ಕ್ರೈಂ ಸುದ್ದಿ:
ಕೆ ಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು
ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಭದ್ರಾವತಿ ನಗರದ ಉಂಬ್ಳೆಬೈಲು ರಸ್ತೆಯಲ್ಲಿ ಕೆಎಸ್ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಆಂಜನೇಯ ಅಗ್ರಹಾರದ ಮೂರನೇ ತಿರುವಿನ ನಿವಾಸಿ ಲೋಕೇಶ್ ಎಂಬಾತನು ಬೈಕ್ ನಲ್ಲಿ ಹೋಗುತ್ತಿದ್ದಾಗ ನ್ಯೂಟೌನ್ ಪೊಲೀಸ್ ಠಾಣೆಯ ಸಮೀಪ ಕೆಎಸ್ ಆರ್ ಟಿ ಸಿ ಬಸ್ ಗೆ ಡಿಕ್ಕಿ ಹೊಡೆದಿದ್ದಾರೆ. ಬೈಕ್ ಸವಾರ…
ಖಾಸಗಿ ಈಜುಕೊಳದಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು :
ಖಾಸಗಿ ಈಜುಕೊಳದಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ತನ್ನ ಸ್ನೇಹಿತರೊಂದಿಗೆ ಶಿವಮೊಗ್ಗದ ಶಕ್ತಿಧಾಮದ ಖಾಸಗಿ ಈಜುಕೊಳಕ್ಕೆ ತೆರಳಿದ್ದ ಜೋಸೆಫ್ ನಗರದ ಯುವಕ ರಾಕೇಶ್ ಎಂಬ 18 ವರ್ಷದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಡಿವಿಎಸ್ ಕಾಮರ್ಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ರಾಕೇಶ್ ಎರಡು ಮೂರು ದಿನಗಳಿಂದ ಸ್ನೇಹಿತರೊಂದಿಗೆ ಈಜುಕೊಳದಲ್ಲಿ ತೆರಳಿ ಈಜು ಹೊಡೆಯಲು ಯೋಜನೆ ಹಾಕಿಕೊಂಡಿದ್ದ. ಇಂದು ಮಧ್ಯಾಹ್ನ ಈಜುಕೊಳಕ್ಕೆ ತೆರಳಿದ್ದ ಯುವಕ ಮನೆಗೆ ಹೊರಡುವ ವೇಳೆ ನೀರಿನಿಂದ…
ಕೋಳಿ ಕದಿಯುತ್ತಿದ್ದ ಎನ್ನುವ ಕಾರಣಕ್ಕೆ ಮೃಗವಧೆ ರಾಜು ಎಂಬಾತನನ್ನು ಬಡಿದು ಕೊಂದು ಬಿಟ್ರಾ ದುಷ್ಕರ್ಮಿಗಳು..!!!!!!!????
ಅಂಗಡಿಗಳಲ್ಲಿ ಕೋಳಿ ಕದಿಯುತ್ತಿದ್ದ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಬಡಿದು ಕೊಂದಿರುವಂತಹ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮೃಗವಧೆಯಲ್ಲಿ ನಡೆದಿದೆ ಎನ್ನಲಾಗುತ್ತಿದೆ. ಮೃಗವಧೆಯ ರಾಜು ಹೇಗೆ ಸಾವನ್ನಪ್ಪಿರುವ ವಿಚಾರ ಇದೀಗ ಹೊರಕ್ಕೆ ಬಂದಿದೆ. ಆ ಊರು ಹಾಗೂ ಅಲ್ಲಿನ ಸ್ಥಳಿಯರು ಹೇಳುವ ಪ್ರಕಾರ ಆತ ಅಡಿಕೆ ಗೊನೆ ತೆಗೆಯುವವನಾಗಿದ್ದು ಹಾಗೂ ಮದ್ಯ ವ್ಯಸನಿಯಾಗಿದ್ದ. ಕಳೆದ ಮೂರು ದಿನಗಳಿಂದ ರಾಜು ಮನೆಯಲ್ಲಿರಲಿಲ್ಲ. ಕೋಳಿಯಂಗಡಿಗಳಲ್ಲಿ ಕೋಳಿ ಕದಿಯುತ್ತಿದ್ದ ಎಂಬ ಕಾರಣಕ್ಕೆ ಆತನ ಮೇಲೆ ಶಿಶಿರ, ಶಿವು ಮತ್ತು ವಿಜಯೇಂದ್ರ ಎಂಬ ಆರೋಪಿಗಳು ಹಲ್ಲೆ…
ಗೃಹ ಸಚಿವರ ಸ್ವಕ್ಷೇತ್ರದಲ್ಲಿಯೇ ವ್ಯಕ್ತಿಯೊಬ್ಬನ ಭೀಕರ ಹತ್ಯೆ!!!!!!!!
