Headlines

ರಿಪ್ಪನ್‌ಪೇಟೆ : ನಾಪತ್ತೆಯಾಗಿದ್ದ ವ್ಯಕ್ತಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ|missing

ರಿಪ್ಪನ್‌ಪೇಟೆ : ಕಳೆದ ಏಳು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಡಾಹೊಸಹಳ್ಳಿ ಗ್ರಾಮದ ಕೃಷಿಕ ವೀರಪ್ಪ(62) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಕಳೆದ ಏಳು ದಿನಗಳಿಂದ ಕಾಣೆಯಾಗಿದ್ದ ವೀರಪ್ಪ ರವರನ್ನು ಕುಟುಂಬಸ್ಥರು ಎಲಾ ಕಡೆ ಹುಡುಕಾಡಿದ್ದಾರೆ ನಂತರ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವನ್ನು ಕೂಡಾ ದಾಖಲಿಸಿದ್ದರು. ಇಂದು ವೀರಪ್ಪ ರವರ ಮನೆ ಹಿಂಭಾಗ ದಟ್ಟ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ…

Read More

ರಿಪ್ಪನ್‌ಪೇಟೆ : ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತಿದ್ದ ಲಾರಿ ವಶಕ್ಕೆ|Illegal quarrying

ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತಿದ್ದ ಲಾರಿ ವಶಕ್ಕೆ ರಿಪ್ಪನ್‌ಪೇಟೆ : ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ. ಹೊಸನಗರ ಮತ್ತು ರಿಪ್ಪನ್‌ಪೇಟೆ ರಾಜ್ಯ ಹೆದ್ದಾರಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತಿದ್ದಾಗ ಚಿಕ್ಕಜೇನಿ ಸಮೀಪದಲ್ಲಿ ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತಿದ್ದ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ಲಾರಿಯನ್ನು ಹೆಚ್ಚಿನ ತನಿಖೆಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Read More

ಎರಡು ಕಾರುಗಳ ನಡುವೆ ಅಪಘಾತ – ದುಬಾರಿ ಕಾರುಗಳು ಜಖಂ|Accident

ತೀರ್ಥಹಳ್ಳಿ : ಮುಂದೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಘಟನೆ ಸಕ್ರೆಬೈಲ್​ ಬಳಿಯಲ್ಲಿ ನಡೆದಿದೆ.  ಶಿವಮೊಗ್ಗ-ತೀರ್ಥಹಳ್ಳಿ ಹೆದ್ಧಾರಿಯಲ್ಲಿ ನಡೆದ ಘಟನೆಯಲ್ಲಿ, ಯಾರಿಗೂ ಅಪಾಯ ಸಂಭವಿಸಿಲ್ಲ. ಫೋರ್ಡ್​ ಇಕೋ ಹಾಗೂ ಕಿಯಾ ಕಾರು  ನಡುವೆ ಈ ಅಪಘಾತ ಸಂಭವಿಸಿದ್ದು, ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಆದರೆ ಡಿಕ್ಕಿಯಾದ ರಭಸಕ್ಕೆ ಎರಡು ಕಾರುಗಳ ಒಂದೊಂದು ಬದಿಗೆ ಹೋಗಿ ನಿಂತಿವೆ.  ಘಟನೆ ಬೆನ್ನಲ್ಲೆ ಸ್ಥಳೀಯರು ಬಂದು ಕಾರಿನಲ್ಲಿದ್ದವರಿಗೆ ಆರೈಕೆ ಮಾಡಿದ್ಧಾರೆ.

Read More

ಸಲೂನ್ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ – 6 ಯುವತಿಯರ ರಕ್ಷಣೆ, ದಂಪತಿ ಬಂಧನ

