ಕ್ರೈಂ ಸುದ್ದಿ:
ತೀರ್ಥಹಳ್ಳಿ : ಗಲಾಟೆ ಬಿಡಿಸಲು ಹೋದ ಪೊಲೀಸ್ ಸಿಬ್ಬಂದಿಯ ಮೇಲೆ ವಾಹನ ಹರಿಯಬಿಟ್ಟ ಯುವಕರು – ಪ್ರಕರಣ ದಾಖಲು |Thirthahalli
ತೀರ್ಥಹಳ್ಳಿ : ಸಾರ್ವಜನಿಕ ಸ್ಥಳದಲ್ಲಿ ಸ್ನೇಹಿತರೇ ಪರಸ್ಪರ ಗಲಾಟೆ ಮಾಡಿಕೊಳ್ಳುತಿದ್ದಾಗ ಬಿಡಿಸಲು ಹೋದ ಪೊಲೀಸ್ ಕಾನ್ ಸ್ಟೇಬಲ್ ಮೇಲೆ ದ್ವಿಚಕ್ರ ವಾಹನವನ್ನ ಹರಿಯಬಿಟ್ಟು ಪರಾರಿಯಾಗಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ ಮೂಡ್ ಹೋಟೆಲ್ ಬಳಿ ಯುವಕರು ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಗಲಾಟೆಯಲ್ಲಿ ತೊಡಗಿಕೊಂಡಿರುತ್ತಾರೆ. ಈ ಬಗ್ಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ದಾವಿಸಿದ ಪೊಲೀಸ್ ಕಾನ್ ಸ್ಟೇಬಲ್ ಗಲಾಟೆ ಬಿಡಿಸಲು ಮುಂದಾಗಿದ್ದಾರೆ. ಈ ವೇಳೆ ಯುವಕರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ. ಪೊಲಿಸ್ ಕಾನ್ ಸ್ಟೇಬಲ್ ತಾವು ಬಂದಿದ್ದ ಬೈಕ್…
ಸಂಸದ ಬಿ ವೈ ರಾಘವೇಂದ್ರ ಖಾತೆಯಿಂದ 16 ಲಕ್ಷ ಎಗರಿಸಿದ ಮುಂಬೈ ಹ್ಯಾಕರ್ |Hacker
ಸಂಸದ ಬಿ ವೈ ರಾಘವೇಂದ್ರ ರವರ ಬ್ಯಾಂಕ್ ಖಾತೆಗೆ ಕನ್ನ ಹಾಕಿ 16 ಲಕ್ಷ ರೂ. ಹಣ ಲಪಟಾಯಿಸಿದ್ದ ಪ್ರಕರಣ ನಡೆದಿದೆ. ಈ ಬಗ್ಗೆ ಸ್ವತಃ ಬಿ ವೈ ರಾಘವೇಂದ್ರ ರವರೇ ಶಿಕಾರಿಪುರದ ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದಾರೆ. ಮತ್ತು ಈ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿ ಹಣ ಹಿಂದಿರುಗುಸುವಲ್ಲಿ ಯಶಸ್ವಿಯಾಗಿದ್ದಾರೆ ಶಿವಮೊಗ್ಗದ ಇಂಜಿನಿಯರಿಂಗ್ ಕಾಲೇಜಿಗೆ ಸಂಬಂಧಿಸಿದ ಸಂಸದರ ಬ್ಯಾಂಕ್ ಖಾತೆಯಿಂದ 16 ಲಕ್ಷ ರೂ. ಹಣ ದಿಢೀರ್ ವರ್ಗಾವಣೆಯಾಗಿತ್ತು. ಆದರೆ ಆ ಖಾತೆಯಿಂದ ಅವರು ಯಾವುದೆ…
ನವಜಾತ ಶಿಶುವನ್ನು ಆಸ್ಪತ್ರೆಯ ಶೌಚಾಲಯದಲ್ಲಿ ಬಿಟ್ಟು ಹೋದ ಹೆತ್ತಮ್ಮ | ಬೇಡವಾದ ಪಲ್ಲಂಗದಾಟಕ್ಕೆ ಸಾಕ್ಷಿಯಾದ ಮಗು|Shivamogga
