ಕ್ರೈಂ ಸುದ್ದಿ:
ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಚರಣೆ : ಕಳ್ಳತನವಾಗಿದ್ದ ವಸ್ತುಗಳು ವಾರಸುದಾರರಿಗೆ ವಾಪಾಸ್
ಶಿವಮೊಗ್ಗ: 2021 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 518 ಸ್ವತ್ತು ಕಳವು ಪ್ರಕರಣ ವರದಿಯಾಗಿದ್ದು ಅಂದಾಜು ಮೌಲ್ಯ 6,23,91,2147 ರೂ. ಎಂದು ಅಂದಾಜಿಸಲಾಗಿದೆ. ಅದರಲ್ಲಿ 3,03,59,176 ರೂ. ಮೌಲ್ಯದ ಮಾಲುಗಳನ್ನು ಪತ್ತೆ ಮಾಡಲಾಗಿದ್ದು, ಸದರಿ ಮಾಲಿನ ವಾರಸುದಾರರಿಗೆ ಬಿಟ್ಟು ಕೊಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಿ ಪ್ರಸಾದ್ ಹೇಳಿದ್ದಾರೆ. ಅವರು ಇಂದು ಡಿಎಆರ್ ಸಭಾಂಗಣದಲ್ಲಿ ಕಳವು ಪ್ರಕರಣಗಳಲ್ಲಿ ಪತ್ತೆ ಮಾಡಿದ ಮಾಲ್ ಗಳನ್ನು ವಾರಸುದಾರರಿಗೆ ಬಿಟ್ಟುಕೊಡುವ ಸಮಾರಂಭದ ಸುದ್ದಿಗಾರರೊಂದಿಗೆ ಮಾತನಾಡಿದರು….
ಆನಂದಪುರದಲ್ಲಿ ಮನೆಯ ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ!!
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದ ಹಳೆ ಸಂತೆ ಮಾರ್ಕೆಟ್ ರಸ್ತೆಯ ನಿವಾಸಿ ಮಹೇಶ್ (31) ವರ್ಷ ಇಂದು ಮಧ್ಯಾಹ್ನ ಮನೆಯ ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹೇಶ್ ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ತರಕಾರಿ ಅಂಗಡಿ ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದರು. ಹಾಗೂ ಕೊರೋನಾ ಸಂದರ್ಭದಲ್ಲಿ ಅವರ ತಾಯಿಯವರು ಕೂಡ ಕರೋನಾಗೆ ಬಲಿಯಾಗಿದ್ದರು ಇದರಿಂದಲೂ ತೀವ್ರ ಮಾನಸಿಕ ಜಿಗುಪ್ಸೆಯನ್ನು ಹೊಂದಿದ್ದರ ಪರಿಣಾಮ ಹಾಗೂ ಇತ್ತೀಚೆಗೆ ಕೆನರಾ ಬ್ಯಾಂಕ್ ನಲ್ಲಿ ತರಕಾರಿ ಅಂಗಡಿಗೆ ಸಾಲವನ್ನು…
ದೀಪಾವಳಿ ಸಂಭ್ರಮಕ್ಕೆ ಬೀಗರ ಮನೆಗೆ ಹೊರಟಿದ್ದ ಕುಟುಂಬದವರ ಮೇಲೆ ಜವರಾಯನ ಅಟ್ಟಹಾಸ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದಾರುಣ ಸಾವು!!!
