ಕ್ರೈಂ ಸುದ್ದಿ:
ನೇಣು ಬಿಗಿದ ಸ್ಥಿತಿಯಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಶವ ಅರಣ್ಯದಲ್ಲಿ ಪತ್ತೆ|devangi
ತೀರ್ಥಹಳ್ಳಿ : ನೇಣು ಬಿಗಿದ ಸ್ಥಿತಿಯಲ್ಲಿ ಅರಣ್ಯದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ದೇವಂಗಿ ಸಮೀಪದ ಇಂದಿರಾ ನಗರದಲ್ಲಿ ನಡೆದಿದೆ. ಮೃತಪಟ್ಟಿರುವ ಮಹಿಳೆಯನ್ನು ಶಶಿಕಲಾ (34) ಎಂದು ಗುರುತಿಸಲಾಗಿದೆ. ಶಶಿಕಲಾ ತಡರಾತ್ರಿಯಿಂದ ಮನೆಯಿಂದ ನಾಪತ್ತೆಯಾಗಿದ್ದರು.ರಾತ್ರಿಯೆಲ್ಲಾ ಪತ್ನಿಗಾಗಿ ಹುಡುಕಾಟ ನಡೆಸಿದ ಪತಿ ಸುಬ್ರಹ್ಮಣ್ಯ ಇಂದು ಬೆಳಿಗ್ಗೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇಂದು ಮಧ್ಯಾಹ್ನ ಮನೆಯ ಹಿಂಭಾಗ ಇರುವ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶಶಿಕಲಾ ಶವ ಪತ್ತೆಯಾಗಿದ್ದು ,ನೇಣು ಬಿಗಿದ ಸ್ಥಿತಿ ಅನುಮಾನಸ್ಪದವಾಗಿ ಕಂಡುಬಂದಿದ್ದು ಕೊಲೆಯ…
ಫೇಸ್‌ಬುಕ್ ನ ಅಪರಿಚಿತ ಸ್ನೇಹಿತನಿಂದ ಲಕ್ಷಾಂತರ ರೂ ಹಣ ಕಳೆದುಕೊಂಡ ಮಹಿಳೆ – ಪ್ರಕರಣ ದಾಖಲು|Facebook fraud
ಫೇಸ್‌ಬುಕ್‌ನಲ್ಲಿ ಪರಿಚಯವಾದ ವ್ಯಕ್ತಿ ತಾನು ಇಂಗ್ಲೆಂಡ್ ದೇಶದಲ್ಲಿ ಡಾಕ್ಟರ್ ಎಂದು ನಂಬಿಸಿ ನಗರದ ₹6.50 ಲಕ್ಷ ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಹಿನ್ನಲೆ: ಶಿವಮೊಗ್ಗದ ಮಹಿಳೆಯೊಬ್ಬರ ಫೇಸ್‌ಬುಕ್‌ಗೆ ವ್ಯಕ್ತಿಯೊಬ್ಬ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ ಆಕೆ ರಿಕ್ವೆಸ್ಟ್ ಅಸೆಪ್ಟ್ ಮಾಡಿ ಕೆಲ ದಿನ ಆ ವ್ಯಕ್ತಿಯೊಂದಿಗೆ ಚಾಟಿಂಗ್ ನಡೆಸಿದ್ದರು. ತಾನೊಬ್ಬ ವೈದ್ಯ. ಇಂಗ್ಲೆಂಡ್‌ನಲ್ಲಿ ವಾಸವಿದ್ದೇನೆ ಎಂದು ಪರಿಚಯಿಸಿಕೊಂಡಿದ್ದ. ಮೇ 14ರಂದು ಚಾಟಿಂಗ್ ನಡೆಸಿದ್ದ ವೇಳೆ ಆತ, ಮಹಿಳೆಗೆ ಬೆಲೆಬಾಳುವ ಉಡುಗೊರೆ…
ಹುಲ್ಲಿನ ಪಿಂಡಿ ಕಟ್ಟುವ ಯಂತ್ರಕ್ಕೆ ಸಿಲುಕಿ ಯುವಕ ಸಾವು|Grass flour
