ಕ್ರೈಂ ಸುದ್ದಿ:
ಹುಲಿಕಲ್ ಘಾಟ್ ಭೀಕರ ಅಪಘಾತ ಪ್ರಕರಣ : ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು – ಮೃತರ ಸಂಖ್ಯೆ ಮೂರಕ್ಕೆ ಏರಿಕೆ|Hulikal accident
ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದ ಅಪಘಾತ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯು ಮೃತಪಟ್ಟಿದ್ದಾರೆ. ಗುರುವಾರ ತಡರಾತ್ರಿ ನಡೆದಿದ್ದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿತ್ತು ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ನಂತರ ಚಂದ್ರಗಿರಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದ ಕಂಪದ ಕೈ ರವಿ ರವರ ಪತ್ನಿ ಶಾಲಿನಿ ಮೃತಪಟ್ಟಿದ್ದಾರೆ. ಘಟನೆಯ ಹಿನ್ನಲೆ: ಗುರುವಾರ ರಾತ್ರಿ ಹುಲಿಕಲ್ ಘಾಟ್ ನಲ್ಲಿ ಬೈಕ್ ನಲ್ಲಿ ತೆರಳುತ್ತಿರುವವರ ಮೇಲೆ…
ಉದ್ಯೋಗ ಕೊಡಿಸುವುದಾಗಿ ನಂಬಿಸಿ ನಾಲ್ವರು ಮಹಿಳೆಯರಿಗೆ ವಂಚನೆ : ಪ್ರಕರಣ ದಾಖಲು|Cheating
ಹಾಸ್ಟೆಲ್ ನ ವಾರ್ಡನ್ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ ತನ್ನ ಪ್ರಭಾವದಿಂದ ಕೆಲಸ ಕೊಡಿಸುವುದಾಗಿ ನಂಬಿಸಿ ನಾಲ್ವರು ಮಹಿಳೆಯರಿಗೆ ವಂಚಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ. ಶಿವಮೊಗ್ಗದ ನಿವಾಸಿಯಾದ ಸುನಿಲ್,ಸಾಗರದ ಶಾಹಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಮಹಿಳೆಯರಿಗೆ ಪರಿಚಿತನಾಗಿದ್ದಾನೆ. ಸುನಿಲ್ ಅವರಿಗೆ ಸುಳ್ಳು ಹೇಳಿ, “ನಾನು ಆನಂದಪುರದ ಯಡೇಹಳ್ಳಿಯ ಇಂದಿರಾ ಗಾಂಧಿ ವಸತಿ ಸಂಸ್ಥೆಯಲ್ಲಿ ಹಾಸ್ಟೆಲ್ ವಾರ್ಡನ್ ಆಗಿದ್ದೇನೆ. ಅವರು ಅದೇ ಸಂಸ್ಥೆಯಲ್ಲಿ ಕಂಪ್ಯೂಟರ್ ಆಪರೇಟರ್, ಹೌಸ್ ಕೀಪಿಂಗ್ ಸಿಬ್ಬಂದಿ ಮತ್ತು ಅಡುಗೆಯವರಾಗಿ…
ಶಿವಮೊಗ್ಗ : ಜಾಗದ ವಿಚಾರದಲ್ಲಿ ಗುಂಪು ಘರ್ಷಣೆ – ಉದ್ವಿಗ್ನ ವಾತವಾರಣ : ಒಂಬತ್ತು ಮಂದಿ ಪೊಲೀಸ್ ವಶಕ್ಕೆ|Group conflict
ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಶಿವಮೊಗ್ಗ ತಾಲೂಕಿನ ಹಾರೊ ಬೆನವಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ಈ ಗ್ರಾಮದಲ್ಲಿ ಇರುವ ಜಾಗದ ವಿಚಾರದಲ್ಲಿ ಒಂದು ಗುಂಪು ಇನ್ನೊಂದು ಗುಂಪಿನ ಮೇಲೆ ಹಲ್ಲೆಗೆ ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿದೆ. ಗ್ರಾಮಸ್ಥರು ಯುವಕರಿಗೆ ಈ ರೀತಿ ಮಾಡುವುದು ತಪ್ಪು ಎಂದು ಹೇಳಲು ಹೋದಾಗ ಮಾತಿಗೆ ಮಾತು ಬೆಳೆದು ಘರ್ಷಣೆ ಆಗಿದೆ ಎಂದು ತಿಳಿದುಬಂದಿದೆ. ಈ ವೇಳೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಹೊಳೆ…
ಎಂಎಸ್ ಐಎಲ್ ಗೋಡೆ ಕೊರೆದು ಲಕ್ಷಾಂತರ ರೂ ಮೌಲ್ಯದ ಮದ್ಯ ಕಳ್ಳತನ|MSIL
