ಕ್ರೈಂ ಸುದ್ದಿ:
ವಿದ್ಯಾರ್ಥಿನಿಯರ ಮೇಲೆ ಟಿಪ್ಪರ್ ಲಾರಿ ಹರಿದ ಪ್ರಕರಣ -ಚಿಕಿತ್ಸೆ ಫಲಕಾರಿಯಾಗದೇ ಓರ್ವ ವಿದ್ಯಾರ್ಥಿನಿ ಸಾವು|Accident death
ಸಾಗರ ಟೌನ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಈ ಪೈಕಿ ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿತ್ತು. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿಯೇ ಆಕೆ ಸಾವನ್ನಪ್ಪಿದ್ದಾರೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ಶಿಕಾರಿಪುರ ಮೂಲದ ಪ್ರತಿಮಾ(19) ಎಂದು ಗುರುತಿಸಲಾಗಿದೆ. ಬಿಸಿಎಂ ಹಾಸ್ಟೆಲ್ನ ವಿದ್ಯಾರ್ಥಿನಿಯರು ಶಿಕಾರಿಪುರ ಹಾಗೂ ಸೊರಬ ಮೂಲದವರು ಎನ್ನಲಾಗಿದ್ದು, ಬೆಳಗ್ಗೆ ಕಾಲೇಜಿಗೆ ಅಂತಾ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಸಾಗರ…
ಭೀಕರ ಲಾರಿ ಅಪಘಾತ – ಮೂವರು ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಹರಿದ ಲಾರಿ|Accident
ಕಾಲೇಜಿಗೆ ನಡೆದುಕೊಂಡು ಹೋಗುತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ಸಾಗರ ಟೌನ್ ನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಮೀಪದ ಸಣ್ಣಮನೆ ಸೇತುವೆ ಬಳಿಯಲ್ಲಿ ಭೀಕರ ಆಪಘಾತವೊಂದು ಸಂಭವಿಸಿದೆ. ಜಲ್ಲಿ ತುಂಬಿದ್ದ ಲಾರಿಯೊಂದು ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಘಟನೆ ನಡೆದಿದೆ ಎನ್ನಲಾಗುತ್ತಿಗೆ, ಹಿಂದಿನಿಂದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದ್ದಾನೆ. ಆಗಷ್ಟೆ ಕಾಲೇಜಿಗೆ ಹೊರಟಿದ್ದ ಹಾಸ್ಟೆಲ್ವೊಂದರ ವಿದ್ಯಾರ್ಥಿನಿಯರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ಧಾರೆ. ಮೂವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ,…
ರಿಪ್ಪನ್‌ಪೇಟೆ ಸಮೀಪದ ಬಿಳಿಕಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು|Accident
ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗವಟೂರು ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿ ಬಿದ್ದ ಘಟನೆ ಇಂದು ಸಂಜೆ ನಡೆದಿದೆ. ದಾವಣೆಗೆರೆ ಮೂಲದವರು ಕೊಲ್ಲೂರು ಮೂಕಾಂಬಿಕಾ ದೇವರ ದರ್ಶನ ಮುಗಿಸಿಕೊಂಡು ವಾಪಾಸು ದಾವಣಗೆರೆಗೆ ತೆರಳುತಿದ್ದಾಗ ಪಟ್ಟಣದ ಗವಟೂರು ಹೊಳೆಯ ಸಮೀಪದ ತಿರುವಿನಲ್ಲಿ ಕಿಯಾ (Ka 05 MF 7205) ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.ಕಾರಿನಲ್ಲಿ ಇಬ್ಬರು ಪ್ರಯಾಣಿಸುತಿದ್ದರು. ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತಿದ್ದವರಿಗೆ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…
ಮಳಲಿ ಮಠದ ಸೇತುವೆ ಬಳಿ ಬೈಕ್ ಅಪಘಾತ – ಶೆಟ್ಟಿಕೊಪ್ಪದ ಪ್ರದೀಪ್ ಸಾವು|Accident
