ಕ್ರೈಂ ಸುದ್ದಿ:
ಮದ್ಯಪಾನ ಮಾಡಬೇಡಿ ಎಂಬ ಪತ್ನಿಯ ಬುದ್ಧಿಮಾತಿಗೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪತಿ
ವಿಪರೀತ ಕುಡಿತದ ದಾಸನಾಗಿದ್ದ ಪತಿಗೆ ಪತ್ನಿ ಬುದ್ದಿ ಮಾತು ಹೇಳಿದ್ದಾಳೆ. ಇದನ್ನೆ ಮನಸ್ಸಿಗೆ ಹಚ್ಚಿಕೊಂಡ ಪತಿರಾಯ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸಾಗರ ತಾಲೂಕಿನ ಅಡೂರು ಗ್ರಾಮದ 40 ವರ್ಷದ ಸುಬ್ರಹ್ಮಣ್ಯನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು,ಈ ಸಂಬಂಧ ಮೃತನ ಪತ್ನಿ ಯಶೋಧ ಸಾಗರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಯಶೋಧ ತನ್ನ ಗಂಡ ಸುಬ್ರಹ್ಮಣ್ಯನಿಗೆ ಕುಡಿಯೋದನ್ನು ಬಿಟ್ಟು ಬಿಡು ಎಂದು ಬುದ್ದಿ ಮಾತು ಹೇಳಿದ್ದಾಳೆ.ಪತ್ನಿ ಬುದ್ದಿ ಮಾತಿಗೆ ಮನನೊಂದ ಸುಬ್ರಹ್ಮಣ್ಯ, ಮನೆಯಲ್ಲಿ ಯಾರು…
ಸಾಗರ ಪೋಲಿಸರ ಭರ್ಜರಿ ಕಾರ್ಯಾಚರಣೆ : ಮೂವರು ಅಂತರ್ ಜಿಲ್ಲಾ ಕಳ್ಳರ ಬಂಧನ
ಸಾಗರ ನಗರ ಪೊಲೀಸ್ ಠಾಣೆಯ ಪೊಲೀಸರು ಮೂವರು ಅಂತರ್ ಜಿಲ್ಲಾ ಬೈಕ್ ಕಳ್ಳತನದ ಆರೋಪಿತರನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣ,ಭದ್ರಾವತಿ,ಹರಿಹರ ದಾವಣಗೆರೆ ಮತ್ತು ಹಾಸನ ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ನಡೆದಿದ್ದ ಒಟ್ಟು 6 ಪ್ರಕರಣಗಳನ್ನು ಭೇದಿಸಿ 8ಲಕ್ಷ 20ಸಾವಿ ರೂಗಳ ಮೌಲ್ಯದ 6ಬೈಕ್ ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸಾಗರ ಎ.ಎಸ್.ಪಿ ರೋಹನ್ ಜಗದೀಶ್ ಮತ್ತು ಇನ್ಸ್ ಪೆಕ್ಟರ್ ಕೃಷ್ಣಪ್ಪ ಅವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್ ಪೆಕ್ಟರ್ ಗಳಾದ ತಿರುಮಲೇಶ್,ಸಾಗರ್ಕರ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ರತ್ನಾಕರ್,ಸಂತೋಷ್ ನಾಯ್ಕ್…
ಪ್ರಿಯತಮೆ ಕೈಕೊಟ್ಟಳೆಂದು ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ :
ಪ್ರೀತಿಸಿದ ಹುಡುಗಿ ಮೋಸ ಮಾಡಿದಳೆಂದು ನೊಂದ ಯುವಕ ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ಮೂಲದ ದಿಲೀಪ್ ಎಂಬಾತ ಮೃತ ಯುವಕನಾಗಿದ್ದಾನೆ. ಕೆಲವು ವರ್ಷಗಳಿಂದ ದಿಲೀಪ್ ಮತ್ತು ಕುಟುಂಬಸ್ಥರು ಬೆಂಗಳೂರಿನಲ್ಲಿ ವಾಸವಿದ್ದುಕೊಂಡು ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಯುವಕನಿಗೆ ಅಲ್ಲಿಯೇ ಕೆಲಸ ಮಾಡುತ್ತಿದ್ದ ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದ ಯುವತಿಯೋರ್ವಳ ಪರಿಚಯವಾಗಿದ್ದು, ಬಳಿಕ ಇಬ್ಬರು ಪರಸ್ಪರ ಪ್ರೀತಿಸಿದ್ದಾರೆ. ಆದರೆ ನಂತರದ ದಿನಗಳಲ್ಲಿ ಮನೆಯವರ…
ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಯುವತಿಯ ಖಾಸಗಿ ಫೋಟೋ ವೈರಲ್ ಮಾಡಿದ ಪಾಗಲ್ ಪ್ರೇಮಿ