ಗೋಡೆ ಕೊರೆದು ಎಂಎಸ್ ಐಎಲ್ ಮದ್ಯದ ಅಂಗಡಿಯಿಂದ ಮಧ್ಯ ಕಳ್ಳತನ ಮಾಡಿರುವ ಘಟನೆ ಸಾಗರ ತಾಲೂಕಿನ ಬೆಳ್ಳಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ msil ಮದ್ಯದ ಮಳಿಗೆಯ ಮಾಲಿಕರು ಎಂದಿನಂತೆ ರಾತ್ರಿ ಮಳಿಗೆಗೆ ಬೀಗ ಹಾಕಿಕೊಂಡು ಹೋಗಿದ್ದರು.ಮರುದಿನ ತೋಟಕ್ಕೆ ಕೆಲಸಕ್ಕೆ ಹೋಗುವವರು ಗಮನಿಸಿ,ಮಾಲಿಕರಿಗೆ ದೂರವಾಣಿ ಮೂಲಕ ಮದ್ಯದ ಮಳಿಗೆ ಕಳ್ಳತನವಾಗಿದ್ದನ್ನು ತಿಳಿಸಿದ್ದಾರೆ. ಮಾಲಿಕ ರವಿಯವರು ಮಳಿಗೆಗೆ ಬಂದು ಪರಿಶೀಲಿಸಿದಾಗ ಕಳ್ಳರು ಬಾಗಿಲು ಮುರಿಯಲು ಸಾಧ್ಯವಾಗದೇ ಇದ್ದಾಗ ಗೋಡೆ ಕೊರೆದು ಒಳ ಪ್ರವೇಶಿಸಿ ಲಕ್ಷಾಂತರ ರೂ ಮೌಲ್ಯದ ಮದ್ಯವನ್ನು ಕಳ್ಳತನ ಮಾಡಿದ್ದಾರೆ….
ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಅನಾಮಧೇಯ ಶವ ಪತ್ತೆ|Thirthahalli
ತುಂಗಾ ನದಿಯಲ್ಲಿ ಅನಾಮಧೇಯ ಶವವೊಂದು ಪತ್ತೆಯಾಗಿದ್ದು,ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ತೂದೂರು ಬಳಿಯಲ್ಲಿ ಹರಿಯುವ ತುಂಗಾ ನದಿಯಲ್ಲಿ ಅನಾಮಧೇಯ ಶವವೊಂದು ಪತ್ತೆಯಾಗಿದೆ. ತೂದೂರು ಗ್ರಾಮದ ಸರ್ಕಾರಿ ಶಾಲೆ ಹಿಂಬಾಗ ನದಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಈಜುಗಾರರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಉಕ್ಕಡದಲ್ಲಿ ಶವವನ್ನು ಮೇಲಕ್ಕೆತ್ತಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
ಹುಲಿಕಲ್ ಘಾಟ್ ನಲ್ಲಿ ಭೀಕರ ಅಪಘಾತ – ಇಬ್ಬರ ಸಾವು,ಓರ್ವ ಮಹಿಳೆಯ ಸ್ಥಿತಿ ಗಂಭೀರ|Accident
ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾದ ಘಟನೆ ತಡರಾತ್ರಿ ನಡೆದಿದೆ. ಬೈಕ್ ನಲ್ಲಿ ತೆರಳುತ್ತಿರುವವರ ಮೇಲೆ ಹಿಂಬದಿಯಿಂದ ಬಂದ ಲಾರಿ ಹರಿದಿದ್ದು ಘಟನೆ ಬಳಿಕ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಘಟನಾ ಭೀಕರತೆ ನೋಡಿ ಜನ ಬೆಚ್ಚಿಬಿದ್ದಿದ್ದು, ಸುಮಾರು ಎರಡೂವರೆ ಘಂಟೆ ಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು. ಮಾಸ್ತಿಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಪದ ಕೈ ಕೂಲಿ ಕಾರ್ಮಿಕ ರವಿ…
ಮೊಬೈಲ್ ಚಾರ್ಜ್ ಮಾಡುವ ವಿಚಾರದಲ್ಲಿ ಗಲಾಟೆ – ಕೊಲೆಯಲ್ಲಿ ಅಂತ್ಯ : 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು|Murder
ಅಕ್ರಮವಾಗಿ ಮನೆಯೊಳಗೆ ಬಂದು ಮೊಬೈಲ್ ಚಾರ್ಜ್ ಗೆ ಇಡಲು ಬಂದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ದೊಣ್ಣೆಯಿಂದ ಹೊಡೆದು ಸಾಯಿಸಿರುವ ಅಮಾನವೀಯ ಘಟನೆ ಸಾಗರ ತಾಲೂಕಿನ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮುರಳ್ಳಿ ಮರಾಠಿ ಗ್ರಾಮದಲ್ಲಿ ನಡೆದಿದೆ. ನಡೆದಿದ್ದೇನು: ದಿನಾಂಕ:07-11-2022 ರಂದು ರಾತ್ರಿ 8-00 ಗಂಟೆಗೆ ಸಾಗರ ತಾಲ್ಲೂಕು ಮುರಳ್ಳಿ ಮರಾಠಿ ಗ್ರಾಮದ ತಿಮ್ಮಪ್ಪ ಎಂಬುವವರ ಮನೆಗೆ ಮೊಬೈಲ್ ಚಾರ್ಜ್ ಮಾಡುವ ಉದ್ದೇಶದಿಂದ ಅದೇ ಗ್ರಾಮದ ಸಿದ್ದಪ್ಪ ಎಂಬುವವನು ಅಕ್ರಮ ಪ್ರವೇಶ ಮಾಡುತ್ತಾನೆ. ಈ ಸಂಧರ್ಭದಲ್ಲಿ ಮನೆಗೆ ಅಕ್ರಮ ಪ್ರವೇಶ…