ಮಳಲಿ ಮಠದ ಸೇತುವೆ ಬಳಿ ಬೈಕ್ ಅಪಘಾತವಾಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ತಡರಾತ್ರಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಮಳಲಿ ಮಠದ ಸೇತುವೆ ಬಳಿ ಸೋಮವಾರ ರಾತ್ರಿ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಶೆಟ್ಟಿ ಕೊಪ್ಪದ ಪ್ರದೀಪ್ ಎಂಬುವರು ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ. ಚಲಿಸುತಿದ್ದ ಬೈಕ್ ಮಳಲಿ ಮಠದ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ದುರ್ಘಟನೆ ಜರುಗಿದೆ ಎಂದು ಹೇಳಲಾಗುತ್ತಿದೆ. ಕೋಣಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸ್ ದಾಳಿ – ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ|Arrested
ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ ಗಾಂಜಾ, ನಗದು ಮತ್ತು ಮೊಬೈಲ್ ಫೋನುಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದ ಗಾರ್ಡನ್ ಏರಿಯಾದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ನಿಖಿಲ್ ಮತ್ತು ಭರತ್ ಎಂಬುವವರನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಯಿತು. ಅವರ ಬಳಿ ಇದ್ದ ಪ್ಲಾಸ್ಟಿಕ್ ಕವರ್ ನಲ್ಲಿ ಸುಮಾರು 450 ಗ್ರಾಂ ಗಾಂಜಾ ಪತ್ತೆಯಾಗಿದೆ. ಮಾರಾಟ ಮಾಡುವ…
24 ಗಂಟೆಯಲ್ಲಿ ಕಿಡ್ನಾಪ್ ಪ್ರಕರಣ ಬೇಧಿಸಿದ ಪೊಲೀಸರು : ಭದ್ರಾವತಿಯಲ್ಲಿ ಅಪಹರಣ – ಸಾಗರದಲ್ಲಿ ಆರೋಪಿಗಳು|crime news
ಅಪ್ರಾಪ್ತ ಬಾಲಕನನ್ನ ಅಪಹರಿಸಿ ಹಣದ ಬೇಡಿಕೆ ಇಟ್ಟ ಪ್ರಕರಣವನ್ನ 24 ಗಂಟೆಯಲ್ಲಿ ಬೇಧಿಸಿದ ಭದ್ರಾವತಿ ನ್ಯೂ ಟೌನ್ ಪೊಲೀಸರು ಐವರು ಆರೋಪಿಯನ್ನ ಬಂಧಿಸಿದ್ದಾರೆ. ಓರ್ವನ ಬಂಧನಕ್ಕಾಗಿ ಭರ್ಜರಿ ಬಲೆಯನ್ನೇ ಹೆಣೆದಿದ್ದಾರೆ. ಘಟನೆಯ ಹಿನ್ನಲೆ: ಭದ್ರಾವತಿ ಅಂಡರ್ ಬ್ರಿಡ್ಜ್ ಬಳಿಯಿರುವ ಎಲ್ಐಸಿ ಕಚೇರಿ ಬಳಿ ಎಳನೀರು ಮಾರಾಟ ಮಾಡುತ್ತಿದ್ದ ಅಪ್ರಾಪ್ತ ಬಾಲಕನ ಬಳಿ ಬಂದ ಅಪರಿಚತನೋರ್ವ ನನ್ನ ಬಳಿ ಹಣ ಖಾಲಿಯಾಗಿದೆ. ಫೋನ್ ಪೇ ನೂ ಇಲ್ಲ. ನಾಲ್ಕು ಎಳನೀರು ಕೊಚ್ಚಿಕೊಂಡು 100 ಮೀಟರ್ ದೂರದಲ್ಲಿರುವ ವ್ಯಾನ್ ನಲ್ಲಿರುವ ಸ್ನೇಹಿತನ…
ಬೈಕ್ ಹಾಗೂ ಕಾರಿನ ನಡುವೆ ಅಪಘಾತ – ಬೈಕ್ ಸವಾರನ ಕಾಲು ಮುರಿತ..!!!!|accident
ಕಾರು ಹಾಗೂ ಬೈಕ್ ನಡುವೆ ಅಪಘಾತ ನಡೆದು ವ್ಯಕ್ತಿಯೊಬ್ಬನ ಕಾಲು ಮುರಿತವಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ತಿರುವಿನನಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರನ ಕಾಲು ಮುರಿದಿದೆ ಎಂಬ ಮಾಹಿತಿ ಲಭ್ಯವಾಗಿದೆ.ಶಿರಸಿಯಿಂದ ಶಿವಮೊಗ್ಗದ ಕಡೆಗೆ ತೆರಳುತಿದ್ದ ಬೈಕ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ಸಾಗುತ್ತಿದ್ದ ಕಾರಿನ ನಡುವೆ ಐಗಿನ ಬೈಲ್ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಗಾಯಾಳು ಬೈಕ್ ಸವಾರನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ. ಸಾಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ…
