ಕ್ರೈಂ ಸುದ್ದಿ:
ತ್ಯಾಗರ್ತಿ ಬಳಿ ಭೀಕರ ರಸ್ತೆ ಅಪಘಾತ – ಸಾಗರ ನಗರಸಭೆ ಮಾಜಿ ಅಧ್ಯಕ್ಷ ಸೇರಿದಂತೆ ಮೂವರಿಗೆ ಗಂಭೀರ ಗಾಯ|Accident
ಸಾಗರ ತಾಲ್ಲೂಕಿನ ತ್ಯಾಗರ್ತಿ ಸಮೀಪದಲ್ಲಿ ಮಾರುತಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂರು ಜನರಿಗೆ ಗಂಭೀರ ಗಾಯಾಗಳಾಗಿರುವ ಘಟನೆ ನಡೆದಿದೆ. ತ್ಯಾಗರ್ತಿ ಸಮೀಪದ ಅಬಸೆ ಬಳಿಯಲ್ಲಿ ಮಾರುತಿ ಓಮಿನಿ ಕಾರಿನಲ್ಲಿ ಮೂರು ಜನರು ಸಂಚರಿಸುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಸಾಗರ ನಗರಸಭೆ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ಸೇರಿದಂತೆ ಇನ್ನಿಬ್ಬರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.ತ್ಯಾಗರ್ತಿ ಯಿಂದ ಸಾಗರ ಕಡೆಗೆ ತೆರಳುತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಓರ್ವನ ಕಾಲು ಮುರಿದಿದ್ದು,…
ರಿಪ್ಪನ್‌ಪೇಟೆ : ಬೆನವಳ್ಳಿಯಲ್ಲಿ ಜಿಂಕೆ ಬೇಟೆ – ಮಾಂಸ ಸಮೇತ ಓರ್ವನ ಬಂಧನ|arrested
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಬೆನವಳ್ಳಿ ಗ್ರಾಮದಲ್ಲಿ ಜಿಂಕೆ ಭೇಟೆಯಾಡಿ ಮಾಂಸವನ್ನು ಬಳಸಿಕೊಳ್ಳುತಿದ್ದ ಆರೋಪದಲ್ಲಿ ಓರ್ವನನ್ನು ಬಂಧಿಸಿದ್ದಾರೆ. ಬೆನವಳ್ಳಿ ಗ್ರಾಮದ ಮನೋಹರ್ (34) ಬಂಧಿತ ಆರೋಪಿ.ಇನ್ನೋರ್ವ ಆರೋಪಿ ಬೆನವಳ್ಳಿ ಗ್ರಾಮದ ವಿನಯ್ (26) ಪರಾರಿಯಾಗಿದ್ದಾನೆ. ಮಾಂಸ ಮಾಡುವ ಉದ್ದೇಶದಿಂದ ಜಿಂಕೆಯನ್ನು ಭೇಟೆ ಮಾಡಿರುವ ಮಾಹಿತಿಯ ಹಿನ್ನಲೆಯಲ್ಲಿ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಬೆನವಳ್ಳಿ ಗ್ರಾಮದ ಸನಂ 10|06 ರಲ್ಲಿ ಜಿಂಕೆ ಮಾಂಸ ಪತ್ತೆಯಾಗಿದೆ.ಈ ಹಿನ್ನಲೆಯಲ್ಲಿ ಆರೋಪಿ ಮನೋಹರ್ ನನ್ನು ವಶಕ್ಕೆ ಪಡೆದಿದ್ದು ಇನ್ನೋರ್ವ ಆರೋಪಿ ವಿನಯ್ ಬಂಧನಕ್ಕೆ…
ಸಾಗರದಲ್ಲಿ ಬಜರಂಗ ದಳ ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ – ಸಂಘಟನೆಗಳಿಂದ ಪ್ರತಿಭಟನೆ|sagara
ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ, ಈ ಘಟನೆಯಲ್ಲಿ ಸ್ವಲ್ಪದರಲ್ಲಿಯೆ ಸುನೀಲ್ ಎಂಬಾತ ತಪ್ಪಿಸಿಕೊಂಡಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾಗರ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದ ಘಟನೆ ಇದಾಗಿದ್ದು, ಬೆಳಗ್ಗೆ ೯ ಗಂಟೆ ಸುಮಾರಿಗೆ ನಡೆದಿದೆ. ಬೈಕ್ನಲ್ಲಿ ಬರುತ್ತಿದ್ದ ಸುನೀಲ್ ಮೇಲೆ ಸಮೀರ್ ಎಂಬಾತ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದಾರೆ. ಜಿಯೋ ಫೈಬರ್ ಕಚೇರಿಯ ಬಳಿ ಬೈಕ್ ನಲ್ಲಿ ಬರುತ್ತಿದ್ದಾಗ ಘಟನೆ ನಡೆದಿದೆ. ಅಲ್ಲಿಯೇ ಇದ್ದ ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ. ಸುನೀಲ್…
ಗರ್ತಿಕೆರೆ ಬಳಿ ಭೀಕರ ಅಪಘಾತ – ಮೀನು ವ್ಯಾಪಾರಿ ಸ್ಥಳದಲ್ಲೇ ಸಾವು|accident
ರಿಪ್ಪನ್‌ಪೇಟೆ : ಗರ್ತಿಕೆರೆ ಕಾಲೇಜು ಸಮೀಪದಲ್ಲಿ ಬೆಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗರ್ತಿಕೆರೆ ನಿವಾಸಿ ಮೀನು ವ್ಯಾಪಾರಿ ಕಬೀರ್ ಸಾಬ್ (72) ಎಂಬುವವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ತೀರ್ಥಹಳ್ಳಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಎಕ್ಸ್ಎಲ್ ಸೂಪರ್ ಬೈಕ್ ನಲ್ಲಿ ಹೊರಟು ನಿಂತಿದ್ದ ಕಬೀರ್ ಸಾಬ್ ಎಂಬುವವರಿಗೆ ಹಿಂಬದಿಯಿಂದ ವೇಗವಾಗಿ ಬಂದ ಬೊಲೆರೋ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಭೀಕರ ಅಪಘಾತದಲ್ಲಿ ಬೊಲೆರೋ ವಾಹನ ಸಹ ಪಲ್ಟಿಯಾಗಿದ್ದು ಸಂಪೂರ್ಣ ನಜ್ಜುಗುಜ್ಜಾಗಿದೆ….
ಅಂಬಲಿಗೋಳ ಡ್ಯಾಮ್ ನಲ್ಲಿ ಕಾಲು ತೊಳೆಯಲು ಇಳಿದ ವ್ಯಕ್ತಿ ನೀರುಪಾಲು – ತೀವ್ರ ಶೋಧ ಕಾರ್ಯಾಚರಣೆ|dam
ಕಾಲು ತೊಳೆಯಲು ಹೋಗಿ ಅಂಬಲಿಗೋಳ ಡ್ಯಾಮ್ ನಲ್ಲಿ ಜಾರಿ ಬಿದ್ದ ವ್ಯಕ್ತಿ : ಅಗ್ನಿಶಾಮಕ ದಳದಿಂದ ತೀವ್ರ ಶೋಧ…!!! ಶಿಕಾರಿಪುರ ತಾಲೂಕಿನ ಅಂಬಲಿಗೋಳ ಡ್ಯಾಮ್ ನಲ್ಲಿ ಯುವಕ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರು ಪಾಲಾಗಿರುವ ಘಟನೆ ನಡೆದಿದೆ. ಕಪ್ಪನಹಳ್ಳಿ ಗ್ರಾಮದ ನಿವಾಸಿ ಜಗದೀಶ್ ಎಂಬ ವ್ಯಕ್ತಿ ತಮ್ಮ ಸ್ನೇಹಿತರೊಂದಿಗೆ ವಿಹಾರಕ್ಕೆ ಆಗಮಿಸಿದಾಗ ಅಂಬಲಿಗೋಳ ಡ್ಯಾಮ್ ಮೇಲಿನ ರಸ್ತೆಯಲ್ಲಿ ತಿರುಗಾಡಿದ್ದಾರೆ.ನಂತರ ಅಂಬಲಿಗೋಳ ಡ್ಯಾಮ್ ನಲ್ಲಿ ಇಳಿದು ಕಾಲು ತೊಳೆಯುವಾಗ ಆಕಸ್ಮಿಕವಾಗಿ ಜಾರಿ ಬಿದ್ದು ನೀರುಪಾಲಾಗಿರುವ ಘಟನೆ ಇಂದು…
