Headlines

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು – ಓರ್ವ ಸಾವು|accident

ಶಿವಮೊಗ್ಗ ಹೊರವಲಯದಲ್ಲಿ ರಸ್ತೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರನ್ನ ಚಲಾಯಿಸಿಕೊಂಡು ಬಂದ ವ್ಯಕ್ತಿ ಸಾವನ್ನಪ್ಪಿದ್ದಾನೆ.ಸೋಮವಾರ ಸಂಜೆ ಸುಮಾರು 4-45 ರ ವೇಳೆಗೆ ಶಿವಮೊಗ್ಗದಿಂದ ಹೊನ್ನಾಳಿ ತಾಲೂಕಿನ ಸುಂಕದಕಟ್ಟೆ ಗ್ರಾಮಕ್ಕೆ ಕಿಯಾ ಕಾರಿನಲ್ಲಿ ಏಕಾಂಗಿಯಾಗಿ ಚಲಾಯಿಸಿಕೊಂಡು ಬರುತ್ತಿದ್ದ ಶರತ್ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ನುಜ್ಜುಗುಜ್ಜಾಗಿದೆ. 29 ವರ್ಷದ ಯುವಕ ಶರತ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ಠಾಣ ವ್ಯಾಪ್ತಿಯಲ್ಲಿ…

Read More

ಆಯನೂರು ಬಾರ್ ಕ್ಯಾಶಿಯರ್’ಗೆ ಚೂರಿ ಇರಿದು ಕೊಲೆ – ಪೊಲೀಸರ ಎದುರಲ್ಲೇ ನಡೆಯಿತಾ ಈ ಘಟನೆ…????

ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್‌ ಠಾಣೆ ವ್ಯಾಪ್ತಿಯ ಆಯನೂರಿನಲ್ಲಿರುವ ಬಾರ್’ನಲ್ಲಿ ಕ್ಯಾಶಿಯರ್ ಒಬ್ಬನಿಗೆ ಪೊಲೀಸರೆದುರಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಸೊರಬ ಮೂಲದ ಸಚಿನ್ (27) ಹತ್ಯೆಯಾದ ಯುವಕನಾಗಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಚಾಕುದಿಂದ ಚುಚ್ಚಿದ್ದು ತೀವ್ರ ಗಾಯಗೊಂಡ ಈತನನ್ನು ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮಾರ್ಗ ಮಧ್ಯೆ ಆತ ಮೃತಪಟ್ಟಿದ್ದಾನೆ. ಘಟನೆಯ ಹಿನ್ನಲೆ ಕಳೆದ ಹಲವು ದಿನಗಳಿಂದ ಬಾರ್ ನಲ್ಲಿ ಕುಡಿದು ಹಣ ನೀಡದ ಹೋಗುತ್ತಿದ್ದ ಆಯನೂರು ತಾಂಡಾ ನಿವಾಸಿಗಳಾದ ನಿರಂಜನ್ ,ಸತೀಶ್ ಹಾಗೂ ಅಶೋಕ್…

Read More

ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ – ರಿಪ್ಪನ್ ಪೇಟೆ ಮೂಲದ ಯುವಕ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವು|accident

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆವಟೂರು ಗ್ರಾಮದ ಯುವಕ ಸೇರಿದಂತೆ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಎಂ ಸ್ಯಾಂಡ್‌ ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲೇ ಸಾವನ್ನಪ್ಪಿಸಿದ್ದಾರೆ. ನಾಗಮಂಗಲ ತಾಲ್ಲೂಕು ಬೆಂಗಳೂರು– ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ತಿರುಮಲಾಪುರ ಗ್ರಾಮದ ಬಳಿ ಭಾನುವಾರ ನಸುಕಿನ ವೇಳೆ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಹೊಸನಗರ ತಾಲೂಕಿನ…

