ಕ್ರೈಂ ಸುದ್ದಿ:
ಬೆಳ್ಳೂರು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ರೈತ ಸಾವು :
ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತಿದ್ದ ರೈತ ವಿದ್ಯುತ್ ಅವಘಡದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಇಂದು ಬೆಳಿಗ್ಗೆ ಕೃಷಿ ಚಟುವಟಿಕೆ ನಿಮಿತ್ತ ತೋಟಕ್ಕೆ ಹೋದಾಗ ಈ ಅವಘಡ ಸಂಭವಿಸಿದ್ದು,ಬೆಳ್ಳೂರು ಗ್ರಾಮದ ಹಿರಿಯಣ್ಣ (58) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮೃತ ಹಿರಿಯಣ್ಣ ಬೆಳ್ಳೂರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಗಿರಿಜಮ್ಮ ರವರ ಪತಿಯಾಗಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು ದೂರು ದಾಖಲಾಗಿದೆ. ಸಂತಾಪ…
ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಅಪಘಾತ – ಚಾಲಕ ಸಾವು
ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಅಂಚೆ ಕಚೇರಿ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಅಪಘಾತವಾಗಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ಪಟ್ಟಣದ ಶಬರೀಶನಗರದ ನಿವಾಸಿ ಶ್ರೀನಿವಾಸ್(36) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಸಾಗರ ರಸ್ತೆಯಿಂದ ರಿಪ್ಪನ್ ಪೇಟೆ ಕಡೆಗೆ ಬರುತ್ತಿದ್ದ ಗೂಡ್ಸ್ ಆಟೊ ಅಂಚೆ ಕಚೇರಿ ಮುಂಭಾಗದಲ್ಲಿ ಇರುವ ದೊಡ್ಡ ಗುಂಡಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಅಲ್ಲಿಯೇ ನಿಂತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ.ಈ ಅಪಘಾತದಲ್ಲಿ ಗೂಡ್ಸ್ ಆಟೊ ಸ್ಟೇರಿಂಗ್ ಚಾಲಕನ ಹೊಟ್ಟೆಗೆ…
ಹಣದ ವಿಚಾರಕ್ಕೆ ಗುತ್ತಿಗೆದಾರನಿಂದ ತಂದೆ ಮತ್ತು ಮಗನಿಗೆ ಚಾಕು ಇರಿತ : ತಂದೆ ಸಾವು
ಹಣದ ವಿಚಾರದಲ್ಲಿ ಅಪ್ಪ ಮತ್ತು ಮಗನಿಗೆ ಕಟ್ಟಡದ ಕಂಟ್ರ್ಯಾಕ್ಟರ್ ಚಾಕುವಿನಿಂದ ಇರಿದ ಘಟನೆ ಶಿರಾಳಕೊಪ್ಪದಲ್ಲಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ತಂದೆ ದಯಾನಂದ್(69) ಮೃತಪಟ್ಟಿದ್ದಾರೆ. ದಯಾನಂದ್ ಮತ್ತು ರಾಘವೇಂದ್ರ ಎಂಬುವರು ಶಿರಾಳಕೊಪ್ಪದಲ್ಲಿ ಹಾರ್ಡ್ ವೇರ್ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದು ಇವರ ನಿವೇಶನದ ಜಾಗದಲ್ಲಿ ಕಟ್ಟಡ ಕಟ್ಟಲು ಕಂಟ್ರ್ಯಾಕ್ಟರ್ ಕೋಟೇಶ್ ಎಂಬುವರಿಗೆ ಗುತ್ತಿಗೆ ನೀಡಲಾಗಿತ್ತು. ಕಟ್ಟಡ ಸರಿ ಕಟ್ಟುತ್ತಿಲ್ಲವೆಂದು ಅಪ್ಪ ದಯಾನಂದ್ ಮತ್ತು ಮಗ ರಾಘವೇಂದ್ರ ಬೇರೆಯವರಿಗೆ ಕಟ್ಟಡದ ಗುತ್ತಿಗೆಯನ್ನ ನೀಡಿದ್ದರು. ಕಟ್ಟಡ ನಿರ್ಮಾಣದ ಬಾಕಿ ಹಾಣ…
ಬೆಂಗಳೂರು ಪೊಲೀಸರಿಗೆ ತೀರ್ಥಹಳ್ಳಿಯ ಗಾಂಧಿಚೌಕದಲ್ಲಿ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದ ನಟೋರಿಯಸ್ ಕ್ರಿಮಿನಲ್ ಮೋಹಿತ್ ಬಂಧನ :