ತೀರ್ಥಹಳ್ಳಿ : ತಾಲೂಕಿನ ಶೇಡ್ಗಾರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೃಗಾವಧೆಯ ಬೆಳ್ಳಿಕೊಡಿಗೆ ವಾಸಿ ರಾಜು (45) ಬೆಳ್ಳಂಬೆಳಗ್ಗೆ ಮನೆ ಮುಂಭಾಗದಲ್ಲಿ ಹೆಣವಾಗಿದ್ದಾರೆ. ಸಾಯುವ ಮುನ್ನ ರಾಜು ಮಾರಾಮಾರಿ ವಿಚಾರ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಂಡಿದ್ದು, ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ಬಹಿರಂಗವಾಗಬೇಕಾಗಿದೆ. ರಾಜು ಮೂರು ದಿನಗಳಿಂದ ಮನೆಗೆ ಬಂದಿರಲ್ಲಿಲ್ಲ. ಸೋಮವಾರ ಬೆಳಿಗ್ಗೆ 6.30ರ ಸುಮಾರಿಗೆ ಮೂವರು ದುಷ್ಕರ್ಮಿಗಳು ಯದ್ವತದ್ವ ಹಲ್ಲೆ ಮಾಡಿ ಬೈಕಿನಲ್ಲಿ ಮನೆ ಮುಂಭಾಗ ತಂದು ಎಸೆದಿದ್ದಾರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಗಂಭೀರವಾಗಿ ಗಾಯಗೊಂಡ ರಾಜು ಜೋರಾಗಿ…
ಹಸುವಿಗೆ ನೀರು ಕುಡಿಸಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು
ಹಸುವಿಗೆ ನೀರು ಕುಡಿಸಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಬೀರನಕೆರೆ ಗ್ರಾಮದಲ್ಲಿ ನಡೆದಿದೆ. ಬೀರನಕೆರೆ ಗ್ರಾಮದ ರವಿ ನಾಯ್ಕ(18) ಮೃತ ಯುವಕ. ರವಿನಾಯ್ಕ ಭಾನುವಾರ ಮಧ್ಯಾಹ್ನ ಹಸುವಿಗೆ ನೀರು ಕುಡಿಸಲು ಗ್ರಾಮದ ಎಂಪಿಎಂ ಕಟ್ಟೆಯ ಬಳಿ ಹೋದಾಗ, ಹಸು ನೀರಿಗೆ ಇಳಿದಿದೆ. ಈ ವೇಳೆ ಹಸು ನೀರಿನ ಆಳಕ್ಕೆ ಹೋದಾಗ ಹಸುವನ್ನು ಕರೆದುಕೊಂಡು ಬರಲು ಹೋಗಿ ಆತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಹಸು ಮನೆಗೆ ಬಂದಿದೆ. ಆದರೆ ರವಿ ಮನೆಗೆ ಬಾರದೆ…
ನೀರಿನ ತೊಟ್ಟಿಗೆ ಬಿದ್ದು 11 ತಿಂಗಳ ಮಗು ಸಾವು : ಹೃದಯ ಹಿಂಡುತ್ತಿರುವ ಕುಟುಂಬಸ್ಥರ ಆಕ್ರಂದನ
