ಕ್ರೈಂ ಸುದ್ದಿ:
ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಇರಿದ ದರೋಡೆ ಆರೋಪಿ : ಮೆಗ್ಗಾನ್ ಗೆ ದಾಖಲು
ಆರೋಪಿಯೊಬ್ಬನ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸ್ ಸಿಬ್ಬಂದಿಗೆ ಚಾಕು ಇರಿಯಲಾಗಿದೆ. ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗದ ಕ್ಲಾರ್ಕ್ ಪೇಟೆಯಲ್ಲಿ ಘಟನೆ ಸಂಭವಿಸಿದೆ. ದೊಡ್ಡಪೇಟೆ ಠಾಣೆ ಕ್ರೈಮ್ ಸಿಬ್ಬಂದಿ ಗುರುನಾಯ್ಕ್ ಮತ್ತು ರಮೇಶ್ ಎಂಬುವವರಿಗೆ ಚಾಕು ಇರಿಯಲಾಗಿದೆ. ಪ್ರಕರಣವೊಂದರ ಸಂಬಂಧ ಆರೋಪಿ ಶಾಹಿದ್ ಖುರೇಷಿ ಎಂಬಾತನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿ ಶಾಹಿದ್ ಖುರೇಷಿ ಪೊಲೀಸ್ ಸಿಬ್ಬಂದಿ ಗುರುನಾಯ್ಕ್ ಮತ್ತು ರಮೇಶ್ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ ಎಂದು ತಿಳಿದು…
ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು
ತೀರ್ಥಹಳ್ಳಿ : ಮುಡುಬಾದ 15 ನೇ ಮೈಲಿಗಲ್ಲಿನ ಬಳಿ ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸತ್ತು ಹೋಗಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಎದುರಿನಿಂದ ಬಂದ ಮೂಕಾಂಬಿಕ ಬಸ್ ನ ಸೈಡ್ ಗೆ ದ್ವಿಚಕ್ರವಾನ ತಗುಲಿದ ಪರಿಣಾಮ ಬಸ್ ನ ಹಿಂಬದಿ ಚಕ್ರ ದ್ವಿಚಕ್ರ ವಾಹನ ಸವಾರನ ಮೇಲೆ ಹರಿದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 15…
ಕ್ರಿಕೆಟ್ ಆಡುವಾಗ ಕುಸಿದು ಬಿದ್ದು ನಗರಸಭೆ ಕಾರ್ಮಿಕ ಸಾವು :
ಭದ್ರಾವತಿಯ ವಿಐಎಸ್ಎಲ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ ಕ್ರಿಕೆಟ್ ಪಂದ್ಯಾವಳಿಯ ಸಂದರ್ಭದಲ್ಲಿ ದುರ್ಘನೆಯೊಂದು ನಡೆದಿದೆ. ಭದ್ರಾವತಿ ನಗರಸಭೆ ವತಿಯಿಂದ ಕಾರ್ಮಿಕರು ಹಾಗು ಸಿಬ್ಬಂದಿಯವರಿಗೆ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕ್ರಿಕೆಟ್ ಆಡುವ ವೇಳೆ ದಿನೇಶ್‌ರಾವ್ (38) ಎಂಬುವವರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿಯೇ ಇದ್ದ ಆರೋಗ್ಯ ಸಿಬ್ಬಂದಿಯಿಂದ ದಿನೇಶ್ ತಪಾಸಣೆ ನಡೆಸಲಾಗಿದ್ದರೂ, ಕುಸಿದು ಬಿದ್ದ ತಕ್ಷಣವೇ ದಿನೇಶ್ ಮೃತಪಟ್ಟ ಬಗ್ಗೆ ಆರೋಗ್ಯ ಇಲಾಖೆ ಸಿಬ್ಬಂದಿಯವರು ಸ್ಪಷ್ಟಪಡಿಸಿದ್ದಾರೆ. ನಂತರ ಮೃತದೇಹವನ್ನು ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.
ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋದ ಸಾಗರದ ಸಿವಿಲ್ ಇಂಜಿನಿಯರ್ ಶವ ಪತ್ತೆ :
ರಾಜಾಕಾಲುವೆಯಲ್ಲಿ ಕೊಚ್ಚಿಹೋದ ಸಾಗರ ಸಮೀಪದ ಅದರಂತೆ ಗ್ರಾಮದ ಯುವಕ ಮಿಥಿನ್(26) ಶವ ಪತ್ತೆಯಾಗಿದೆ. ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಯುವಕನ ಶವ ರಾಜಾಕಾಲುವೆಗೆ ಬಿದ್ದ ಸ್ಥಳದಿಂದ 1.5 ಕಿಮೀ ದೂರದಲ್ಲಿ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಸ್ವಗ್ರಾಮವಾದ ಸಾಗರದ ಅದರಂತೆ ಗ್ರಾಮಕ್ಕೆ ಕರೆತರಲಾಗುತ್ತಿದೆ. ರಾಜಾಕಾಲುವೆಯಲ್ಲಿ ಸಾಗರದ ಯುವಕ ಮಿಥಿನ್ ಕೊಚ್ಚಿಹೋದ ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಪ್ರತ್ಯಕ್ಷದರ್ಶಿ ಹಾಗೂ ಬಿಬಿಎಂಪಿ ಅಧಿಕಾರಿಗಳಿಂದ ಮಾಹಿತಿ ಪಡೆದು…
ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋದ ಸಾಗರದ ಸಿವಿಲ್ ಇಂಜಿನಿಯರ್ :
ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯ ಹಿನ್ನಲೆಯಲ್ಲಿ ಸಾಗರದ ಯುವಕನೊಬ್ಬ ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ. ಸಾಗರ ಸಮೀಪದ ಅದರಂತೆ ಗ್ರಾಮದ ಸಿವಿಲ್ ಇಂಜಿನಿಯರ್ ಮಿಥಿನ್ (26) ಎಂಬುವರು ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದು ಯುವಕನ ಮನೆಯಲ್ಲಿ ಆಕ್ರಂಧನ ಮುಗಿಲು ಮುಟ್ಟಿದೆ. ಬೆಂಗಳೂರಿನ ಕೆ.ಆರ್ ಪುರಂನಲ್ಲಿ ಮಿಥಿನ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು.ಆ ಮನೆಯ ಕಾಂಪೌಂಡ್ ರಾಜಾಕಾಲುವೆಯ ಮೇಲೆ ಇದ್ದು ನಿನ್ನೆ ರಾತ್ರಿ 11 ಗಂಟೆಗೆ ಬಾಡಿಗೆ ಮನೆಯ ಕಾಂಪೌಂಡ್ ರಾಜಾಕಾಲುವೆಯಲ್ಲಿ ಹರಿದು ಬಂದ ನೀರಿನ ರಭಸಕ್ಕೆ…
ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಪ್ರಪಾತಕ್ಕೆ ಉರುಳಿದ ಕಾರು :
ಕೊಲ್ಲೂರು ಘಾಟಿಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪ್ರಪಾತಕ್ಕೆ ಬಿದ್ದ ಘಟನೆ ವರದಿಯಾಗಿದೆ. ಮಾರುತಿ (KA 01 MS 1399) ಕಾರೊಂದು ನಿನ್ನೆ ಘಾಟಿಯಲ್ಲಿ ಸುಮಾರು 200 ಅಡಿ ಆಳಕ್ಕೆ ಬಿದ್ದಿದೆ.ಕಾರಿನಲ್ಲಿ ಡ್ರೈವರ್ ಒಬ್ಬನೇ ಪ್ರಯಾಣಿಸುತಿದ್ದ ಹಿನ್ನಲೆಯಲ್ಲಿ ಹೆಚ್ಚಿನ ಅನಾಹುತಗಳು ನಡೆದಿಲ್ಲ.ಸೀಟ್ ಬೆಲ್ಟ್ ಧರಿಸಿದ್ದರಿಂದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕ್ರೇನ್ ಮೂಲಕ ಕಾರನ್ನು ಮೇಲಕ್ಕೆತ್ತಲಾಗಿದ್ದು ಕಾರು ಸಂಪೂರ್ಣ ನಜುಗುಜ್ಜಾಗಿದೆ. ಈ ಘಾಟ್ ಪ್ರದೇಶದಲ್ಲಿ ಮಳೆಯಿಂದಾಗಿ ರಸ್ತೆಯಲ್ಲಿ ಪಾಚಿ ಕಟ್ಟುತ್ತಿದ್ದು ಜಾರುತ್ತಿದೆ. ಇದರಿಂದಾಗಿ ವಾಹನ ಸವಾರರು ಜಾಗೃತೆಯಿಂದ…
ಗೃಹ ಸಚಿವರ ಕ್ಷೇತ್ರದಲ್ಲಿ ಮತ್ತೆ ದನಗಳ್ಳರ ಅಟ್ಟಹಾಸ …!!!????
