ರಿಪ್ಪನ್ಪೇಟೆ : ಜೀವನದಲ್ಲಿ ಜಿಗುಪ್ಸೆಗೊಂಡ ವೀಳ್ಯದೆಲೆ ವ್ಯಾಪಾರಿ ಆತ್ಮಹತ್ಯೆ|crime
ರಿಪ್ಪನ್ಪೇಟೆ : ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಅಕೇಶಿಯ ಪ್ಲಾಂಟೇಷನ್ ನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಣಬಂದೂರು ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹೆದ್ದಾರಿ ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗೂಡ್ತಿ ಗ್ರಾಮದ ವಾಸಿ, ನಾಗರಾಜ್ (52) ಎಂಬ ವ್ಯಕ್ತಿಯು ಅನಾರೋಗ್ಯ ಕಾರಣದಿಂದ ಮನನೊಂದು ತಮ್ಮ ಮನೆಯ ಸಮೀಪದ ಪ್ಲಾಂಟೇಷನ್ ನಲ್ಲಿ ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಹಳ ದಿನಗಳಿಂದ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು ಅನಾರೋಗ್ಯ ಸಹಿಸಿಕೊಳ್ಳಲಾಗದೆ ಆತ್ಮಹತ್ಯೆ…