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಬಳಿ ಬೈಕ್ ಹಾಗೂ 407 ಟೆಂಪೋ ವಾಹನದ ನಡುವೆ ಮುಖಾಮುಖಿ ಅಪಘಾತ ವಾಗಿದ್ದು ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿ ತಂದೆ ಕೂಡ ಸಾವನ್ನಪ್ಪಿರುವ ಘಟನೆ ನಡೆದಿದೆ. ಒಂದೇ ಕುಟುಂಬದ ನಾಲ್ವರು ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಎದುರು ಭಾಗದಿಂದ ಬಂದ 407 ಟೆಂಪೋ ವಾಹನ ಡಿಕ್ಕಿ ಹೊಡೆದಿದ್ದು ರಾಮಚಂದ್ರ ವೀರಪ್ಪ ( 42) ಪುಟಾಣಿ ಮಕ್ಕಳಾದ ಶಶಾಂಕ್( 11) ಆದರ್ಶ( 5)ಸ್ಥಳದಲ್ಲೇ ಅಸುನೀಗಿದ್ದಾರೆ. ಇನ್ನೂ ಪತ್ನಿ ಭಾಗ್ಯಮ್ಮನಿಗೂ ಕೂಡ…
ಮಲೆನಾಡಿನಲ್ಲಿ ಮನೆ ಮುರಿದರೇ ಪೊಲೀಸರು ?? ಪೊಲೀಸರ ಗೂಂಡಾ ವರ್ತನೆಯ ಆರೋಪಕ್ಕೆ ಕಡೂರು ಪಿಎಸ್ಸೈ ರಮ್ಯಾ ಹೇಳಿದ್ದೇನು !!
ಮಲೆನಾಡಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ಗೂಂಡಾ ವರ್ತನೆ ತೊರಿದ್ದು. ಮನೆಯ ಬಾಗಿಲು, ಹಂಚು ಮುರಿದು ರೌಡಿಗಳಂತೆ ಪೊಲೀಸರು ಮನೆಯ ಒಳ ಭಾಗವನ್ನು ಪ್ರವೇಶಿಸಿದ್ದಾರೆ ಎಂದು ಕುಟುಂಬದ ಸದಸ್ಯರಿಂದ ಪೋಲಿಸರ ಮೇಲೆ ಆರೋಪ ಕೇಳಿಬಂದಿದೆ. ಕಡೂರು ತಾಲೂಕಿನ ಮುಸ್ಲಾಪುರ ಗ್ರಾಮದಲ್ಲಿ ನಮ್ಮ ಹಳ್ಳಿಗೆ ಬಾರ್ ಬೇಡ ಎಂದು ಬಾರ್ ವಿರುದ್ಧ ಸ್ಥಳೀಯರು ಪ್ರತಿಭಟಿಸಿದ್ದರು. ಅಪ್ರಾಪ್ತ ಬಾಲಕ, ಮೂವರು ಮಹಿಳೆಯರು ಸೇರಿ 7 ಜನರನ್ನ ಖಾಕಿ ಪಡೆ ಎಳೆದೊಯ್ದಿದ್ದಾರೆ ಎಂದು ಕುಟುಂಬದ ಓರ್ವ ಸದಸ್ಯರು ಆರೋಪಿಸಿದ್ದಾರೆ.ಒಂದೇ ಮನೆಯ ಮೂವರನ್ನ ಪೊಲೀಸರು ಬಂಧಿಸಿದ್ದಾರೆ….
ಹಣದ ವಿಚಾರವಾಗಿ ಖಾರದ ಪುಡಿ ಎರಚಿ ದಾಳಿ ಸ್ಥಳದಲ್ಲಿ ಬೈಕ್ ಸುಟ್ಟು ಭಸ್ಮ!! ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು !!
ಹಣದ ವಿಚಾರದಲ್ಲಿ ಹಾರನಹಳ್ಳಿ ರಫೀಕುಲ್ಲಾ(37) ಎಂಬುವರಿಗೆ ಖಾರದ ಪುಡಿ ಎರಚಿ ಥಳಿಸಿದ್ದು ಬೈಕ್ ನ್ನ ಸುಟ್ಟು ಭಸ್ಮ ಮಾಡಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 2 ಗಂಟೆಗೆ ನಡೆದಿದೆ. ತರಕಾರಿ, ಕಾರ್ಪೆಂಟ್ ಕೆಲಸ ಮಾಡಿಕೊಂಡಿದ್ದ ರಫೀಕುಲ್ಲಾ ಹಾರನಹಳ್ಳಿಯಿಂದ ಶಿವಮೊಗ್ಗಕ್ಕೆ ಬಜಾಜ್ ಪ್ಲಾಟಿನ ದಲ್ಲಿ ಬರುವಾಗ ಯರೇಕೊಪ್ಪದ ಅರಣ್ಯ ಇಲಾಖೆಯ ಪ್ರವೇಶದ್ವಾರದ ಬಳಿ ಖಾರದ ಪುಡಿ ಎರಚಿ ಮೂವರು ದಾಳಿ ನಡೆಸಿದ್ದಾರೆ ಕಳೆದ ಎರಡು ತಿಂಗಳ ಹಿಂದೆ ರಫಿಕುಲ್ಲಾ ಪತ್ನಿ ರಿಹಾನಾ ಭಾನು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. 13…
ಗಾಂಜಾ ವಿಚಾರವಾಗಿ ಇಬ್ಬರ ನಡುವೆ ಮಾರಾಮಾರಿ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರತಿ ದೂರು ದಾಖಲು !!!
ಭದ್ರಾವತಿ : ಗಾಂಜಾ ವಿಚಾರದಲ್ಲಿ ಇಬ್ಬರ ನಡುವೆ ಮಾರಾಮಾರಿ ಉಂಟಾಗಿದೆ. ಗಾಂಜಾ ಪ್ರಕರಣದಲ್ಲಿ ಮೊಹ್ಮದ್ ಗೌಸ್ ಎಂಬುವನನ್ನ ಪೊಲೀಸರು ಇತ್ತೀಚೆಗೆ ಅಂದರ್ ಮಾಡಿದ್ದು, ಈ ಪ್ರಕರಣದಲ್ಲಿ ಇಬ್ಬರ ನಡುವೆ ಬಡಿದಾಡಿಕೊಂಡಿದ್ದಾರೆ. ಇಬ್ಬರೂ ಸಹ ಠಾಣೆಯಲ್ಲಿ ದೂರು ಪ್ರತಿ ದೂರು ದಾಖಲಿಸಿದ್ದಾರೆ. ಭದ್ರಾವತಿಯ ಅನ್ವರ್ ಕಾಲೋನಿಯ ಕಾಫಿಬಾರ್ ನ ಬಳಿ ಮೊಹ್ಮದ್ ಗೌಸ್ ನ ಸಹೋದರ ಮೊಹ್ಮದ್ ಮುಸ್ತಫಾ, ಮೊಹ್ಮದ್ ಅರ್ಶನ್, ಮಾತನಾಡುತ್ತಿದ್ದ ವೇಳೆ ಮೊಹ್ಮದ್ ಅಫ್ತಾಬ್, ಜಾಫರ್ ಸಾದಿಕ್, ಹಾಗೂ ಇನ್ನಿತರೆ ಇಬ್ವರು ಸ್ನೇಹಿತರು ಬಂದು ಏಕಾಏಕಿ…
ಹೊಸನಗರ ಸಮೀಪ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ : ಕಾರು ಚಾಲಕ ಶ್ರೀರಾಮ್ ಫ಼ೈನಾನ್ಸ್ ಉದ್ಯೋಗಿ ಸ್ಥಳದಲ್ಲೆ ಸಾವು :
ಹೊಸನಗರ: ಮಾರುತಿಪುರ ಸಮೀಪ ಹೊಸಕೆಸರೆ- ದರೋಡೆಕಾನ್ ಸಮೀಪ ಸರಕು ತುಂಬಿದ ಲಾರಿ ಹಾಗೂ ಮಾರುತಿ ಆಲ್ಟೊ ಕಾರಿನ ಮದ್ಯೆ ನಿನ್ನೆ ರಾತ್ರಿ ಸುಮಾರು 10-30 ರ ಸಮಯದಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜು – ಗುಜ್ಜಾಗಿದ್ದು ಚಾಲಕ ವಿನಯ ಗೌಡ( 26) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನ ಚಾಲಕ ವಿನಯ ಗೌಡ ಸಾಗರದಲ್ಲಿ ಶ್ರೀರಾಮ್ ಫೈನಾನ್ಸ್ ಉದ್ಯೋಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತ ಚಾಲಕ ವಿನಯ್ ಗೌಡ (26) ಬಾಣಿಗದಿಂದ ಊಟವನ್ನು ಮುಗಿಸಿಕೊಂಡು ಸಾಗರಕ್ಕೆ…
ಶಿಕಾರಿಪುರ : ಮೂರು ವರ್ಷದ ಮಗುವಿನ ಮೇಲೆ ಅಮಾನವೀಯ ಅತ್ಯಾಚಾರ :ಆರೋಪಿ ಪದವಿ ವಿದ್ಯಾರ್ಥಿ ಪೊಲೀಸ್ ವಶಕ್ಕೆ
ಶಿಕಾರಿಪುರ : ನಗರದ ಬಡಾವಣೆಯೊಂದರಲ್ಲಿ ಕಾಮುಕನ ಅಟ್ಟಹಾಸಕ್ಕೆ ಏನು ಅರಿಯದ ಪುಟ್ಟ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಪೈಶಾಚಿಕ ಕೃತ್ಯ ಎಸಗಿದ ಘಟನೆ ನಗರದಲ್ಲಿ ನಡೆದಿದೆ. ಮೂರು ವರ್ಷದ ಮಗುವಿನ ಮೇಲೆ ಪಕ್ಕದ ಮನೆಯಲ್ಲಿ ಪದವಿ ಓದುತ್ತಿರುವ ಯುವಕನೇ ಅತ್ಯಚಾರ ಮಾಡಿರುವ ಘಟನೆ ಇಂದು ಶಿಕಾರಿಪುರದಲ್ಲಿ ನಡೆದಿದೆ.ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶಿಕಾರಿಪುರ ತಾಲ್ಲೂಕಿನ ವಾಸಿ ಮೂರು ವರ್ಷದ ಅಪ್ರಾಪ್ತ ಬಾಲಕಿಯು ತನ್ನ ಮನೆಯ ಅಂಗಳದಲ್ಲಿ ಆಟವಾಡುತ್ತಾ ಪಕ್ಕದ ಮನೆಗೆ ಹೋಗಿದ್ದಾಗ, ಆ ಮನೆಯ ಪದವಿ ಓದುತ್ತಿರುವ…
ಡಿ ಕೆ ಶಿವಕುಮಾರ್ ಆಪ್ತ ಸಹಾಯಕ ಎಂದು 15 ಲಕ್ಷ ವಂಚಿಸಿದ ಭೂಪ !!
ಶಿವಮೊಗ್ಗ : ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಕೆಎಸ್ಆರ್‌ಟಿಸಿ ಚಾಲಕರೊಬ್ಬರಿಗೆ 15 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಎಸ್ಆರ್‌ಟಿಸಿ ನಿವೃತ್ತ ಚಾಲಕ ಕೆಂಚಪ್ಪ ಮೋಸ ಹೋದವರು. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೆಂಚಪ್ಪ ಅವರಿಂದ 15 ಲಕ್ಷ ರೂ. ಪಡೆದಿದ್ದ ಆರೋಪಿಗಳು, ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ಸತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ. 2106ರಲ್ಲಿ ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ…
ಶಿವಮೊಗ್ಗ ಜಿಲ್ಲೆಯಲ್ಲಿ ಲಾಕ್ಡೌನ್ ಬಳಿಕ ಹೆಚ್ಚಿದ ಪೋಕ್ಸೋ ಪ್ರಕರಣಗಳು :
ಶಿವಮೊಗ್ಗ: ಜಿಲ್ಲೆಯಲ್ಲಿ ಪೋಕ್ಸೋ ಕಾಯಿದೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಳವಾಗುತ್ತಿದೆ ಎಂದು ಶಿವಮೊಗ್ಗ ಎಸ್ಪಿ ಬಿ.ಎಂ.ಲಕ್ಷ್ಮೀಪ್ರಸಾದ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಕೊರೊನಾ ಬಳಿಕ ಪೋಕ್ಸೋ ಕಾಯಿದೆ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುತ್ತಿದೆ. ಕಳೆದ 4 ವರ್ಷದಿಂದ ಪ್ರತಿವರ್ಷ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. 2017ರಲ್ಲಿ 87 ಪ್ರಕರಣಗಳು, 2018ರಲ್ಲಿ 99 ಪ್ರಕರಣಗಳು, 2019ರಲ್ಲಿ 117 ಪ್ರಕರಣಗಳು ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿತ್ತು. ಆದರೆ ಕಳೆದ ವರ್ಷ 2020ರಲ್ಲಿ ಜಿಲ್ಲೆಯಲ್ಲಿ…