ಹುಲ್ಲಿನ ಪಿಂಡಿ ಕಟ್ಟುವ ಯಂತ್ರಕ್ಕೆ ಸಿಲುಕಿ ಯುವಕ ಸಾವು ಶಿವಮೊಗ್ಗದ ಬೈಪಾಸ್ ನಲ್ಲಿರುವ ಟೊಯೋಟಾ ಶೋರೂಂ ಹಿಂಭಾಗದಲ್ಲಿನ ಭತ್ತದ ಜಮೀನಿನಲ್ಲಿ ಹುಲ್ಲಿನ ಪಿಂಡಿ ಕಟ್ಟುವ ಮಿಷನ್ ಗೆ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಟೊಯೋಟಾ ಶೋರೂಂ ಹಿಂಭಾಗದ ವಡ್ಡಿನಕೊಪ್ಪದ ಉಜ್ಜಿನಪ್ಪ ಎಂಬುವರಿಗೆ ಸೇರಿದ ಜಮೀನಿನಲ್ಲಿ ತಮಿಳುನಾಡಿನಿಂದ ಬಂದಿದ್ದ ಸೂರ್ಯ ಎಂಬ ಯುವಕ ಹುಲ್ಲಿನ ಪಿಂಡಿ ಕಟ್ಟುವ ಮಿಷಿನ್ ಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಹುಲ್ಲಿನ ಪಿಂಡಿ ಕಟ್ಟುವ ಮಿಷನ್ ನೊಂದಿಗೆ ತಮಿಳುನಾಡಿನಿಂದ ಬಂದಿದ್ದ ಸೂರ್ಯ…
ಸೊಸೆಯಿಂದ ಅತ್ತೆಯ ಚಿನ್ನಾಭರಣ ಮತ್ತು ಹಣ ಕಳುವು – ಇಬ್ಬರ ಬಂಧನ|theft
ಮೇ 13 ರಂದು ಶಿವಮೊಗ್ಗ ನಗರದ ಮಳಲಕೊಪ್ಪದ ಮನೆಯೊಂದರಲ್ಲಿ ಬೀರುವಿನಲ್ಲಿದ್ದ ಚಿನ್ನಾಭರಣ ಕಳುವಾಗಿತ್ತು ಈ ಹಿನ್ನಲೆಯಲ್ಲಿ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಮನೆಯ ಸದಸ್ಯೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯ ಹಿನ್ನಲೆ : ಮೇ 13 ರಂದು ಮಳಲಕೊಪ್ಪದ ನಿವಾಸಿ ರೇಣುಕಮ್ಮ ಎಂಬುವರ ಮನೆಯಲ್ಲಿ 90 ಗ್ರಾಂ ಚಿನ್ನಾಭರಣ ಮತ್ತು 14 ಸಾವಿರ ರೂ. ಹಣ ನಗದು ಕಳುವಾಗಿತ್ತು.ಬೀರುವಿನಲ್ಲಿ ಇಟ್ಟ 4 ಲಕ್ಷದ 53 ಸಾವಿರ…
ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಒಳರೋಗಿ ಆಸ್ಪತ್ರೆ ಆವರಣದಲ್ಲಿ ಸಾವು|meggan
ಶಿವಮೊಗ್ಗದ ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯಲ್ಲಿ ನಡೆದ ಒಂದು ಘಟನೆ ಸದ್ಯ ಎಲ್ಲ ರೋಗಿ, ರೋಗಿಗಳ ಸಂಬಂಧಿಕರನ್ನು ಬೆಚ್ಚಿ ಬೀಳಿಸಿದೆ. ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯು ಮೃತಪಟ್ಟಿದ್ದಾನೆ. ಆಸ್ಪತ್ರೆ ಒಳಗೆ ಮೃತಪಟ್ಟಿದ್ದರೆ ಯಾರಿಗೂ ಅಚ್ಚರಿ ಆಗುತ್ತಿರಲಿಲ್ಲ. ಹೌದು ಇಲ್ಲಿ ಒಳ ರೋಗಿಯು ಆಸ್ಪತ್ರೆಯ ಆವರಣದಲ್ಲಿ ಮೃತಪಟ್ಟಿದ್ದಾನೆ. ಹೀಗೆ ಮೃತಪಟ್ಟಿರುವ ವ್ಯಕ್ತಿಯ ಹೆಸರು. ಮಂಜುನಾಥ್(32) ದಾವಣಗೆರೆ ಜಿಲ್ಲೆಯ ಚನ್ನಗರಿ ಪಟ್ಟಣದ ನಿವಾಸಿ. ಮೇ. 19 ರಂದು ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣಕ್ಕೆ ಇತನನ್ನು ಕುಟುಂಬಸ್ಥರು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು….