ಹೊಸನಗರದ ಮಾವಿನಕೊಪ್ಪ ಸರ್ಕಲ್ ನಲ್ಲಿ ಕಾರು ಡಿವೈಡರ್ ಗೆ ಡಿಕ್ಕಿ – ಇಬ್ಬರು ಗಂಭೀರ|accident
ಸಿಗಂದೂರಿನಿಂದ ಭೀಮಸಮುದ್ರಕ್ಕೆ ತೆರಳುತ್ತಿದ್ದ ಕಾರು ಡಿವೈಡರ್ ಡಿಕ್ಕಿ ಹೊಡೆದು ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ಪಟ್ಟಣದ ಮಾವಿನಕೊಪ್ಪ ಸರ್ಕಲ್ ನಲ್ಲಿ ಖಾಸಗಿ ಪ್ರವಾಸಿ ಬಸ್‌ನಿಂದ ಇಳಿದ ವ್ಯಕ್ತಿಯೊಬ್ಬ ಅಡ್ಡ ಬಂದ ಕಾರಣ, ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಚಾಲಕನ ಸಹಿತ ಅಡ್ಡ ಬಂದ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. ತಾಲೂಕಿನ ಕಸಬಾ ಹೋಬಳಿ ಮಳವಳ್ಳಿ ವಾಸಿ ಶೇಖರ(45) ಕಾರಿಗೆ ಅಡ್ಡ ಬಂದ ವ್ಯಕ್ತಿ….
ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಯುವಕರು ಸಾವು, ಓರ್ವ ಗಂಭೀರ|Accident
ಎರಡು ಬೈಕ್‍ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟ ಘಟನೆ ಸಾಗರ ತಾಲೂಕಿನ ಹೊಸಂತೆ ಗೌತಮಪುರ ರಸ್ತೆಯಲ್ಲಿ ಶುಕ್ರವಾರ ನಡೆದಿದೆ. ಚನ್ನಾಪುರದ ಪ್ರಮೋದ್(23) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗದ ಆಸಿಫ್(21) ಎಂಬವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪ್ರಮೋದ್ ತನ್ನ ಅಜ್ಜಿ 70 ವರ್ಷದ ದೇವಮ್ಮರನ್ನು ತ್ಯಾಗರ್ತಿಗೆ ಕರೆದುಕೊಂಡು ಹೋಗುತ್ತಿದ್ದರು. ಇವರು ಸಂಚರಿಸುತ್ತಿದ್ದ ಬೈಕ್ ಶಿವಮೊಗ್ಗದಿಂದ ಹೊಸಂತೆಗೆ ಬರುತ್ತಿದ್ದ ಆಸಿಫ್ ಅವರ ಬೈಕ್ ಮುಖಾಮುಖಿ ಢಿಕ್ಕಿಯಾಗಿದೆ. ಆಸಿಫ್ ಬೈಕಿನಲ್ಲಿದ್ದ ಶಿವಮೊಗ್ಗದ ತೌಸೀಫ್(20) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು,…
ಕೋಡೂರು ಸಮೀಪ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ|Accident
ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಕೋಡೂರು ಸಮೀಪದ ಕೊಪ್ಪರಗುಂಡಿ ಸೇತುವೆ ಬಳಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೊಪ್ಪರಗುಂಡಿ ಗ್ರಾಮದ ಸೇತುವೆ ಬಳಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ರಿಪ್ಪನ್‌ಪೇಟೆ ಕಡೆಯಿಂದ ಅಕ್ಕಿ ತುಂಬಿಕೊಂಡು ಹೋಗುತಿದ್ದ ಲಾರಿ ಹಾಗೂ ಹೊಸನಗರ ಕಡೆಯಿಂದ ಬರುತಿದ್ದ ಖಾಲಿ ಲಾರಿ ನಡುವೆ ಡಿಕ್ಕಿಯಾಗಿದ್ದು,ಆಟೋವೊಂದನ್ನು ಓವರ್ ಟೇಕ್ ಮಾಡುವಾಗ ಈ ದುರ್ಘಟನೆ ನಡೆದಿದೆ ಎನ್ನಲಾಗುತ್ತಿದೆ. ಲಾರಿ ಚಾಲಕನೊಬ್ಬನಿಗೆ ಗಾಯಗಳಾಗಿದ್ದು ಆತನನ್ನು ಹೊಸನಗರದ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಈ ಅಪಘಾತದಿಂದ…