ರಿಪ್ಪನ್‌ಪೇಟೆ : ಚಲಿಸುತಿದ್ದ ಟಾಟಾ ಏಸ್ ವಾಹನದಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು|accident
ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕಣಬಂದೂರು ಶಾಲೆಯ ಬಳಿ ಟಾಟಾ ಏಸ್ ವಾಹನದಲ್ಲಿ ಹಿಂಬದಿ ಕುಳಿತಿದ್ದ ವ್ಯಕ್ತಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕಣಬಂದೂರು ಗ್ರಾಮದ ರಾಘವೇಂದ್ರ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಟಾಟಾ ಏಸ್(tata ace) ವಾಹನದಲ್ಲಿ ತೋಟಕ್ಕೆ ದರಗಲು ತರುತ್ತಿರುವಾಗ ಕಣಬಂದೂರು ಶಾಲೆಯ(school) ಸಮೀಪದಲ್ಲಿ ಹಿಂಬದಿ ಕುಳಿತಿದ್ದ ರಾಘವೇಂದ್ರ ಆಯ ತಪ್ಪಿ ಕೆಳಗಿನ ಸಿಮೆಂಟ್ ರಸ್ತೆಯ ಮೇಲೆ ಬಿದ್ದು ತೀವ್ರತರವಾಗಿ ಗಾಯಗೊಂಡಿದ್ದನು. ಕೂಡಲೇ ಸ್ಥಳೀಯರು ಹಾಗೂ ಸಂಬಂಧಿಕರು ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ(hospital) ದಾಖಲಿಸಿದ್ದಾರೆ ಆದರೆ…
ತೀರ್ಥಹಳ್ಳಿ : ಚಾಕಲೇಟ್ ಎಂದು ಇಲಿ ಪಾಷಾಣ ತಿಂದ ಐದು ವರ್ಷದ ಮಗು – ಚಿಕಿತ್ಸೆ ಫಲಿಸದೇ ಸಾವು|rat poison
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿಯ ಮೇಲಿನಕೊಪ್ಪದ ಬಳಿಯಲ್ಲಿ ಮಗುವೊಂದು ಇಲಿ ಪಾಷಾಣದ ಪೇಸ್ಟ್ ತಿಂದು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಕೂಲಿ ಕಾರ್ಮಿಕ ಚಂದ್ರಪ್ಪ ಮತ್ತು ಗೀತಾ ದಂಪತಿಯ ಎಂಬುವವರ ಪುತ್ರ ಪ್ರೀತಮ್ (5) ಮೃತ ಬಾಲಕ. ಇಲಿಗೆ ಅಂತಾ ಇಟ್ಟಿದ್ದ ಪಾಷಾಣವನ್ನು ಮಗು ಚಾಕೊಲೆಟ್ ಎಂದು ಭಾವಿಸಿ ಬಾಯಿಗೆ ಹಾಕಿಕೊಂಡಿದೆ. ನಿನ್ನೆ ರಾತ್ರಿ ಮಗು ಅಸ್ಥಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಇಂದು ಸಾವನ್ನಪ್ಪಿದೆ. ಮಗುವನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ…
ವಿದ್ಯುತ್ ಟ್ರಾನ್ಸ್ ಫಾರ್ಮ್ ದುರಸ್ತಿ ವೇಳೆ ವಿದ್ಯುತ್ ತಗುಲಿ ಪವರ್ ಮ್ಯಾನ್ ಸಾವು – ಜಿಲ್ಲೆಯಲ್ಲಿ ವಾರದಲ್ಲಿ ಎರಡು ದುರಂತ ಘಟನೆ|mescom