ಶಿವಮೊಗ್ಗ : ಸಲೂನ್ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಸಲೂನ್ ಮಾಲೀಕರನ್ನು ಬಂಧಿಸಿ, 6 ಜನ ಮಹಿಳೆಯರನ್ನು ಮಹಿಳಾ ಪೊಲೀಸರು ರಕ್ಷಿಸಿ, ದಂಧೆ ನಡೆಸುತ್ತಿದ್ದ ಆರೋಪಿ ದಂಪತಿಯನ್ನು ಬಂಧಿಸಲಾಗಿದೆ. ನಗರದ ಕುವೆಂಪು ರಸ್ತೆಯ ಸಾಯಿ ಆರ್ಕೇಡ್ ಕಟ್ಟಡದ ರಾಯಲ್ ಆರ್ಚ್ ಫ್ಯಾಮಿಲಿ ಸಲೂನ್ ಮತ್ತು ಸ್ಪಾನಲ್ಲಿ ಸ್ಪಾ ಹೆಸರಿನಲ್ಲಿ ಮಹಿಳೆಯನ್ನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಮಹಿಳಾ ಪೊಲೀಸರು ದಾಳಿ‌ ನಡೆಸಿದ್ದಾರೆ. ದಾಳಿಯ ವೇಳೆ ಸ್ಪಾ ನಲ್ಲಿ 6 ಜನ ಯುವತಿಯರನ್ನು…

Read More

ಸ್ನೇಹಿತನೊಂದಿಗೆ ನದಿಯಲ್ಲಿ ಈಜಲು ತೆರಳಿದ್ದ ಬಾಲಕ ಸಾವು|Death by drowning

ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬ ನೀರುಪಾಲದ ಘಟನೆ ಇಂದು ಸಂಜೆ ವೇಳೆ ನೆಡೆದಿದೆ. ಪಟ್ಟಣದ ಛತ್ರಕೇರಿ ಹತ್ತಿರದ ಜಯಲಕ್ಷ್ಮಿ ಸಾಮಿಲ್ ಬಳಿ ನದಿಯಲ್ಲಿ ಈಜಲು ಹೋಗಿದ್ದ ಅಶ್ವಥ್ (16 ವರ್ಷ) ಸಾವನ್ನಪ್ಪಿದ್ದಾನೆ. ತನ್ನ ಸ್ನೇಹಿತನ ಜೊತೆ ಸಂಜೆ ವೇಳೆ ಈಜಲು ತೆರಳಿದಾಗ ಈ ಘಟನೆ ಜರುಗಿದೆ. ಅಗ್ನಿಶಾಮಕದಳ ಹಾಗೂ ಸ್ಥಳೀಯರ ಸಹಾಯದಿಂದ ಮೃತದೇಹವನ್ನು ಹೊರತೆಗೆಯಲಾಗಿದೆ.  ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Read More

ಮಲಗಿದ್ದಾಗ ಹಾವು ಕಚ್ಚಿದೆ ಎಂದರು ಎಚ್ಚೆತ್ತುಕೊಳ್ಳದ ಪೋಷಕರು – ಪಿಯುಸಿ ವಿದ್ಯಾರ್ಥಿನಿ ಸಾವು|Snake bite

ಸೊರಬ : ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಮಲಗಿದ್ದಾಗ ದಿಡೀರನೇ ಎದ್ದು ಕೂತು ನನಗೆ ಹಾವು ಕಚ್ಚಿದೆ ಎಂದು ಯುವತಿ ಹೇಳಿಕೊಂಡಿದ್ದಾಳೆ. ಆದರೆ, ಕರೆಂಟ್‌ ಹಾಕಿ ನೋಡಿದಾಗ ಹಾವು ಕಾಣದ ಹಿನ್ನೆಲೆಯಲ್ಲಿ ಮನೆಯವರು ಆಸ್ಪತ್ರೆಗೆ ಕರೆದೊಯ್ಯದೇ ಬೈದು ಮಲಗಿದ್ದರು. ಆದರೆ, ಬೆಳಗ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ಕರೆದೊಯ್ದಾಗ ವಿಷ ದೇಹದ ತುಂಬಾ ಹರಡಿಕೊಂಡು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಇನ್ನು ಮೃತ ಯುವತಿಯನ್ನು ಅಕ್ಷತಾ ( 17) ಎಂದು ಗುರುತಿಸಲಾಗಿದೆ. ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ…