ತಾಯಿಯೊಬ್ಬಳು ತನ್ನ ನವಜಾತ ಹೆಣ್ಣು ಮಗುವನ್ನು ಆಸ್ಪತ್ರೆಯ ಬಾತ್ ರೂಂನಿಂದ ಹೊರಗೆ ಬಿಸಾಡಿರುವ ಘಟನೆ ಶಿವಮೊಗ್ಗ ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಹೊಟ್ಟೆ ನೋವು ಮತ್ತು ಹೊಟ್ಟೆಯಲ್ಲಿ ಗಡ್ಡೆ ಬೆಳೆದಿದೆ ಎಂದು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ಶರಾವತಿ ನಗರದ ಯುವತಿ ದಾಖಲಾಗಿದ್ದಾಳೆ. ಬಳಿಕ ಶನಿವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇಂದು ಬೆಳಗ್ಗೆ ನವಜಾತ ಹೆಣ್ಣು ಮಗುವನ್ನು ಆಸ್ಪತ್ರೆಯ ಶೌಚಾಲಯದಲ್ಲಿ ಬಿಟ್ಟು ಬಂದಿದ್ದಾಳೆ. ಮಗುವಿನ ಅಳುವಿನ ಶಬ್ಧ ಸರ್ಜರಿ ವಿಭಾಗದಿಂದ ಕೇಳಿ ಬಂದಿದ್ದಕ್ಕೆ ಮೆಗ್ಗಾನ್ ಸಿಬ್ಬಂದಿಗಳು ಎಚ್ಚೆತ್ತುಕೊಂಡು ಹುಡುಕಿದ್ದಾರೆ. ಶೌಚಾಲಯದ…
ರಸ್ತೆ ಅಪಘಾತ : ಭಾರತ್ ಜೋಡೋ ಯಾತ್ರೆಗೆ ತೆರಳಿದ್ದ ಕಾಂಗ್ರೆಸ್ ಕಾರ್ಯಕರ್ತ ಸಾವು |Accident
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಲ್ಲಲು ತೆರಳಿದ್ದ ಕಾಂಗ್ರೆಸ್ ಕಾರ್ಯಕರ್ತನೋರ್ವ ಅಪಘಾತದಿಂದ ಮೃತಪಟ್ಟ ಘಟನೆ ಸೋಮವಾರ ಹಿರಿಯೂರಿನಲ್ಲಿ ನಡೆದಿದೆ. ಸಾಗರ ತಾಲೂಕು ತ್ಯಾಗರ್ತಿ ಸಮೀಪದ ಹಿರೇಬಿಲಗುಂಜಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುತ್ತದಿಂಬ ಗ್ರಾಮದ ರಮೇಶ್ (62) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಎಂ.ಎಲ್ ರಮೇಶ್ ಅವರು ಭಾರತ್ ಜೋಡೊ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಸಾಗರ ತಾಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಜೊತೆ ಹಿರಿಯೂರಿಗೆ ತೆರಳಿದ್ದರು ಈ ಸಂದರ್ಭದಲ್ಲಿ ರಸ್ತೆ ದಾಟುವಾಗ ಖಾಸಗಿ…
ತೀರ್ಥಹಳ್ಳಿ : ಕ್ಷುಲ್ಲಕ ಕಾರಣಕ್ಕೆ ಎದೆಗೆ ಚೂರಿ ಇರಿತ – ಗಾಯಾಳು ಮಣಿಪಾಲ್ ಗೆ ದಾಖಲು|Stabbing
ಕ್ಷುಲ್ಲಕ ಕಾರಣಕ್ಕೆ ಮಸೀದಿಯ ಸಮೀಪ ಇಬ್ಬರ ನಡುವೆ ನಡೆದ ಗಲಾಟೆ..ಚಾಕು ಇರಿತದಲ್ಲಿ ದುರಂತ ಅಂತ್ಯ ಕಂಡ ಘಟನೆ ಮಾಳೂರು ಪೊಲೀಸ್ ಠಾಣೆಯ ಎದುರು ನಡೆದಿದೆ. ಮಾಳೂರು ಮಟನ್ ಅಂಗಡಿಯ ಮಾಲೀಕ ಶಮಿಯುಲ್ಲಾ ಎಂಬುವರ ಎದೆಗೆ ರಿಜ್ವಾನ್ ಎಂಬಾತ ಚಾಕು ಇರಿದಿದ್ದಾನೆ ಪರಿಣಾಮ ಶಮಿಯುಲ್ಲಾ ಎದೆಗೆ ಗಂಭೀರವಾಗಿ ಗಾಯವಾಗಿದೆ. ಗಾಯಾಳು ಶಮಿಯನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ್ದಾರೆ ಸದ್ಯ ಮಣಿಪಾಲ್ ಆಸ್ಪಯಲ್ಲಿ ದಾಖಲಾಗಿರುವ ಶಮಿಯುಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ….
