ಕ್ರೈಂ ಸುದ್ದಿ:
ಬ್ಯಾಂಕ್ ಕಳ್ಳತನಕ್ಕೆ ವಿಫಲ ಯತ್ನ – ಸರಣಿ ಕಳ್ಳತನ ಆರೋಪದಲ್ಲಿ ಕಬಾಬ್ ಗಣೇಶ್ ಬಂಧನ|theft
ಶಿವಮೊಗ್ಗ ಜಿಲ್ಲೆಯ ಹೊಸನಗರ ಪ್ರತಿಷ್ಟಿತ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಪಿಎಲ್‌ಡಿ ಬ್ಯಾಂಕ್ ಮುಂಭಾಗದ ಎರಡು ಬೀಗಗಳನ್ನು ಒಡೆದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಕಾಳಿಕಾಪುರದ ಕಬಾಬ್ ಗಣೇಶ್ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿ ಹಾಕಿಕೊಂಡಿರುವ ಆರೋಪಿಯಾಗಿದ್ದಾನೆ. ಹೊಸನಗರ ತಾಲ್ಲೂಕಿನಲ್ಲಿ ಸುಮಾರು ಎರಡು ತಿಂಗಳುಗಳಿಂದ ಕಪಿಲ ಫೈನಾನ್ಸ್, ವೀರಶೈವ ಪತ್ತಿನ ಸಹಕಾರ ಸಂಘ, ರಕ್ಷಿತಾ ಫೈನಾನ್ಸ್, ಪುನಃ ವೀರಶೈವ ಪತ್ತಿನ ಸಹಕಾರ ಸಂಘ, ನಗರ ನೀಲಕಂಠೇಶ್ವರ ಸೊಸೈಟಿ, ಪುರಪ್ಪೆಮನೆ ಸೊಸೈಟಿಗಳಲ್ಲಿ 15 ದಿನಗಳಿಗೊಮ್ಮೆ ಸಹಕಾರ ಸಂಸ್ಥೆಗಳ…
RIPPONPET : ಬಾರ್ ನಲ್ಲಿ ಬಿಲ್ ವಿಚಾರಕ್ಕೆ ಗಲಾಟೆ – ರಕ್ತಸಿಕ್ತವಾದ ಬಾರ್|ಪುಡಿಪುಡಿ -ಇಬ್ಬರ ವಿರುದ್ದ ಪ್ರಕರಣ ದಾಖಲು
ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರಿನ ಕೀಳಂಬಿ ರಸ್ತೆಯಲ್ಲಿರುವ ಮೂಲಗಿರೀಶ್ ಬಾರ್ ಅಂಡ್ ರೆಸ್ಟೋರೆಂಟ್ ಬಿಲ್ ವಿಚಾರದಲ್ಲಿ ಮಾರಾಮಾರಿ ಗಲಾಟೆ ನಡೆದು ಬಾರ್ ರಕ್ತಸಿಕ್ತವಾದ ಘಟನೆ ಗುರುವಾರ ರಾತ್ರಿ ನಡೆದಿದೆ. ರಿಪ್ಪನ್‌ಪೇಟೆ ಸಮೀಪದ ಬಿಳಿಕಿ ಗ್ರಾಮದ ಕ್ರಾಂತಿ ಮತ್ತು ಸುದರ್ಶನ್ ಮೇಲೆ ಪ್ರಕರಣ ದಾಖಲಾಗಿದೆ. ಮದ್ಯ ಸೇವಿಸಲು ಬಾರ್ ಗೆ ಬಂದಿದ್ದ ಇಬ್ಬರು ಮದ್ಯ ಸೇವಿಸಿದ್ದಾರೆ.ನಂತರ ಬಿಲ್ ಪಾವತಿಸುವ ವೇಳೆಯಲ್ಲಿ ಕ್ಯಾಷಿಯರ್ ಜೊತೆ ಮಾತಿಗೆ ಮಾತು ನಡೆದು ಗಲಾಟೆ ಪ್ರಾರಂಭವಾಗಿದೆ. ಗಲಾಟೆಯಲ್ಲಿ ಮದ್ಯದ ಬಾಟಲಿಗಳನ್ನು ಒಡೆದು, ಬಾಗಿಲಿಗೆ…
ಲಾರಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಪುರುಷನ ಶವ ಪತ್ತೆ..!!|deadbody
ತೀರ್ಥಹಳ್ಳಿ : ಪಟ್ಟಣದ ಹೊಸ ಕೋರ್ಟ್ ಬಳಿ ಲಾರಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ. 4 ದಿನಗಳ ಹಿಂದೆಯೇ ಲಾರಿಯಲ್ಲೇ ಹೃದಯಾಘಾತದಿಂದ ಸಾವನಪ್ಪಿರಬಹುದು ಎಂದು ಹೇಳಲಾಗುತ್ತಿದೆ. ನಾಲ್ಕು ದಿನಗಳ ಹಿಂದೆ ಹುಬ್ಬಳ್ಳಿಯಿಂದ ಲಾರಿಯಲ್ಲಿ ಲೋಡ್ ತುಂಬಿಸಿಕೊಂಡು ಬಂದು ತೀರ್ಥಹಳ್ಳಿಯಲ್ಲಿ ಇಳಿಸಿ ರಾತ್ರಿ ಊಟ ಮಾಡಿ ಲಾರಿಯಲ್ಲಿ ಮಲಗಿದ್ದಾಗ ಹೃದಯಘಾತವಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಅಂದಾಜು 50 ವರ್ಷದ ವ್ಯಕ್ತಿ ಎನ್ನಲಾಗುತಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜೆಸಿ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು|accident