Read More

ಹೊಸನಗರ ಮತ್ತು ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಅಕ್ರಮ ಮರಳು ಧಂಧೆಕೋರರಿಗೆ ಬಿಸಿ ಮುಟ್ಟಿಸಿದ ಪೊಲೀಸ್ – 14 ವಾಹನ ವಶಕ್ಕೆ

ಹೊಸನಗರ ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಪೊಲೀಸ್ ಠಾಣೆ ವ್ಯಾಪ್ತಿಯ 14 ಕಡೆಗಳಲ್ಲಿ ದಾಳಿ ಅಕ್ರಮ ಮರಳು ಸಾಗಾಟ ಮತ್ತು ಸಂಗ್ರಹಣೆ ಸ್ಥಳಗಳ ಮೇಲೆ ದಾಳಿ ನಡೆಸಿದ್ದು 14 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಸ್.ಪಿ. ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಎಸ್.ಪಿ. ಅನಿಲ್ ಕುಮಾರ್ ಭೂಮರಡ್ಡಿ, ತೀರ್ಥಹಳ್ಳಿ ಡಿವೈಎಸ್.ಪಿ ಗಜಾನನ ವಾಮನ ಸುತರ ಮೇಲ್ವಿಚಾರಣೆಯಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ.  ಹೊಸನಗರ ವೃತ್ತದ ಪಿಐ ಗಿರೀಶ್, ಪಿಎಸ್ಐ ನೀರಜ್ ನರಲಾರ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ ಹೊಸನಗರ ಠಾಣಾ ವ್ಯಾಪ್ತಿಯ 4 ಕಡೆಗಳಲ್ಲಿ ದಾಳಿ…

Read More

ಎತ್ತು ಸಾಗಿಸುತಿದ್ದವನ ಮೇಲೆ ಹಲ್ಲೆ – 9 ಮಂದಿ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ಪೊಲೀಸ್ ಸ್ಠೇಷನ್​ ವ್ಯಾಪ್ತಿಯಲ್ಲಿ ನಡೆದ ಘಟನೆಯೊಂದರ ಸಂಬಂಧ ಸುಮೊಟೋ ಕೇಸ್ ಹಾಗೂ ಹಲ್ಲೆ ಪ್ರಕರಣದ ಕೇಸ್ ದಾಖಲಾಗಿದೆ.  ಎತ್ತುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ತಡೆದು ಆತನ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ಆರೋಪದ ಅಡಿಯಲ್ಲಿ9 ಮಂದಿ ವಿರುದ್ಧ ಹಲ್ಲೆ ಪ್ರಕರಣ ದಾಖಲಾಗಿದೆ. ಇನ್ನೂ ಪ್ರಾಣಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಡಿಯಲ್ಲಿ ವಾಹನದ ಚಾಲಕನ ವಿರುದ್ಧವೂ ಕೇಸ್ ದಾಖಲಾಗಿದೆ.  ಇಲ್ಲಿ ಮಂಚಿಕೊಪ್ಪ ಗ್ರಾಮದ ಬಳಿ ಶುಕ್ರವಾರ ಜಾನುವಾರುಗಳನ್ನು ಸಾಗಿಸುತ್ತಿದ್ದಾರೆ ಎಂಬ ಆರೋಪದಡಿಯಲ್ಲಿ ವಾಹನವೊಂದನ್ನ ಗುಂಪೊಂದು ತಡೆದು ವಿಚಾರಿಸಿದೆ….

