಳುತಿದ್ದ ಬೈಕ್ ಹಾಗೂ ಹೊಸನಗರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ….
ಸಾಲ ಕೇಳಲು ಬಂದಿದ್ದ ವ್ಯಕ್ತಿಯಿಂದ ಬ್ಯಾಂಕ್ ಮ್ಯಾನೇಜರ್‌ಗೆ ಜೀವ ಬೆದರಿಕೆ: ಆರೋಪ|FIR
ಸಾಲ ಕೇಳಲು ಬಂದಿದ್ದ ವ್ಯಕ್ತಿಯಿಂದ ಬ್ಯಾಂಕ್ ಮ್ಯಾನೇಜರ್‌ಗೆ ಜೀವ ಬೆದರಿಕೆ: ಆರೋಪ ಶಿವಮೊಗ್ಗ ತಾಲೂಕಿನ ಹೊಸಳ್ಳಿ ಶಾಖೆಯ ಯುನಿಯನ್ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಒಬ್ಬರಿಗೆ ವ್ಯಕ್ತಿಯೋರ್ವ ಚಾಕು ತೋರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ವರದಿಯಾಗಿದೆ. ಅಲ್ಲದೇ ಸಾಲ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ. ಆ.7ರಂದು ಮಧ್ಯಾಹ್ನವ್ಯಕ್ತಿಯೊಬ್ಬಬ್ಯಾಂಕಿಗೆ ಬಂದಿದ್ದು, ಹಸು ಸಾಲಕ್ಕೆ ಆಗ್ರಹಿಸಿದ್ದಾರೆ. ಅಲ್ಲದೆ ಬ್ಯಾಂಕ್ ಮ್ಯಾನೇಜರ್ ನಿರಂಜನ್‌ಗೆ ಚಾಕು ತೋರಿಸಿ, ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ತಿಳಿದುಬಂದಿದೆ. ಚಾಕು ತೋರಿಸಿದ ವ್ಯಕ್ತಿಯನ್ನು ಅದೇ ಮೊದಲು…
ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ್ದ ಪತಿ ಮತ್ತು ಆತನ ಸ್ನೇಹಿತರಿಗೆ ಜೀವಾವಧಿ ಶಿಕ್ಷೆ|Life imprisonment
ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ್ದ ಪತಿ ಮತ್ತು ಆತನ ಸ್ನೇಹಿತರಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ : ಪತ್ನಿ ಹಾಗೂ ಆಕೆಯ ಪ್ರೇಮಿಯನ್ನು ಕೊಲೆ ಮಾಡಿದ ಗಂಡ ಮತ್ತು ಆತನ ಗೆಳೆಯರಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಕಾರಾಗೃಹ ವಾಸ ಶಿಕ್ಷೆ ಮತ್ತು ತಲಾ 1 ಲಕ್ಷ ರೂ.ದಂಡ ವಿಧಿಸಿ ತೀರ್ಪು ನೀಡಿದೆ. ಶಿವಮೊಗ್ಗ ನಗರದ ವೆಂಕಟೇಶ್ವರ ನಗರದ 5ನೇ ಕ್ರಾಸ್ ನಿವಾಸಿ ಕಾರ್ತಿಕ್ ಕೆ.(28) ಇವರು ಶ್ರೀರಾಮನಗರದ ವಾಸಿ ರೇವತಿ(21)…
ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ|arrested
ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ ತೀರ್ಥಹಳ್ಳಿ : ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ತಾಲೂಕಿನ ಕೋಣಂದೂರು ಸಮೀಪದ ಕೋಲಿಗೆ ಗ್ರಾಮದಲ್ಲಿ ಅಡಿಕೆ ತೋಟದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ದಾಳಿ ನಡೆಸಿದ ಪೊಲೀಸರು ಸುಮಾರು 80 ಸಾವಿರ ರೂ. ಮೌಲ್ಯದ 2 ಕೆಜಿ 164 ಗ್ರಾಂ ತೂಕದ ಹಸಿ…
ಹೊಸನಗರ : ಒಂದೇ ಸ್ಥಳದಲ್ಲಿ ಎರಡು ಲಾರಿಗಳ ಅಪಘಾತ|ಕಂದಕಕ್ಕೆ ಉರುಳಿದ ಲಾರಿ ಚಾಲಕನ ಸ್ಥಿತಿ ಗಂಭೀರ|accident
ಒಂದೇ ಸ್ಥಳದಲ್ಲಿ ಎರಡು ಅಪಘಾತಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಲಾರಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿದೆ. ಪಕ್ಕದಲ್ಲೇ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದಿದೆ. ಈ ರೀತಿ ಒಂದೇ ಸ್ಥಳದಲ್ಲಿ ಎರಡು ಪ್ರತ್ಯೇಕ ಅಪಘಾತಗಳಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಅರೋಡಿ ಗ್ರಾಮದ ಸೇತುವೆಯ ಮೇಲೆ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾಗಿದೆ ಅದೇ ಸೇತುವೆಯ…
20 ಲಕ್ಷ ರೂ. ಹಣವನ್ನು ಕಳ್ಳತನ ಮಾಡಿದ್ದ ಕಾರು ಚಾಲಕಕ ಗೋವಾದ ಕ್ಯಾಸಿನೋದಲ್ಲಿ ಜೂಜಾಡುವಾಗ ಸೆರೆ!
ಕಾರ್ಮಿಕರಿಗೆ ವೇತನ ಕೊಡಲು ತಂದಿದ್ದ 20 ಲಕ್ಷ ರೂ. ಇದ್ದ ಬ್ಯಾಗ್ ಕದ್ದು ಪರಾರಿಯಾಗಿದ್ದ ಆರೋಪಿಯೊಬ್ಬ ಗೋವಾದ ಕ್ಯಾಸಿನೋದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಶಿರಾಳಕೊಪ್ಪ ನೆಹರು ಕಾಲೋನಿಯ ಎ.ಎಸ್.ನಿತೀಶ್ ಬಂಧಿತ ಆರೋಪಿ. ಬಂಧಿತನಿಂದ 7.61 ಲಕ್ಷ ರೂ. ನಗದು ಜಪ್ತಿ. ಗೋವಾದ ಕ್ಯಾಸಿನೊದಲ್ಲಿರುವ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು ಕ್ಯಾಸಿನೋಗೆ ತೆರಳಿ ಆರೋಪಿ ಬಂಧಿಸಿ ಕರೆತಂದ ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು. ಶಿವಮೊಗ್ಗ ನಗರದಲ್ಲಿ ನಡೆಯುತ್ತಿರುವ 24*7 ಕುಡಿಯುವ ನೀರು ಸರಬರಾಜಿನ ಯೋಜನಾ ವ್ಯವಸ್ಥಾಪಕ ಹೇಮಂತ್ ಕುಮಾರ್ ಕಾರಿನ…
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1.50 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸ)ರ ನ್ಯಾಯಾಧೀಶರ ತೀರ್ಪು ನೀಡಿದೆ. ಶಿವಮೊಗ್ಗ ನಗರದ 27 ವರ್ಷದ ವ್ಯಕ್ತಿ ಶಿಕ್ಷೆಗೆ ಒಳಗಾದ ಆರೋಪಿ ಎಂದು ತಿಳಿದುಬಂದಿದೆ. ಕಳೆದ ವರ್ಷ 2022ರಲ್ಲಿ…
ತೀರ್ಥಹಳ್ಳಿಯಲ್ಲಿ ಮಿಸ್ ಫೈರಿಂಗ್ ಪ್ರಕರಣ – ಓರ್ವನ ಬಂಧನ|arrested
ತೀರ್ಥಹಳ್ಳಿಯಲ್ಲಿ ಮಿಸ್ ಫೈರಿಂಗ್ ಪ್ರಕರಣ – ಓರ್ವನ ಬಂಧನ ತೀರ್ಥಹಳ್ಳಿ : ಆರಗ ಗ್ರಾಮಪಂಚಾಯಿತಿ ವ್ಯಾಪ್ತಿಯ ದಾಸನಗದ್ದೆ ಸಮೀಪದ ಹಿರೇಗದ್ದೆಯಲ್ಲಿ ಶುಕ್ರವಾರ ತಡ ರಾತ್ರಿ ಮಿಸ್ ಫೈರಿಂಗ್ ಆಗಿ ವ್ಯಕ್ತಿಯೋರ್ವನಿಗೆ ಗಾಯವಾದ ಪ್ರಕರಣದಲ್ಲಿಗ ತೀರ್ಥಹಳ್ಳಿ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿ ಓರ್ವನನ್ನು ಬಂಧಿಸಲಾಗಿದೆ. ಅಕ್ರಮ ನಾಡ ಬಂದೂಕು ಹೊಂದಿದ್ದು ಮತ್ತು ಕಾಡು ಪ್ರಾಣಿಯನ್ನ ಹಿಡಿಯಲು ಹೋಗಿದ್ದಕ್ಕೆ ಸಹೋದರರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಸಹೋದರರಿಬ್ಬರು ನಾಡ ಬಂದೂಕುಗಳನ್ನ ಹಿಡಿದು ಶಿಕಾರಿಗೆ ಹೋದಾಗ ತಮ್ಮನ ಬಂದೂಕಿನಿಂದ ಹಾರಿದ ಗುಂಡು ಅಣ್ಣನ…
ಆನಂದಪುರ : ರೈಲಿಗೆ ಸಿಲುಕಿ ಅನಾಮಿಕ ಸಾವು – ಗುರುತು ಪತ್ತೆಗೆ ಮನವಿ|Train
ಆನಂದಪುರ : ರೈಲಿಗೆ ಸಿಲುಕಿ ಅನಾಮಿಕ ಸಾವು – ಗುರುತು ಪತ್ತೆಗೆ ಮನವಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ರೈಲಿಗೆ ಸಿಲುಕಿ ಅನಾಮಿಕ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಅನಾಮಿಕ ವ್ಯಕ್ತಿಯ ವಯಸ್ಸು ಸುಮಾರು 45 ರಿಂದ 50 ವಯಸ್ಸಾಗಿದೆ ಎನ್ನಲಾಗುತ್ತಿತ್ತು. ಮೃತ ವ್ಯಕ್ತಿಯ ಗುರುತು ಪತ್ತೆಗಾಗಿ ಪೊಲೀಸರು ಮನವಿ ಮಾಡಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸರಿಗೆ ಸಂಪರ್ಕಿಸಲು ಕೋರಿದೆ.