ಗಾಂಜಾ ಮಾರಾಟಕ್ಕೆ ಯತ್ನ – ಬೈಕ್ ಸಹಿತ ಮೂವರು ಯುವಕರ ಬಂಧನ|Arrested
ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೂವರು ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತುಂಗ ನಗರ ಪೊಲೀಸ್ ಠಾಣೆ ವ್ಯಾಪ್ತಿ ನಿಸರ್ಗ ಬಡಾವಣೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಅಡಿ ಮೂವರು ಆರೋಪಿಗಳನ್ನ ಪೊಲೀಸರು ಬಂದಿಸಿದ್ದು 615 ಗ್ರಾಂ ಗಾಂಜಾ ವಶ ಪಡಿಸಿಕೊಂಡಿದ್ದಾರೆ. ಮಂಗಳವಾರ ಶಿವಮೊಗ್ಗ ಡಿವೈಎಸ್.ಪಿ ನೇತೃತ್ವದಲ್ಲಿ, ತುಂಗಾನಗರದ ಪಿಎಸ್ ಐ ಮತ್ತು ಸಿಬ್ಬಂಧಿಗಳ ತಂಡವು ನಿಸರ್ಗ ಲೇ ಔಟ್ ನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿತರಾದ 1) ಮದಾರಿ ಪಾಳ್ಯದ…
ತಾಯಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಹಿಂತಿರುಗಿದ ಮಗ ಹೃದಯಾಘಾತದಿಂದ ಸಾವು|Hosanagara
ಹೊಸನಗರ : ತಾಯಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ ಮಗ ಸಹ ಸಾವನ್ನಪ್ಪಿದ ಘಟನೆ ತಾಲೂಕಿನ ಸುಳಗೋಡು ಗ್ರಾಮ ಪಂಚಾಯತಿಯ ಹುಲ್ಲುಸಾಲೆ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ಹುಲ್ಲುಸಾಲೆ ಗ್ರಾಮದ ಚಿನ್ನಮ್ಮ(78) ವಯೋ ಸಹಜವಾಗಿ ಸಾವನ್ನಪ್ಪಿದ್ದರು. ಇವರ ಅಂತ್ಯ ಸಂಸ್ಕಾರವನ್ನು ಭಾನುವಾರ ನಡೆಸಲಾಯಿತು. ತಾಯಿ ಚಿನ್ನಮ್ಮನ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ 30 ನಿಮಿಷದ ನಂತರ ಚಿನ್ನಮ್ಮನ ಮಗ ತಿಮ್ಮಪ್ಪಗೌಡ(58) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತಿಮ್ಮಪ್ಪಗೌಡ ತನ್ನ ತಾಯಿಯನ್ನು ಬಹಳ ಪ್ರೀತಿಸುತ್ತಿದ್ದರು. ಇದರಿಂದ…
ರಿಪ್ಪನ್‌ಪೇಟೆ : ಸಿದ್ದಪ್ಪನಗುಡಿ ಬಳಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ|Ripponpet
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಸಿದ್ದಪ್ಪನಗುಡಿ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ದಪ್ಪನಗುಡಿ ನಿವಾಸಿ ಸಿದ್ದೇಶ್ ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ಡೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ಘಟನೆಯ ಹಿನ್ನಲೆ : ಇಂದು ಬೆನವಳ್ಳಿ ಗ್ರಾಮದ ಸಿದ್ಧಪ್ಪನ ಗುಡಿ ಹತ್ತಿರ ರಿಪ್ಪನ್‌ಪೇಟೆ ಪೊಲೀಸರು ಗಸ್ತು ಸಂಚರಿಸುತ್ತಿರುವಾಗ ಬೆಳಿಗ್ಗೆ 10-45 ಗಂಟೆ ವೇಳೆಗೆ ಸಾರ್ವಜನಿಕ ಸ್ಥಳದಲ್ಲಿ…