Read More

ಸಹೋದರಿಯರ ಮಕ್ಕಳ ಜೊತೆ ಯುವಕ ನೀರುಪಾಲು|Water disaster

ಈಜಲು ನೀರಿಗಿಳಿದಿದ್ದ ವೇಳೆ ಭದ್ರಾ ಚಾನಲ್​ನಲ್ಲಿ ಕೊಚ್ಚಿಕೊಂಡು ಹೋಗಿದ್ದ ಮೂವರ ಪೈಕಿ ಇಬ್ಬರ ಶವ ಪತ್ತೆಯಾಗಿದೆ. ಬೆಳಗ್ಗೆ ಅನನ್ಯ ಎಂಬಾಕೆಯ ಶವ ಪತ್ತೆಯಾಗಿತ್ತು.ಬಳಿಕ ರವಿ ಎಂಬವರ ಶವ ಪತ್ತೆಯಾಗಿದೆ.  ನೀರಿನಲ್ಲಿ ಆಟವಾಡುವಾಗ ಕಾಲು ಜಾರಿ ಲಕ್ಕವಳ್ಳಿ ಡ್ಯಾಮ್ ಸಮೀಪದ ಭದ್ರಾ ಕಾಲುವೆಯಲ್ಲಿ ಮೂವರು ಕೊಚ್ಚಿಕೊಂಡು ಹೋಗಿದ್ಧರು.  ಮೃತರನ್ನು ಲಕ್ಕವಳ್ಳಿ ಮೂಲದ ರವಿ (31), ಶಿವಮೊಗ್ಗ ಮೂಲದ ಹದಿನಾರು ವರ್ಷದ ಅನನ್ಯ ಹಾಗೂ ಚಾಮರಾಜನಗರ ಜಿಲ್ಲೆ, ನಂಜನಗೂಡು ಮೂಲದ 19 ವರ್ಷದ ಶಾಮವೇಣಿ ಎಂದು ಗುರುತಿಸಲಾಗಿದೆ.  ಮೃತ ಶಾಮವೇಣಿ…

Read More

ಹೊಸನಗರ : ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ|Accident

ಮಂಗಳೂರಿನಿಂದ ಶಿವಮೊಗ್ಗದತ್ತ ಹೊರಟಿದ್ದ ಪೆಟ್ರೋಲ್‌ ಟ್ಯಾಂಕರ್‌ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ಇಂದು ಸಂಜೆ ನಡೆದಿದೆ. ಬಿದನೂರು ನಗರದ ಶಾಂತಿಕೆರೆ ಸರ್ಕಲ್ ನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿದ್ದು ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಹೊಸನಗರ – ನಗರ ರಸ್ತೆ ಸಂಚಾರ ವ್ಯತ್ಯಯವಾಗಿದ್ದು,  ಸಾವಿರಾರು ಲೀಟರ್ ಪೆಟ್ರೋಲ್ ಸೋರಿಕೆಯಾಗಿದ್ದ ಹಿನ್ನಲೆಯಲ್ಲಿ ನಗರ ಪೊಲೀಸ್…

Read More

ಚಾಲಕನಿಗೆ ನಿದ್ರೆ ಮಂಪರು – ಕಾರು ಪಲ್ಟಿ|Accident

ನಿದ್ದೆ ಮಂಪರಿನಲ್ಲಿದ್ದ ಚಾಲಕ – ತಳುವೆ ಬಳಿ ಕಾರು ಪಲ್ಟಿ ! ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಳುವೆಯ ಶಾಲೆಯ ಸಮೀಪ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಪಲ್ಟಿ ಹೊಡೆದಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ತೀರ್ಥಹಳ್ಳಿಯಿಂದ ಕೊಪ್ಪಕ್ಕೆ ಹೋಗುತ್ತಿದ್ದ  ಕಾರಿನಲ್ಲಿ ಚಾಲಕ ಮಾತ್ರ ಇದ್ದ ಎನ್ನಲಾಗುತ್ತಿದ್ದು  ಆತನನ್ನು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ಕರೆದೋಯ್ಯಲಾಗಿದೆ. ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದು ಇದರಿಂದ ಹಾಗಾಗಿ ಯಾವುದೇ ರೀತಿ…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ  ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಲಿನಕುರುವಳ್ಳಿಯಲ್ಲಿ ನಡೆದಿದೆ. ಮೂಡಿಗೆರೆಯಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಕಾರು ಮೇಲಿನಕುರುವಳ್ಳಿ ಸಮೀಪದ ತೀರಳೆಬೈಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕನೊಬ್ಬನೆ ಪ್ರಯಾಣಿಸುತಿದ್ದು ನಿದ್ದೆ ಮಂಪರಿನಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗುತಿದೆ.ತಕ್ಷಣವೇ ಸ್ಥಳೀಯರು ಚಾಲಕನನ್ನು ಕಾರಿನಿಂದ ಹೊರ ತೆಗೆದಿದ್ದಾರೆ. ಚಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More