ಮನೆಯ ಮುಂದಿನ ನೀರಿನ ತೊಟ್ಟಿಗೆ ಬಿದ್ದು 11 ತಿಂಗಳ ಮಗುವೊಂದು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ ಛಾಯಾಗ್ರಾಹಕ ದೇವರಾಜ್ ಹಾಗೂ ಅನುಷಾ ದಂಪತಿಯ ೧೧ ತಿಂಗಳ ಮಗು ಅಕ್ಷಯ್ ಮನೆಯ ಮುಂದಿನ ತೊಟ್ಟಿಯಲ್ಲಿ ಬಿದ್ದು ಸಾವನ್ನಪ್ಪಿದೆ. ಮುಂದಿನ ವಾರ ಒಂದನೇ ವರ್ಷಕ್ಕೆ ಕಾಲಿಡುತ್ತಿದ್ದು ಮಗುವಿನ ಜನ್ಮ ದಿನವನ್ನು ಅದ್ಧೂರಿಯಾಗಿ ಆಚರಿಸಲು ಯೋಚಿಸಿದ್ದ ಮನೆಯಲ್ಲೀಗ ಸ್ಮಶಾನ ಮೌನ ಆವರಿಸಿದೆ. ಮಹಾಲಯ ಅಮವಾಸ್ಯೆ ದಿನವಾದ ಭಾನುವಾರ ಮನೆಯವರು ವಾಹನ ತೊಳೆಯುವುದು, ಪೂಜೆ ಪುನಸ್ಕಾರದ ಕಡೆ ಗಮನ…
ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಸಾವು ,ಇನ್ನೊಬ್ಬ ಗಂಭೀರ
ಪೋಸ್ಟ್ ಮ್ಯಾನ್ ನ್ಯೂಸ್ ಡೆಸ್ಕ್ …………………ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಜೋಗ ಸಮೀಪದಲ್ಲಿ ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಚಿಕ್ಕಮಗಳೂರು ನಿಂದ ಕಾರವಾರಕ್ಕೆ ಹೊರಟ ಸರ್ಕಾರಿ ಬಸ್ ಹಾಗೂ ವಡನ್ ಬೈಲ್ ಪದ್ಮಾವತಿ ದೇವಾಲಯದ ಧರ್ಮಧರ್ಶಿ ಹಾಗೂ ಸಹೋದರ ಚಲಿಸುತ್ತಿದ್ದ ಮಾರುತಿ ಓಮ್ನಿ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ದೇವಯ್ಯಾ ಜೈನ್ ಮೃತರಾಗಿದ್ದಾರೆ.ಇವರು ನಿವೃತ್ತ ಕೆಪಿಸಿ ಉದ್ಯೋಗಿಯಾಗಿದ್ದರು. ಸಹ ಪ್ರಯಾಣಿಕ ರಾಜೇಂದ್ರ ಜಯಂತ್ ಸ್ವಾಮೀಜಿ ರವರ ತಲೆಗೆ…
ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹೆಡ್ ಕಾನ್ ಸ್ಟೇಬಲ್ ಬಂಧನ :
…………………………ಪೋಸ್ಟ್ ಮ್ಯಾನ್ ನ್ಯೂಸ್ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಪಟ್ಟಣದಲ್ಲಿ ಹೆಡ್ ಕಾನ್‌ಸ್ಟೇಬಲ್ (head constable) ವಿರುದ್ಧ ಮಹಿಳೆಯೊಬ್ಬರು ಭದ್ರಾವತಿಯ ಟೌನ್ ಸರ್ಕಲ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೆಡ್ ಕಾನ್‌ಸ್ಟೇಬಲ್ ರಾಘವೇಂದ್ರ ವಿರುದ್ಧ ಕೆ.ರೇಖಾ ಎಂಬುವವರು ಆರೋಪ ಮಾಡಿದ್ದಾರೆ. ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದ ಕೆ.ರೇಖಾ 2019ರ ಫೆಬ್ರವರಿಯಲ್ಲಿ ತನ್ನ ಪತಿ ಆಂಜನೇಯ ಮತ್ತು ಅವರ ತಮ್ಮ ರಮೇಶನ ನಡುವೆ ಆಸ್ತಿಯ ವಿಚಾರವಾಗಿ (matter of…
ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿರಾಯ : ಆರೋಪಿ ಬಂಧನ
ಪತ್ನಿಯನ್ನು ಚಾಕುವಿನಿಂದ ಇರಿದು ಪತಿಯೇ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ಇಂದು ನಡೆದಿದೆ. ಕೊಲೆಗೆ ಕೌಟುಂಬಿಕ ಕಲಹ ಕಾರಣವೆಂದು ಶಂಕಿಸಲಾಗಿದೆ. ಕರುಣಾಕರ ಎಂಬ 33 ವರ್ಷದ ಎಂಬಿಎ ಪದವೀಧರ ಎರಡು ವರೆ ವರ್ಷದ ಹಿಂದೆ ಬುಳ್ಳಾಪುರದ ಯುವತಿ ಅಮಿತಾ(26) ಎಂಬಾಕೆಯೊಂದಿಗೆ ಮದುವೆಯಾಗಿದ್ದ. ಮದುವೆಯಾಗಿ ಎರಡೂವರೆ ವರ್ಷ ಕಳೆದಿದ್ದರು ಮಕ್ಕಳಾಗಿರಲಿಲ್ಲ. ಆದರೆ ಮಕ್ಕಳ ವಿಚಾರದಲ್ಲಿ ಗಲಾಟೆಯಾಗಿಲ್ಲವೆಂದು ಗ್ರಾಮಸ್ಥರು ಸ್ಪಷ್ಟಪಡಿಸಿದ್ದಾರೆ. ಪದೇ ಪದೇ ಜಗಳವಾಡುತ್ತಿದ್ದ ಪತಿಪತ್ನಿ ಕಳೆದ ವರ್ಷ ಗಂಡನ ಮನೆ ತೊರೆದು ಪತ್ನಿ ಅಮಿತಾ ತವರು ಮನೆ…
ಮಲೆನಾಡಿನಲ್ಲಿ ಉಗ್ರರ ಕರಿನೆರಳು!!!! : ಶಿವಮೊಗ್ಗದಲ್ಲಿ ಎಂಜಿನಿಯರ್ ಯಾಸಿನ್ ಸಹಿತ ಇಬ್ಬರು ಶಂಕಿತ ಉಗ್ರರ ಬಂಧನ – ಇನ್ನಿಬ್ಬರಿಗೆ ಶೋಧ
ಮಲೆನಾಡಿಗೂ ಉಗ್ರರ ನಂಟು ತಗುಲಿವ ಶಂಕೆ ವ್ಯಕ್ತವಾಗಿದೆ. ಇದಕ್ಕೆ ಪೂರಕ ಎಂಬಂತೆ ಶಿವಮೊಗ್ಗ ಜಿಲ್ಲೆಯ ಇಬ್ಬರು ಮತ್ತು ಮಂಗಳೂರು ಮೂಲದ ಓರ್ವನ ವಿರುದ್ಧ ಶಿವಮೊಗ್ಗ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ನಿಷೇಧಿತ ಭಯೋತ್ಪಾದಕ ಸಂಘಟನೆಯ ನಂಟನ್ನು ಹೊಂದಿರುವ ಕಾರಣ ಇವರನ್ನು ಯುಎಪಿಎ ಕಾಯ್ದೆಯಡಿ ಬಂಧಿಸಲಾಗಿದೆ. ಮೂವರು ಶಂಕಿತರಾದ ಶಿವಮೊಗ್ಗದ ಸಿದ್ದೇಶ್ವರ ನಗರದ ನಿವಾಸಿ ಸಯ್ಯದ್ ಯಾಸೀನ್(21) ಹಾಗೂ ಮಂಗಳೂರಿನ ಮಾಜ್ ಮುನೀರ್ ಅಹಮ್ಮದ್ (22) ಮತ್ತು ತೀರ್ಥಹಳ್ಳಿ ಸೂಪ್ಪುಗುಡ್ಡೆಯ ನಿವಾಸಿ ಶಾರೀಕ್ ಮೇಲೆ ಯುಎಪಿಎ (UNLAWFUL ACTIVITIES (PREVEVNTION…