ಕ್ರೈಂ ಸುದ್ದಿ:
ತೀರ್ಥಹಳ್ಳಿ : ಕ್ರೀಡಾಕೂಟದಲ್ಲಿ ಅನ್ಯಕೋಮಿನ ಯುವಕರ ನಡುವೆ ಗಲಾಟೆ : ಓರ್ವ ಮೆಗ್ಗಾನ್ ಗೆ ದಾಖಲು
ತೀರ್ಥಹಳ್ಳಿ : ತಾಲೂಕಿನ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನೆಡೆದಿದ್ದ ಕ್ರೀಡಾಕೂಟದಲ್ಲಿ ಅನ್ಯಕೋಮಿನ ಯುವಕರ ನಡುವೆ ಶುಕ್ರವಾರ ಗಲಾಟೆ ನಡೆದಿದೆ. ಬೆಟ್ಟಮಕ್ಕಿ ಸಮೀಪದ ಯುವಕ ಪ್ರಜ್ವಲ್ ಮತ್ತು ಇಂದಿರಾನಗರದ ಯುವಕ ರೆಹಮಾನ್ ನಡುವೆ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ ಪ್ರಜ್ವಲ್ ಗೆ ಪೆಟ್ಟಾಗಿದ್ದು ಜಯ ಚಾಮರಾಜೇಂದ್ರ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವರದಿ : ಅಕ್ಷಯ್ ಕುಮಾರ್
ಹೆಂಡತಿಯ ಕುತ್ತಿಗೆ ಕೊಯ್ದು ಬರ್ಬರವಾಗಿ ಸಾಯಿಸಿದ ಪತಿರಾಯ :
ಗಂಡ ಹೆಂಡತಿಯ ನಡುವಿನ ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯ ಕುತ್ತಿಗೆ ಕೊಯ್ದು ಬರ್ಬರವಾಗಿ ಕೊಲೆ ಮಾಡಿ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗದ ಪ್ರಿಯಾಂಕ ಲೇಔಟ್ ನಲ್ಲಿ ನಡೆದಿದೆ. ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪ್ರಿಯಾಂಕಾ ಲೇಜೌಟ್ ನಲ್ಲಿ ದಿನೇಶ ಮತ್ತು ಮಂಜುಳಾ ನಡುವೆ ಗಲಾಟೆಯಾಗಿದ್ದು, ಈ ಗಲಾಟೆಯೇ ಕೊಲೆಗೆ ಕಾರಣ ಎಂದು ದಿನೇಶ್ ಪೊಲೀಸರಿಗೆ ತಿಳಿಸಿದ್ದಾರೆ. ಮೆಸ್ಕಾಂ ಉದ್ಯೋಗಿಯಾಗಿರುವ ದಿನೇಶ್ ತನ್ನ ಪತ್ನಿ ಮಂಜುಳಾ (30) ರವರನ್ನು ಕುತ್ತಿಗೆ ಕೊಯ್ದು ಹತ್ಯೆ ಮಾಡಿದ್ದಾನೆ ನಂತರ…
ಭಾರೀ ಮಳೆ : ಮನೆ ಗೋಡೆ ಕುಸಿದು ವೃದ್ಧೆ ಸಾವು
ಮನೆ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಹೊರವಲಯದ ಮಲವಗೊಪ್ಪ ಬಳಿಯ ಇಂದಿರಾ ಕಾಲೋನಿಯಲ್ಲಿ ನಡೆದಿದೆ. ಇಂದಿರಾ ಕಾಲೋನಿ ನಿವಾಸಿ ಗೌರಮ್ಮ ಮೃತ ದುರ್ದೈವಿಯಾಗಿದ್ದಾರೆ. ನಿರಂತರ ಮಳೆಯಿಂದಾಗಿ ಗೌರಮ್ಮ ಅವರ ಮನೆ ಗೋಡೆಗಳು ತೇವಗೊಂಡಿದ್ದು, ನಿನ್ನೆ ತಡರಾತ್ರಿ ಏಕಾಏಕಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಗೌರಮ್ಮ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಗೌರಮ್ಮ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ನಾಗರಾಜ್ ಹಾಗೂ ಪಾಲಿಕೆ ಸದಸ್ಯ ಆರ್.ಸಿ ನಾಯ್ಕ್ ಭೇಟಿ…
ಎರಡು ದಿನದ ಹಿಂದೆ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿದ್ದ ಯುವಕ ನೇಣಿಗೆ ಶರಣು :
ಸಾಗರ : ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಎಸ್.ಎನ್ ನಗರ ಹೊಸಬಡಾವಣೆಯಲ್ಲಿ ಭಾನುವಾರ ನಡೆದಿದೆ. ನಾಗರಾಜ್(23) ಆತ್ಮಹತ್ಯೆ ಮಾಡಿಕೊಂಡ ಯುವಕ. ಗ್ಯಾಸ್ ಬಂಕ್ ನಲ್ಲಿ ಕರ್ತವ್ಯ ನಿರ್ವಹಿಸುವ ನಾಗರಾಜ್ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡು ದಿನಗಳ ಹಿಂದೆಯಷ್ಟೇ ಸ್ನೇಹಿತರೊಂದಿಗೆ ನಾಗರಾಜ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾನೆ. ಮೃತ ನಾಗರಾಜನ ತಾಯಿ ತೀರಿಕೊಂಡು ನಾಳೆಗೆ ಒಂದು ವರ್ಷ ಆಗಲಿದೆ. ಮನೆಯಲ್ಲಿ ಒಬ್ಬಂಟಿ ಆಗಿದ್ದ ನಾಗರಾಜ್ ತಾಯಿಯ ಅಗಲಿಕೆಯಿಂದ ಮಾನಸಿಕವಾಗಿ ನೊಂದಿದ್ದ ಎನ್ನಲಾಗಿದೆ. ಸಾಗರ ಪೇಟೆ…
ಆಯನೂರಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ…!!!
ಶಿವಮೊಗ್ಗ ಜಿಲ್ಲೆಯ ಆಯನೂರಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ.ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಚಾಲಕನ ಸ್ಥಿತಿ ಚಿಂತಾಜನಕವಾಗಿದೆ. ಬೈಕ್ ಸವಾರನನ್ನು ಮಲೇಬೆನ್ನೂರು ನಿವಾಸಿ ಹಬೀಬುಲ್ಲಾ ಎಂದು ಗುರುತಿಸಲಾಗಿದೆ. ಬೈಕ್ ಸವಾರನಿಗೆ ತೀವ್ರ ಪೆಟ್ಟು ಬಿದ್ದಿದ್ದು ಇವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಯನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ. ಅಪಘಾತದ ಸಿಸಿಟಿವಿ ದೃಶ್ಯಾವಳಿಯನ್ನು ಇಲ್ಲಿ ವೀಕ್ಷಿಸಿ👇
ಮುರುಘಾ ಶ್ರೀ ಪ್ರಕರಣ : ಎರಡನೇ ಆರೋಪಿ ರಶ್ಮಿ ಶಿವಮೊಗ್ಗದ ಜೈಲಿಗೆ – 13 ದಿನ ನ್ಯಾಯಾಂಗ ಬಂಧನ
ಶಿವಮೊಗ್ಗ : ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ವಾರ್ಡನ್ ರಶ್ಮಿಯನ್ನು ಪೊಲೀಸರು ಶಿವಮೊಗ್ಗ ಸೆಂಟ್ರಲ್ ಜೈಲ್ಗೆ ಕರೆತಂದಿದ್ದಾರೆ. ಚಿತ್ರದುರ್ಗದಲ್ಲಿ ಮಹಿಳಾ ಸೆಲ್ ಇಲ್ಲದ ಕಾರಣಕ್ಕಾಗಿ ಆಕೆಯನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಕರೆತಂದಿದ್ದಾರೆ. ಕೋವಿಡ್ ಬಂದ ನಂತರ ಚಿತ್ರದುರ್ಗ ಜೈಲಿನಲ್ಲಿದ್ದ ಮಹಿಳಾ ಸೆಲ್‌ನ್ನು ರದ್ದುಪಡಿಸಲಾಗಿದೆ.ಹೀಗಾಗಿ ರಶ್ಮಿಯನ್ನು ಶಿವಮೊಗ್ಗದ ಜೈಲಿಗೆ ವರ್ಗಾವಣೆ ಮಾಡಲಾಗಿದೆ ಶುಕ್ರವಾರ ರಾತ್ರಿ 9.30 ಕ್ಕೆ ರಶ್ಮಿಯನ್ನು ಕೇಂದ್ರ ಕಾರಾಗೃಹಕ್ಕೆ ಕರೆತರಲಾಗಿದೆ. ರಶ್ಮಿಯನ್ನು ಕಳೆದ ಗುರುವಾರ ಡಿವೈಎಸ್ಪಿ ಕಚೇರಿಗೆ ಕರೆಸಿಕೊಂಡು ವಿಚಾರಣೆ ನಡೆಸಿ…
20 ಸಾವಿರ ಸಾಲ ಪಡೆದ ಪತಿ ಆತ್ಮಹತ್ಯೆ! ಪತ್ನಿಗೆ ಶುರುವಾಯ್ತು ಮಾನಸಿಕ & ಲೈಂಗಿಕ ಕಿರುಕುಳ! ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ಶಿವಮೊಗ್ಗ : ಇಲ್ಲಿನ ಮೆಗ್ಗಾನ್ ಆಸ್ಪತ್ರೆ ಹೊರಗುತ್ತಿಗೆ ಉದ್ಯೋಗಿಯೊಬ್ಬರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಸೇವಿಸಿದ ಮಹಿಳೆಗೆ, ಸಾಲದ ಹಣಕ್ಕಾಗಿ ನಾಲ್ವರು ಇನ್ನಿಲ್ಲದ ಕಿರುಕುಳ ನೀಡುತ್ತಿದ್ದರಂತೆ. ಈ ಮಾನಸಿಕ ಕಿರುಕುಳ ಹಾಗೂ ತಮ್ಮ ಮೇಲಿನ ಲೈಂಗಿಕ ಕಿರುಕಳ ತಾಳಲಾರದೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ವಿಷ ಸೇವಿಸಿದ ಪತಿ ಬಳಿಯಲ್ಲಿ 20 ಸಾವಿರ ರೂಪಾಯಿ ಪಡೆದಿದ್ದರಂತೆ. ಅದು ಕೂಡ 10 ಪರ್ಸೆಂಟ್ ಬಡ್ಡಿಗೆ! ಆದರೆ ಈ ಸಾಲವನ್ನು ಕಟ್ಟಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲಿವರೆಗೂ ಪತಿಗೆ ಎದುರಾಗಿದ್ದ ಕಿರುಕುಳ ಅವರ…
ಹುಂಚದಕಟ್ಟೆಯಲ್ಲಿ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು : ಅಪಘಾತವೆಸಗಿ ಪರಾರಿಯಾಗಿದ್ದ ಕಾರು ಹಾದಿಗಲ್ಲು ಸಮೀಪ ಪಲ್ಟಿ
ಹುಂಚದ ಕಟ್ಟೆ : ಇಲ್ಲಿನ ಈಶ್ವರ ದೇವಸ್ಥಾನದ ಮುಂಭಾಗ ನಡೆದುಕೊಂಡು ಹೋಗುತಿದ್ದ ಪಾದಚಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ವೃದ್ದರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹುಂಚದ ಕಟ್ಟೆ ನಿವಾಸಿ ಪುಟ್ಟಸ್ವಾಮಿ ಗೌಡ (70) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯ ಹಿನ್ನಲೆ : ಪುಟ್ಟಸ್ವಾಮಿ ಗೌಡ ಹುಂಚದಕಟ್ಟೆ ಈಶ್ವರ ದೇವಸ್ಥಾನದ ಎದುರು ನಡೆದುಕೊಂಡು ಹೋಗುತಿದ್ದಾಗ ಹಿಂಬದಿಯಿಂದ ಬಂದ ಮಾರುತಿ ಆಲ್ಟೋ ಕಾರು ವೃದ್ದನಿಗೆ ಡಿಕ್ಕಿ ಹೊಡೆದು ವಾಹನವನ್ನು ನಿಲ್ಲಿಸದೇ ಅಲ್ಲಿಂದ …
ಹೊಸನಗರ : ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳ – ಸ್ನೇಹಿತನ ತಲೆಗೆ ಬಿಯರ್ ಬಾಟಲ್ ನಿಂದ ಹಲ್ಲೆ :
ಹೊಸನಗರ : ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರು ಜಗಳವಾಡಿಕೊಂಡು ಒಬ್ಬನ ತಲೆಗೆ ಬಿಯರ್ ಬಾಟಲ್ ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ನಾಗರಾಜ್ ಎಂಬ ಯುವಕನ ಮೇಲೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ನಡೆಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ತಮ್ಮ ತಮ್ಮಲ್ಲಿಯೇ ಜಗಳವಾಡಿಕೊಂಡು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಲಾಗಿದೆ.ಗಾಯಾಳುವನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗರಾಜ್ ಹೊಸನಗರ ಬಸ್ ನಿಲ್ದಾಣದ ಬಳಿಯಿರುವ ಕೋರಿಯರ್ ಕಚೇರಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿರುತ್ತಾನೆ. ಆ. 24 ರಂದು ಹೊಸನಗರ ಟೌನ್…
ಡಕಾಯಿತಿಗೆ ಹೊಂಚು ಹಾಕಿದ್ದ ಯುವಕರ ಹೆಡೆಮುರಿ ಕಟ್ಟಿದ ಪೊಲೀಸರು :
ಶಿವಮೊಗ್ಗ : ವಿನೋಬಾನಗರದ ಪೊಲೀಸರು ಖಡಕ್ ಕಾರ್ಯಾಚರಣೆ ನಡೆಸಿ ಡಕಾಯಿತಿ ನಡೆಸಲು ಹೊಂಚು ಹಾಕಿ ಕುಳಿತಿದ್ದ ಯುವಕರನ್ನು ಬಂಧಿಸಿದ್ದಾರೆ. ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಹೋಗುವ ಚಾನೆಲ್ ಬಳಿ ಡಕಾಯಿತಿ ನಡೆಸಲು ಹೊಂಚು ಹಾಕಿ ಕುಳಿತಿದ್ದ ಐವರು ಹುಡುಗರು ಮಾರಕಾಸ್ತ್ರಗಳನ್ನ ಹಿಡಿದು ಕಾದುಕುಳಿತಿದ್ದರು. ಈ ಮಾಹಿತಿ ಪಡೆದ ವಿನೋಬ ನಗರ ಪೊಲೀಸರ ತಂಡ ಖಡಕ್ ದಾಳಿ ನಡೆಸಿದೆ. ವಿನೋಬ ನಗರ ಪೊಲೀಸ್ ಠಾಣೆಯ ಪಿಎಸ್ಐ ಮಂಜುನಾಥ್ ಕುರಿ ನೇತೃತ್ವದಲ್ಲಿ , ಸಿಬ್ಬಂದಿಗಳಾದ ಧನಂಜಯ್ ಹೆಚ್ ಸಿ, ಮಲ್ಲಪ್ಪ ಸಿಪಿಸಿ,…