ಗೆಳತಿಗೆ ಬೈಕ್‌ನಲ್ಲಿ ಡ್ರಾಪ್ ಕೊಟ್ಟಿದ್ದಕ್ಕೆ ಯುವಕನ ಮೇಲೆ ಹಲ್ಲೆ|moral police
ಶಿವಮೊಗ್ಗ: ಮುಸ್ಲಿಂ ಯುವತಿಯನ್ನು ಬೈಕಿನಲ್ಲಿ ಡ್ರಾಪ್ ಮಾಡಿದ್ದಕ್ಕೆ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ವಿಶ್ವೇಶ್ವರಯ್ಯ ನಗರದ ಹಿಂದೂ ಯುವಕ ಹಾಗೂ ಖಲಂದರ್ ನಗರದ ಮುಸ್ಲಿಂ ಯುವತಿ ಇಬ್ಬರೂ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಮುಸ್ಲಿಂ ವಿದ್ಯಾರ್ಥಿನಿಯ ಸಹೋದರಿಗೆ ಅಪಘಾತ ಸಂಭವಿಸಿ ಗಾಯಗೊಂಡಿದ್ದ ವಿಷಯ ತಿಳಿದ ನಂತರ ಆಕೆ ತನ್ನ ಸಹಪಾಠಿ ಹಿಂದೂ ಯುವಕನಿಂದ ಬೈಕ್‌ನಲ್ಲಿ ತನ್ನ ಮನೆಗೆ ಡ್ರಾಪ್ ಪಡೆದಿದ್ದಳು. ಡ್ರಾಪ್ ನೀಡಿ…
ಸಿಡಿಲು ಬಡಿದು ಮಹಿಳೆ ಸಾವು|lightning
ಜಿಲ್ಲೆಯಲ್ಲಿ ಇಂದು ಸಂಜೆ ಗುಡುಗು ಸಹಿತ ಭಾರೀ ಮಳೆಯಿಂದಾಗಿ ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಶಿವಮೊಗ್ಗ ನಗರದಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಶಿವಮೊಗ್ಗ ನಗರದ ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ವಾಸಿಸುತ್ತಿದ್ದಂತ ಲಕ್ಷ್ಮೀಬಾಯಿ(28) ಎಂಬುವರು ಇಂದು ಕುರಿಗಳಿಗೆ ಮೇವು ತರಲು ಹೋಗಿದ್ದರು. ಈ ವೇಳೆ ಸಿಡಿಲು ಬಡಿದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಜಿಲ್ಲೆಯ ಅನೇಕ ಪ್ರದೇಶಗಳಲ್ಲಿ ಮರಗಳು ಬಿದ್ದು ರಸ್ತೆ ಸಂಚಾರ ಕೂಡ ಬಂದ್ ಆಗಿರುವಂತ ಘಟನೆ ನಡೆದಿದೆ. ಈ ವಿಷಯ ತಿಳಿದಂತ ವಿನೋಬ ನಗರ…
ಶಿವಮೊಗ್ಗ ಮೂಲದ ಮಹಿಳೆ ನಾಪತ್ತೆ|missing
ಶಿವಮೊಗ್ಗ ಮೂಲದ ಕೆ.ಶುಭಾ ಎಂಬವರು ಉಡುಪಿಯಿಂದ ಬೆಂಗಳೂರಿಗೆ ಹೋಗುತ್ತೇನೆ ಎಂದು ಹೇಳಿ ಹೋದವರು ನಾಪತ್ತೆಯಾಗಿದ್ದಾರೆ. ಈಕೆ ಬಹರೈನ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು. ಅಲ್ಲಿಂದ ತಮ್ಮ ಗಂಡನ ಮನೆ ಇರುವ ಉಡುಪಿ ಜಿಲ್ಲೆಯ ಗೋಪಾಲಪುರಕ್ಕೆ ಬಂದಿದ್ದರು. ಆನಂತರ ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋಗಿದ್ದಾರೆ ಆ ಬಳಿಕ ನಾಪತ್ತೆಯಾಗಿದ್ದಾರೆ. ಇವರ ಗುರುತು 5 ಅಡಿ ಎತ್ತರ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು ಕನ್ನಡ, ಮರಾಠಿ, ಇಂಗ್ಲಿಷ್ ಹಾಗೂ ಹಿಂದಿ ಭಾಷೆ ಮಾತ ನಾಡುತ್ತಾರೆ. ಇವರ ಬಗ್ಗೆ ಮಾಹಿತಿ…
ಹೊಸನಗರ : ಉರುಳಿಗೆ ಸಿಲುಕಿ ಚಿರತೆ ಸಾವು..!|leopard
ಹೊಸನಗರ : ಉರುಳಿಗೆ ಸಿಲುಕಿ ಚಿರತೆ ಸಾವು ! ಹೊಸನಗರ: ತಾಲೂಕಿನಲ್ಲಿ ನಗರ ಹೋಬಳಿ ವ್ಯಾಪ್ತಿಯ ಅಂಡಗದೋದೂರು ಗ್ರಾಮದ ಸರ್ವೆ ನಂಬರ್ 64 ರಲ್ಲಿ 4-5 ವರ್ಷ ಪ್ರಾಯದ ಗಂಡು ಚಿರತೆ ಕಾಡು ಪ್ರಾಣಿಗಳ ಬೇಟೆಗೆ ಹಾಕಿದ್ದ ಉರುಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಶುಕ್ರವಾರ ನಗರ ವಲಯ ಅರಣ್ಯ ಅಧಿಕಾರಿ ಸಂಜಯ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಜಿಲ್ಲಾ ವನ್ಯಜೀವಿ ಸಂರಕ್ಷಣ ವಿಭಾಗದ ವೈದ್ಯರನ್ನು ಸ್ಥಳಕ್ಕೆ ಕರೆಸಿ ಮೃತ…
ಖಾಸಗಿ ವೀಡಿಯೋ ಚಿತ್ರಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್ – ಪ್ರಕರಣ ದಾಖಲು|cybercrime
ಶಿವಮೊಗ್ಗ : ಮಹಿಳೆಯೊಬ್ಬಳ ಅಶ್ಲೀಲ ವಿಡಿಯೋ ಮತ್ತು ಚಿತ್ರಗಳನ್ನು ಮೊಬೈಲ್ ನಲ್ಲಿ ಚಿತ್ರಿಸಿ ತನ್ನ ಬಳಿ ಬರುವಂತೆ ಬ್ಲ್ಯಾಕ್ ಮೇಲ್ ಮಾಡಿ, ಮಹಿಳೆಯ ಸಂಬಂಧಿಕರಿಗೆ ಆ ಖಾಸಗಿ ಫೋಟೊ, ವಿಡಿಯೋಗಳನ್ನು ಶೇರ್ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ವ್ಯಕ್ತಿಯು ಮಹಿಳೆಯೊಂದಿಗೆ ಸಲುಗೆಯಿಂದ ವರ್ತಿಸಿದ್ದು, ಬೆಂಗಳೂರಿನಲ್ಲಿದ್ದಾಗ ಮಹಿಳೆಯ ಖಾಸಗಿ ಫೋಟೊ ಮತ್ತು ವಿಡಿಯೋಗಳನ್ನು ಚಿತ್ರೀಕರಿಸಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮಹಿಳೆಯು ಶಿವಮೊಗ್ಗದಲ್ಲಿ ವಾಸವಿದ್ದು ಆಕೆಗೆ ಕರೆ ಮಾಡಿ ತನ್ನೊಂದಿಗೆ ಬಂದಿರುವಂತೆ ಒತ್ತಡ ಹೇರುತ್ತಿದ್ದ. ಇಲ್ಲದ್ದಿದ್ದರೆ ಸಂಬಂಧಿಕರಿಗೆ ಖಾಸಗಿ…