ಗೃಹ ಸಚಿವರ ಜಿಲ್ಲೆಯಲ್ಲಿ ಮಿತಿಮೀರಿದ ರೌಡಿಗಳ ಹಾವಳಿ! ಜೀವ ಬೆದರಿಕೆ ಹಾಕಿ ಹಣಕ್ಕೆ ಡಿಮ್ಯಾಂಡ್
ಶಿವಮೊಗ್ಗ: ಗೃಹ ಸಚಿವ ಆರಗ ಜ್ಞಾನೇಂದ್ರರವರ ಜಿಲ್ಲೆಯಲ್ಲೇ ರೌಡಿಗಳ ಹಾವಳಿ ಮಿತಿಮೀರಿದೆ. ರೌಡಿಗಳು ಉದ್ಯಮಿಗಳಿಗೆ ಜೀವ ಬೆದರಿಕೆ ಹಾಕಿ ಹಣ ನೀಡುವಂತೆ ಡಿಮ್ಯಾಂಡ್ ಮಾಡುತ್ತಿದ್ದಾರೆ. ಶಿವಮೊಗ್ಗದ ಕುಖ್ಯಾತ ರೌಡಿ ಬಚ್ಚಾ ಅಲಿಯಾಸ್ ಜಮೀರ್ ಉದ್ಯಮಿಗಳಿಗೆ ಜೀವ ಬೆದರಿಕೆ ಹಾಕಿ ಹಣ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾನೆ. ಹಣ ನೀಡುವಂತೆ ಹೆದರಿಸಲು ಜಮೀರ್ ಸಹಚರರು ಉದ್ಯಮಿ ಮನೆ ಮೇಲೆ ದಾಳಿ ನಡೆಸಿದ್ದು, ಈ ಪ್ರಕರಣ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ. ಜಮೀರ್ ಶಿವಮೊಗ್ಗದ ಶಾದ್ ನಗರದ ಉದ್ಯಮಿಯಾಗಿರುವ ಅನ್ಸರ್ ಎಂಬುವವರಿಗೆ…