Read More

ಅರಣ್ಯಪ್ರದೇಶದಲ್ಲಿ ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ !!lightning

ಅರಣ್ಯಪ್ರದೇಶದಲ್ಲಿ ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ! ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ  ಸಮೀಪದ ಬೆಳಂದೂರು ಚೆನ್ನಾಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಮೃತದೇಹ  ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತನನ್ನು ಬೆಳಂದೂರು ಗ್ರಾಮದ ಬತ್ತಿ ರಮೇಶಪ್ಪ(55) ಎಂದು ಗುರುತಿಸಲಾಗಿದೆ. ಬೆಳಂದೂರು ಗ್ರಾಮದ ಬತ್ತಿ ರಮೇಶಪ್ಪ ಎಂಬ ವ್ಯಕ್ತಿ  ಕಳೆದ ೪ ದಿನಗಳಿಂದ ಕಾಣೆಯಾಗಿದ್ದು  ಎಲ್ಲಾ ಕಡೆ ಹುಡುಕಿ ಸಂಬಂಧಿಕರ ಮನೆಗೆ ಹೋಗಿರಬಹುದು ತಿರುಗಿ…

Read More

ನೇಣು ಬಿಗಿದ ಸ್ಥಿತಿಯಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಶವ ಅರಣ್ಯದಲ್ಲಿ ಪತ್ತೆ|devangi

ತೀರ್ಥಹಳ್ಳಿ : ನೇಣು ಬಿಗಿದ ಸ್ಥಿತಿಯಲ್ಲಿ ಅರಣ್ಯದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ದೇವಂಗಿ ಸಮೀಪದ ಇಂದಿರಾ ನಗರದಲ್ಲಿ ನಡೆದಿದೆ. ಮೃತಪಟ್ಟಿರುವ ಮಹಿಳೆಯನ್ನು ಶಶಿಕಲಾ (34) ಎಂದು ಗುರುತಿಸಲಾಗಿದೆ. ಶಶಿಕಲಾ ತಡರಾತ್ರಿಯಿಂದ ಮನೆಯಿಂದ ನಾಪತ್ತೆಯಾಗಿದ್ದರು.ರಾತ್ರಿಯೆಲ್ಲಾ ಪತ್ನಿಗಾಗಿ ಹುಡುಕಾಟ ನಡೆಸಿದ ಪತಿ ಸುಬ್ರಹ್ಮಣ್ಯ ಇಂದು ಬೆಳಿಗ್ಗೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇಂದು ಮಧ್ಯಾಹ್ನ ಮನೆಯ ಹಿಂಭಾಗ ಇರುವ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶಶಿಕಲಾ ಶವ ಪತ್ತೆಯಾಗಿದ್ದು ,ನೇಣು ಬಿಗಿದ ಸ್ಥಿತಿ ಅನುಮಾನಸ್ಪದವಾಗಿ ಕಂಡುಬಂದಿದ್ದು ಕೊಲೆಯ…

Read More

ಫೇಸ್‌ಬುಕ್‌ ನ ಅಪರಿಚಿತ ಸ್ನೇಹಿತನಿಂದ ಲಕ್ಷಾಂತರ ರೂ ಹಣ ಕಳೆದುಕೊಂಡ ಮಹಿಳೆ – ಪ್ರಕರಣ ದಾಖಲು|Facebook fraud

ಫೇಸ್‌ಬುಕ್‌ನಲ್ಲಿ ಪರಿಚಯವಾದ ವ್ಯಕ್ತಿ ತಾನು ಇಂಗ್ಲೆಂಡ್‌ ದೇಶದಲ್ಲಿ ಡಾಕ್ಟರ್‌ ಎಂದು ನಂಬಿಸಿ ನಗರದ ₹6.50 ಲಕ್ಷ ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಹಿನ್ನಲೆ: ಶಿವಮೊಗ್ಗದ ಮಹಿಳೆಯೊಬ್ಬರ ಫೇಸ್‌ಬುಕ್‌ಗೆ ವ್ಯಕ್ತಿಯೊಬ್ಬ ಫ್ರೆಂಡ್‌ ರಿಕ್ವೆಸ್ಟ್‌ ಕಳಿಸಿದ್ದ ಆಕೆ ರಿಕ್ವೆಸ್ಟ್ ಅಸೆಪ್ಟ್ ಮಾಡಿ ಕೆಲ ದಿನ ಆ ವ್ಯಕ್ತಿಯೊಂದಿಗೆ ಚಾಟಿಂಗ್‌ ನಡೆಸಿದ್ದರು. ತಾನೊಬ್ಬ ವೈದ್ಯ. ಇಂಗ್ಲೆಂಡ್‌ನಲ್ಲಿ ವಾಸವಿದ್ದೇನೆ ಎಂದು ಪರಿಚಯಿಸಿಕೊಂಡಿದ್ದ. ಮೇ 14ರಂದು ಚಾಟಿಂಗ್‌ ನಡೆಸಿದ್ದ ವೇಳೆ ಆತ, ಮಹಿಳೆಗೆ ಬೆಲೆಬಾಳುವ ಉಡುಗೊರೆ…