ಶಿಕಾರಿಪುರ : ಇಲ್ಲಿನ ಕಪ್ಪನಹಳ್ಳಿ ಗ್ರಾಮದಲ್ಲಿ ಟ್ರಾನ್ಸಪಾರ್ಮ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ನಡೆದಿದೆ. ದುರ್ಘಟನೆಯಲ್ಲಿ ಶ್ರೀಶೈಲಾ ಎನ್ನುವವರು ಮೃತಪಟ್ಟಿದ್ದಾರೆ. ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿ ಟ್ರಾನ್ಸಫಾರಮ್ನಲ್ಲಿ ದೋಷ ಕಾಣಿಸಿಕೊಂಡಿತ್ತು ಆ ಹಿನ್ನಲೆಯಲ್ಲಿ ಲೈನ್ ಮ್ಯಾನ್ ಶ್ರೀಶೈಲ ಸ್ಥಳಕ್ಕೆ ತೆರಳಿ ಸಂಬಂಧಿಸಿದ ಸ್ಟೇಷನ್ ನಿಂದ ಲೈನ್ ಕ್ಲಿಯರೆನ್ಸ್ ಪಡೆದು ದುರಸ್ತಿ ಕಾರ್ಯ ಕೈಗೊಂಡಿದ್ದರು. ಆದರೆ ಏಕಾಏಕಿ ಆಫ಼್ ಆಗಿದ್ದ ವಿದ್ಯುತ್ ಲೈನ್ ನಲ್ಲಿ ವಿದ್ಯುತ್ ಪ್ರವಹಿಸಿದ್ದರಿಂದ ಶ್ರೀಶೈಲಾ ಮೃತಪಟ್ಟಿದ್ದಾರೆ. ಲೈನ್ ಮ್ಯಾನ್…
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 19 ವರ್ಷದ ಯುವಕನಿಗೆ 20 ವರ್ಷ ಜೈಲು,1ಲಕ್ಷ ದಂಡ ವಿಧಿಸಿದ ಕೋರ್ಟ್|POCSO
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ಶಿವಮೊಗ್ಗ ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಭದ್ರಾವತಿ ತಾಲೂಕಿನ 19 ವರ್ಷದ ಯುವಕನೊಬ್ಬ 6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಇನ್ಸ್ ಪೆಕ್ಟರ್ ಲಕ್ಷ್ಮೀಪತಿ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ (ಪೋಕ್ಸೋ ವಿಭಾಗ) ನ್ಯಾಯಾಧೀಶರಾದ ನ್ಯಾ….
ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಹೊಸನಗರದ ಲಾಡ್ಜ್ ನಲ್ಲಿ ಸಾವು|real
ಹೊಸನಗರ : ಬೆಂಗಳೂರು ಜಿಲ್ಲೆಯ ಆಡುಗೋಡಿ ಆನೆಪಾಳ್ಯದ ರಿಯಲ್ ಎಸ್ಟೇಟ್ ಉದ್ಯಮಿ ಹೊಸನಗರದ ಖಾಸಗಿ ಲಾಡ್ಜ್ ನಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ಮುನಿರಾಜು (48) ಬೆಂಗಳೂರು ಮೂಲದವರಾಗಿದ್ದು ಕುಟುಂಬ ಸಮೇತ ದೇವರ ದರ್ಶನಕ್ಕೆ ಬಂದಿದ್ದರು. ಜನವರಿ 4ರಂದು ಪುಣ್ಯಕ್ಷೇತ್ರಗಳ ಭೇಟಿಗೆ ಎಂದು ಪತ್ನಿ ಹಾಗೂ ಮಕ್ಕಳೊಂದಿಗೆ ಕಾರಿನಲ್ಲಿ ಬೆಂಗಳೂರಿನಿಂದ ಬೆಳಿಗ್ಗೆ ಹೊರಟು ಹೊರನಾಡು ಶೃಂಗೇರಿ ಕ್ಷೇತ್ರದ ದರ್ಶನ ಮಾಡಿ ಹೊಸನಗರ ಬರುವಾಗ ರಾತ್ರಿ ಆಗಿದ್ದ ಕಾರಣ ಪಟ್ಟಣದ ಖಾಸಗಿ ಲಾಡ್ಜ್ ನಲ್ಲಿ ರೂಮ್…