ಹೊಸನಗರ : ಅಡಿಕೆ ತೋಟಕ್ಕೆ ಎಲೆಚುಕ್ಕಿ ರೋಗ – ಬೇಸತ್ತ ರೈತ ಆತ್ಮಹತ್ಯೆ |sucide
ಮಲೆನಾಡಿನಲ್ಲಿ ಎಲೆ ಚುಕ್ಕೆ ತೀವ್ರತೆ ಹೆಚ್ಚಾಗಿದ್ದು, ರೈತನೋರ್ವನ ಬಲಿ ಪಡೆದುಕೊಂಡಿದೆ. ಎಲೆಚುಕ್ಕೆ ರೋಗಕ್ಕೆ ಅಡಕೆ ತೋಟ ಬಲಿಯಾದ ಹಿನ್ನೆಲೆ ಮಾಡಿದ ಸಾಲ ತೀರಿಸಲಾಗದೆ ಸಂಕಷ್ಟಕ್ಕೆ ಸಿಲುಕಿದ ರೈತ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸನಗರ ತಾಲೂಕಿನ ಕರಿಮನೆ ಗ್ರಾಪಂ ವ್ಯಾಪ್ತಿಯ ಕಿಳಮದೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಕರಿಮನೆ ಗ್ರಾಪಂ ಕಿಳಂದೂರು ಗ್ರಾಮದ ಕೃಷ್ಣಪ್ಪಗೌಡ (60) ಮೃತ ವ್ಯಕ್ತಿ ಮನೆಯ ಪಕ್ಕದಲ್ಲಿರುವ ಮಾವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಕೃಷ್ಣಪ್ಪಗೌಡ ಅವರ ಸಹೋದರ…
ರಿಪ್ಪನ್‌ಪೇಟೆ : ಪಾದಚಾರಿಗೆ ಬೈಕ್ ಡಿಕ್ಕಿ – ಗಂಭೀರ ಗಾಯಗೊಂಡ ಪಾದಚಾರಿ ಮೆಗ್ಗಾನ್ ಗೆ ದಾಖಲು |Accident
ರಿಪ್ಪನ್‌ಪೇಟೆ : ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಗೆ ತೀವ್ರತರವಾದ ಗಾಯಗಳಾಗಿರುವ ಘಟನೆ ಪಟ್ಟಣದ ವಿನಾಯಕನಗರದ ಬಾಲಕಿಯರ ಹಾಸ್ಟೆಲ್ ಮುಂಭಾಗದಲ್ಲಿ ನಡೆದಿದೆ. ಶಿವಮೊಗ್ಗ ರಾಮನಗರ ನಿವಾಸಿ ಸೈಯದ್ ಮುಜಾಹಿದ್ (34) ಗಂಭೀರ ಗಾಯಗೊಂಡಿದ್ದಾರೆ. ವಿನಾಯಕನಗರದಿಂದ ರಿಪ್ಪನ್‌ಪೇಟೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ರಿಪ್ಪನ್‌ಪೇಟೆ ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಎಡಗಾಲು ಮುರಿದಿದ್ದು ,ತಲೆ ಹಾಗೂ ಎಡಪಕ್ಕೆಗೆ ತೀವ್ರತರವಾದ ಪೆಟ್ಟಾಗಿದ್ದು ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ರಾಮನಗರ ನಿವಾಸಿ ಸೈಯದ್ ಮುಜಾಹಿದ್…
ಮಾರಕಾಸ್ತ್ರಗಳೊಂದಿಗೆ ವೀಡಿಯೋ ಚಿತ್ರಿಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ ಯುವಕನ ಬಂಧನ |Cybercrime