ಯುವತಿ ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಆಕೆಯೊಂದಿಗೆ ಇದ್ದ ಖಾಸಗಿ ಫೊಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವ ಪ್ರಕರಣ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿವಮೊಗ್ಗ ನ್ಯೂಮಂಡ್ಲಿಯ ಯುವತಿಯೊಬ್ಬಳು ಮೊಬೈಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದು ಅಲ್ಲೇ ಕೆಲಸ ಮಾಡಿಕೊಂಡಿದ್ದ ಭರತ್ ಎಂಬ ಯುವಕ ಆಕೆಯೊಂದಿಗೆ ಸಲುಗೆಯಿಂದ ಇದ್ದನು ಎನ್ನಲಾಗುತ್ತಿದೆ. ಸಲುಗೆಯಿಂದ ಇದ್ದ ವೇಳೆ ಯುವತಿಯೊಂದಿಗೆ ತೆಗೆದ ಖಾಸಗಿ ಫೊಟೊಗಳನ್ನ ತನ್ನ ಮೊಬೈಲ್ ನಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದನು.ಕೆಲ ದಿನಗಳ ನಂತರ ಯುವಕ ಭರತ್ ಯುವತಿಗೆ ತನ್ನ ಪ್ರೀತಿಯನ್ನು ಯುವತಿಯ…
ರಿಪ್ಪನ್‌ಪೇಟೆ : ಅಕ್ರಮ ಜಾನುವಾರು ಸಾಗಾಟ : ಮೂವರ ಬಂಧನ
ರಿಪ್ಪನ್‌ಪೇಟೆ : ಅಕ್ರಮವಾಗಿ ಜಾನುವಾರು ಗಳನ್ನು ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೆರೆಗೆ ಜಯಕರ್ನಾಟಕ ಸಂಘಟನೆ ಹಾಗೂ ಹಿಂದೂಪರ ಸಂಘಟನೆಗಳು ಎರಡು ವಾಹನಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9 ಜಾನುವಾರುಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಹೊಸನಗರ ತಾಲೂಕಿನ ನಿವಣೆ ಗ್ರಾಮದಲ್ಲಿ ನಡೆದಿದೆ. ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಪ್ರಮುಖ ಆರೋಪಿಗಳಾದ ಕಲ್ಲುಕೊಪ್ಪ ಗ್ರಾಮದ ಕೃಷ್ಣಮೂರ್ತಿ ಮತ್ತು ಎಣ್ಣೆನೋಡ್ಲು ಗ್ರಾಮದ ಮಹಮ್ಮದ್ ಇರ್ಫಾನ್ ಮತ್ತು ಮಹಮ್ಮದ್ ವಸೀಮ್ ನನ್ನು ಬಂಧಿಸಿ 9 ಜಾನುವಾರುಗಳನ್ನು ರಕ್ಷಿಸಲಾಗಿದೆ. ಹುಂಚಾ ಕಡೆಯಿಂದ ಎರಡು ಗೂಡ್ಸ್ ಆಟೋ…
ರಿಪ್ಪನ್‌ಪೇಟೆ : ವಿಷ ಸೇವಿಸಿ ಗೃಹಣಿ ಆತ್ಮಹತ್ಯೆ
ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯ ನಿವಾಸಿ ರಫೀಕ್ ಎಂಬುವವರ ಪತ್ನಿ ಬುಶೀರಾ (33) ಜೀವನದಲ್ಲಿ ಜಿಗುಪ್ಸೆಗೊಂಡು ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶುಕ್ರವಾರ ಬೆಳಿಗ್ಗೆ ಖಿನ್ನತೆಗೆ ಒಳಗಾದ ಅವರು ಮನೆಯಲ್ಲಿ ಯಾರು ಇಲ್ಲದೆ ವೇಳೆ ಮನೆಯ ಸುತ್ತಾಮುತ್ತ ಬೆಳೆದಿದ್ದ ಕಳೆ ತೆಗೆಯಲು ತಂದಿಟ್ಟಿದ್ದ ಕಳೆನಾಶಕ ಸೇವಿಸಿದ್ದಾರೆ ಎನ್ನಲಾಗಿದೆ. ತಕ್ಷಣವೇ ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ನಾರಾಯಣ ಹೃದಯಾಲಯಕ್ಕೆ ದಾಖಲು ಮಾಡಿದರೂ, ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಸಾವನ್ನಪ್ಪಿದ್ದಾರೆ. ಮೃತರಿಗೆ ಪತಿ, ಪುತ್ರ ಹಾಗೂ…
ಭೀಕರ ಅಪಘಾತ : ಚಾಲಕನ ಕಾಲು ಮುರಿತ
ಶಿವಮೊಗ್ಗ : ಬೇಡರ ಹೊಸಳ್ಳಿಯ ಕೆರೆಯ ಬಳಿ ಓಮ್ನಿ ಮತ್ತು ಐ 20 ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು, ಅಪಘಾತದಲ್ಲಿ ಓಮ್ನಿ ಚಾಲಕನ ಕಾಲು ಮುರಿದಿದೆ. ಜೊತೆಯಲ್ಲಿದ್ದ ಮಹಿಳೆಗೂ ಗಾಯಗಳಾಗಿವೆ. ಬೇಡರ ಹೊಸಳ್ಳಿ ಕೆರೆಯ ಏರಿಯ ಮೇಲೆ ಶಿವಮೊಗ್ಗ ಕಡೆಯಿಂದ ಹೊನ್ನಾಳಿ ಕಡೆಗೆ ಹೋಗುತ್ತಿದ್ದ ಮಾರುತಿ ಓಮ್ನಿ ಕಾರಿಗೆ ಹೊನ್ನಾಳಿ ಕಡೆಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಐ20 ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯಲ್ಲಿ ಓಮ್ನಿ ಕಾರು ನುಜ್ಜುಗುಜ್ಜಾಗಿದೆ. ಓಮ್ನಿ ಕಾರಿನ ಚಾಲಕ ಮತ್ತು ಮಹಿಳೆಗೆ ತೀವ್ರವಾದ ರಕ್ತಗಾಯಗಳಾಗಿದೆ….
ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಯ ಸರಗಳ್ಳತನಕ್ಕೆ ಯತ್ನ : ಖದೀಮನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು
ತೀರ್ಥಹಳ್ಳಿ : ತಾಲೂಕಿನ ಹಾದಿಗಲ್ಲು ಸಮೀಪ ಮನೆಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನ ಸ್ಥಳೀಯರೇ ಬಂಧಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನೆಡೆದಿದೆ. ಗುರುವಾರ ಸಂಜೆ ಹಾದಿಗಲ್ಲು ಗ್ರಾಪo ವ್ಯಾಪ್ತಿಯ ಕರಡಿಗ ಗ್ರಾಮದ ಸಿದ್ದಾಪುರದಲ್ಲಿ ದಿ|| ಲಕ್ಷ್ಮಣ್ ರವರ ಮನೆಯಲ್ಲಿ ಅವರ ಪತ್ನಿಯ ಮೇಲೆ ಹಲ್ಲೆಗೆ ಯತ್ನಿಸಿ ಕುತ್ತಿಗೆಯಲ್ಲಿದ್ದ ಸರ ಕಸಿದು ಇಬ್ಬರು ಅಪರಿಚಿತರು ಪರಾರಿಯಾಗಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಒಬ್ಬನನ್ನು ಸ್ಥಳೀಯರು ಬಂಧಿಸಿ ಕೃತ್ಯಕೆ ಬಳಸಿದ 1 ಕಾರಿನ ಸಮೇತ ಸ್ಥಳೀಯ…
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ :
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ. 2019 ರ ಫೆ.10 ರಂದು ಬೆಳಗ್ಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ವಾಸಿಯಾದ ಲಿಂಗರಾಜ @ ನವೀನ (18) ಈತನು 06 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯು ತನ್ನ ಮನೆಯ ಮುಂದೆ ಆಟವಾಡುತ್ತಿದ್ದಾಗ, ಚಾಕಲೇಟ್ ಕೊಡುತ್ತೇನೆಂದು ಕರೆದುಕೊಂಡು ಹೋಗಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿರುತ್ತದೆ….
ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಇರಿದು ಎಸ್ಕೇಪ್ ಆಗಿದ್ದ ಆರೋಪಿಯ ಕಾಲಿಗೆ ಗುಂಡಿಟ್ಟ ಪೊಲೀಸ್ :
ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಶಿವಮೊಗ್ಗ ಪೊಲೀಸರು ಬಂದಿಸಿದ್ದಾರೆ. ರಾಜೀವ್ ಗಾಂಧಿ ಬಡಾವಣೆಯಲ್ಲಿ ಆರೋಪಿ ಇದ್ದ ಹಿನ್ನಲೆಯಲ್ಲಿ ಕಾಯಾಚರಣೆ ನಡೆಸಿದ ಪೊಲೀಸರು ಶಾಹಿದ್ ಖುರೇಶಿಯನ್ನು ಬಂಧಿಸಲು ಮುಂದಾಗಿದ್ದಾರೆ. ಈ ವೇಳೆ ಪುನಃ ಚಾಕುವಿನಿಂದ ದಾಳಿಗೆ ಪ್ರಯತ್ನಿಸಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ರಾಬರಿ ಕೇಸ್’ಗಳಲ್ಲಿ ಪ್ರಮುಖ ಆರೋಪಿಯಾಗಿದ್ದ ಶಾಹಿದ್ ಖುರೇಶಿಯ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಬಲಗಾಲಿನ ಮಂಡಿಯ ಕೆಳಗೆ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿಯನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು…