ಕ್ರೈಂ ಸುದ್ದಿ:
ಎರಡು ದಿನಗಳಿಂದ ನಾಪತ್ತೆಯಾಗಿದ್ದ ನಾಲ್ಕು ವರ್ಷದ ಮಗು ಕೆರೆಯಲ್ಲಿ ಶವವಾಗಿ ಪತ್ತೆ|death
ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ನಾಲ್ಕು ವರ್ಷದ ಮಗು ಇಂದು ಮನೆಯ ಸಮೀಪದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಮನೆಯ ಬಳಿ ಆಟವಾಡುತಿದ್ದ ಮಗು ಕಾಣೆಯಾಗಿತ್ತು,ಎಲ್ಲಾ ಕಡೆ ವಿಚಾರಿಸಿ ಕೊನೆಗೆ ಪೊಲೀಸ್ ಠಾಣೆಯಲ್ಲಿ ಅವರ ತಂದೆ ದೂರು ಸಲ್ಲಿಸಿದ್ದರು. ಇಂದು ಮಗುವಿನ ಮೃತ ದೇಹ ಮನೆಯ ಸಮೀಪದ ಕೆರೆಯಲ್ಲಿ ತೇಲಿ ಬಂದಿದೆ. ರಾಗಿಗುಡ್ಡದ 7 ನೇ ತಿರುವಿನಲ್ಲಿ ಮಹ್ಮದ್ ಸೂಫಿಯನ್ ಖುರೇಷಿ ಎಂಬುವರು ತಮ್ಮ ಮೊದಲನೇ ಮಗು ಮೊಹ್ಮದ್ ಮನ್ನನ್…
ಅಪರೂಪದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಇಬ್ಬರ ಬಂಧನ|athin blevin
ಅಪರೂಪದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಇಬ್ಬರ ಬಂಧನ ಅಪರೂಪದದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಮೇತ ಬಂಧಿಸಿರುವ ಘಟನೆ ಶಿವಮೊಗ್ಗ ತಾಲೂಕಿನ ಕಲ್ಲೂಪುರ ಗ್ರಾಮದಲ್ಲಿ ನಡೆದಿದೆ. ಮಚ್ಚೆ ಗೂಬೆ(ಅಥೀನ್ ಬ್ಲೆವಿನ್ )ಯನ್ನು ಅಕ್ರಮ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿನಾಯಕ ನೇತ್ರತ್ವದಲ್ಲಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು…
ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು|death
ಶಿವಮೊಗ್ಗ : ಸ್ನೇಹಿತರೊಂದಿಗೆ ನದಿಗೆ ಈಜಲು ತೆರಳಿದ್ದ ಬಾಲಕ ತುಂಗಾ ನದಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಯೂಸಫ್ (14) ಮೃತಪಟ್ಟಿರುವ ಯುವಕನಾಗಿದ್ದಾನೆ. ಯೂಸುಫ್ ಇಂದು ಮೂವರು ಸ್ನೇಹಿತರೊಂದಿಗೆ ನದಿಗೆ ಈಜಲು ಹೋಗಿ ನೀರು ಪಾಲಾಗಿದ್ದನು,ಆತನ ಸ್ನೇಹಿತರು ಸ್ಥಳೀಯರಿಗೆ ಮಾಹಿತಿ ಮುಟ್ಟಿಸಿದ್ದಾರೆ. ನಂತರ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ಸಹಕಾರದಿಂದ ಹುಡುಕಾಟ ಆರಂಭಿಸಿದ್ದರು ಸುಮಾರು ಒಂದುವರೆ ಗಂಟೆ ಹುಡುಕಾಟ ನಡೆಸಿದ ನಂತರ ಮೃತದೇಹ ದೊರಕಿದೆ.ತಕ್ಷಣವೇ ಮೆಗ್ಗಾನ್ ಗೆ ಕರೆದೊಯ್ಯಲಾಗಿದೆ. ವೈದ್ಯರು ಆತನ ಸಾವನ್ನ…
ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್|cow theft
ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಬೀದಿಯ ಗೋವುಗಳ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದ್ದು, ಸ್ಥಳೀಯರು ಕೂಗಿದೊಡನೆ ಖದೀಮರು ಪರಾರಿಯಾಗಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ರಸ್ತೆಯ ಗಾಂಧಿ ನಗರದಲ್ಲಿ ಕಾರನ್ನು ಗೋವುಗಳ ಹತ್ತಿರ ತಂದು ನಿಲ್ಲಿಸಿ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಗೋವುಗಳು ಕೈಗೆ ಸಿಕ್ಕಿಲ್ಲ.ಈ ಸಂಧರ್ಭದಲ್ಲಿ ಸ್ಥಳೀಯರು ಕೂಗಿದ್ದಾರೆ ನಂತರ ಎಚ್ಚೆತ್ತುಕೊಂಡ ಖದೀಮರು ಓಡಿ ಹೋಗಿದ್ದಾರೆ. ಈ ಘಟನೆಯನ್ನು ಯಾರೋ ವೀಡಿಯೋ ಮಾಡಿದ್ದು…
ಗೋಮಾಂಸ ಮಾರುತಿದ್ದ ಯುವಕನ ಮೇಲೆ ಬಜರಂಗದಳ ದಾಳಿ – ಹಲ್ಲೆ : ರಾಜಕೀಯ ಬಣ್ಣ ಪಡೆದುಕೊಂಡ ಪ್ರಕರಣ|assault
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಕಂಚಿ ಬಾಗಿಲಿನಲ್ಲಿ ವ್ಯಕ್ತಿಯೊಬ್ಬ ದನದ ಮಾಂಸವನ್ನು ಮಾರಾಟ ಮಾಡಲು ಬೈಕಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದಾಗ ಬಜರಂಗ ದಳದ ಯುವಕರು ಆತನಿಗೆ ಅಡ್ಡಗಟ್ಟಿ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಭದ್ರಾವತಿಯ ಅನ್ವರ್ ಕಾಲೋನಿಯ ಮೂಮಿನ್ ಮೊಹಲ್ಲಾ ವಾಸಿ ಅಬ್ದುಲ್ ರೆಹಮಾನ್ ಬಿನ್ ಮೊಹಮ್ಮದ್ (30) ದನದ ಮಾಂಸದ ವ್ಯಾಪಾರ ಮಾಡುವ ಯುವಕ. ಈತ ಶುಕ್ರವಾರ ಬೆಳಗ್ಗೆ 10 ರಿಂದ 12 ಕೆಜಿಯಷ್ಟು ದನದ ಮಾಂಸದ ಪ್ಯಾಕೆಟ್‌ಗಳನ್ನು ಮಾಡಿಕೊಂಡು ಮನೆ ಮನೆಗೆ ಕೊಡಲು ತನ್ನ ಬೈಕಿನಲ್ಲಿ…
ಸ್ನೇಹಿತರ ಜೊತೆ ಸೇರಿ ಹೆಂಡತಿಯ ಕೊಲೆಗೆ ಯತ್ನಿಸಿದ್ದ ಪತಿರಾಯ – ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್: ಈ ಸುದ್ದಿ ನೋಡಿ|court
ಮಹಿಳೆಯೋರ್ವರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ, ಕೊಲೆ ಮಾಡಲು ಯತ್ನಿಸಿದ ಮೂವರು ಆರೋಪಿಗಳಿಗೆ ಶಿವಮೊಗ್ಗ ನ್ಯಾಯಾಲಯ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ 22 ಸಾವಿರ ರೂ ದಂಡ ವಿಧಿಸಿದೆ. 2016 ರಲ್ಲಿ ಶಿವಮೊಗ್ಗದ ಮಲವಗೊಪ್ಪ ಬಡಾವಣೆಯಲ್ಲಿ ಶೋಭಾ(26) ಮತ್ತು ಪತಿ ಹಾಲೇಶ್ ನಾಯ್ಕನಿಗೂ ಕೌಟಂಬಿಕ ವಿಚಾರದಲ್ಲಿ ಗಲಾಟೆ ನಡೆದಿತ್ತು. ಇದರಿಂದ 2016 ರಲ್ಲಿ ಶೋಭಾ ತನ್ನ ತಾಯಿಯೊಂದಿಗೆ ಮಲವಗೊಪ್ಪ ಬಸ್ ನಿಲ್ದಾಣದಲ್ಲಿ ನಿಂತಾಗ ಹಾಲೇಶ್ ನಾಯ್ಕ ಹರಿತವಾದ ಆಯುಧದಿಂದ ಆಕೆಯ ತಲೆ ಹಾಗೂ…
ಬಸ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿ – ಚಕ್ರದಡಿ ಸಿಲುಕಿಕೊಂಡ ಸ್ಕೂಟರ್ : ಸ್ಥಳದಲ್ಲಿಯೇ ಓರ್ವ ಸಾವು|accident
ಶಿವಮೊಗ್ಗ : ಮಲ್ಲಿಗೇನಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ ಬಳಿ ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಖಾಸಗಿ ಸಂಸ್ಥೆಗೆ ಸೇರಿದ ಬಸ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿಯಾದ ರಭಸಕ್ಕೆ ಸ್ಕೂಟರ್ ಬಸ್ ಚಕ್ರದಡಿ ಸಿಲುಕಿಕೊಂಡಿದ್ದು, ಸಂಪೂರ್ಣ ನುಜ್ಜುಗುಜ್ಜಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೃತನನ್ನು ಜಾರ್ಖಂಡ್ ಮೂಲದ ಯುವಕ ಅನ್ಸಾರಿ ಎನ್ನಲಾಗುತ್ತಿದೆ. ಸ್ಥಳಕ್ಕೆ ಸಂಚಾರಿ ಪಶ್ಚಿಮ ಪೊಲೀಸರು ಭೇಟಿ ನೀಡಿದ್ದಾರೆ. ಮೃತ ದೇಹವನ್ನು ಮರಣೋತ್ತರ…