ಮಾರಕಾಸ್ತ್ರಗಳನ್ನು ಹಿಡಿದುಕೊಂಡು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಯುವಕನನ್ನು ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ತಾಲೂಕಿನ ಅಗಸವಳ್ಳಿಯ ಗೌಳಿ ಕ್ಯಾಂಪ್‌ನ ಇಸ್ಮಾಯಿಲ್ (20) ಬಂಧಿತ ಆರೋಪಿಯಾಗಿದ್ದು, ಈತ ಸಾಮಾಜಿಕ ಜಾಲತಾಣದಲ್ಲಿ ಲಾಂಗು-ಮಚ್ಚುಗಳೊಂದಿಗೆ ಇರುವ ವಿಡಿಯೋ ಹರಿಬಿಟ್ಟು ಸಾರ್ವಜನಿಕರಲ್ಲಿ ಭಯ ಉಂಟು ಮಾಡಿದ್ದನು. ಈತನು ಫೇಸ್‌ಬುಕ್‌ನಲ್ಲಿ ಇಸ್ಮಾಯಿಲ್ ಇಸ್ಮಾಯಿಲ್ ಎಂಬ ಖಾತೆ ಹೊಂದಿದ್ದ. ಜೊತೆಗೆ ಐದಾರು ಮಚ್ಚು ಮತ್ತು ತಲ್ವಾರ್‌ಗಳ ನಡುವೆ ಕಾಣಿಸಿಕೊಳ್ಳುವ ತನ್ನದೇ ವಿಡಿಯೋ ಮಾಡಿ ಪೇಸ್ಬುಕ್ ನಲ್ಲಿ ಹರಿಯಬಿಟ್ಟಿದ್ದ. ಈ ಬಗ್ಗೆ…
ಹೊಸನಗರ : ಮಹಿಳೆಯ ಮೇಲೆ ಕಾಡುಕೋಣ ದಾಳಿ – ಗಂಭೀರ ಗಾಯಗೊಂಡ ಮಹಿಳೆ ಮಂಗಳೂರಿನ ಆಸ್ಪತ್ರೆಗೆ ದಾಖಲು |Wild attack
ಹೊಸನಗರ : ಕೆಲಸಕ್ಕೆ ಹೋಗುತ್ತಿದ್ದ ವೇಳೆ ಮಹಿಳೆ ಮೇಲೆ ಕಾಡುಕೋಣ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ (03-10-2022) ಸೋಮವಾರ ನಡೆದಿದೆ. ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಮಾಕೋಡು ನಿವಾಸಿ ಜಯಮ್ಮ(45) ಕಾಡುಕೋಣ ದಾಳಿಗೆ ತುತ್ತಾದ ಮಹಿಳೆಯಾಗಿದ್ದಾರೆ. ಬೆಳಿಗ್ಗೆ ಎದ್ದು ಅಡಿಕೆ ತೋಟಕ್ಕೆ ಕೆಲಸಕ್ಕೆ ಹೋಗುವ ವೇಳೆ ಕಾಡುಕೋಣ ಏಕಾಏಕಿ ದಾಳಿ ನಡೆಸಿದೆ. ಮಹಿಳೆಯನ್ನು ಕೋಡಿನಿಂದ ತಿವಿದು ನಂತರ ಎತ್ತಿ ಬಿಸಾಡಿದೆ.ಮಹಿಳೆಯ ಕೈಮುರಿತವಾಗಿದ್ದು, ಹೊಟ್ಟೆ, ಹಣೆ, ಮೇಲೆ ತಿವಿದ ಗಾಯಗಳಾಗಿವೆ. ಮಹಿಳೆಯ ಚೀರಾಟ ಕೇಳಿ ತುಸುದೂರದಲ್ಲಿದ್ದ ಪತಿ…
ಮೃಗವಧೆ ರಾಜು ಕೊಲೆ ಪ್ರಕರಣ – ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ | Arrested
ತೀರ್ಥಹಳ್ಳಿ : ತಾಲೂಕಿನ ಮಾಳೂರಿನಲ್ಲಿ ವ್ಯಕ್ತಿಯೋರ್ವನನ್ನು ಬಲವಾಗಿ ಹೊಡೆದು ಆತನನ್ನ ಬೈಕ್ ನಲ್ಲಿ ಕರೆದುಕೊಂಡು ಬಂದು ಮನೆಯ ಬಾಗಿಲಿನಲ್ಲಿ ಬಿಟ್ಟು ಹೋಗಿದ್ದ ಪ್ರಕರಣದಲ್ಲಿ ನಾಲ್ವರನ್ನ ಬಂಧಿಸಲಾಗಿದೆ. ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆಯಲ್ಲಿ ಸೆ.25 ರಂದು ಬೆಳ್ಳಿಕೋಡಿಗೆ ಗ್ರಾಮದಲ್ಲಿ ರಾಜು ಎಂಬ ವ್ಯಕ್ತಿ ಕುಡಿಯಲು ಅಲ್ಲಿದ್ದ ಕೋಳಿ ಅಂಗಡಿಯ ಬಳಿ ಕೋಳಿ ಕದಿಯಲು ಬಂದಿದ್ದೀಯ ಎಂದು ಆರೋಪಿಸಿ ಶಿಶಿರ, ವಿಜಯೇಂದ್ರ ಮತ್ತು ಶಿವು ಎಂಬುವರು ರಾಜುನನ್ನ ಕೈಕಾಲು ಕಟ್ಟಿಹಾಕಿ ದೊಣ್ಣೆಗಳಿಂದ ಹೊಡೆದಿರುತ್ತಾರೆ. ನಂತರ ಬೈಕ್ ನಲ್ಲಿ ಕರೆದುಕೊಂಡು…