Read More

ಹುಲ್ಲಿನ ಪಿಂಡಿ ಕಟ್ಟುವ ಯಂತ್ರಕ್ಕೆ ಸಿಲುಕಿ ಯುವಕ ಸಾವು|Grass flour

ಹುಲ್ಲಿನ ಪಿಂಡಿ ಕಟ್ಟುವ ಯಂತ್ರಕ್ಕೆ ಸಿಲುಕಿ ಯುವಕ ಸಾವು ಶಿವಮೊಗ್ಗದ ಬೈಪಾಸ್ ನಲ್ಲಿರುವ ಟೊಯೋಟಾ ಶೋರೂಂ ಹಿಂಭಾಗದಲ್ಲಿನ ಭತ್ತದ ಜಮೀನಿನಲ್ಲಿ ಹುಲ್ಲಿನ ಪಿಂಡಿ ಕಟ್ಟುವ ಮಿಷನ್ ಗೆ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಟೊಯೋಟಾ ಶೋರೂಂ ಹಿಂಭಾಗದ ವಡ್ಡಿನಕೊಪ್ಪದ ಉಜ್ಜಿನಪ್ಪ ಎಂಬುವರಿಗೆ ಸೇರಿದ ಜಮೀನಿನಲ್ಲಿ ತಮಿಳುನಾಡಿನಿಂದ ಬಂದಿದ್ದ ಸೂರ್ಯ ಎಂಬ ಯುವಕ ಹುಲ್ಲಿನ ಪಿಂಡಿ ಕಟ್ಟುವ ಮಿಷಿನ್ ಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಹುಲ್ಲಿನ ಪಿಂಡಿ ಕಟ್ಟುವ ಮಿಷನ್ ನೊಂದಿಗೆ ತಮಿಳುನಾಡಿನಿಂದ ಬಂದಿದ್ದ ಸೂರ್ಯ…

Read More

ಸೊಸೆಯಿಂದ ಅತ್ತೆಯ ಚಿನ್ನಾಭರಣ ಮತ್ತು ಹಣ ಕಳುವು – ಇಬ್ಬರ ಬಂಧನ|theft

ಮೇ 13 ರಂದು ಶಿವಮೊಗ್ಗ ನಗರದ ಮಳಲಕೊಪ್ಪದ ಮನೆಯೊಂದರಲ್ಲಿ ಬೀರುವಿನಲ್ಲಿದ್ದ ಚಿನ್ನಾಭರಣ ಕಳುವಾಗಿತ್ತು ಈ ಹಿನ್ನಲೆಯಲ್ಲಿ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಮನೆಯ ಸದಸ್ಯೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯ ಹಿನ್ನಲೆ : ಮೇ 13 ರಂದು ಮಳಲಕೊಪ್ಪದ ನಿವಾಸಿ ರೇಣುಕಮ್ಮ ಎಂಬುವರ ಮನೆಯಲ್ಲಿ 90 ಗ್ರಾಂ ಚಿನ್ನಾಭರಣ ಮತ್ತು 14 ಸಾವಿರ ರೂ. ಹಣ ನಗದು ಕಳುವಾಗಿತ್ತು.ಬೀರುವಿನಲ್ಲಿ ಇಟ್ಟ 4 ಲಕ್ಷದ 53 ಸಾವಿರ…

Read More