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ದೇವಂಗಿ ಸಮೀಪದ ಬಾಣಂಕಿ ಬಳಿ ಶುಕ್ರವಾರ ರಾತ್ರಿ ಭೀಕರ ಕಾರು ಅಪಘಾತ ನಡೆದಿದೆ. ಶುಕ್ರವಾರ ತಡರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಕೂದಲೆಳೆ ಅಂತರದಲ್ಲಿ 5 ಮಹಿಳೆಯರು ಜೀವಾಪಾಯದಿಂದ ಪಾರಾಗಿದ್ದಾರೆ. ಕುಪ್ಪಳಿಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಟಾಟಾ ಹ್ಯಾರಿಯರ್ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. 5 ಮಂದಿ ಮಹಿಳೆಯರಿದ್ದ ಕಾರಲ್ಲಿ ಒಬ್ಬರಿಗೆ ಗಂಭೀರ ಗಾಯಗೊಂಡಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯ ಆಗಿದೆ. ಎಲ್ಲರನ್ನು ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ….
ಹುಂಚ ಸಮೀಪದ ಸರ್ಕಾರಿ ಶಾಲೆಯ ಇಬ್ಬರು ಶಿಕ್ಷಕರ ವಿರುದ್ದ ಪೋಕ್ಸೋ ಪ್ರಕರಣ ದಾಖಲು|pocso
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಸಮೀಪದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಇಬ್ಬರು ಶಿಕ್ಷಕರ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಳೆದೊಂದು ತಿಂಗಳ ಹಿಂದೆ 5ನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ಅಸಭ್ಯವರ್ತನೆ ತೋರಿದ್ದು ನೊಂದ ಬಾಲಕಿ ತಾಯಿಯ ಬಳಿ ಘಟನೆಯ ವಿವರವನ್ನು ತಿಳಿಸಿದ್ದಾಳೆ. ಆಗ ಬಾಲಕಿಯ ತಾಯಿ ಶಾಲೆಯ ಶಿಕ್ಷಕಿಯಲ್ಲಿ ಶಿಕ್ಷಕನಿಗೆ ಬುದ್ದಿ ಹೇಳಲು ಹೇಳಿದ್ದಾರೆ. ಆದರೆ ಆದರೆ ಶಿಕ್ಷಕಿ ಘಟನೆಯ ಬಗ್ಗೆ ಪಾಲಕರಿಗೆ ಯಾವುದೇ ಮಾಹಿತಿ ನೀಡಿಲ್ಲ. ಬಾಲಕಿಯ…
ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಲಾರಿ ಅಪಘಾತ – ಟ್ರಾಫಿಕ್ ಜಾಮ್ ನಿಂದ ಪರದಾಡಿದ ಪ್ರಯಾಣಿಕರು|agumbe
ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಅಪಘಾತ – ಟ್ರಾಫಿಕ್ ಜಾಮ್ ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಲಾರಿ ಅಪಘಾತಕ್ಕಿಡಾಗಿದ್ದು ಘಾಟಿ ಸಂಚಾರದಲ್ಲಿ ಕಿ.ಮಿ.ಗಟ್ಟಲೇ ವಾಹನಗಳು ಗಂಟೆಗಟ್ಟಲೇ ನಿಂತು ಭಾರೀ ಸಮಸ್ಯೆಗೆ ಕಾರಣವಾಯಿತು. ಘಾಟಿಯ 9ನೇ ತಿರುವಿನಲ್ಲಿ ಘಾಟಿ ಇಳಿಯುತ್ತಿದ್ದ ವೇಳೆ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಲಾರಿ ಡಿಕ್ಕಿ ಹೊಡೆದಿದೆ. ಯಾವುದೇ ಅನಾಹುತ ಸಂಭವಿಸಿಲ್ಲ. ಆದರೆ ಉಡುಪಿ ಭಾಗದಿಂದ ಹಾಗೂ ತೀರ್ಥಹಳ್ಳಿ ಮಾರ್ಗದಿಂದ ಹೋಗಿ ಬರುತಿದ್ದ ವಾಹನ ಸವಾರರು ಮತ್ತು ಪ್ರಯಾಣಿಕರು ಗಂಟೆಗಟ್ಟಲೆ ಪರದಾಟ ನಡೆಸಿದರು.
ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಇಬ್ಬರು ಯುವಕರ ಬಂಧನ|arrest
ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯ ಮಾರಿಗುಡ್ಡದ ಹೆಲಿಪ್ಯಾಡ್ ಬಳಿ ಇಬ್ಬರು ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದು ಈ ಆರೋಪಿಗಳನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಟ್ಟೆಮಲ್ಲಪ ಗ್ರಾಮದ ಫಯಾಜ್ ಬಿನ್ ಕರೀಂ ಸಾಬ್ ಹಾಗೂ ಮೊಹಮ್ಮದ್ ತಾಯಿಜ್ ಬಿನ್ ಮೊಹಮ್ಮದ್ ಎಂಬುವವರನ್ನು ಬಂಧಿಸಲಾಗಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ನೀರರಾಜ್ ನರಲಾರರವರ ಆದೇಶದ ಮೇರೆಗೆ ಪೊಲೀಸ್ ಸಿಬ್ಬಂದಿಗಳು ಕೇಸ್ ದಾಖಲಿಸಿಕೊಂಡು ತನಿಖೆ ಕಾರ್ಯ ಕೈಗೊಂಡಿದ್ದಾರೆ.
ರಿಪ್ಪನ್‌ಪೇಟೆ – ಕೊಳೆತ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ|deadbody
ರಿಪ್ಪನ್‌ಪೇಟೆ – ಕೊಳೆತ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಬೆಟ್ಟಿನಕೆರೆ ಗ್ರಾಮದ ಮನೆಯೊಂದರಲ್ಲಿ ಪುರುಷನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಟ್ಟಿನಕೆರೆ ನಿವಾಸಿ ಜೋಸ್ (ಆಲುವ) ಎಂಬ ವ್ಯಕ್ತಿ ಮೃತಪಟ್ಟಿದ್ದಾನೆ ಎನ್ನಲಾಗುತಿದೆ. ಈತನು ಮನೆಯಲ್ಲಿ ಒಬ್ಬನೇ ವಾಸ ಮಾಡುತಿದ್ದು ಪತ್ನಿ ಮತ್ತು ಮಕ್ಕಳು ಹಲವು ವರ್ಷಗಳ ಹಿಂದೆಯೇ ಈತನನ್ನು ಬಿಟ್ಟು ಹೋಗಿದ್ದರು. ಮನೆಯಲ್ಲಿ ಒಬ್ಬನೇ ವಾಸ ಮಾಡುತಿದ್ದ ಈತನು ನಾಲ್ಕು ದಿನಗಳ ಹಿಂದೆ ಈತ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ. ಈತ ಮನೆಮನೆಗೆ…
ಡೆತ್ ನೋಟ್ ಬರೆದಿಟ್ಟು ಯಡಗುಡ್ಡೆ ಬೆಟ್ಟದ ಮೇಲೆ ಅಗ್ನಿಸ್ಪರ್ಶ ಮಾಡಿಕೊಂಡ ಮಹಿಳೆ…!!!! ಜ್ಯೋತಿಷಿ ಮಾತು ಕೇಳಿ ಮೋಕ್ಷ ಪ್ರಾಪ್ತಿಗೆ ಆತ್ಮಹತ್ಯೆ ಮಾಡಿಕೊಂಡರಾ ಜಯಶ್ರೀ…????ಈ ಸುದ್ದಿ ನೋಡಿ|sucide
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಯಡಗುಡ್ಡೆ ಗ್ರಾಮದಲ್ಲಿ ನಾಪತ್ತೆಯಾಗಿದ್ದ ಮಹಿಳೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕಳೆದ ಸೋಮವಾರದಿಂದ ಹೊದಲ ಗ್ರಾಪಂ ವ್ಯಾಪ್ತಿಯ ಯಡಗುಡ್ಡೆ ಸಮೀಪದ ಹೊಸಳ್ಳಿ ಗ್ರಾಮದ ಜಯಶ್ರೀ (52) ಎಂಬುವರು ನಾಪತ್ತೆಯಾಗಿದ್ದರು. ಜ. 23 ರಂದು ಸಂಜೆ ವಾಕಿಂಗ್ ಹೋದವರು ಮನೆಗೆ ಹಿಂದಿರುಗಿಲ್ಲ. ಎಂದು ದೂರು ದಾಖಲಾಗಿತ್ತು. ಜ. 27ರಂದು ಯಡಗುಡ್ಡೆ ಗ್ರಾಮದ ಗುಡ್ಡದ ಮೇಲೆ ಜಯಶ್ರೀ ಅವರ ಶವ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ….
ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರಿಗೆ ತೀವ್ರ ಗಾಯ|accident
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪ ಕ್ಯಾಂಟರ್ ಹಾಗೂ ಕಾರಿನ ನಡುವೆ ಡಿಕ್ಕಿ…!!! ಸಾಗರ ತಾಲೂಕಿನ ಆನಂದಪುರ ಪೊಲೀಸ್ ಸ್ಟೇಷನ್ ಸಮೀಪದಲ್ಲಿ ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಆನಂದಪುರದಿಂದ ಸಾಗರದ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ಹಾಗೂ ಸಿದ್ದೇಶ್ವರ ಕಾಲೋನಿಯಿಂದ ಆನಂದಪುರದ ಕಡೆಗೆ ಸಾಗುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ(KA 17 M 9578) ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಈ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ತೀವ್ರವಾದ ಗಾಯವಾಗಿದ್ದು…