ತೀರ್ಥಹಳ್ಳಿ : ಗೋಹತ್ಯಾ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಕೂಡಾ ದನಗಳ್ಳರ ಮತ್ತು ಖದೀಮರ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ಸ್ವಲ್ಪ ದಿನಗಳ ಹಿಂದೆ ಮಂಡಗದ್ದೆಯ ಸಮೀಪ ದನ ಕಟುಕನೋರ್ವನನ್ನು ಮಾಳೂರು ಸಬ್ ಇನ್ಸ್ ಸೆಕ್ಟರ್ ನವೀನ್ ಮಠಪತಿಯವರು ಹಿಡಿದು ಜೈಲಿಗಟ್ಟಿದ್ದರೂ ಕೂಡಾ ಪುನಃ ದನಗಳ್ಳರು ಬಾಲಬಿಚ್ಚುತ್ತಿರುವುದು ತೀರ್ಥಹಳ್ಳಿ ತಾಲೂಕಿಗೆ ದೊಡ್ಡ ದುರಂತವೇ ಸರಿ. ಗುರುವಾರ ರಾತ್ರಿ ಹೆದ್ದೂರು ಹೊಸಳ್ಳಿ ಪರಿಸರದಲ್ಲಿ ಜಾನುವಾರುಗಳನ್ನು ಕದ್ದು ಪಿಕಪ್ ವಾಹನಗಳಲ್ಲಿ ಸಾಗಿಸುವಾಗ ಅನುಮಾನ ಬಂದು ಭಜರಂಗದಳದ ಕಾರ್ಯಕರ್ತರು ಹಾಗೂ ಊರಿನ…
ಪ್ರೀತಿಸಿದ ಯುವಕನ ಜೊತೆ ಮದುವೆಗೆ ಅಡ್ಡಿಯಾಯಿತು ಕುಜ ದೋಷ : ವಿಷ ಸೇವಿಸಿದ್ದ ಮಹಿಳಾ ಪೊಲೀಸ್ ಸಾವು
ಪ್ರೀತಿಸಿದ ಯುವನೊಂದಿಗೆ ಮದುವೆಯಾಗಲು ಕುಜ ದೋಷ ಅಡ್ಡಿಯಾಗಿದ್ದರಿಂದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಸುಧಾ ಎಂದು ಗುರುತಿಸಲಾಗಿದೆ. ಭದ್ರಾವತಿ ತಾಲೂಕಿನ ಕಲ್ಲಾಪುರ ನಿವಾಸಿಯಾಗಿರುವ ಪೊಲೀಸ್ ಕಾನ್ಸ್‌ಟೇಬಲ್ ಸುಧಾ ಹಾಗೂ ಭದ್ರಾವತಿ ಅರಣ್ಯ ವಲಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಪ್ರವೀಣ್ ಆರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಹೆತ್ತವರ ವಿರೋಧವಿತ್ತು. ಆರಂಭದಲ್ಲಿ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿತ್ತು. ಜಾತಿ ಅಡ್ಡಿಯ ನಡುವೆಯೂ ಇಬ್ಬರು ಮದುವೆಗೆ…
ಗ್ರಾಮ ಪಂಚಾಯತ್ ಅಧ್ಯಕ್ಷಗಾದಿ ಕೈ ತಪ್ಪಿದ್ದಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ :
ಅಧ್ಯಕ್ಷಗಾದಿ ದೊರಕಲಿಲ್ಲವೆಂದು ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಭದ್ರಾವತಿ ತಾಲೂಕಿನ ದೊಣಬಘಟ್ಟದಲ್ಲಿ(ದರಮಘಟ್ಟ) ಪೊಲೀಸ್ ಬಂದೋಬಸ್ತ್ ನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನಡೆದಿದ್ದು ಡ್ರಾಮಾ ಹೈಡ್ರಾಮಕ್ಕೆ ಎಡೆಮಾಡಿಕೊಟ್ಟಿದೆ. ಖಲೀಮ್ ಎಂಬುವರು ಇಂದು ದೊಣಬಘಟ್ಟ ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ಆಯ್ಕೆ ಆಗುವುದು ಅದರಂತೆ ಉಪಾಧ್ಯಕ್ಷರಾಗಿ ಮಾಲಮ್ಮ ಎಂಬುವರು ಆಯ್ಕೆಯಾಗುವುದು ಬಹತೇಕ ಖಚಿತವಾಗಿದೆ. ಈ ಹಿನ್ನಲೆಯಲ್ಲಿ ಕೌಸರ್ ಭಾನು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಆಯ್ಕೆಗೂ ಮೊದಲು ಕೌಸರ್ ಭಾನು ಎಂಬ…
ರಂಜದಕಟ್ಟೆಯಲ್ಲಿ ಮೆಸ್ಕಾಂ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ !?
ತೀರ್ಥಹಳ್ಳಿ: ತಾಲೂಕಿನ ಮುಳುಬಾಗಿಲು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಂಜದಕಟ್ಟೆಯ ಭೀಮನ ಕಟ್ಟೆ ತೂಗು ಸೇತುವೆಯ ಬಳಿ ವಿದ್ಯುತ್ ತಂತಿಯೊಂದು ನೆಲದ ಮೇಲೆ ಬಿದ್ದಿದ್ದನ್ನು ಗಮನಿಸದೆ ರೈತ ಮಹಿಳೆಯೊಬ್ಬರು ಜಾನುವಾರಿಗೆ ಹುಲ್ಲು ತರುವಾಗ ವಿದ್ಯುತ್ ಶಾಕ್ ತಗುಲಿ ಮೃತರಾಗಿರುವ ಘಟನೆ ಜರುಗಿದೆ. ಕೆಲವು ಕಡೆ ವಿದ್ಯುತ್ ಕಂಬಗಳಲ್ಲಿ ತಂತಿ ಕೆಳಗೆ ಜೋತು ಬಿದ್ದಿರುತ್ತವೆ ಅದನ್ನು ಗಮನಿಸದೆ ಅಥವಾ ಶಾರ್ಟ್ ಸರ್ಕ್ಯೂಟ್ ನಿಂದ ಜನರಿಗೆ ತೊಂದರೆಯಾಗುವ ಸಾಧ್ಯತೆ ಇದ್ದು ಈಗಾಗಲೇ ಮಳೆಗಾಲ ಪ್ರಾರಂಭವಾಗುತ್ತಿದ್ದು ಕೆಲವು ತಂತಿಗಳು ತುಕ್ಕು ಹಿಡಿಯುವ ಸ್ಥಿತಿಯಲ್ಲಿ…