ತೀರ್ಥಹಳ್ಳಿ : ಕೆಲವು ದಿನಗಳ ಹಿಂದೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕದಲ್ಲಿ ಬೆಂಗಳೂರು ಪೊಲೀಸರಿಂದ ತಪ್ಪಿಸಿಕೊಂಡಿದ್ದ ಕೈಮರ ಮೋಹಿತ್ ಎಂಬುವ ನಟೋರಿಯಸ್ ನನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದಾರೆ. ತೀರ್ಥಹಳ್ಳಿ ತುಂಗಾ ಕಾಲೇಜು ಸಮೀಪ ಬದನೇ ಹಿತ್ಲು ನಿವಾಸಿ ಸಕೇಶ್ ಬಿನ್ ಕೃಷ್ಣ ಶೆಟ್ಟಿ ರವರನ್ನು .ಮೋಹಿತ್ ಮತ್ತು ಆತನ ಸಹಚರರಾದ ಉದಯ ಹಾಗೂ ಅನ್ಸರ್ ಎಂಬುವರು ಅಡ್ಡಗಟ್ಟಿ ದರೋಡೆಗೆ ಪ್ರಯತ್ನಿಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ಸಕೇಶ್ ನೀಡಿದ ದೂರಿನ ಮೇರೆಗೆ ತೀರ್ಥಹಳ್ಳಿ ಪೊಲೀಸರು…
ಆಯನೂರು ಬಳಿ ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ : ಹಲವರಿಗೆ ಗಂಭೀರ ಗಾಯ
ಆಯನೂರು : ಇಲ್ಲಿನ ಸಮೀಪದ ಕದಂಬ ರೆಸ್ಟೋರೆಂಟ್ ಬಳಿ ಖಾಸಗಿ ಬಸ್ ಮರಕ್ಕೆ ಗುದ್ದಿ ಹಲವರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ. ಚಾಮೇನಹಳ್ಳಿಯಿಂದ ಶಿವಮೊಗ್ಗ ಕಡೆಗೆ ತೆರಳುತಿದ್ದ ಮಂಜುನಾಥ್ ಬಸ್ ವಾಹನವೊಂದನ್ನು ಹಿಂದಿಕ್ಕಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಅಪಘಾತದಲ್ಲಿ ಚಾಮೇನಹಳ್ಳಿ ನಿವಾಸಿಗಳಾದ ಶಿಲ್ಪ(33) ಕೀರ್ತಿ(21) ಭೂಮಿಕಾ(21) ಮತ್ತು ಕಾವ್ಯಾ(21) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಮೂವರು ಶಿವಮೊಗ್ಗದ ಎಟಿ ಎನ್ ಸಿಸಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಕುಂಸಿ ಪೊಲೀಸ್ ಠಾಣೆ…
ಲಾರಿ ಚಕ್ರ ತಲೆಯ ಮೇಲೆ ಹರಿದು ಅಪರಿಚಿತ ವ್ಯಕ್ತಿ ಸಾವು :
ಆನಂದಪುರ : ಪಟ್ಟಣದ ಸಂತೋಷ್ ರೈಸ್ ಮಿಲ್ ಮುಂಭಾಗದಲ್ಲಿ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ವ್ಯಕ್ತಿಯ ತಲೆಯ ಮೇಲೆ ಲಾರಿ ಹರಿದು ಸಾವನ್ನಪ್ಪಿರುವ ಘಟನೆ ನಡೆದಿದ್ದು,ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಆನಂದಪುರದಿಂದ ಕೊಪ್ಪಳಕ್ಕೆ ಭತ್ತದ ಹೊಟ್ಟನ್ನು ತುಂಬಿಕೊಂಡು ಹೊರಡಲು ಸಿದ್ಧವಾಗಿದ್ದ ಲಾರಿ ಅಪರಿಚಿತ ವ್ಯಕ್ತಿಯ ತಲೆ ಮೇಲೆ ಹತ್ತಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳೀಯರ ಮಾಹಿತಿಯ ಪ್ರಕಾರ ಭತ್ತದ ಹೊಟ್ಟು ತುಂಬಿಕೊಂಡು ಲಾರಿ ಹೊರಟ್ಟಿತ್ತು ಆದರೆ ಆಗ ಅಪರಿಚಿತ ವ್ಯಕ್ತಿ ಲಾರಿಯ ಕೆಳಗೆ…
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 65 ವರ್ಷದ ವೃದ್ದನಿಗೆ ಜೀವಾವಧಿ ಶಿಕ್ಷೆ
ಶಿವಮೊಗ್ಗ : ಏಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ 65 ವರ್ಷದ ವೃದ್ಧರೊಬ್ಬರಿಗೆ ಇಲ್ಲಿನ ಪೋಕ್ಸೋ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಆರೋಪಿ ನಾಗಪ್ಪನಿಗೆ ರೂ. 60,000 ದಂಡವನ್ನು ಹಾಕಲಾಗಿದೆ. ಆರೋಪಿ ನಾಗಪ್ಪ 2020 ಸೆಪ್ಟೆಂಬರ್ 13 ರಂದು ಶಿವಮೊಗ್ಗ ತಾಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದ. ಅಪ್ರಾಪ್ತ ಬಾಲಕಿ ಕೃಷಿ ಜಮೀನಿಗೆ ಹೋದಾಗ ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಸಂಬಂಧ ಮಹಿಳಾ ಪೊಲೀಸರು ನಾಗಪ್ಪ ವಿರುದ್ಧ ಪ್ರಕರಣ ದಾಖಲಿಸಿದ್ದರು. ಮಹಿಳಾ…
ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ : ಬ್ಯಾಂಕ್ ಉದ್ಯೋಗಿ ಸಾವು
ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತವಾಗಿ ಬ್ಯಾಂಕ್ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಬ್ಯಾಕೋಡು ಗ್ರಾಮದಲ್ಲಿ ನಡೆದಿದೆ. ಬ್ಯಾಕೋಡು ಸಮೀಪದ ಸುಳ್ಳಳ್ಳಿ ಕಾರ್ಪೋರೇಶನ್ ಬ್ಯಾಂಕಿನಲ್ಲಿ ಉದ್ಯೋಗಿಯಾಗಿದ್ದ ಕಿಶನ್ (34) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸಾಗರದಿಂದ ಸುಳ್ಳಳ್ಳಿ ಬ್ಯಾಂಕ್ ಗೆ ತೆರಳುವಾಗ ಈ ಅಪಘಾತ ಬ್ಯಾಕೋಡು ಸಮೀಪ ಸಂಭವಿಸಿದೆ. ಅಪಘಾತದ ಸಂದರ್ಭದಲ್ಲಿ ಕಿಶನ್ ಗೆ ತೀವ್ರ ರಕ್ತಸ್ರಾವವಾಗಿದ್ದು ನಂತರ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೋಡೂರು ಸಮೀಪದಲ್ಲಿ ಅಬಕಾರಿ ಅಧಿಕಾರಿಗಳ ಮಿಂಚಿನ ಕಾರ್ಯಾಚರಣೆ : ಕಾರು ಸಮೇತ ಅಕ್ರಮ ಗಾಂಜಾ ವಶಕ್ಕೆ
ಕೋಡೂರು : ಇಲ್ಲಿನ ಸಮೀಪದ ಕೇಶವಪುರ ಗ್ರಾಮದಲ್ಲಿ ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತಿದ್ದ ಕಾರು ಮತ್ತು 60ಗ್ರಾಂ ಗಾಂಜಾ ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಕೇಶವಪುರ ಗ್ರಾಮದ ಶೇಕ್ ಫೈಝರ್ ಮಸೂದ್ ಗೆ ಸೇರಿದ ಕಾರಿನ ಮೇಲೆ ದಾಳಿ ಮಾಡಿ ಕಾರಿನಲ್ಲಿ ಸಾಗಣಿಕೆ ಮಾಡಲು ಹೊಂದಿದ್ದ 60 ಗ್ರಾಂ ಒಣ ಗಾಂಜಾ ಸೊಪ್ಪುನ್ನು ಮತ್ತು ಒಂದು ಕಾರನ್ನು ವಶಪಡಿಸಿಕೊಂಡು ಆರೋಪಿತನ ವಿರುದ್ಧ ಅಬಕಾರಿ ನಿರೀಕ್ಷಕರು ಹೊಸನಗರ ವಲಯ ರವರು NDPS ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದೆ. ಈ ದಾಳಿಯಲ್ಲಿ ಅಬಕಾರಿ…
ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಲಾರಿ : ಮಹಿಳೆ ಸ್ಥಳದಲ್ಲಿಯೇ ಸಾವು
ಶಿವಮೊಗ್ಗ ಬೈಪಾಸ್ ರಸ್ತೆಯ ಯಮಹಾ ಶೋರೂಂ ಬಳಿ ಲಾರಿಯೊಂದು ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ ಲಾರಿಯಿಂದ ಮುಂದೆ ಹೋಗುತ್ತಿದ್ದ ಬೈಕ್ಗೆ ಗುದ್ದಿದ ಪರಿಣಾಮ ಬೈಕ್ ಸವಾರರು ಅಲ್ಲಿಯೆ ಬಿದ್ದಿದ್ದಾರೆ. ಈ ವೇಳೆ ಲಾರಿಯ ಹಿಂಬದಿ ಚಕ್ರ ಬೈಕ್ನಲ್ಲಿ ಹಿಂಬದಿ ಕುಳಿತಿದ್ದ ಮಹಿಳೆ ಮೇಲೆ ಹರಿದಿದೆ. ಘಟನೆಯಲ್ಲಿ ಸಯ್ಯದ್ ಸೈಫುಲ್ಲಾ ಗಾಯಗೊಂಡರೆ, ಅವರ ಪತ್ನಿ ಸಾಜಿದಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ಲಾರಿ ವಶಕ್ಕೆ…