ರಿಪ್ಪನ್‌ಪೇಟೆ : ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿ ಯಾರು ಇಲ್ಲದ ದೇವಸ್ಥಾನದಲ್ಲಿ ತಾಳಿ ಕಟ್ಟಿದ ಯುವಕ – ಪೋಕ್ಸೋ ಪ್ರಕರಣ ದಾಖಲು|pocso
ರಿಪ್ಪನ್‌ಪೇಟೆ : ಇತ್ತೀಚೆಗೆ ಶಿವಮೊಗ್ಗ ಜಿಲ್ಲಾದ್ಯಂತ ಪೋಕ್ಸೋ ಪ್ರಕರಣಗಳು ಹೆಚ್ಚುತಿದ್ದು ಅದರಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಸಕ್ತ ವರ್ಷದಲ್ಲಿ ಹಲವಾರು ಪೋಕ್ಸೋ ಪ್ರಕರಣ ದಾಖಲಾಗುತ್ತಿರುವುದು ಆತಂಕಕಾರಿಯಾದ ಬೆಳವಣಿಗೆಯಾಗಿದೆ. ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ನಂತರ ಲೈಂಗಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿ ಮದುವೆಯಾದ ಯುವಕನ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಘಟನೆ ವರದಿಯಾಗಿದೆ. ನೊಂದ ಬಾಲಕಿಯ ದೂರಿನ ವಿವರ : ನನ್ನ ಊರಿನ ಪರಿಚಯಸ್ಥ ಯುವಕ ಸುಮಾರು ಮೂರ್ನಾಲ್ಕು…