ರಿಪ್ಪನ್‌ಪೇಟೆ – ಕ್ಯಾಂಟರ್ ಲಾರಿ ಮತ್ತು ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ|accident
ಕ್ಯಾಂಟರ್ ಲಾರಿ ಹಾಗೂ ಟೊಯೋಟಾ ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಸೂಡೂರು ಗೇಟ್ ಸಮೀಪದಲ್ಲಿ ನಡೆದಿದೆ. ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಟೊಯೋಟಾ ಇನ್ನೋವಾ ಕಾರು ಹಾಗೂ ಶಿವಮೊಗ್ಗದಿಂದ ಹೊಸನಗರಕ್ಕೆ ತೆರಳುತಿದ್ದ ಕ್ಯಾಂಟರ್ ಲಾರಿ ನಡುವೆ ಸೂಡೂರು ಗೇಟ್ ಸಮೀಪದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಘಟನೆಯಲ್ಲಿ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.