ಚೋರಡಿ ಬಳಿ ಸರಣಿ ಅಪಘಾತ – ಟ್ರಾಫಿಕ್ ಜಾಮ್|accident
ಶಿವಮೊಗ್ಗ ಜಿಲ್ಲೆಯ ಚೋರಡಿಯಲ್ಲಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತವಾಗಿದ್ದು,ಅರ್ಧ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಆದ ಘಟನೆ ನಡೆದಿದೆ. ಖಾಸಗಿ ಬಸ್, ಗೂಡ್ಸ್ ವಾಹನ, ಲಾರಿ ಮತ್ತು ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ. ವಾಹನಗಳಿಗೆ ಹಾನಿ ಉಂಟಾಗಿದೆ. ಆದರೆ ಯಾವುದೆ ವಾಹನದಲ್ಲಿರುವವರಿಗು ಸಮಸ್ಯೆಯಾಗಿಲ್ಲ. ಅದೃಷ್ಟವಶಾತ್ ಎಲ್ಲರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸಾಗರ ಕಡೆಯಿಂದ ಬಂದ ಖಾಸಗಿ ಬಸ್, ಚೋರಡಿ ಗ್ರಾಮದಲ್ಲಿ ಪ್ರಯಾಣಿಕರು ಇಳಿಯಲು ನಿಲ್ಲಿಸಲಾಗಿತ್ತು. ಈ ವೇಳೆ ಹಿಂಬದಿಯಿಂದ ಗೂಡ್ಸ್ ಆಟೋ ಬಂದಿದೆ. ಅದರ…
ಜೂಜಾಟದ ವೇಳೆ ಹಣಕಾಸಿನ ವಿಚಾರದಲ್ಲಿ ಗಲಾಟೆ – ಕೊಲೆಯಲ್ಲಿ ಅಂತ್ಯ|murder
ಭದ್ರಾವತಿ : ಹಣಕಾಸಿನ ವಿಚಾರದಲ್ಲಿ ಹುಟ್ಟಿಕೊಂಡ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅಂತರಗಂಗೆಯ ರಂಗನಾಥಪುರ ಗ್ರಾಮದಲ್ಲಿ ಸಂಭವಿಸಿದ ಈ ಜಗಳದಲ್ಲಿ ವೆಂಕಟೇಶ್ ಎಂಬವರ ಕೊಲೆಯಾಗಿದೆ. ರಂಗನಾಥ ಪುರ ಗ್ರಾಮದಲ್ಲಿ ಗಣಪತಿ ಪೆಂಡಾಲ್ ಬಳಿ ಚೌಕಾಬಾರ ಆಡುತ್ತಿದ್ದ ವೇಳೆ ಆಟವನ್ನ ನೋಡುತ್ತಿದ್ದ ವೆಂಕಟೇಶ್ ಗೆ ಅದೇ ಗ್ರಾಮದ ಪ್ರದೀಪ್ ಕಳೆದ 15 ದಿನಗಳ ಹಿಂದೆ ಹಣಕಾಸಿನ ವಿಚಾರದಲ್ಲಿ ನಡೆದ ಗಲಾಟೆ ವಿಚಾರವನ್ನು ಪ್ರಸ್ತಾಪಿಸಿ ಗಲಾಟೆ ಪ್ರಾರಂಭಿಸಿದ್ದಾನೆ. ಹಣಕಾಸಿನ ವಿಚಾರದಲ್ಲಿ ಗಲಾಟೆ ಶುರುವಾಗಿ ಪ್ರದೀಪ…
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಆಮಿಷ – ಯುವಕನಿಗೆ 72 ಸಾವಿರ ವಂಚನೆ|fraud
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಆಮಿಷವೊಡ್ಡಿ ಯುವಕನೊಬ್ಬನಿಗೆ 72 ಸಾವಿರ ರೂ. ವಂಚನೆ ಮಾಡಿರುವ ಬಗ್ಗೆ ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಳಲೂರಿನ ಯುವಕನೊಬ್ಬ ಈ ರೀತಿ ವಂಚನೆಗೊಳಗಾಗಿದ್ದಾನೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಗ್ರೌಂಡ್ ಸ್ಟಾಫ್ ಆಗಿ ನೇಮಕವಾಗಿದ್ದೀರಿ ಎಂದು ಕರೆ ಮಾಡಿ, ನೋಂದಣಿ ಹೆಸರಲ್ಲಿ ಸಾವಿರಾರು ರೂ. ಪಡೆದು ವಂಚಿಸಲಾಗಿದೆ. ಹೊಳಲೂರಿನ ಯುವಕ ಮೊಬೈಲ್ ಫೋನ್ ನಲ್ಲಿ ಏರ್ ಪೋರ್ಟ್ ಅಥಾರಿಟಿ ಅಪ್ಲಿಕೇಶನ್ ತೆರೆದು ತನ್ನ ಆಧಾರ್ ಕಾರ್ಡ್, ಮೊಬೈಲ್ ನಂಬರ್, ಹೆಸರು ದಾಖಲಿಸಿದ್ದರು….